ಸಂತ ಲೂಕ ಬರೆದ ಶುಭ ಸಂದೇಶದಿಂದ ವಾಚನ - 1:39-44
"ಸ್ತ್ರೀಯರಲ್ಲಿ ಧನ್ಯಳು ನೀನು; ನಿನ್ನ ಕರುಳ ಕುಡಿಯೂ ಧನ್ಯ!"
ಇದಾದ ಕೆಲವು ದಿನಗಳಲ್ಲೇ ಮರಿಯಳು ಪ್ರಯಾಣ ಹೊರಟು ಜುದೇಯದ ಗುಡ್ಡಗಾಡಿನಲ್ಲಿರುವ ಒಂದು ಊರಿಗೆ ತ್ವರೆಯಾಗಿ ಬಂದಳು. ಆಲ್ಲಿ ಜಕರೀಯನ ಮನೆಗೆ ಹೋಗಿ ಎಲಿಜಬೇತಳನ್ನು ವಂದಿಸಿದಳು.ಮರಿಯಳ ವಂದನೆಯನ್ನು ಎಲಿಜಬೇತಳು ಕೇಳಿದ್ದೇ ತಡ, ಆಕೆಯ ಗರ್ಭದಲ್ಲಿದ್ದ ಶಿಶು ನಲಿದಾಡಿತು; ಎಲಿಜಬೇತಳು ಪವಿತ್ರಾತ್ಮಭರಿತಳಾಗಿ ಹರ್ಷೋದ್ಗಾರದಿಂದ ಹೀಗೆಂದಳು; "ಸ್ತ್ರೀಯರಲ್ಲಿ ಧನ್ಯಳು ನೀನು; ನಿನ್ನ ಕರುಳ ಕುಡಿಯೂ ಧನ್ಯ!" ನನ್ನ ಪ್ರಭುವಿನ ತಾಯಿ ನೀನು; ನನ್ನ ಬಳಿಗೆ ಬಂದದು ಅದೆಂಥ ಭಾಗ್ಯ! ನಿನ್ನ ವಂದನೆಯ ದನಿ ನನ್ನ ಕಿವಿ ತಾಕಿದೊಡನೆ ನಲಿದಾಡಿತು ಆನಂದದಿಂದ, ನನ್ನ ಕರುಳ ಕುಡಿ!"
No comments:
Post a Comment