"ಸತ್ಯಸಂಧರಾಗಿ ಇವರನ್ನು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ"
ಯೇಸುಸ್ವಾಮಿ ಆಕಾಶದತ್ತ ಕಣ್ಣೆತ್ತಿ ನೋಡಿ ಹೀಗೆಂದು ಪ್ರಾರ್ಥಿಸಿದರು."ಪವಿತ್ರ ಪಿತನೇ, ನಾವು ಒಂದಾಗಿರುವಂತೆ, ನೀವು ನನಗೆ ಕೊಟ್ಟಿರುವ ಇವರೂ ಒಂದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ. ನಾನು ಇವರೊಡನೆ ಇದ್ದಾಗ ಇವರನ್ನು ಕಾಪಾಡಿದೆನು. ನೀವಿತ್ತ ಇವರನ್ನು ನಿಮ್ಮ ನಾಮದ ಶಕ್ತಿಯಿಂದ ಸುರಕ್ಷಿತವಾಗಿ ನೋಡಿಕೊಂಡು ಬಂದೆನು. ಪವಿತ್ರ ಗ್ರಂಥದ ಮಾತು ನೆರೆವೇರುವಂತೆ ವಿನಾಶಕ್ಕೆ ಗುರಿಯಾಗಬೇಕಿದ್ದ ಒಬ್ಬನನ್ನು ಬಿಟ್ಟರೆ, ಇವರಲ್ಲಿ ಬೇರೆ ಯಾರೂ ನಾಶವಾಗಲಿಲ್ಲ. ಈಗ ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ನನ್ನ ಆನಂದವು ಅವರ ಹೃದಯದಲ್ಲಿ ತುಂಬಿತುಳುಕುವಂತೆ ಈ ಲೋಕದಲ್ಲಿರುವಾಗಲೇ ಇವುಗಳನ್ನು ಹೇಳುತ್ತಿದ್ದೇನೆ.ನಿಮ್ಮ ಸಂದೇಶವನ್ನು ಇವರಿಗೆ ತಿಳಿಸಿದ್ದೇನೆ. ನಾನು ಲೋಕಕ್ಕೆ ಸೇರಿದವನಲ್ಲ. ಅಂತೆಯೇ, ಇವರೂ ಲೋಕಕ್ಕೆ ಸೇರಿದವರಲ್ಲ. ಈ ಕಾರಣ, ಲೋಕಕ್ಕೆ ಇವರ ಮೇಲೆ ದ್ವೇಶವಿದೆ. ಇವರನ್ನು ಲೋಕದಿಂದ ತೆಗೆದುಬಿಡಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತಿಲ್ಲ. ಆದರೆ ಕೇಡಿಗನಿಂದ ಇವರನ್ನು ಕಾಪಾಡಬೇಕೆಂದು ಕೇಳಿಕೊಳ್ಳುತ್ತೇನೆ. ನಾನು ಲೋಕಕ್ಕೆ ಹೇಗೆ ಸೇರಿದವನಲ್ಲವೋ ಹಾಗೆ ಇವರೂ ಈ ಲೋಕಕ್ಕೆ ಸೇರಿದವರಲ್ಲ. ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ. ನಿಮ್ಮ ಮಾತೇ ಸತ್ಯ. ನೀವು ನನ್ನನ್ನು ಲೋಕಕ್ಕೆ ಕಳಿಸಿದಂತೆ ನಾನೂ ಇವರನ್ನು ಲೋಕಕ್ಕೆ ಕಳಿಸಿದ್ದೇನೆ.ಸತ್ಯಸಂಧರಾಗಿ ಇವರನ್ನು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ.
No comments:
Post a Comment