"ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮ ನಿಮ್ಮ ಮನೆಗೆ ಚದುರಿಹೋಗುವ ಕಾಲವು ಬರುತ್ತದೆ."
ಶಿಷ್ಯರು ಯೇಸುವಿಗೆ, " ಈಗ ನೀವು ಸಾಮತಿಗಳನ್ನು ಬಳಸದೆ ಸ್ಫಷ್ಟವಾಗಿಯೇ ಮಾತನಾಡುತ್ತಿದ್ದೀರಿ. ನೀವು ಎಲ್ಲವನ್ನೂ ಬಲ್ಲವರು.
ಪ್ರಶ್ನೆಗಳಿಗಾಗಿ ನೀವು ಕಾಯಬೇಕಿಲ್ಲ ಎಂದು ನಮಗೀಗ ತಿಳಿಯಿತು. ಆದುದರಿಂದ ನೀವು ದೇವರಿಂದ ಬಂದವರೆಂದ ನಾವು ವಿಶ್ವಾಸಿಸುತ್ತೇವೆ," ಎಂದರು. ಆಗ ಯೇಸುಸ್ವಾಮಿ, "ಈಗ ನೀವು ವಿಶ್ವಾಸಿಸುತ್ತೀರೋ? ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮ ನಿಮ್ಮ ಮನೆಗೆ ಚದುರಿಹೋಗುವ ಕಾಲವು ಬರುತ್ತದೆ. ಈಗಾಗಲೇ ಬಂದಿದೆ. ಆದರೆ ಪಿತನು ನನ್ನೊಡನೆ ಇರುವುದರಿಂದ ನಾನು ಒಬ್ಬಂಟಿಗನಲ್ಲ. ನಿಮಗೆ ನನ್ನಲ್ಲಿ ಶಾಂತಿ ಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ . ನಾನು ಲೋಕವನ್ನು ಜಯಿಸಿದ್ದೇನೆ," ಎಂದು ಹೇಳಿದರು
No comments:
Post a Comment