29.09.10 - ನತಾನಿಯೇಲನ ವಿಶ್ವಾಸ

ಲೂಕನ ಶುಭ ಸಂದೇಶ - 1:47-51

"ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ"

ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, "ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ," ಎಂದು ನುಡಿದರು. ನತಾನಿಯೇಲನು,"ನನ್ನ ಪರಿಚಯ ನಿಮಗೆ ಹೇಗಾಯಿತು?" ಎಂದು ಕೇಳಲು ಯೇಸು, "ಫಿಲಿಪ್ಪನು ನಿನ್ನನ್ನು ಕರೆಯುವ ಮೊದಲೇ ನೀನು ಅಂಜುರ ಮರದಡಿ ಇದ್ದಾಗ ನಾನು ನಿನ್ನನ್ನು ಕಂಡೆ," ಎಂದು ಉತ್ತರಕೊಟ್ಟರು. ಅದಕ್ಕೆ ನತಾನಿಯೇಲನು, "ಗುರುದೇವಾ, ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ," ಎಂದನು. ಆಗ ಯೇಸು, "ಅಂಜೂರದ ಮರದಡಿ ನಿನ್ನನ್ನು ಕಂಡೆ ಎಂದು ನಾನು ಹೇಳಿದ ಮಾತ್ರಕ್ಕೆ ಅಷ್ಟೊಂದು ವಿಶ್ವಾಸವೇ? ಇದಕ್ಕೂ ಮಿಗಿಲಾದವುಗಳನ್ನು ನೀನು ಕಾಣುವೇ," ಎಂದು ನುಡಿದರು. ತಮ್ಮ ಮಾತನ್ನು ಮುಂದುವರಿಸುತ್ತಾ, "ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ," ಎಂದು ಹೇಳಿದರು.

28.09.10 - ವಿನಾಶ - ಉದ್ಧಾರ

ಲೂಕನ ಶುಭ ಸಂದೇಶ - 9:51-56

"ನರಪುತ್ರನು ಬಂದಿರುವುದು ಮಾನವ ಜೀವಿಗಳ ವಿನಾಶಕ್ಕೆ ಅಲ್ಲ,ಉದ್ಧಾರಕ್ಕೆ,"

ತಾವು ಸ್ವರ್ಗಾರೋಹಣವಾಗುವ ದಿನಗಳು ಸಮೀಪಿಸಲು ಯೇಸುಸ್ವಾಮಿ ಜೆರುಸಲೇಮಿಗೆ ಅಭಿಮುಖರಾಗಿ ಹೊರಡಲು ನಿರ್ಧರಿಸಿದರು. ಅಲ್ಲದೆ ತಮಗೆ ಮುಂದಾಗಿ ದೂತರನ್ನು ಕಳುಹಿಸಿದರು. ಇವರು ಹೊರಟು ಯೇಸುವಿಗೆ ಬೇಕಾದುದನ್ನು ಸಿದ್ಧಮಾಡಲು ಸಮಾರಿಯದ ಒಂದು ಹಳ್ಳಿಗೆ ಬಂದರು. ಯೇಸು ಜೆರುಸಲೇಮಿಗೆ ಹೋಗುತ್ತಿದ್ದ ಕಾರಣ ಅವರನ್ನು ಅಲ್ಲಿಯ ಜನರು ಬರಗೊಳಿಸಲಿಲ್ಲ. ಇದನ್ನು ಕಂಡು ಶಿಷ್ಯರಾದ ಯಕೋಬ ಮತ್ತು ಯೊವಾನ್ನ,"ಪ್ರಭು, ಆಕಾಶದಿಂದ ಅಗ್ನಿಮಳೆ ಸುರಿದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಞೆ ಮಾಡಬಹುದಲ್ಲವೇ?" ಎಂದರು.ಯೇಸು ಅವರ ಕಡೆ ತಿರುಗಿ," ನೀವು ಎಂಥ ಸ್ವಭಾವಿಗಳೆಂದು ನಿಮಗೇ ತಿಳಿಯದು. ನರಪುತ್ರನು ಬಂದಿರುವುದು ಮಾನವ ಜೀವಿಗಳ ವಿನಾಶಕ್ಕೆ ಅಲ್ಲ,ಉದ್ಧಾರಕ್ಕೆ," ಎಂದು ಅವರನ್ನು ಖಂಡಿಸಿದರು. ಅನಂತರ ಯೇಸು ಮತ್ತು ಶಿಷ್ಯರು ಬೇರೆ ಹಳ್ಳಿಗೆ ಹೋದರು. 

