ಸಂತ ಲೂಕನ ಶುಭ ಸಂದೇಶ - 14: 1-6
"ನಿಮ್ಮಲ್ಲಿ ಒಬ್ಬನ ಮಗನಾಗಲಿ, ಎತ್ತಾಗಲಿ ಬಾವಿಯಲ್ಲಿ ಬಿದ್ದರೆ, ಸಬ್ಬತ್ ದಿನವಾಗಿದ್ದರೂ ನೀವೂ ತಡಮಾಡದೆ ಮೇಲಕ್ಕೆ ಎತ್ತುವುದಿಲ್ಲವೆ?"
ಅಂದು ಸಬ್ಬತ್ ದಿನ, ಯೇಸುಸ್ವಾಮಿ ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದರು. ಎಲ್ಲರ ಕಣ್ಣು ಅವರ ಮೇಲಿತ್ತು. ಅಲ್ಲೇ ಅವರ ಮುಂದೆ ಜಲೋದರ ರೋಗಿಯೊಬ್ಬನು ಇದ್ದನು. “ಸಬ್ಬತ್ ದಿನ ಗುಣಪಡಿಸುವುದು ಸರಿಯೋ ತಪ್ಪೋ?” ಎಂದು ಯೇಸು ಫರಿಸಾಯರನ್ನೂ ಶಾಸ್ತ್ರಜ್ಞರನ್ನೂ ಕೇಳಿದರು. ಅದಕ್ಕವರು ಮೌನವಾಗಿದ್ದರು. ಯೇಸು ರೋಗಿಯ ಕೈ ಹಿಡಿದು ಗುಣಪಡಿಸಿ ಕಳಿಸಿಬಿಟ್ಟರು. ಅನಂತರ, “ನಿಮ್ಮಲ್ಲಿ ಒಬ್ಬನ ಮಗನಾಗಲಿ, ಎತ್ತಾಗಲಿ ಬಾವಿಯಲ್ಲಿ ಬಿದ್ದರೆ, ಸಬ್ಬತ್ ದಿನವಾಗಿದ್ದರೂ ನೀವೂ ತಡಮಾಡದೆ ಮೇಲಕ್ಕೆ ಎತ್ತುವುದಿಲ್ಲವೆ?” ಎಂದು ಕೇಳಿದರು. ಅದಕ್ಕೂ ಅವರು ನಿರುತ್ತರರಾದರು.
No comments:
Post a Comment