"ಮೊದಲನೆಯವರಲ್ಲಿ ಅನೇಕರು ಕಡೆಯವರಾಗುವರು;ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು"
ಆಗ ಪೇತ್ರನು ಮುಂದೆ ಬಂದು,"ನೋಡಿ, ನಾವು ಎಲ್ಲವನ್ನೂ ಬಿಟ್ಟುಬಿಟ್ಟು ನಿಮ್ಮನ್ನು ಹಿಂಬಾಲಿಸಿದ್ದೇವಲ್ಲ." ಎಂದನು. ಆಗ ಯೇಸು," ನಾನು ನಿಶ್ಚಯವಾಗಿ ಹೇಳುತ್ತೇನೆ; ಯಾರಾದರೂ ನನ್ನ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ಮನೆಯನ್ನಾಗಲಿ,ಅಣ್ಣ ತಮ್ಮಂದಿರನ್ನಾಗಲಿ, ಅಕ್ಕ ತಂಗಿಯರನ್ನಾ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲ ಗದ್ದೆಗಳನ್ನಾಗಲಿ ತ್ಯಜಿಸುತ್ತಾನೋ, ಅವನು ಈ ಕಾಲದಲ್ಲೇ ಮನೆ,ಅಣ್ಣ ತಮ್ಮ. ಅಕ್ಕತಂಗಿ, ತಾಯಿ, ಮಕ್ಕಳು, ಹೊಲ ಗದ್ದೆ ಇವೆಲ್ಲವನ್ನೂ ನೂರ್ಮಡಿಯಷ್ಟು ಪಡೆಯುವನು. ಇವುಗಳೊಂದಿಗೆ ಹಿಂಸೆಯನ್ನೂ ಅನುಭವಿಸಬೇಕಾಗುವುದು;ಅದಲ್ಲದೆ ಮುಂದಿನ ಲೋಕದಲ್ಲಿ ಅಮರ ಜೀವವನ್ನು ಪಡೆಯುವನು. ಆದರೆ ಮೊದಲನೆಯವರಲ್ಲಿ ಅನೇಕರು ಕಡೆಯವರಾಗುವರು;ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು," ಎಂದರು.
No comments:
Post a Comment