27.09.10 - ಅತಿ ಶ್ರೇಷ್ಠನು

ಲೂಕನ ಶುಭ ಸಂದೇಶ - 9:46-50


"ಅವನನ್ನು ತಡೆಯಬೇಡಿ, ನಿಮ್ಮ ವಿರೋಧಿ ಅಲ್ಲದವನು ನಿಮ್ಮ ಪರವಾದಿ," 

ಒಮ್ಮೆ ತಮ್ಮಲ್ಲಿ ಅತಿ ಶ್ರೇಷ್ಠನು ಯಾರೆಂಬ ವಾದ ಶಿಷ್ಯರಲ್ಲಿ ಎದ್ದಿತು. ಅವರ ಮನಸ್ಸಿನ ಆಲೋಚನೆಗಳನ್ನು ಅರಿತ ಯೇಸು,ಒಂದು ಚಿಕ್ಕ ಮಗುವನ್ನು ತಂದು ತಮ್ಮ ಪಕ್ಕದಲ್ಲಿ ನಿಲ್ಲಿಸಿಕೊಂಡು "ಯಾವನು ನನ್ನ ಹೆಸರಿನಲ್ಲಿ ಈ ಮಗುವನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನೇ ಸ್ವೀಕರಿಸುತ್ತಾನೆ; ಯಾವನು ನನ್ನನ್ನು ಸ್ವೀಕರಿಸುತಾನೋ ಅವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ. ನಿಮ್ಮೆಲ್ಲರಲ್ಲಿ ಅತ್ಯಲ್ಪನಾದವನೇ ಅತ್ತ್ಯುತ್ತಮನು," ಎಂದರು.

ಆಗ ಯೊವಾನ್ನನು ಯೇಸುವಿಗೆ, "ಗುರುವೇ, ಯಾವನೋ ಒಬ್ಬನು ತಮ್ಮ ಹೆಸರಿನಲ್ಲಿ ದೆವ್ವ ಬಿಡಿಸುವುದನ್ನು ಕಂಡೆವು. ಅವನು ನಮ್ಮವನಲ್ಲದ ಕಾರಣ ಅವನನ್ನು ತಡೆದೆವು," ಎಂದನು.ಅದಕ್ಕೆ ಯೇಸು, "ಅವನನ್ನು ತಡೆಯಬೇಡಿ, ನಿಮ್ಮ ವಿರೋಧಿ ಅಲ್ಲದವನು ನಿಮ್ಮ ಪರವಾದಿ," ಎಂದು ಉತ್ತರಕೊಟ್ಟರು.

24.09.10 - ಅಭಿಷಿಕ್ತರಾದ ಲೋಕೋದ್ಧಾರಕ

"ಆದರೆ ಮೂರನೆಯ ದಿನ ಆತನು ಪುನರುತ್ಥಾನ ಹೊಂದುವನು"

ಲೂಕನ ಶುಭ ಸಂದೇಶ - 9:18-22

ಒಮ್ಮೆ ಯೇಸುಸ್ವಾಮಿ ಏಕಾಂಗಿಯಾಗಿ ಪ್ರಾರ್ಥನೆ ಮಾಡುತ್ತಿದ್ದಾಗ ಶಿಷ್ಯರು ಸಮೀಪದಲ್ಲೇ ಇದ್ದರು."ಜನ ಸಾಮಾನ್ಯರು ನನ್ನನ್ನು ಯಾರೆನ್ನುತ್ತಾರೆ? ಎಂದು ಯೇಸು ಅವರನ್ನು ಪ್ರಶ್ನಿಸಿದರು.ಅದಕ್ಕೆ ಅವರು "ಹಲವರು ನಿಮ್ಮನ್ನು ’ಸ್ನಾನಿಕ ಯೊವಾನ್ನ’ ಎನ್ನುತ್ತಾರೆ; ಕೆಲವರು ’ಎಲೀಯನು’ ಎನ್ನುತ್ತಾರೆ  ಮತ್ತೆ ಕೆಲವರು ’ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತವಾಗಿದ್ದಾನೆ’ ಎನ್ನುತ್ತಾರೆ" ಎಂದು ಉತ್ತರವಿತ್ತರು. ಆಗ ಯೇಸು "ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?" ಎಂದು ಪುನ: ಪ್ರಶ್ನಿಸಿದರು. ಅದಕ್ಕೆ ಪೇತ್ರನು "ದೇವರಿಂದ ಅಭಿಷಿಕ್ತರಾದ ಲೋಕೋದ್ಧಾರಕ ತಾವೇ" ಎಂದೂ ಉತ್ತರ ಕೊಟ್ಟನು.  ಈ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಯೇಸು ಶಿಷ್ಯರನ್ನು ಆಜ್ಞಾಪೂರ್ವಕವಾಗಿ ಎಚ್ಚರಿಸಿದರು.ಇದಲ್ಲದೆ "ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ ಸಭಾಪ್ರಮುಖರಿಂದಲೂ ಮುಖ್ಯ ಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು. ಆದರೆ ಮೂರನೆಯ ದಿನ ಆತನು ಪುನರುತ್ಥಾನ ಹೊಂದುವನು," ಎಂದು ಅವರಿಗೆ ತಿಳಿಸಿದರು.

