01.06.2015 - ತೋಟದ ಮಾಲೀಕ

ಮಾರ್ಕ 12:1-12

ಅನಂತರ ಯೇಸುಸ್ವಾಮಿ ಅವರೊಡನೆ ಸಾಮತಿಗಳ ರೂಪದಲ್ಲಿ ಮಾತನಾಡತೊಡಗಿದರು: "ಒಬ್ಬನು ದ್ರಾಕ್ಷಿಯ ತೋಟವೊಂದನ್ನು ಮಾಡಿ, ಅದರ ಸುತ್ತ ಬೇಲಿ ಹಾಕಿಸಿದ.ದ್ರಾಕ್ಷರಸವನ್ನು ತೆಗೆಯಲು ಅಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಬಳಿಕ ತೋಟವನ್ನು ಗೇಣಿದಾರರಿಗೆ ವಹಿಸಿ, ಹೊರನಾಡಿಗೆ ಹೊರಟುಹೋದ. ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಕಳುಹಿಸಿದ. ಇವನನ್ನು ಅವರು ಕೊಂದುಹಾಕಿದರು. ಇನ್ನೂ ಅನೇಕರನ್ನು ಕಳುಹಿಸಲು, ಅವರಲ್ಲಿ ಕೆಲವರನ್ನು ಹೊಡೆದರು. ಕೆಲವರನ್ನು ಕಡಿದು ಹಾಕಿದರು. ಯಜಮಾನನಿಗೆ ಇನ್ನು ಉಳಿದಿದ್ದವನೆಂದರೆ ಅವನ ಮುದ್ದು ಮಗನೊಬ್ಬನೇ. " ನನ್ನ ಮಗನಿಗಾದರೋ ಅವರು ಮರ್ಯಾದೆ ಕೊಟ್ಟಾರು" ಎಂದು ಭಾವಿಸಿ, ಕಟ್ಟ ಕಡೆಗೆ ಆ ಯಜಮಾನ ತನ್ನ ಮಗನನ್ನೇ ಅವರ ಬಳಿಗೆ ಕಳುಹಿಸಿದ. 

ಆದರೆ ಆ ಗೇಣಿದಾರರು,"ತೋಟಕ್ಕೆ ಇವನೇ ಉತ್ತರಾಧಿಕಾರು; ಬನ್ನಿ ಇವನನ್ನು ಮುಗಿಸಿಬಿಡೋಣ. ಆಗ ಈ ಆಸ್ತಿ ನಮ್ಮದಾಗುವುದು," ಎಂದು ಒಳಸಂಚು ಹೂಡಿ, ಅವನನ್ನು ಹಿಡಿದು, ಕೊಂದು  ಹಾಕಿ ತೋಟದ ಆಚೆಗೆ ಎಸೆದುಬಿಟ್ಟರು. ಇಂತಹ ಪರಿಸ್ಥಿತಿಯಲ್ಲಿ  ಆ ತೋಟದ ಯಜಮಾನ ಏನು ಮಾಡುವನು? ಅವನು ಬಂದು ಆ ಗೇಣಿದಾರರನ್ನು ಸಂಹರಿಸಿ ತೋಟವನ್ನು ಬೇರೆ ಗೇಣಿದಾರರಿಗೆ ಒಪ್ಪಿಸುವನು.ಪವಿತ್ರ ಗ್ರಂಥದಲ್ಲಿ: "ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು. ಸರ್ವೇಶ್ವರನಿಂದಲೇ ಆದ ಆ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ! ಎಂಬ ವಾಕ್ಯವನ್ನು ನೀವು ಓದಲಿಲ್ಲವೇ?" ಎಂದರು. ತಮ್ಮನ್ನು ಕುರಿತೇ ಸಾಮತಿಯನ್ನು ಹೇಳುತ್ತಿದ್ದರೆಂದು ಅರ್ಥ ಮಾಡಿಕೊಂಡ ಆ ಯೆಹೂದ್ಯ ಮುಖಂಡರು ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಆದರೆ ಜನ ಸಮೂಹಕ್ಕೆ ಹೆದರಿ ಅವರನ್ನು ಬಿಟ್ಟು ಹೋದರು.

No comments:

Post a Comment

15.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ

  ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9 ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮ...