22.09.10 - ದೇವರ ಸಾಮ್ರಾಜ್ಯದ ಬೋಧನೆ

ಸಂತ ಲೂಕನ ಶುಭಸಂದೇಶ - 9:1-6

ಪ್ರಯಾಣಕ್ಕೆಂದು ಏನನ್ನೂ ತೆಗೆದುಕೊಳ್ಳಬೇಡಿದಂಡಜೋಳಿಗೆಬುತ್ತಿ ಅಥವಾ ಹಣ ಯಾವುದೂ ಬೇಡ

ಯೇಸುಸ್ವಾಮಿ ಹನ್ನೆರಡು ಮಂದಿ ಪ್ರೇಷಿತರನ್ನು ಒಟ್ಟಿಗೆ ಕರೆದು ಎಲ್ಲ ದೆವ್ವಗಳನ್ನು ಬಿಡಿಸಲೂ ರೋಗ ನಿವಾರಣೆ ಮಾಡಲೂ ಅವರಿಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು. ಅನಂತರ ದೇವರ ಸಾಮ್ರಾಜ್ಯವನ್ನು ಕುರಿತು ಬೋಧಿಸುವುದಕ್ಕೂ ರೋಗಿಗಳನ್ನು ಗುಣಪಡಿಸುವುದಕ್ಕೊ ಅವರನ್ನು ಕಳುಹಿಸಿದರು. ಕಳುಹಿಸುವಾಗ ಅವರಿಗೆ ಇಂತೆಂದರು, “ಪ್ರಯಾಣಕ್ಕೆಂದು ಏನನ್ನೂ ತೆಗೆದುಕೊಳ್ಳಬೇಡಿ; ದಂಡ, ಜೋಳಿಗೆ, ಬುತ್ತಿ ಅಥವಾ ಹಣ ಯಾವುದೂ ಬೇಡ. ಎರಡು ಅಂಗಿಗಳೂ ಬೇಕಾಗಿಲ್ಲ. ಯಾವ ಮನೆಯವರು ನಿಮ್ಮನ್ನು ಬರಮಾಡಿಕೂಳ್ಳುತ್ತಾರೋ ಆ ಮನೆಯಲ್ಲೇ ತಂಗಿರಿ. ಅಲ್ಲಿಂದಲೇ ಮುಂದಕ್ಕೆ ಸಾಗಿರಿ. ಯಾವ ಊರಿನವರಾದರೂ ನಿಮ್ಮನ್ನು ಸ್ವಾಗತಿಸದೆ ಹೋದಲ್ಲಿ, ನೀವು ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅದು ಅವರ ವಿರುದ್ದ ಸಾಕ್ಷಿಯಾಗಲಿ.” ಎಂದರು.

ಪ್ರೇಷಿತರು ಹೂರಟು ಹಳ್ಳಿಹಳ್ಳಿಗೂ ಹೋಗಿ ಎಲ್ಲ ಕಡೆ ಶುಭಸಂದೇಶವನ್ನು ಬೋಧಿಸಿದರು; ರೋಗಿಗಳನ್ನು ಗುಣಪಡಿಸಿದರು.

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...