23.09.10 - ಯೊವಾನ್ನ, ಎಲೀಯ ಹಾಗೂ ಯೇಸು

ಲೂಕನ ಶುಭ ಸಂದೇಶ - 9:7-9

ಯೊವಾನ್ನನು ಮರಳಿ ಜೀವಂತವಾಗಿ ಎದ್ದಿದ್ದಾನೆ

ನಡೆಯುತ್ತಿದ್ದ ಸಂಗತಿಗಳು ಸಾಮಂತ ರಾಜ ಹೆರೋದನ ಕಿವಿಗೆ ಬಿದ್ದವು. ಅವನ ಮನಸ್ಸು ಕಳವಳಗೊಂಡಿತು.ಏಕೆಂದರೆ 'ಯೊವಾನ್ನನು ಮರಳಿ ಜೀವಂತವಾಗಿ ಎದ್ದಿದ್ದಾನೆ ಎಂದು ಕೆಲವರೂ, ಎಲೀಯನು ಪುನ: ಕಾಣಿಸಿಕೊಂಡಿದ್ದಾನೆ ಎಂದು ಇನ್ನೂ ಕೆಲವರು, ಪ್ರಾಚೀನ ಪ್ರವಾದಿಗಳ್ಲ್ಲಲ್ಲಿ  ಒಬ್ಬನು ಮರಳಿ ಜೀವಂತವಾಗಿದ್ದಾನೆ’ ಎಂದು ಕೆಲವರೂ ಹೇಳುತ್ತಿದ್ದರು. ಹೆರೋದನಾದರೋ ’ಯೊವಾನ್ನನೇ? ಅವನನ್ನು ನಾನೇ ಶಿರಚ್ಛೇದನ ಮಾಡಿಸಿದೆನಲ್ಲಾ! ಮತ್ತೆ ಇವನಾರು? ಇವನ ಬಗ್ಗೆ  ಇಂಥಾ ವಿಷಯಗಳೆನೆಲ್ಲಾ ಕೇಳುತ್ತಾ ಇರುವೆನಲ್ಲಾ!’ ಎಂದುಕೊಂಡು, ಯೇಸುವನ್ನು ನೋಡಲು ಅವಕಾಶ ಹುಡುಕುತ್ತಿದ್ದನು.

22.09.10 - ದೇವರ ಸಾಮ್ರಾಜ್ಯದ ಬೋಧನೆ

ಸಂತ ಲೂಕನ ಶುಭಸಂದೇಶ - 9:1-6

ಪ್ರಯಾಣಕ್ಕೆಂದು ಏನನ್ನೂ ತೆಗೆದುಕೊಳ್ಳಬೇಡಿದಂಡಜೋಳಿಗೆಬುತ್ತಿ ಅಥವಾ ಹಣ ಯಾವುದೂ ಬೇಡ

ಯೇಸುಸ್ವಾಮಿ ಹನ್ನೆರಡು ಮಂದಿ ಪ್ರೇಷಿತರನ್ನು ಒಟ್ಟಿಗೆ ಕರೆದು ಎಲ್ಲ ದೆವ್ವಗಳನ್ನು ಬಿಡಿಸಲೂ ರೋಗ ನಿವಾರಣೆ ಮಾಡಲೂ ಅವರಿಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು. ಅನಂತರ ದೇವರ ಸಾಮ್ರಾಜ್ಯವನ್ನು ಕುರಿತು ಬೋಧಿಸುವುದಕ್ಕೂ ರೋಗಿಗಳನ್ನು ಗುಣಪಡಿಸುವುದಕ್ಕೊ ಅವರನ್ನು ಕಳುಹಿಸಿದರು. ಕಳುಹಿಸುವಾಗ ಅವರಿಗೆ ಇಂತೆಂದರು, “ಪ್ರಯಾಣಕ್ಕೆಂದು ಏನನ್ನೂ ತೆಗೆದುಕೊಳ್ಳಬೇಡಿ; ದಂಡ, ಜೋಳಿಗೆ, ಬುತ್ತಿ ಅಥವಾ ಹಣ ಯಾವುದೂ ಬೇಡ. ಎರಡು ಅಂಗಿಗಳೂ ಬೇಕಾಗಿಲ್ಲ. ಯಾವ ಮನೆಯವರು ನಿಮ್ಮನ್ನು ಬರಮಾಡಿಕೂಳ್ಳುತ್ತಾರೋ ಆ ಮನೆಯಲ್ಲೇ ತಂಗಿರಿ. ಅಲ್ಲಿಂದಲೇ ಮುಂದಕ್ಕೆ ಸಾಗಿರಿ. ಯಾವ ಊರಿನವರಾದರೂ ನಿಮ್ಮನ್ನು ಸ್ವಾಗತಿಸದೆ ಹೋದಲ್ಲಿ, ನೀವು ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅದು ಅವರ ವಿರುದ್ದ ಸಾಕ್ಷಿಯಾಗಲಿ.” ಎಂದರು.

