"ವೃದ್ಧಾಪ್ಯದಲ್ಲಾದರೋ ನೀನು ಕೈ ಚಾಚುವೆ.ಬೇರೊಬ್ಬನು ನಿನ್ನ ನಡುಕಟ್ಟಿ ನಿನಗಿಷ್ಟವಿಲ್ಲದ ಕಡೆ ನಿನ್ನನ್ನು ನಡೆಸಿಕೊಂಡು ಹೋಗುವನು"
ಊಟವಾದ ಮೇಲೆ ಯೇಸು ಸಿಮೋನ ಪೇತ್ರನನ್ನು ನೋಡಿ,"ಯೊವಾನ್ನನ ಮಗನಾದ ಸಿಮೋನನೇ, ಇವರಿಗಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುತ್ತೀಯಾ"? ಎಂದು ಕೇಳಿದರು. ಅದಕ್ಕೆ ಪೇತ್ರನು, ಹೌದು ಪ್ರಭೂ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ," ಎಂದನು. ಯೇಸು ಅವನಿಗೆ, "ನನ್ನ ಕುರಿಮರಿಗಳನ್ನು ಮೇಯಿಸು," ಎಂದರು. ಯೇಸು
ಎರಡನೆಯ ಬಾರಿ, "ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ? ಎಂದು ಕೇಳಲು, "ಹೌದು ಪ್ರಭುವೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ," ಎಂದು ಮರು ನುಡಿದನು. ಯೇಸು ಅವನಿಗೆ, " ನನ್ನ ಕುರಿಗಳನ್ನು ಕಾಯಿ," ಎಂದರು. ಮೂರನೇ ಬಾರಿಯೂ ಯೇಸು, "ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ? ಎಂದು ಕೇಳಿದರು. ’ನೀನು ನನ್ನನ್ನು ಪ್ರೀತಿಸುತ್ತೀಯಾ?’ ಎಂದು ಯೇಸು ಮೂರನೇ ಬಾರಿ ಕೇಳಿದ್ದನು ಕಂಡು ಪೇತ್ರ ನೊಂದುಕೊಂಡನು." ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ," ಎಂದು ಹೇಳಿದನು. ಅದಕ್ಕೆ ಯೇಸು,"ನನ್ನ ಕುರಿಗಳನ್ನು ಮೇಯಿಸು"; ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ, ಕೇಳು: ತಾರುಣ್ಯದಲ್ಲಿ ನೀನೇ ನಡುಕಟ್ಟಿಕೊಂಡು ಇಷ್ಟಬಂದ ಕಡೆಗೆ ನಡೆದೆ. ವೃದ್ಧಾಪ್ಯದಲ್ಲಾದರೋ ನೀನು ಕೈ ಚಾಚುವೆ.ಬೇರೊಬ್ಬನು ನಿನ್ನ ನಡುಕಟ್ಟಿ ನಿನಗಿಷ್ಟವಿಲ್ಲದ ಕಡೆ ನಿನ್ನನ್ನು ನಡೆಸಿಕೊಂಡು ಹೋಗುವನು." ಎಂದು ನುಡಿದರು.
ಪೇತ್ರನು ಎಂಥಾ ಸಾವಿನಿಂದ ದೇವರ ಮಹಿಮೆಯನ್ನು ಬೆಳಗಿಸಲಿದ್ದಾನೆಂದು ಸೂಚಿಸಿ ಹಾಗೆ ಹೇಳಿದರು. ಇದಾದ ಮೇಲೆ ಯೇಸು ಪೇತ್ರನಿಗೆ, "ನೀನು ನನ್ನನ್ನು ಹಿಂಬಾಲಿಸಿ ಬಾ," ಎಂದರು.
No comments:
Post a Comment