ಸಂತ ಯೊವಾನ್ನನ ಶುಭ ಸಂದೇಶ - 2: 13-22
ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿದ್ದುದರಿಂದ ಯೇಸುಸ್ವಾಮಿ ಜೆರುಸಲೇಮಿಗೆ ತೆರಳಿದರು. ಅಲ್ಲಿಯ ಮಹಾದೇವಾಲಯದಲ್ಲಿ ದನ, ಕುರಿ ಮತ್ತು ಪಾರಿವಾಳಗಳನ್ನು ಮಾರುವವರು ಮತ್ತು ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿದ್ದರು.ಅದನ್ನು ಕಂಡ ಯೇಸು, ಹಗ್ಗವನ್ನು ಚಾವಟಿಯಂತೆ ಹೆಣೆದು ಅದರಿಂದ ಅವರನ್ನೆಲ್ಲಾ ದೇವಾಲಯದಿಂದ ಹೊರಗಟ್ಟಿದರು ದನ ಕುರಿಗಳನ್ನು ಓಡಿಸಿದರು. ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಕೆಡವಿ, ಚಿಲ್ಲರೆ ಹಣವನ್ನು ಚೆಲ್ಲಿದರು. ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವನ್ನು ಇಲ್ಲಿಂದ ತೆಗೆದುಕೊಂಡು ಹೊರಡಿ. ನನ್ನ ಪಿತನ ಆಲಯವನ್ನು ಸಂತೆಯನ್ನಗಿ ಮಾಡಬೇಡಿ,’ ಎಂದು ಹೇಳಿದರು. ’ನಿನ್ನ ಆಲಯದ ಮೇಲಿನ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,’ ಎಂದು ಪವಿತ್ರಗ್ರಂಥದಲ್ಲೇ ಬರೆದಿರುವ ವಾಕ್ಯವು ಶಿಷ್ಯರಿಗೆ ಆಗ ನೆನಪಾಯಿತು.
ಯೆಹೂದ್ಯರು, “ಇಷ್ಟೆಲ್ಲಾ ಮಾಡಲು ನಿನಗೆ ಅಧಿಕಾರವಿದೆ ಎಂದು ರುಜುವಾತು ಪಡಿಸುವುದಕ್ಕೆ ಯಾವ ಪವಾಡವನ್ನು ಮಾಡಿತೋರಿಸವಬಲ್ಲೆ?” ಎಂದು ಯೇಸುವನ್ನು ಪ್ರಶ್ನಿಸಿದರು. ಅದಕ್ಕೆ ಯೇಸು, “ಈ ದೇವಾಲಯವನ್ನು ಕೆಡವಿಬಿಡಿ, ಮೂರು ದಿನದಲ್ಲಿ ಅಚನ್ನು ಪುನ: ಎಬ್ಬಿಸುವೆನು,” ಎಂದು ಉತ್ತರಕೊಟ್ಟರು. ಚಕಿತರಾದ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟಲು ನಲವತ್ತಾರು ವರ್ಷಗಳು ಹಿಡಿದಿವೆ. ನೀನು ಮೂರು ದಿನಗಳಲ್ಲೇ ಅದನ್ನು ಎಬ್ಬಿಸಬಲ್ಲೆಯಾ?” ಎಂದು ಕೇಳಿದರು. ಯೇಸು ಹೇಳಿದ್ದು ತಮ್ಮ ದೇಹವೆಂಬ ದೇಗುಲವನ್ನು ಕುರಿತು. ಅವರು ಸತ್ತು ಪುನರುತ್ಥಾನ ಹೊಂದಿದ ಬಳಿಕ ಶಿಷ್ಯರು ಅವರ ಈ ಮಾತುಗಳನ್ನು ಸ್ಮರಿಸಿಕೊಂಡರು. ಪವಿತ್ರಗ್ರಂಥದಲ್ಲೂ ಯೇಸುವಿನ ಮಾರಿನಲ್ಲೂ ಅವರಿಗೆ ಆಗ ವಿಶ್ವಾಸ ಹುಟ್ಟಿತು.
No comments:
Post a Comment