ಸಂತ ಲೂಕನ ಶುಭ ಸಂದೇಶ – 12: 54-59
"ನ್ಯಾಯ ನಿರ್ಣಯವನ್ನು ನಿಮ್ಮಲ್ಲಿಯೇ ನೀವು ಏಕೆ ಮಾಡಿಕೊಳ್ಳಬಾರದು
ಇದೂ ಅಲ್ಲದೆ ಯೇಸುಸ್ವಾಮಿ ಜನ ಸಮೂಹವನ್ನು ನೋಡಿ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೇ, ’ಭಾರಿ ಮಳೆ ಬರುತ್ತದೆ’ ಎನ್ನುತ್ತೀರಿ; ಹಾಗೆಯೇ ಆಗುತ್ತದೆ. ದಕ್ಷಿಣ ದಿಕ್ಕಿನ ಗಾಳಿ ಬೀಸಿದಾಗ ಉರಿಬಿಸಿಲು ಎನ್ನುತ್ತೀರಿ; ಅಂತೆಯೇ ಇರುತ್ತದೆ. ಆಷಾಢಭೂತಿಗಳೇ, ಭೂಮ್ಯಾಕಾಶಗಳ ಲಕ್ಷಣಗಳನ್ನು ನೀವು ಸರಿಯಾಗಿ ಅರಿತುಕೊಳ್ಳಬಲ್ಲಿರಿ; ಅದರೆ ಪ್ರಸ್ತುತ ಕಾಲವನ್ನು ಅರ್ಥಮಾಡಿಕೊಳ್ಳಲಾರಿರಾ?"ನ್ಯಾಯನಿರ್ಣಯವನ್ನು ನಿಮ್ಮಲ್ಲಿಯೇ ನೀವು ಏಕೆ ಮಾಡಿಕೊಳ್ಳಬಾರದು? ನೀನು ನ್ಯಾಯಧಿಪತಿಯ ಬಳಿಗೆ ಹೋಗಬೇಕಾಗಿ ಬಂದಲ್ಲಿ, ದಾರಿಯಲ್ಲೇ ನಿನ್ನ ವಿರೋಧಿಯೊಡನೆ ವ್ಯಾಜ್ಯ ತೀರಿಸಿಕೊಳ್ಳಲು ಪ್ರಯತ್ನಿಸು.ಇಲ್ಲದಿದ್ದರೆ ಅವನು ನಿನ್ನನ್ನು ನಾಯಾಧಿಪತಿಯ ಮುಂದೆ ಎಳೆದೊಯ್ಯಬಹುದು; ನ್ಯಾಯಾಧಿಪತಿ ನಿನ್ನನ್ನು ಸೆರೆಯ ಅಧಿಕಾರಿಯ ಕೈಗೊಪ್ಪಿಸಬಹುದು. ಸೆರೆ ಅಧಿಕಾರಿ ನಿನ್ನನ್ನು ಸೆರೆಮನೆಯಲ್ಲಿ ಹಾಕಬಹುದು. ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಕಡೇ ಕಾಸನ್ನೂ ಬಿಡದೆ ಎಲ್ಲವನ್ನೂ ಸಲ್ಲಿಸಬೇಕಾಗುವುದೆಂಬುದು ನಿಶ್ಚಯ,” ಎಂದರು.
No comments:
Post a Comment