ಸಂತ ಯೊವಾನ್ನನು ಬರೆದ ಶುಭ ಸಂದೇಶದಿಂದ ವಾಚನ - 21:1-14
"ಪಿತ ನನಗಿಂತಲೂ ಶ್ರೇಷ್ಠರು"
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ: "ನಾನು ಶಾಂತಿ ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ;ನನ್ನ ಶಾಂತಿ ಸಮಧಾನವನ್ನು ನಿಮಗೆ ಕೊಡುತ್ತೇನೆ.ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ.ನೀವು ಹೃದಯದಲ್ಲಿ ಕಳವಳಗೊಳ್ಳದಿರಿ,ಭಯಪಡಬೇಡಿ.ನಾನು ಹೊರಟು ಹೋಗುತ್ತೇನೆಂದೂ, ಮತ್ತೆ ನಿಮ್ಮ ಬಳಿಗೆ ಬರುವೆನೆಂದೂ ನಾನು ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ಪಿತನ ಬಳಿಗೆ ಹೋಗುತ್ತಿರುವುದನ್ನು ಕುರಿತು ಹಿಗ್ಗುತ್ತಿದ್ದಿರಿ. ಏಕೆಂದರೆ ಪಿತ ನನಗಿಂತಲೂ ಶ್ರೇಷ್ಠರು. ಇದೆಲ್ಲಾ ಈಡೇರುವಾಗ ನೀವು ವಿಶ್ವಾಸಿಸುವಂತೆ ಅದು ಈಡೇರುವುದಕ್ಕೆ ಮುಂಚೆಯೇ ನಿಮಗೆ ತಿಳಿಯಪಡಿಸಿದ್ದೇನೆ.ಇಹದ ಲೋಕಾಧಿಪತಿ ಬರುವ ಸಮಯವಾಯಿತು.ಇನ್ನು ಬಹಳ ಹೊತ್ತು ನಾನು ನಿಮ್ಮೊಡನೆ ಮಾತನಾಡಲು ಕಾಲಾವಕಾಶವಿಲ್ಲ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ. ಆದರೆ ನಾನು ಪಿತನನ್ನು ಪ್ರೀತಿಸುತ್ತೇನೆಂಬುದನ್ನೂ ಅವರು ವಿಧಿಸಿದಂತೆಯೇ ಮಾಡುತ್ತೇನೆ ಎಂಬುದನ್ನೂ ಲೋಕವು ತಿಳಿಯಬೇಕು" ಎಂದರು.
No comments:
Post a Comment