ಸಂತ ಲೂಕನ ಶುಭ ಸಂದೇಶ - 11: 1-4
ನಮಗೆ ತಪ್ಪು ಮಾಡಿದ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ, ನಮ್ಮ ಪಾಪಗಳನ್ನು ಕ್ಷಮಿಸಿರಿ
ಒಮ್ಮೆ ಯೇಸುಸ್ವಾಮಿ ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡುತ್ತಾ ಇದ್ದರು. ಅವರ ಪ್ರಾರ್ಥನೆ ಮುಗಿದ ಮೇಲೆ ಶಿಷ್ಯರಲ್ಲಿ ಒಬ್ಬನು, “ಪ್ರಭುವೇ, ಯೊವಾನ್ನನ್ನು ತನ್ನ ಶಿಷ್ಯರಿಗೆ ಪ್ರಾರ್ಥನೆ ಮಾಡುವುದನ್ನು ಕಲಿಸಿದ ಹಾಗೆ ನಮಗೂ ಕಲಿಸಿಕೊಡಿ, “ಎಂದನು.
ಅದಕ್ಕೆ ಯೇಸು ಇಂತೆಂದರು,“ನೀವು ಹೀಗೆ ಪ್ರಾರ್ಥನೆಮಾಡಬೇಕು:
"ತಂದೆಯೇ, ನಿಮ್ಮ ಪವಿತ್ರನಾಮ ಪೂಜಿತವಾಗಲಿ; ನಿಮ್ಮ ಸಾಮ್ರಾಜ್ಯ ಬರಲಿ.
ನಮಗೆ ಅಗತ್ಯವಾದ ಆಹಾರವನ್ನು ಅನುದಿನವೂ ಕೊಡಿ.
ನಮಗೆ ತಪ್ಪು ಮಾಡಿದ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ,
ನಮ್ಮ ಪಾಪಗಳನ್ನು ಕ್ಷಮಿಸಿರಿ.
ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ.”
No comments:
Post a Comment