04.06.2005 - ಎರಡು ಪ್ರಮುಖ ಆಜ್ಞೆಗಳು

ಮಾರ್ಕ 12:28-34

ನಮ್ಮ ದೇವರಾದ ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು. 

ಧರ್ಮಶಾಸ್ತ್ರಿಯೊಬ್ಬನು, ಯೇಸುಸ್ವಾಮಿ ಸದ್ದುಕಾಯಕರಿಗೆ ಸಮರ್ಪಕವಾದ ಉತ್ತರವನ್ನು ಕೊಟ್ಟಿದ್ದನ್ನು ಮೆಚ್ಚಿ, ಅವರ ಬಳಿಗೆ ಬಂದು , " ಆಜ್ಞೆಗಳಲ್ಲೆಲ್ಲಾ ಪ್ರಪ್ರಥಮ ಆಜ್ಞೆ ಯಾವುದು?" ಎಂದು ಕೇಳಿದನು, ಯೇಸು ಅವನಿಗೆ, "ಇಸ್ರಯೇಲ್ ಸಮಾಜವೇ ಕೇಳು; ನಮ್ಮ ದೇವರಾದ ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು. ಇದೇ ಪ್ರಪ್ರಥಮ ಆಜ್ಞೆ. ನಿನ್ನನ್ನು ನೀನೆ ಪ್ರೀತಿಸಿಕೊಳ್ಳುವಂತೆ ನಿನ್ನ 
ನೆರೆಹೊರೆಯವರನ್ನೂ ಪ್ರೀತಿಸು. ಇದೇ ಎರಡನೆಯ ಆಜ್ಞೆ. ಇವರೆಡು ಆಜ್ಞೆಗಳಿಗಿಂತ ಶ್ರೇಷ್ಠವಾದ ಆಜ್ಞೆ ಬೇರೊಂದೂ ಇಲ್ಲ" ಎಂದರು. ಇದನ್ನು ಕೇಳಿದ ಆ ಧರ್ಮಶಾಸ್ತ್ರಿ, " ಬೋಧಕರೇ ಚೆನ್ನಾಗಿ ಹೇಳಿದಿರಿ. ದೇವರು ಒಬ್ಬರೇ, ಅವರ ಹೊರತು ಬೇರೆ 
ದೇವರಿಲ್ಲ, ಎಂದು ನೀವು ಹೇಳಿದ್ದು ಸತ್ಯ; ಅವರನ್ನು ನಾವು ಪೂರ್ಣ ಹೃದಯದಿಂದಲೂ  ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವಂತೆಯೇ ನಮ್ಮ ನೆರೆಹೊರೆಯವರನ್ನೂ ಪ್ರೀತಿಸತಕ್ಕದ್ದು. ಇವು ಎಲ್ಲಾ ದಹನ ಬಲಿಗಳಿಗಿಂತಲೂ ಯಜ್ಞ ಯಾಗಾದಿಗಳಿಗಿಂತಲೂ ಎಷ್ಟೋ ಮೇಲಾದವು," ಎಂದನು. ಅವನ್ ವಿವೇಕಪೂರ್ಣವಾದ ಉತ್ತರವನ್ನು ಮೆಚ್ಚಿ ಯೇಸು, " ನೀನು ದೇವರ ಸಾಮ್ರಾಜ್ಯದಿಂದ ದೂರವಿಲ್ಲ ಎಂದರು. ಇದಾದ ಬಳಿಕ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರೊಬ್ಬರೂ ಧೈರ್ಯಗೊಳ್ಳಲಿಲ್ಲ.

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...