ಸಂತ ಲೂಕನ ಶುಭ ಸಂದೇಶ - 17: 1-6
"ಪಾಪಪ್ರಚೋದನೆಗಳು ಬಂದೇ ಬರುತ್ತವೆ. ಆದರೆ ಅವು ಯಾರಿಂದ ಬರುತ್ತವೋ ಅವನಿಗೆ ಧಿಕ್ಕಾರ"
ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ ಪಾಪಪ್ರಚೋದನೆಗಳು ಬಂದೇ ಬರುತ್ತವೆ. ಆದರೆ ಅವು ಯಾರಿಂದ ಬರುತ್ತವೋ ಅವನಿಗೆ ಧಿಕ್ಕಾರ! ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಕ್ಕೆ ಕಾರಣನಾಗುವುದಕ್ಕಿಂತ, ಬೀಸುವ ಕಲ್ಲನ್ನು ಕುತ್ತಿಗೆಗೆ ಬಿಗಿಸಿಕೊಂಡು ಸಮುದ್ರದಲ್ಲಿ ದಬ್ಬಿಸಿಕೊಳ್ಳುವುದೇ ಲೇಸು. ನೀವಾದರೋ ಎಚ್ಚರಿಕೆಯಿಂದಿರಿ!
“ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಖಂಡಿಸು; ಪಶ್ಚಾತ್ತಾಪಪಟ್ಟರೆ ಕ್ಷಮಿಸಿಬಿಡು. ಅವನು ದಿನಕ್ಕೆ ಏಳುಸಾರಿ ನಿನಗೆ ವಿರುದ್ದ ತಪ್ಪುಮಾಡಿ ಪ್ರತಿಯೊಂದು ಸಾರಿಯೂ ಪಶ್ಚಾತ್ತಾಪಪಟ್ಟು ನಿನ್ನ ಬಳಿಗೆ ಬಂದು, ’ಕ್ಷಮಿಸು’, ಎಂದು ಕೇಳಿಕೊಂಡರೆ ನೀನು ಅವನನ್ನು ಕ್ಷಮಿಸಲೇಬೇಕು,” ಎಂದರು. “ಸ್ವಾಮಿ, ನಮ್ಮ ವಿಶ್ವಾಸವನ್ನು ಹೆಚ್ಚಿಸಿರಿ,” ಎಂದು ಪ್ರೇಷಿತರು ಕೇಳಿಕೊಂಡರು. ಆಗ ಯೇಸುಸ್ವಾಮಿ, “ಸಾಸಿವೆ ಕಾಳಿನಷ್ಟು ವಿಶ್ವಾಸ ನಿಮ್ಮಲ್ಲಿದ್ದು, ನೀವು ಈ ಅತ್ತಿಮರಕ್ಕೆ, ’ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೊ,’ ಎಂದು ಆಜ್ಞಾಪಿಸಿದ್ದೇ ಆದರೆ ಅದು ನಿಮಗೆ ವಿಧೇಯವಾಗಿ ನಡೆದುಕೊಳ್ಳುವುದು.
No comments:
Post a Comment