ಸಂತ ಲೂಕನ ಶುಭ ಸಂಧೇಶ - 15: 1-10
"ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ"
ಯೇಸುಸ್ವಾಮಿಯ ಉಪದೇಶವನ್ನು ಕೇಳಲು ಎಲ್ಲಾ ಸುಂಕದವರೂ ಪಾಪಿಗಳು ಬರುತ್ತಿದ್ದರು. ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, “ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟಮಾಡುತ್ತಾನೆ,” ಎಂದು ಗೊಣಗಿದರು. ಆ ಸಂದರ್ಭದಲ್ಲಿ ಯೇಸು ಈ ಸಾಮತಿಯನ್ನು ಹೇಳಿದರು: “ನಿಮ್ಮಲ್ಲಿ ಯಾರ ಬಳಿಯಾದರೂ ನೂರು ಕುರಿಗಳು ಇವೆ ಎನ್ನೋಣ. ಅವುಗಳಲ್ಲಿ ಒಂದು ಕುರಿ ಕಾಣದೆ ಹೋದರೆ ಅವನೇನು ಮಾಡುತ್ತಾನೆ? ಇರುವ ತೊಂಬತ್ತೊಂಬತ್ತು ಕುರಿಗಳನ್ನು ಹುಲುಗಾವಲಿನಲ್ಲೇ ಬಿಟ್ಟು ಕಾಣದೆ ಹೋದ ಆ ಒಂದು ಕುರಿ ಸಿಕ್ಕುವ ತನಕ ಹುಡುಕಿಕೊಂಡು ಹೋಗುತ್ತಾನಲ್ಲವೆ? ಅದು ಸಿಕ್ಕಿದಾಗ ಸಿಕ್ಕಿತೆಂಬ ಸಂತೋಷದಿಂದ ಅದನ್ನು ಹೆಗಲ ಮೇಲೆ ಎತ್ತಿಕೊಂಡು ಮನೆಗೆ ಬರುತ್ತಾನೆ; ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಿಗೆ ಕರೆಯುತ್ತಾನೆ. ’ಕೆಳೆದು ಹೋಗಿದ್ದ ಕುರಿ ಸಿಕ್ಕಿತ್ತು; ನನ್ನೊಡನೆ ಸೇರಿ ಸಂತೋಷಪಡಿ,’ ಎನ್ನುತ್ತಾನೆ, ಅಲ್ಲವೇ? “ಅದೇ ರೀತಿಯಲ್ಲಿ, ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಬತ್ತೊಂಬತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕ್ಕಿಂತ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ
ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.
“ಅಂತೆಯೇ, ಮನೆಯಾಕೆಯೊಬ್ಬಳು ತನ್ನ ಬಳಿಯಿದ್ದ ಹತ್ತು ನಾಣ್ಯಗಳಲ್ಲಿ ಒಂದನ್ನು ಕಳೆದುಕೊಡಳು ಎನ್ನೋಣ. ಆಗ ಅವಳೇನು ಮಾಡುತ್ತಾಳೆ? ದೀಪ ಹಚ್ಚಿ ಮನೆಯನ್ನು ಗುಡಿಸಿ, ಕಳೆದು ಹೋದ ನಾಣ್ಯ ಸಿಕ್ಕುವವರೆಗೂ ಚೆನ್ನಾಗಿ ಹುಡುಕಾಡುತ್ತಾಳೆ, ಅಲ್ಲವೇ? ಅದು ಸಿಕ್ಕಿದಾಗ ತನ್ನ ಗೆಳೆತಿಯರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು, ’ಕಳೆದುಹೋದ ನಾಣ್ಯ ಸಿಕ್ಕಿಬಿಟ್ಟಿತು; ನನ್ನೊಡನೆ ಸೇರಿ ಸಂತೋಷಪಡಿ,’ ಎನ್ನುತ್ತಾಳಲ್ಲವೆ? “ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.
No comments:
Post a Comment