ಸಂತ ಲೂಕನ ಶುಭ ಸಂದೇಶ – 10: 1-9
“ಬೆಳೆಯೇನೋ ಹೇರಳವಾಗಿದೆ; ಕೊಯ್ಲುಗಾರರೊ ವಿರಳ"
ಇದಾದ ಮೇಲೆ, ಯೇಸುಸ್ವಾಮಿ ಇನ್ನೂ ಎಪ್ಪತ್ತೆರಡು ಮಂದಿಯನ್ನು ನೇಮಿಸಿ ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ ಮುಂದಾಗಿ ಕಳಿಸಿದರು.ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, “ಬೆಳೆಯೇನೋ ಹೇರಳವಾಗಿದೆ; ಕೊಯ್ಲುಗಾರರೊ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ. ಹೋಗಿರಿ, ತೊಳಗಳ ನಡುವೆ ಕುರಿಮರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಹಣದ ಚೀಲವನ್ನಾಗಲಿ, ಜೋಳಿಗೆಯನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗದಿರಿ. ದಾರಿಯಲ್ಲಿ ಯಾರಿಗೊ ವಂದನೋಪಚಾರಗಳನ್ನು ಮಾಡಿಕೊಂಡಿರಬೇಡಿ. ನೀವು ಯಾವ ಮನೆಗೆ ಹೋದರೂ, ’ಈ ಮನೆಗೆ ಶಾಂತಿ,’ ಎಂದು ಆಶೀರ್ವಾದ ಮಾಡಿ. ಶಾಂತಿ ಪ್ರಿಯನು ಅಲ್ಲಿದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನೆಲೆಸುವುದು. ಇಲ್ಲವಾದರೆ, ಅದು ನಿಮಗೆ ಹಿಂದಿರುಗುವುದು. ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನ್ನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು.
“ನೀವು ಯಾವ ಊರಿಗೆ ಹೋದರೂ ಜನರು ನಿಮ್ಮನ್ನು ಸ್ವಾಗತಿಸಿದಾಗ, ಅವರು ಬಡಿಸಿದ್ದನ್ನು ಭುಜಿಸಿರಿ. ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. ’ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ,’ ಎಂದು ತಿಳಿಸಿರಿ.
No comments:
Post a Comment