ಸಂತ ಲೂಕನ ಶುಭ ಸಂದೇಶ – 12: 35-38
“ನಿಮ್ಮ ನಡು ಕಟ್ಟಿರಲಿ; ನಿಮ್ಮ ದೀಪ ಉರಿಯುತ್ತಿರಲಿ"
“ನಿಮ್ಮ ನಡು ಕಟ್ಟಿರಲಿ; ನಿಮ್ಮ ದೀಪ ಉರಿಯುತ್ತಿರಲಿ. ತಟ್ಟಿದ ತಕ್ಷಣ ಯಜಮಾನನಿಗೆ ಬಾಗಿಲು ತೆರೆಯಲು ಸಿದ್ದರಿರುವ ಸೇವಕನಂತೆ ಇರಿ. ತಮ್ಮ ಯಜಮಾನನು ಮದುವೆ ಔತಣ ಮುಗಿಸಿಕೊಂಡು ಯಾವಾಗ ಹಿಂದಿರಿಗುತ್ತಾನೋ ಎಂದು ಅವರು ಎದುರು ನೋಡುತ್ತಾ ಇರುತ್ತಾರೆ. ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡು ಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು. ಏಕೆಂದರೆ, ಯಜಮಾನನೇ ನಡುಕಟ್ಟಿ ನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. “ಯಜಮಾನನು ಬರುವಾಗ ನಡು ರಾತ್ರಿ ಆಗಿರಲಿ, ಮುಂಜಾವಾಗಿರಲಿ, ಎಚ್ಚರದಿಂದ ಇರುವ ಸೇವಕರನ್ನು ಆತನು ಕಂಡರೆ ಅವರು ಭಾಗ್ಯವಂತರು".
No comments:
Post a Comment