ಸಂತ ಯೊವಾನ್ನನ ಶುಭ ಸಂದೇಶ - 17:20-26
"ನೀವು ನನ್ನಲ್ಲಿಟ್ಟ ಪ್ರೀತಿಯು ಇವರಲ್ಲಿಯೂ ಇರುವಂತಾಗುವುದು; ನಾನೂ ಇವರಲ್ಲಿ ಇರುವಂತಾಗುವುದು"
ಯೇಸುಸ್ವಾಮಿ ಆಕಾಶದತ್ತ ಕಣ್ಣೆತ್ತಿ ನೋಡಿ ಹೀಗೆಂದು ಪ್ರಾರ್ಥಿಸಿದರು "ಇವರಿಗಾಗಿ ಮಾತ್ರವಲ್ಲ,ಇವರ ಮಾತನ್ನು ಕೇಳಿ ನನ್ನಲ್ಲಿ ವಿಶ್ವಾಸವಿಡುವವರಿಗಾಗಿಯೂ ಪ್ರಾರ್ಥಿಸುತ್ತೇನೆ. ಪಿತನೇ, ಇವರೆಲ್ಲಾ ಒಂದಾಗಿರಲಿ.ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ.ಹೀಗೆ ನನ್ನನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.ನಾವು ಒಂದಾಗಿರುವಂತೆ ಇವರೂ ಒಂದಾಗಿರಲೆಂದು ನೀವು ನನಗಿತ್ತ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ. ನಾನು ಇವರಲ್ಲಿಯೂ ನೀವು ನನ್ನಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ.ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದು ಲೋಕಕ್ಕೆ ಮನವರಿಕೆ ಆಗುವುದು.
ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ.ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ. ನಿತ್ಯ ಸ್ವರೂಪಿಯಾದ ಪಿತನೇ,ಲೋಕವು ನಿಮ್ಮನ್ನು ಅರಿತುಕೊಳ್ಳಲಿಲ್ಲ.ಆದರೆ ನಾನು ಅರಿತಿದ್ದೇನೆ. ನನ್ನನು ಕಳುಹಿಸಿದವರು ನೀವೆಂದು ಇವರು ತಿಳಿದುಕೊಂಡಿದ್ದಾರೆ.ನಿಮ್ಮ ನಾಮವನ್ನು ನಾನು ಇವರಿಗೆ ತಿಳಿಯಪಡಿಸಿದ್ದೇನೆ;ಇನ್ನೂ ತಿಳಿಯಪಡಿಸುತ್ತೇನೆ.ಹೀಗೆ ನೀವು ನನ್ನಲ್ಲಿಟ್ಟ ಪ್ರೀತಿಯು ಇವರಲ್ಲಿಯೂ ಇರುವಂತಾಗುವುದು; ನಾನೂ ಇವರಲ್ಲಿ ಇರುವಂತಾಗುವುದು."
No comments:
Post a Comment