ಮತ್ತಾಯನ ಶುಭ ಸಂದೇಶ - 9 : 9 –13
ಬಹುಮಂದಿ ’ಸುಂಕದವರೂ’ ಪಾಪಿಷ್ಠರೂ ಅಲ್ಲಿಗೆ ಬಂದರು. ಯೇಸು ಮತ್ತು ಅವರ ಶಿಷ್ಯರು ಕುಳಿತಿದ್ದ ಪಂಕ್ತಿಯಲ್ಲೇ ಇವರೂಊಟಕ್ಕೆ ಕುಳಿತರು.
ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಮುಂದಕ್ಕೆ ಹೋಗುತ್ತಿದ್ದಾಗ ಮತ್ತಾಯ ಎಂಬವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. “ನನ್ನುನ್ನು ಹಿಂಬಾಲಿಸು,” ಎಂದು ಹೇಳಿ ಯೇಸು ಅವನನ್ನು ಕರೆದರು. ಮತ್ತಾಯನು ಎದ್ದು ಅವರನ್ನು ಹಿಂಬಾಲಿಸಿದನು. ಇದಾದ ಮೇಲೆ ಯೇಸುಸ್ವಾಮಿ ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ’ಸುಂಕದವರೂ’ ಪಾಪಿಷ್ಠರೂ ಅಲ್ಲಿಗೆ ಬಂದರು. ಯೇಸು ಮತ್ತು ಅವರ ಶಿಷ್ಯರು ಕುಳಿತಿದ್ದ ಪಂಕ್ತಿಯಲ್ಲೇ ಇವರೂ ಊಟಕ್ಕೆ ಕುಳಿತರು. ಫರಿಸಾಯರು ಇದನ್ನು ಕಂಡದ್ದೇ ಯೇಸುವಿನ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮ ಗುರು ಇಂತಹ ಬಹಿಷ್ಕೃತ ಜನರ ಜೊತೆಯಲ್ಲಿ ಉಟಮಾಡುವುದೇ?” ಎಂದು ಆಕ್ಷೇಪಿಸಿದರು. ಇದನ್ನು ಕೇಳಿಸಿಕೂಂಡ ಯೇಸು, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ; ಆರೋಗ್ಯವಂತರಿಗಲ್ಲ. ನೀವು ಹೋಗಿ, ’ನನಗೆ ಬೇಕಾದುದು ದಯೆ, ಯಜ್ಞ ಬಲಿಯಲ್ಲ’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ ಪಾಪಿಷ್ಠರನ್ನು,” ಎಂದರು.
No comments:
Post a Comment