03.06.15 - "ಅವರು ಸ್ವರ್ಗದ ದೇವದೂತರಂತೆ ಇರುತ್ತಾರೆ"

ಸಂತ ಮಾರ್ಕನ ಶುಭ ಸಂದೇಶ - 12: 18-27

"ಅವರು ಸ್ವರ್ಗದ ದೇವದೂತರಂತೆ ಇರುತ್ತಾರೆ"

ಅನಂತರ ಸದ್ದುಕಾಯರು ಯೇಸುಸ್ವಾಮಿಯ ಬಳಿಗೆ ಬಂದರು.ಸತ್ತ ಮೇಲೆ ಪುನರುತ್ಥಾನ ಇಲ್ಲವೆಂಬುದು ಅವರ ಅಭಿಮತ. ಇವರು ಯೇಸುವನ್ನು" ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು ಎಂದು ಮೋಶೆ ನಮಗೆ ಬರೆದಿಟ್ಟಿದ್ದಾನಲ್ಲವೇ? ಒಮ್ಮೆ ಏಳು ಮಂದಿ ಅಣ್ಣ ತಮ್ಮಂದಿರಿದ್ದರು.ಅವರಲ್ಲಿ ಮೊದಲನೆಯವನಿಗೆ ವಿವಾಹವಾಯಿತು.ಅವನು ಮಕ್ಕಳಿಲ್ಲದೆ ಮೃತನಾದುದರಿಂದ ಎರಡನೆಯವನು ಅವನ ಹೆಂಡತಿಯನ್ನು ಮುದುವೆ ಮಾಡಿಕೊಂಡು, ಸಂತಾನವಿಲ್ಲದೆ ಸಾವನಪ್ಪಿದ . ಮೂರನೆಯವನಿಗೂ ಇದೇ ಗತಿಯಾಯಿತು. ಅನಂತರ,ಉಳಿದವರೂ ಒಬ್ಬರ ಬಳಿಕ ಇನ್ನೊಬ್ಬರು ಆಕೆಯನ್ನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತುಹೋದರು. ಕಡೆಗೆ ಆ ಸ್ತ್ರೀಯೂ ಮರಣ ಹೊಂದಿದಳು. ಈಗ ಹೇಳಿ,ಪುನರುತ್ಥಾನ ದಿನದಲ್ಲಿ, ಆಕೆ ಯಾರ ಹೆಂಡತಿ ಎನಿಸಿಕೊಳ್ಳುವಳು?ಏಳು ಮಂದಿ ಸಹೋದರರೂ ಆಕೆಯನ್ನು ವಿವಾಹವಾಗಿದ್ದರಲ್ಲವೇ?" ಎಂದು ಪ್ರಶ್ನಿಸಿದರು. 

ಅದಕ್ಕೆ ಯೇಸು,"ನಿಮ್ಮದು ಎಂಥಾ ತಪ್ಪು ಅಭಿಪ್ರಾಯ!ಪವಿತ್ರ ಗಂಥವನ್ನಾಗಲೀ,ದೇವರ ಶಕ್ತಿಯನ್ನಾಗಲೀ,ನೀವು ಅರ್ಥಮಾಡಿಕೊಂಡಿಲ್ಲ. ಸತ್ತವರು ಪುನರುತ್ಥಾನವಾದ ಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ,ಮಾಡಿಕೊಡುವುದೂ ಇಲ್ಲ.ಅವರು ಸ್ವರ್ಗದ ದೇವದೂತರಂತೆ ಇರುತ್ತಾರೆ.ಇದಲ್ಲದೆ ಸತ್ತವರು ಪುನರುತ್ಥಾನವಾಗುವ ವಿಷಯದಲ್ಲಿ ಹೇಳುವುದಾದರೆ:’ನಾನು ಅಬ್ರಹಾಮನಿಗೆ ದೇವರು,ಇಸಾಕನಿಗೆ ದೇವರು,ಯಾಕೋಬನಿಗೆ ದೇವರು’ಎಂದು ದೇವರು ಮೋಶೆಗೆ ಹೇಳಿದ್ದನ್ನು ಮೋಶೆಯ ಗ್ರಂಥ ’ಉರಿಯುವ ಪೊದೆ’ಯ ಪ್ರಸ್ತಾಪವಿರುವ ಭಾಗದಲ್ಲಿ, ನೀವು ಓದಿರಬೇಕಲ್ಲವೇ? ದೇವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ.ನಿಮ್ಮ ಅಭಿಪ್ರಾಯ ತೀರಾ ತಪ್ಪಾಗಿದೆ" ಎಂದರು.

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...