ಸಂತ ಮತ್ತಾಯನ ಶುಭ ಸಂದೇಶ - 5:17-19
"ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗ ಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು"
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು:" ಮೋಶೆಯ ಧರ್ಮಶಾಸ್ತ್ರವನ್ನಾಗಲಿ,ಪ್ರವಾದಿಗಳ ಪ್ರವಚನವನ್ನಾಗಲಿ ರದ್ದು ಮಾಡಲು ನಾನು ಬಂದೆನೆಂದು ತಿಳಿಯಬೇಡಿ.ರದ್ದು ಮಾಡಲು ಅಲ್ಲ,ಅವುಗಳನ್ನು ಸಿದ್ಧಿಗೆ ತರಲು ಬಂದಿದ್ದೇನೆ. ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರೆವೇರುವುದೇ ಹೊರತು ಅದರಲ್ಲಿ ಚಿಕ್ಕ ಅಕ್ಷರವಾಗಲಿ ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
ಹೀಗಿರುವಲ್ಲಿ, ಅದರ ಆಜ್ಞೆಗಳಲ್ಲಿ ಅತಿ ಚಿಕ್ಕದೊಂದನ್ನು ಮೀರುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಅತ್ಯಲ್ಪನೆಂದು ಪರಿಗಣಿತನಾಗುವನು; ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗ ಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು."
No comments:
Post a Comment