ಸಂತ ಮಾರ್ಕನು ಬರೆದ ಶುಭ ಸಂದೇಶದಿಂದ ವಾಚನ - 1:40-45
“ಖಂಡಿತವಾಗಿ ನನ್ನ ಮನಸ್ಸಿದೆ, ನಿನಗೆ ಗುಣವಾಗಲಿ”
ಒಮ್ಮೆ ಕುಷ್ಠರೋಗಿಯೊಬ್ಬನು ಯೇಸುಸ್ವಾಮಿಯ ಬಳಿಗೆ ಬಂದು, ಮೊಣಕಾಲೂರಿ, “ತಾವು ಮನಸ್ಸು ಮಾಡಿದಲ್ಲಿ ನನ್ನನು ಗುಣಮಾಡಬಲ್ಲಿರಿ” ಎಂದು ದೈನ್ಯದಿಂದ ಬೇಡಿಕೊಂಡನು. ಯೇಸುವಿನ ಮನ ಕರಗಿತು. ಅವರು ಕೈ ಚಾಚಿ, ಕುಷ್ಠರೋಗಿಯನ್ನು ಮುಟ್ಟಿ,”ಖಂಡಿತವಾಗಿ ನನ್ನ ಮನಸ್ಸಿದೆ, ನಿನಗೆ ಗುಣವಾಗಲಿ,” ಎಂದರು. ತಕ್ಷಣ ಅವನ ಕುಷ್ಠವು ಮಾಯವಾಯಿತು. ಅವನು ಗುಣಹೊಂದಿದನು. ಯೇಸು ಅವನಿಗೆ ,” ಎಚ್ಚರಿಕೆ! ನೀನು ಗುಣ ಹೋಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ. ಅನಂತರ ಮೋಶೆ ನಿಯಮಿಸಿರುವ ಶುದ್ಧೀಕರಣ ವಿಧಿಗಳನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದು ಎಚ್ಚರಿಸಿ ಅವನನ್ನು ಕೂಡಲೇ ಕಳುಹಿಸಿಬಿಟ್ಟರು.ಅದರೆ ಅವನು ಹೋಗಿ ಈ ಸಮಾಚಾರವನ್ನು ಎಲ್ಲೆಲ್ಲೂ ಸಾರಿದನು. ಈ ಕಾರಣ ಯೇಸು ಬಹಿರಂಗವಾಗಿ ಯಾವ ಪಟ್ಟಣದೊಳಕ್ಕೂ ಹೋಗಲು ಆಗಲಿಲ್ಲ. ಆದುದರಿಂದ ನಿರ್ಜನ ಪ್ರದೇಶಗಳಲ್ಲೇ ಇರತೊಡಗಿದರು. ಆದರೂ ಜನರು ನಾಲ್ದೆಸೆಗಳಿಂದ ಅವರು ಇದ್ದಡೆಗೆ ಬರುತ್ತಲೇ ಇದ್ದರು.
No comments:
Post a Comment