ಮೊದಲನೆಯ ವಾಚನ
ಯೆಶಾಯ 42: 1-7

ಶುಭ ಸಂದೇಶ
ಯೊವಾನ್ನ 12:1-11

ಪಾಸ್ಕ ಹಬ್ಬಕ್ಕೆ ಇನ್ನೂ ಆರು ದಿನಗಳಿರುವಾಗ ಯೇಸುಸ್ವಾಮಿ ಬೆಥಾನಿಯಕ್ಕೆ ಬಂದರು. ಅವರು ಲಾಜರನನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದ ಊರದು. ಯೇಸುವಿಗೆ ಅಲ್ಲಿ ಒಂದು ಔತಣವನ್ನು ಏರ್ಪಡಿಸಲಾಗಿತ್ತು.ಮಾರ್ತಳು ಬಡಿಸುತ್ತಿದ್ದಳು. ಯೇಸುವಿನೊಡನೆ ಪಂಕ್ತಿಯಲ್ಲಿ ಊಟಕ್ಕೆ ಕುಳಿತ್ತಿದ್ದವರಲ್ಲಿ ಲಾಜರನೂ ಒಬ್ಬ. ಆಗ ಮರಿಯಳು ಸುಮಾರು ಅರ್ಧ ಲೀಟರಿನಷ್ಟು, ಅತ್ಯಂತ ಬೆಲೆ ಬಾಳುವ ಅಚ್ಚ ಜಟಾಮಾಂಸಿ ಸುಗಂಧ ತೈಲವನ್ನು ತಂದು ಯೇಸುವಿನ ಪಾದಗಳಿಗೆ ಹಚ್ಚಿ ತನ್ನ ತಲೆಗೂದಲಿನಿಂದ ಆ ಪಾದಗಳನ್ನು ಒರೆಸಿದಳು. ತೈಲದ ಸುವಾಸನೆ ಮನೆಯಲ್ಲೆಲ್ಲಾ ಹರಡಿತು. ಯೇಸುವನ್ನು ಹಿಡಿದುಕೊಡಲಿದ್ದ ಹಾಗೂ ಶಿಷ್ಯರಲ್ಲಿ ಒಬ್ಬನಾಗಿದ್ದ ಇಸ್ಕರಿಯೋತಿನ ಯೂದನು, " ಈ ಸುಗಂಧ ತೈಲವನ್ನು ಮುನ್ನೂರು ದಿನಾರಿ ನಾಣ್ಯಗಳಿಗ ಮಾರಿ, ಬಂದ ಹಣವನ್ನು ಬಡ ಬಗ್ಗರಿಗೆ ಕೊಡಬಹುದಿತ್ತಲ್ಲಾ?" ಎಂದನು. ಬಡವರ ಹಿತಚಿಂತನೆಯಿಂದೇನೂ ಅವನು ಹೀಗೆ ಹೇಳಲಿಲ್ಲ. ತನ್ನ ವಶದಲ್ಲಿ ಇಡಲಾಗಿದ್ದ ಹಣದ ಚೀಲದಿಂದ ಸ್ವಂತ ಉಪಯೋಗಕ್ಕಾಗಿ ಬಳಸುತ್ತಿದ್ದ ಕಳ್ಳ ಅವನು. ಆಗ ಯೇಸು. " ಆಕೆಯ ಗೊಡವೆ ನಿನಗೆ ಬೇಡ. ನನ್ನ ಶವ ಸಂಸ್ಕಾರದ ದಿನಕ್ಕಾಗಿ ಆಕೆ ಅದನ್ನು ಇಟ್ಟುಕೊಳ್ಳಲಿ. ಬಡ ಬಗ್ಗರು ನಿಮ್ಮ ಬಳಿಯಲ್ಲಿ ಯಾವಗಲೂ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿ ಇರುವುದಿಲ್ಲ," ಎಂದರು. ಯೇಸುಸ್ವಾಮಿ ಅಲ್ಲಿರುವುದನ್ನು ಕೇಳಿ ಯೆಹೂದ್ಯರ ಒಂದು ದೊಡ್ಡ ಗುಂಪು ಬಂದಿತು.
No comments:
Post a Comment