ಸಂತ ಲೂಕನ ಶುಭ ಸಂದೇಶ - 17: 11-19
ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ
ಯೇಸುಸ್ವಾಮಿ ಜೆರುಸಲೇಮಿಗೆ ಪ್ರಯಾಣ ಮಾಡುತ್ತಾ ಸಮಾರಿಯ ಹಾಗೂ ಗಲಿಲೇಯ ಗಡಿಗಳ ನಡುವೆ ಹಾದು ಹೋಗುತ್ತಿದ್ದರು. ಒಂದು ಗ್ರಾಮವನ್ನು ಸಮೀಪಿಸಿದಾಗ ಕುಷ್ಠ ರೋಗದಿಂದ ನರಳುತ್ತಿದ್ದ ಹತ್ತು ಮಂದಿ ಅವರಿಗೆ ಎದುರಾಗಿ ಬಂದರು. ದೂರದಲ್ಲೇ ನಿಂತು, ’ಯೇಸುವೇ, ಗುರುವೇ, ನಮ್ಮ ಮೇಲೆ ಕರುಣೆಯಿಡಿ,’ ಎಂದು ಕೂಗಿ ಕೇಳಿಕೊಂಡರು. ಯೇಸು ಅವರನ್ನು ನೋಡಿ, “ನೀವು ಯಾಜಕರ ಬಳಿಗೆ ಹೋಗಿರಿ. ಅವರು ನಿಮ್ಮನ್ನು ಪರೀಕ್ಷಿಸಲಿ,” ಎಂದರು.
ಅಂತೆಯೇ, ಅವರು ದಾರಿಯಲ್ಲಿ ಹೋಗುತ್ತಿರುವಾಗಲೇ ಗುಣಹೊಂದಿದರು. ಅವರಲ್ಲಿ ಒಬ್ಬನು ತಾನು ಗುಣಹೊಂದಿದ್ದನ್ನು ಕಂಡು, ಹರ್ಷೋದ್ಗಾರದಿಂದ ದೇವರನ್ನು ಸ್ತುತಿಸುತ್ತಾ ಹಿಂದಿರುಗಿ ಬಂದನು. ಯೇಸುವಿನ ಪಾದಕ್ಕೆ ಸಾಷ್ಟಾಂಗವೆರಗಿ ಕೃತಜ್ಞತೆಯನ್ನು ಸಲ್ಲಿಸಿದನು. ಇವನೋ ಸಮಾರಿಯದವನು ! ಆಗ ಯೇಸು, “ಹತ್ತುಮಂದಿ ಗುಣ ಹೊಂದಿದರಲ್ಲವೇ? ಮಿಕ್ಕ ಒಂಬತ್ತು ಮಂದಿ ಎಲ್ಲಿ? ದೇವರನ್ನು ಸ್ತುತಿಸುವುದಕ್ಕೆ ಈ ಹೊರನಾಡಿನವನು ಹೊರತು ಬೇರಾರೂ ಬರಲಿಲ್ಲವೇ?” ಎಂದರು. ಅನಂತರ ಆ ಸಮಾರಿಯದವನಿಗೆ, “ಎದ್ದು ಹೋಗು; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದು ಹೇಳಿದರು.
No comments:
Post a Comment