ಸಂತ ಯೊವಾನ್ನನ ಶುಭ ಸಂದೇಶ - 10: 17-27
"ನಿನ್ನ ಆಸ್ತಿ ಪಾಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನ ಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ."
ಅಲ್ಲಿಂದ ಯೇಸು ಸ್ವಾಮಿ ಪ್ರಯಾಣವನ್ನು ಮುಂದುವರಿಸಿದರು.ದಾರಿಯಲ್ಲಿ ಒಬ್ಬನು ಅವರ ಬಳಿಗೆ ಓಡಿ ಬಂದು ಮೊಣಕಾಲೂರಿ,"ಒಳ್ಳೆಯ ಗುರುವೇ,ಅಮರ ಜೀವವು ನನಗೆ ಪ್ರಾಪ್ತಿಯಾಗಬೇಕಾದರೆ ನಾನೇನು ಮಾಡಬೇಕು’ ಎಂದು ಕೇಳಿದನು."ನೀನು ನನ್ನನ್ನು ಒಳ್ಳೆಯವನೆಂದು ಕರೆಯುವುದೇಕೆ?ದೇವರೊಬ್ಬರನ್ನು ಬಿಟ್ಟರೆ ಬೇರೆ ಯಾರೂ ಒಳ್ಳೆಯವರಲ್ಲ.ದೈವಾಜ್ಞೆಗಳು ನಿನಗೆ ತಿಳಿದೇ ಇವೆ:ನರಹತ್ಯೆ ಮಾಡಬೇಡ,ವ್ಯಭಿಚಾರ ಮಾಡಬೇಡ,ಕದಿಯ ಬೇಡ,ಸುಳ್ಳು ಸಾಕ್ಷಿ ಹೇಳಬೇಡ, ಮೋಸ ಮಾಡಬೇಡ, ನಿನ್ನ ತಂದೆ ತಾಯಿಗಳನ್ನು ಗೌರವಿಸು" ಎಂದು ಯೇಸು ಉತ್ತರವಿತ್ತರು. ಅದಕ್ಕೆ ಅವನು "ಗುರು ದೇವಾ, ನಾನು ಬಾಲ್ಯದಿಂದಲೇ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ," ಎಂದು ಹೇಳಿದನು. ಆಗ ಯೇಸು ಅವನನ್ನು ಮಮತೆಯಿಂದ ಈಕ್ಷಿಸಿ," ನೀನು ಮಾಡಬೇಕಾದ ಕಾರ್ಯವೊಂದು ಬಾಕಿಯಿದೆ. ಹೋಗು ನಿನ್ನ ಆಸ್ತಿ ಪಾಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನ ಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು," ಎಂದರು. ಯೇಸುವಿನ ಈ ಮಾತನ್ನು ಕೇಳುತ್ತಲೇ ಅವನ ಮುಖ ಪೆಚ್ಚಾಯಿತು. ಅವನು ಖಿನ್ನ ಮನಸ್ಕನಾಗಿ ಅಲ್ಲಿಂದ ಹೊರಟು ಹೋದನು. ಏಕೆಂದರೆ ಅವನಿಗೆ ಅಪಾರ ಆಸ್ತಿಯಿತ್ತು.
ಆಗ ಯೇಸು ಸ್ವಾಮಿ ಸುತ್ತಲೂ ನೋಡಿ, ತಮ್ಮ ಶಿಷ್ಯರನ್ನು ಉದ್ದೇಶಿಸಿ,"ಐಶ್ವರ್ಯವುಳ್ಳವರಿಗೆ ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದು ಎಷ್ಟೊಂದು ಕಷ್ಟ" ಎಂದರು. ಅವರ ಮಾತನ್ನು ಕೇಳಿದ ಶಿಷ್ಯರು ಬೆರಗಾದರು. ಯೇಸು ಪುನ: ಅವರಿಗೆ," ಮಕ್ಕಳೇ, ದೇವರ ಸಾಮ್ರಾಜ್ಯವನ್ನು ಸೇರುವುದು ಎಷ್ಟು ಕಷ್ಟ! ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಸೇರುವುದಕ್ಕಿಂತಲೂ ಒಂಟೆಯ ಸೂಜಿಗಣ್ಣಲ್ಲಿ ನುಸುಳುವುದು ಸುಲಭ," ಎಂದರು. ಇದನ್ನು ಕೇಳಿದ ಮೇಲಂತೂ ಶಿಷ್ಯರಿಗೆ ಅಪರಿಮಿತ ಆಶ್ಚರ್ಯವಾಯಿತು." ಹಾಗಾದರೆ ಯಾರು ತಾನೆ ಜೀವೋದ್ಧಾರ ಹೊಂದಲು ಸಾಧ್ಯ?" ಎಂದು ತಮ್ಮ ತಮ್ಮೊಳಗೇ ಮಾತನಾಡಿಕೊಂಡರು. ಯೇಸು ಅವರನ್ನು ನಿಟ್ಟಿಸಿ ನೋಡಿ,"ಮನುಷ್ಯರಿಗೆ ಇದು ಅಸಾಧ್ಯ, ದೇವರಿಗಲ್ಲ. ದೇವರಿಗೆ ಎಲ್ಲವೂ ಸಾಧ್ಯ," ಎಂದರು.
No comments:
Post a Comment