ಸಂತ ಯೊವಾನ್ನನ ಶುಭ ಸಂದೇಶ - 17:1-11
"ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ"
ಯೇಸುಸ್ವಾಮಿ ಅವರೊಡನೆ ಹೀಗೆ ಮಾತನಾಡಿದ ಮೇಲೆ ಆಕಾಶದತ್ತ ಕಣ್ಣೆತ್ತಿ ನೋಡಿ, "ಪಿತನೇ, ನಿರೀಕ್ಷಿಸಿದ ಗಳಿಗೆ ಬಂದಿದೆ.ನಿಮ್ಮ ಪುತ್ರನು ನಿಮ್ಮ ಮಹಿಮೆಯನ್ನು ಬೆಳಗಿಸುವಂತೆ ನೀವು ಆತನ ಮಹಿಮೆಯನ್ನು ಬೆಳಗಿಸಿರಿ. ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯ ಜೀವವನ್ನು ಆತನು ನೀಡುವನು. ಏಕೈಕ ನಿಜ ದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸುಕ್ರಿಸ್ತನನ್ನೂ ಅರಿತಿಕೊಳ್ಳುವುದೇ ನಿತ್ಯ ಜೀವ.ನೀವು ನನಗೆ ಕೊಟ್ಟ ಕಾರ್ಯವನ್ನು ನಾನು ಮಾಡಿ ಮುಗಿಸಿ ನಿಮ್ಮ ಮಹಿಮೆಯನ್ನು ಜಗತ್ತಿಗೆಲ್ಲ ತೋರ್ಪಡಿಸಿದೆನು.
ಪಿತನೇ, ಜಗತ್ತು ಉಂಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಲೋಕದಿಂದ ಆರಸಿ ನನಗೆ ಕೊಟ್ಟ ಜನರಿಗೆ ನಿಮ್ಮ ನಾಮವನ್ನು ತಿಳಿಯಪಡಿಸಿದ್ದೇನೆ. ಇವರು ನಡೆದಿದ್ದಾರೆ. ನೀವು ನನಗೆ ಕೊಟ್ಟಿದೆಲ್ಲವೂ ನಿಅವಾಗಿ ನಿಮ್ಮಿಂದಲೇ ಬಂದಿರುವುದೆಂದು ಈಗ ಇವರಿಗೆ ತಿಳಿದಿದೆ. ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪದಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದದು ನಿಜವೆಂದು ಅರಿತುಕೊಂಡಿದ್ದಾರೆ.ನನ್ನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ.ನಾನು ಇವರಿಗಾಗಿ, ಲೋಕಕ್ಕಾಗಿ ಅಲ್ಲ.ನೀವೆ ನನಗೆ ಕೊಟ್ಟಿರುವವರಿಗಾಗಿ ಪ್ರಾರ್ಥಿಸುತ್ತೇನೆ. ಏಕೆಂದರೆ, ಇವರು ನಿಮ್ಮವರು:ಇವರಿಂದ ನಮಗೆ ಮಹಿಮೆ ಉಂಟಾಗಿದೆ.ನನ್ನದೆಲ್ಲವೂ ನಿಮ್ಮದೇ: ನಿಮ್ಮದೆಲ್ಲವೂ ನನ್ನದೇ.
ನಾನಿನ್ನು ಲೋಕದಲ್ಲಿ ಇರುವುದಿಲ್ಲ.ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ಪವಿತ್ರ ಪಿತನೇ, ನಾನು ಒಂದಾಗಿರುವಂತೆ ನೀವು ನನಗೆ ಕೊಟ್ಟಿರುವ ಇವರೂ ಒಂದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ.
No comments:
Post a Comment