"ಇದೇನು ಹೊಸ ಬೋಧನೆ! ಈತ ದೆವ್ವಗಳಿಗೆ ಕೂಡ ಅಧಿಕಾರದಿಂದ ಅಜ್ಞಾಪಿಸುತ್ತಾನೆ"
ಯೇಸುಸ್ವಾಮಿ ಶಿಷ್ಯರೊಂದಿಗೆ ಕಫರ್ನಾವುಮ್ ಎಂಬ ಊರನ್ನು ಸೇರಿದರು. ಸಬ್ಬತ್ ದಿನ ಬಂದ ಕೂಡಲೇ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಬೋಧಿಸತೊಡಗಿದರು.ಅವರ ಉಪದೇಶವನ್ನು ಕೇಳಿ ಜನರು ಬೆರಗಾದರು.ಏಕೆಂದರೆ ಯೇಸು, ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಾಣಿಯಿಂದ ಪ್ರಬೋಧಿಸುತ್ತಿದ್ದರು. ಅಲ್ಲಿ ದೆವ್ವ ಹಿಡಿದ ಒಬ್ಬನಿದ್ದನು. ಅವನು,"ನಜರೇತಿನ ಯೇಸುವೇ,ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು? ನೀವು ಯಾರೆಂದು ನನಗೆ ಗೊತ್ತು. ದೇವರಿಂದ ಬಂದ ಪರಮಪೂಜ್ಯರು ನೀವು."ಎಂದು ಕಿರುಚಿದನು.ಆದರೆ ಯೇಸುಸ್ವಾಮಿ ಅವನನ್ನು ಗದರಿಸಿ, "ಸುಮ್ಮನಿರು,ಇವನನ್ನು ಬಿಟ್ಟು ತೊಲಗು"ಎಂದು ಆ ದೆವ್ವಕ್ಕೆ ಅಜ್ಞಾಪಿಸಿದರು.ದೆವ್ವವು ಆ ಮನುಷ್ಯನನ್ನು ಒದ್ದಾಡಿಸಿ,ಗಟ್ಟಿಯಾಗಿ ಚೀರುತ್ತಾ, ಅವನನ್ನು ಬಿಟ್ಟುಹೋಯಿತು.
ಜನರೆಲ್ಲರೂ ಆಶ್ಚರ್ಯಚಕಿತರಾದರು."ಇದೇನು ಹೊಸ ಬೋಧನೆ! ಈತ ದೆವ್ವಗಳಿಗೆ ಕೂಡ ಅಧಿಕಾರದಿಂದ ಅಜ್ಞಾಪಿಸುತ್ತಾನೆ; ಅವು ಈತ ಹೇಳಿದ ಹಾಗೆ ಕೇಳುತ್ತವೆಯಲ್ಲ! ಎಂದು ಪರಸ್ಪರ ಮಾತಾಡಿಕೊಂಡರು.ಕೂಡಲೇ ಗಲಿಲೇಯ ಪ್ರಾಂತ್ಯದ ಎಲ್ಲೆಡೆಗೂ ಯೇಸುವಿನ ಸಮಾಚಾರ ಹಬ್ಬಿ ಹರಡಿತು.

No comments:
Post a Comment