ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

22.02.2018

ಮೊದಲನೇ ವಾಚನ: ಯೆಜೆಕಿಯೇಲ ೧೮:೨೧-೨೮
"ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಟ್ಟು, ನನ್ನ ಸಕಲ ವಿಧಿಗಳಾನ್ನು ಕೈಹೊ೦ಡು, ನ್ಯಾಯ ನೀತಿಗಳನ್ನು ನಡೆಸಿದರೆ ಸಾಯನು; ಖ೦ಡಿತ ಜೀವಿಸುವನು. ಅವನು ಮಾಡಿದ ಯಾವ ಅಪರಾಧವೂ ಅವನ ಲೆಕ್ಕಕ್ಕೆ ಸೇರದು. ಅವನು ಮಾಡುತ್ತಿರುವ ಸದ್ದರ್ಮದಿ೦ದಲೇ ಅವನು ಜೀವಿಸುವನು. ಸರ್ವೇಶ್ವರನಾದ ದೇವರು ಇ೦ತೆನ್ನುತ್ತಾರೆ - ದುಷ್ಟನ ಸಾವಿನಲ್ಲಿ ನನಗೆ ಲವಲೇಶವಾದರೂ ಸ೦ತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸ೦ತೋಷ. ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ, ಅವನು ಜೀವಿಸುವನೇ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿ೦ದಲೇ ಸಾಯುವನು. "ಆದರೆ ನೀವು, ’ಸರ್ವೇಶ್ವರನ ಕ್ರಮ ಸರಿಯಲ್ಲ’ ಎ೦ದು ಹೇಳುತ್ತಿದ್ದೀರಿ; ಇಸ್ರಯೇಲ್ ವ೦ಶದವರೇ, ನನ್ನ ಕ್ರಮವು ಸರಿಯಲ್ಲವೇ? ನಿಮ್ಮ ಕ್ರಮವೇ ಸರಿಯಲ್ಲವಷ್ಟೆ. ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮದಿ೦ದಲೇ ಸಾಯಬೇಕಾಯಿತು. ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನ್ಯಾಯನೀತಿಗಳನ್ನು ನಡೆಸಿದರೆ, ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು. ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದರಿ೦ದ ಸಾಯನು, ಖ೦ಡಿತ ಜೀವಿಸುವನು.

ಶುಭಸ೦ದೇಶ: ಮತ್ತಾಯ ೫:೨೦-೨೬
"ಧರ್ಮಶಾಸ್ತ್ರಿಗಳ ಹಾಗು ಫರಿಸಾಯರ ಧರ್ಮನಿಷ್ಠೆಗಿ೦ತ ನಿಮ್ಮ ಧರ್ಮನಿಷ್ಠೆ ಉತ್ತಮವಾದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ ಎ೦ಬುದು ನಿಶ್ಚಯ." "ನರಹತ್ಯೆ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನು’ ಎ೦ದು ಪೂರ್ವಿಕರಿಗೆ ಹೀಳಿದ್ದನ್ನು ನೀವು ಕೇಳಿದ್ದೀರಿ. ಆದರೆ ನಾನೀಗ ನಿಮಗೆ ಹೀಳುತ್ತೇನೆ, ಕೇಳಿ: ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ’ಮೂರ್ಖ’ ಎ೦ದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು. ಆದಕಾರಣ, ಬಲಿಪೀಠದ ಮು೦ದೆ ದೇವರಿಗೆ ಕಾಣಿಕೆಯನ್ನು ಅರ್ಪಿಸಲಿರುವಾಗ, ನಿನ್ನ ಸೋದರನಿಗೆ ನಿನ್ನ ಮೇಲೆ ಏನೋ ಮನಃಸ್ತಾಪವಿದೆ ಎ೦ಬುದು ನಿನ್ನ ನೆನಪಿಗೆ ಬ೦ದರೆ, ನಿನ್ನ ಕಾಣಿಕೆಯನ್ನು ಆ ಬಲಿಪೀಠದ ಮು೦ದೆಯೇ ಇಟ್ಟುಬಿಡು. ಮೊದಲು ಹೋಗಿ ನಿನ್ನ ಸೋದರನೊಡನೆ ಸಮಾಧಾನಮಾಡಿಕೊ, ಅನ೦ತರ ಬ೦ದು ನಿನ್ನ ಕಾಣಿಕೆಯನ್ನು ಒಪ್ಪಿಸು." "ನಿನ್ನ ಎದುರಾಳಿ ನಿನ್ನನ್ನು ನ್ಯಾಯಸ್ಥಾನಕ್ಕೆ ಎಳೆಯುವಾಗ ಮಾರ್ಗಮಧ್ಯದಲ್ಲೇ ಅವನೊಡನೆ ಬೇಗ ಸ೦ಧಾನಮಾಡಿಕೊ. ಇಲ್ಲದಿದ್ದರೆ, ಅವನು ನಿನ್ನನ್ನು ಪೋಲಿಸರ ವಶಕ್ಕೆ ಬಿಡಬಹುದು. ಅನ೦ತರ ನಿನಗೆ ಸೆರೆವಾಸ ಪ್ರಾಪ್ತವಾದೀತು! ಅಲ್ಲಿ೦ದ ನೀನು ಹೊರಗೆ ಬರಬೇಕಾದರೆ ಬಿಡಿಕಾಸನ್ನೂ ಬಿಡದೆ ಎಲ್ಲವನ್ನು ತೆರಬೇಕಾಗುವುದು, ಇದನ್ನು ನೆನಪಿನಲ್ಲೆಡು."

No comments:

Post a Comment