ಲೂಕನ ಶುಭ ಸಂದೇಶ - 9:46-50
"ಅವನನ್ನು ತಡೆಯಬೇಡಿ, ನಿಮ್ಮ ವಿರೋಧಿ ಅಲ್ಲದವನು ನಿಮ್ಮ ಪರವಾದಿ,"
"ಅವನನ್ನು ತಡೆಯಬೇಡಿ, ನಿಮ್ಮ ವಿರೋಧಿ ಅಲ್ಲದವನು ನಿಮ್ಮ ಪರವಾದಿ,"
ಒಮ್ಮೆ ತಮ್ಮಲ್ಲಿ ಅತಿ ಶ್ರೇಷ್ಠನು ಯಾರೆಂಬ ವಾದ ಶಿಷ್ಯರಲ್ಲಿ ಎದ್ದಿತು. ಅವರ ಮನಸ್ಸಿನ ಆಲೋಚನೆಗಳನ್ನು ಅರಿತ ಯೇಸು,ಒಂದು ಚಿಕ್ಕ ಮಗುವನ್ನು ತಂದು ತಮ್ಮ ಪಕ್ಕದಲ್ಲಿ ನಿಲ್ಲಿಸಿಕೊಂಡು "ಯಾವನು ನನ್ನ ಹೆಸರಿನಲ್ಲಿ ಈ ಮಗುವನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನೇ ಸ್ವೀಕರಿಸುತ್ತಾನೆ; ಯಾವನು ನನ್ನನ್ನು ಸ್ವೀಕರಿಸುತಾನೋ ಅವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ. ನಿಮ್ಮೆಲ್ಲರಲ್ಲಿ ಅತ್ಯಲ್ಪನಾದವನೇ ಅತ್ತ್ಯುತ್ತಮನು," ಎಂದರು.
ಆಗ ಯೊವಾನ್ನನು ಯೇಸುವಿಗೆ, "ಗುರುವೇ, ಯಾವನೋ ಒಬ್ಬನು ತಮ್ಮ ಹೆಸರಿನಲ್ಲಿ ದೆವ್ವ ಬಿಡಿಸುವುದನ್ನು ಕಂಡೆವು. ಅವನು ನಮ್ಮವನಲ್ಲದ ಕಾರಣ ಅವನನ್ನು ತಡೆದೆವು," ಎಂದನು.ಅದಕ್ಕೆ ಯೇಸು, "ಅವನನ್ನು ತಡೆಯಬೇಡಿ, ನಿಮ್ಮ ವಿರೋಧಿ ಅಲ್ಲದವನು ನಿಮ್ಮ ಪರವಾದಿ," ಎಂದು ಉತ್ತರಕೊಟ್ಟರು.
No comments:
Post a Comment