"ಆದರೆ ಮೂರನೆಯ ದಿನ ಆತನು ಪುನರುತ್ಥಾನ ಹೊಂದುವನು"
ಲೂಕನ ಶುಭ ಸಂದೇಶ - 9:18-22
ಒಮ್ಮೆ ಯೇಸುಸ್ವಾಮಿ ಏಕಾಂಗಿಯಾಗಿ ಪ್ರಾರ್ಥನೆ ಮಾಡುತ್ತಿದ್ದಾಗ ಶಿಷ್ಯರು ಸಮೀಪದಲ್ಲೇ ಇದ್ದರು."ಜನ ಸಾಮಾನ್ಯರು ನನ್ನನ್ನು ಯಾರೆನ್ನುತ್ತಾರೆ? ಎಂದು ಯೇಸು ಅವರನ್ನು ಪ್ರಶ್ನಿಸಿದರು.ಅದಕ್ಕೆ ಅವರು "ಹಲವರು ನಿಮ್ಮನ್ನು ’ಸ್ನಾನಿಕ ಯೊವಾನ್ನ’ ಎನ್ನುತ್ತಾರೆ; ಕೆಲವರು ’ಎಲೀಯನು’ ಎನ್ನುತ್ತಾರೆ ಮತ್ತೆ ಕೆಲವರು ’ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತವಾಗಿದ್ದಾನೆ’ ಎನ್ನುತ್ತಾರೆ" ಎಂದು ಉತ್ತರವಿತ್ತರು. ಆಗ ಯೇಸು "ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?" ಎಂದು ಪುನ: ಪ್ರಶ್ನಿಸಿದರು. ಅದಕ್ಕೆ ಪೇತ್ರನು "ದೇವರಿಂದ ಅಭಿಷಿಕ್ತರಾದ ಲೋಕೋದ್ಧಾರಕ ತಾವೇ" ಎಂದೂ ಉತ್ತರ ಕೊಟ್ಟನು. ಈ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಯೇಸು ಶಿಷ್ಯರನ್ನು ಆಜ್ಞಾಪೂರ್ವಕವಾಗಿ ಎಚ್ಚರಿಸಿದರು.ಇದಲ್ಲದೆ "ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ ಸಭಾಪ್ರಮುಖರಿಂದಲೂ ಮುಖ್ಯ ಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು. ಆದರೆ ಮೂರನೆಯ ದಿನ ಆತನು ಪುನರುತ್ಥಾನ ಹೊಂದುವನು," ಎಂದು ಅವರಿಗೆ ತಿಳಿಸಿದರು.
No comments:
Post a Comment