"ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಕ್ಷಮಿಸದೆ ಉಳಿಸಲಾಗುವುದು'
ಅದೇ ಭಾನುವಾರ ಸಂಜೆ ಶಿಷ್ಯರು ಒಂದು ಮನೆಯಲ್ಲಿ ಕೂಡಿದ್ದರು. ಯೆಹೂದ್ಯರಿಗೆ ಅಂಜಿ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು.ಆಗ ಯೇಸು ಬಂದು ಅವರ ನಡುವೆ ನಿಂತರು. "ನಿಮಗೆ ಶಾಂತಿ" ಎಂದು ಹೇಳಿ ತಮ್ಮ ಕಾಲುಗಳನ್ನು ಮತ್ತು ಪಕ್ಕೆಗಳನ್ನು ತೋರಿಸಿದರು.ಪ್ರಭುವನ್ನು ಕಂಡು ಶಿಷ್ಯರಿಗೆ ಮಹದಾನಂದವಾಯಿತು. ಯೇಸು ಪುನ:" ನಿಮಗೆ ಶಾಂತಿ, ಪಿತನು
ನನ್ನನ್ನು ಕಳುಹಿಸಿದಂತೆಯೇ, ನಾನೂ ನಿಮ್ಮನ್ನು ಕಳುಹಿಸಿತ್ತೇನೆ," ಎಂದರು. ಅನಂತರ ಅವರ ಮೇಲೆ ಉಸಿರೂದಿ," ಪವಿತ್ರಾತ್ಮರನ್ನು ಸ್ವೀಕರಿಸಿರಿ.ಯಾರ ಪಾಪಗಳನ್ನು ನೀವು ಕ್ಷಮಿಸುತ್ತೀರೋ,ಅವರಿಗೆ ಅದನ್ನು ಕ್ಷಮಿಸಲಾಗುವುದು.ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಕ್ಷಮಿಸದೆ ಉಳಿಸಲಾಗುವುದು," ಎಂದು ನುಡಿದರು.
No comments:
Post a Comment