ಪ್ರೇಷಿತರು ಹೂರಟು ಹಳ್ಳಿಹಳ್ಳಿಗೂ ಹೋಗಿ ಎಲ್ಲ ಕಡೆ ಶುಭಸಂದೇಶವನ್ನು ಬೋಧಿಸಿದರು; ರೋಗಿಗಳನ್ನು ಗುಣಪಡಿಸಿದರು.

21.09.10 - ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ; ಆರೋಗ್ಯವಂತರಿಗಲ್ಲ.

ಮತ್ತಾಯನ ಶುಭ ಸಂದೇಶ -   9 : 9 –13

ಬಹುಮಂದಿ  ಸುಂಕದವರೂ’ ಪಾಪಿಷ್ಠರೂ ಅಲ್ಲಿಗೆ ಬಂದರುಯೇಸು ಮತ್ತು ಅವರ ಶಿಷ್ಯರು ಕುಳಿತಿದ್ದ ಪಂಕ್ತಿಯಲ್ಲೇ ಇವರೂಊಟಕ್ಕೆ ಕುಳಿತರು.

ಯೇಸುಸ್ವಾಮಿ ಸ್ಥಳವನ್ನು ಬಿಟ್ಟು ಮುಂದಕ್ಕೆ ಹೋಗುತ್ತಿದ್ದಾಗ ಮತ್ತಾಯ ಎಂಬವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. “ನನ್ನುನ್ನು ಹಿಂಬಾಲಿಸು,” ಎಂದು ಹೇಳಿ ಯೇಸು ಅವನನ್ನು ಕರೆದರು. ಮತ್ತಾಯನು ಎದ್ದು ಅವರನ್ನು ಹಿಂಬಾಲಿಸಿದನು. ಇದಾದ ಮೇಲೆ ಯೇಸುಸ್ವಾಮಿ ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ  ’ಸುಂಕದವರೂಪಾಪಿಷ್ಠರೂ ಅಲ್ಲಿಗೆ ಬಂದರು. ಯೇಸು ಮತ್ತು ಅವರ ಶಿಷ್ಯರು ಕುಳಿತಿದ್ದ ಪಂಕ್ತಿಯಲ್ಲೇ ಇವರೂ ಊಟಕ್ಕೆ ಕುಳಿತರು. ಫರಿಸಾಯರು ಇದನ್ನು ಕಂಡದ್ದೇ ಯೇಸುವಿನ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮ ಗುರು ಇಂತಹ ಬಹಿಷ್ಕೃತ ಜನರ ಜೊತೆಯಲ್ಲಿ ಉಟಮಾಡುವುದೇ?” ಎಂದು ಆಕ್ಷೇಪಿಸಿದರು. ಇದನ್ನು ಕೇಳಿಸಿಕೂಂಡ ಯೇಸು, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ; ಆರೋಗ್ಯವಂತರಿಗಲ್ಲ. ನೀವು ಹೋಗಿ, ’ನನಗೆ ಬೇಕಾದುದು ದಯೆ, ಯಜ್ಞ ಬಲಿಯಲ್ಲ’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ ಪಾಪಿಷ್ಠರನ್ನು,” ಎಂದರು.

20.09.10 - ದೀಪ - ಗುಟ್ಟು

ಸಂತ ಲೂಕನ ಶುಭ ಸಂದೇಶ - 8 :16-18

ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ,  ಇಲ್ಲದವನಿಂದ ತನಗಿದೆ ಎಂದುಕೊಳ್ಳುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ

ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆಯಿಂದ ಮುಚ್ಚಿಡುವುದಿಲ್ಲ; ಮಂಚದ ಕೆಳಗೆ ಬಚ್ಚಿಡುವುದಿಲ್ಲ. ಮನೆಯೊಳಕ್ಕೆ  ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲಿಡುತ್ತಾರೆ. ಬಟ್ಟಬಯಲಾಗದ ಮುಚ್ಚುಮರೆಯಿಲ್ಲ; ಬೆಳಕಿಗೆ ಬಾರದ ಹಾಗೂ ರಟ್ಟಾಗದ ಗುಟ್ಟಿಲ್ಲ. ಆದ್ದರಿಂದ ನೀವು ಕಿವಿಕೊಡುವಾಗ ಎಚ್ಚರಿಕೆಯಿಂದಿರಿ; ಏಕೆಂದರೆ, ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆಇಲ್ಲದವನಿಂದ ತನಗಿದೆ ಎಂದುಕೊಳ್ಳುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ,” ಎಂದರು.

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...