ಸಂತ ಲೂಕನು ಬರೆದ ಶುಭ ಸಂದೇಶದಿಂದ ವಾಚನ 3: 1-6
ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಪಡಿಸಿರಿ, ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗ ಮಾಡಿರಿ
ಅದು ತಿಬೇರಿಯಸ್ ಚಕ್ರವರ್ತಿಯ ಆಡಳಿತ ಕಾಲದ ಹದಿನೈದನೆಯ ವರ್ಷ. ಆ ಕಾಲದಲ್ಲಿ ಜುದೇಯ ಪ್ರಾಂತ್ಯಕ್ಕೆ ಪೋನ್ಸಿಯಸ್ ಪಿಲಾತನು ರಾಜ್ಯಪಾಲನಾಗಿದ್ದನು.ಗಲಿಲೇಯ ಪ್ರಾಂತ್ಯಕ್ಕೆ ಹೆರೋದನೂ ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೆ ಇವನ ತಮ್ಮನಾದ ಫಿಲಿಪ್ಪನೂ ಮತ್ತು ಅಬಿಲೇನೆ ಪ್ರಾಂತ್ಯಕ್ಕೆ ಲುಸಾನಿಯನೂ ಸಾಮಂತನಾಗಿದ್ದನು.ಆನ್ನನ್ನು ಮತ್ತು ಕಾಯಿಫನು ಅಂದಿನ ಪ್ರಧಾನ ಯಾಜಕರು.ಆಗ ಬೆಂಗಾಡಿನಲ್ಲಿ ಜಕರೀಯನ ಮಗ ಯೊವಾನ್ನನಿಗೆ ದೇವರ ಶುಭಸಂದೇಶ ಬೋಧೆಯಾಯಿತು.

ಆತನು ಜೋರ್ಡಾನ್ ನದಿಯ ಪರಿಸರ ಪ್ರಾಂತ್ಯದಲ್ಲೆಲ್ಲಾ ಸಂಚರಿಸುತ್ತಾ " ಪಶ್ಚಾತ್ತಾಪ ಪಟ್ಟು ಪಾಪಕ್ಕೆ ವಿಮುಖರಾಗಿ,ದೇವರಿಗೆ ಅಭಿಮುಖರಾಗಿರಿ ಮತ್ತು ಸ್ನಾನ ದೀಕ್ಷೆ ಪಡೆದುಕೊಳ್ಳಿರಿ;ದೇವರು ನಿಮ್ಮ ಪಾಪಗಳನ್ನು ಕ್ಷಮಿಸಿಬಿಡುವರು," ಎಂದು ಸಾರಿ ಹೇಳುತ್ತಿದ್ದನು. ಈ ಬಗ್ಗೆ ಪ್ರವಾದಿ ಯೆಶಾಯನ ಗ್ರಂಥದಲ್ಲಿ ಮುಂಚಿತವಾಗಿಯೇ ಹೀಗೆಂದು ಬರೆದಿಡಲಾಗಿದೆ: " ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಪಡಿಸಿರಿ, ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗ ಮಾಡಿರಿ" ಎಂದು ಬೆಂಗಾಡಿನಲ್ಲಿ ಒಬ್ಬನು ಘೋಷಿಸುತ್ತಿದ್ದಾನೆ.ಹಳ್ಳ ಕೊಳ್ಳಗಳೆಲ್ಲ ಭರ್ತಿಯಾಗಬೇಕು:ಬೆಟ್ಟ ಗುಡ್ಡಗಳು ಮಟ್ಟವಾಗಬೇಕು; ತಗ್ಗುಮುಗ್ಗಾದ ಹಾದಿಗಳು ಹಸನಾಗಬೇಕು.ಆಗ ದೇವರು ದಯಪಾಲಿಸುವ ಜೀವೋದ್ಢಾರವನ್ನು ಮಾನವರೆಲ್ಲರೂ ಕಾಣುವರು."
prathidina devara vakyavannu odhuvadakke sahaya madidakke thumba danyavada neevu e hosa blog prarambisidakagi shubashayagalu
ReplyDelete