ಸಂತ ಮತ್ತಾಯನ ಶುಭ ಸಂದೇಶ - 5:13-16
"ಈ ಧರೆಗೆ ನೀವೇ ಉಪ್ಪು"
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು : " ಈ ಧರೆಗೆ ನೀವೇ ಉಪ್ಪು; ಉಪ್ಪೇ ಸಪ್ಪೆಯಾಗಿಬಿಟ್ಟರೆ ಅದಕ್ಕೆ ಇನ್ನಾವುದರಿಂದ ಪುನ: ರುಚಿ ಬಂದೀತು? ಇನ್ನು ಅದು ಕೆಲಸಕ್ಕೆ ಬಾರದ ವಸ್ತು. ಜನರು ಅದನ್ನು ಆಚೆ ಬಿಸಾಡುತ್ತಾರೆ.ದಾರಿಗರು ಅದನ್ನು ತುಳಿದು ಬಿಡುತ್ತಾರಷ್ಟೇ.ಜಗತ್ತಿಗೆ ನೀವೇ ಜ್ಯೋತಿ.ಬೆಟ್ಟದ ಮೇಲಿನ ಪಟ್ಟಣವನ್ನು ಮುಚ್ಚಿಡಲಾಗದು. ಅಂತೆಯೇ ಯಾರೂ ದೀಪವನ್ನು ಹಚ್ಚಿ ಬಟ್ಟಲ ಕೆಳಗೆ ಬಚ್ಚಿಡುವುದಿಲ್ಲ: ದೀಪ ಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವ ಎಲ್ಲರಿಗೆ ಬೆಳಕನ್ನು ಕೊಡುತ್ತದೆ. ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ. ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ".
No comments:
Post a Comment