ಶುಭ ಸಂದೇಶ
ಮತ್ತಾಯ: 26: 14-25
ಇದಾದ ಮೇಲೆ, ಹನ್ನೆರೆಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತಿನ ಯೂದ ಎಂಬಾತ ಮುಖ್ಯ ಯಾಜಕರ ಬಳಿಗೆ ಹೋದನು. "ನಿಮಗೆ ನಾನು ಯೇಸುವನ್ನು ಹಿಡಿದುಕೊಟ್ಟರೆ ನನಗೇನು ಕೊಡುವಿರಿ?" ಎಂದು ಅವರನ್ನು ವಿಚಾರಿಸಿದನು. ಅವರೋ, ಅವನಿಗೆ ಮೂವತ್ತು ಬೆಳ್ಳಿ ನಾಣ್ಯಗಳನ್ನು ನಿಗದಿ ಮಾಡಿ ಕೊಟ್ಟರು. ಆ ಗಳಿಗೆಯಿಂದ ಯೇಸುವನ್ನು ಹಿಡಿದೊಪ್ಪಿಸಲು
ಅವನು ಸಂದರ್ಭ ಕಾಯುತ್ತಾ ಇದ್ದನು.
ಅಂದು ಹುಳಿರಹಿತ ತೊಟ್ಟಿಯ ಹಬ್ಬದ ಮೊದಲನೆಯ ದಿನ. ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, " ತಮಗೆ ಪಾಸ್ಕ ಭೋಜನವನ್ನು ನಾವು ಎಲ್ಲಿ ಸಿದ್ಧಪಡಿಸಬೇಕೆನ್ನುತ್ತೀರಿ? ಎಂದು ಕೇಳಿದರು. ಅದಕ್ಕೆ ಅವರು "ಪಟ್ಟಣದಲ್ಲಿ ನಾನು ಸೂಚಿಸುವಂಥವನ ಬಳಿಗೆ ಹೋಗಿರಿ, ’ನನ್ನ ಕಾಲ ಸಮೀಪಿಸಿತು, ಪಾಸ್ಕವನ್ನು ನನ್ನ ಶಿಷ್ಯರ ಸಮೇತ ನಿನ್ನ ಮನೆಯಲ್ಲಿಯೇ ಆಚರಿಸಬೇಕೆಂದಿದ್ದೇನೆ ; ಇದನ್ನು ನಮ್ಮ ಗುರುವೇ ಹೇಳಿ ಕಳುಹಿಸಿದ್ದಾರೆ ಎಂದು ಅವನಿಗೆ ತಿಳಿಸಿರಿ" ಎಂದರು. ಯೇಸು ಸೂಚಿಸಿದಂತೆಯೇ ಶಿಷ್ಯರು ಹೋಗಿ ಪಾಸ್ಕ ಭೋಜನವನ್ನು ತಯಾರಿಸಿದರು.
ಸಂಜೆಯಾಯಿತು.ಯೇಸುಸ್ವಾಮಿ ಹನ್ನೆರೆಡು ಮಂದಿ ಶಿಷ್ಯರ ಸಂಗಡ ಊಟಕ್ಕೆ ಕುಳಿತರು.ವರೆಲ್ಲರೂ ಊಟ ಮಾಡುತ್ತಿದ್ದಾಗ ಯೇಸು " ನಿಮ್ಮಲ್ಲೇ ಒಬ್ಬನು ನನಗೆ ದ್ರೋಹ ಬಗೆಯುತ್ತಾನೆ, ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ," ಎಂದರು. ಶಿಷ್ಯರು ಬಹಳ ಕಳವಳಗೊಂಡರು. ಒಬ್ಬರಾದ ಮೇಲೊಬ್ಬರು, " ಸ್ವಾಮೀ ನಾನೋ? ನಾನೋ? ಎಂದು ಕೇಳ ತೊಡಗಿದರು.ಅದಕ್ಕೆ ಪ್ರತ್ತ್ಯುತ್ತರವಾಗಿ ಯೇಸು, " ಊಟದ ಬಟ್ಟಲಲ್ಲಿ ನನ್ನೊಡನೆ ಕೈ ಅದ್ದಿ ಉಣ್ಣುವವನೇ ನನಗೆ ದ್ರೋಹ ಬಗೆಯುತ್ತಾನೆ. ನರಪುತ್ರನೇನೋ ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರಕಾರ ಹೊರಟು ಹೋಗುತ್ತಾನೆ, ನಿಜ. ಆದರೆ ಆಯ್ಯೋ ನರಪುತ್ರನಿಗೆ ದ್ರೋಹ ಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ! ಅವನು ಹುಟ್ಟದೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!" ಎಂದರು. ಗುರುದ್ರೋಹಿಯಾದ ಯೂದನು ಆಗ " ಗುರುವೇ, ಅವನು ನಾನಲ್ಲ ತಾನೇ?" ಎಂದನು. ಅದಕ್ಕೆ ಯೇಸು, " ಅದು ನಿನ್ನ ಬಾಯಿಂದಲೇ ಬಂದಿದೆ" ಎಂದರು.
No comments:
Post a Comment