ಮೊದಲನೇ ವಾಚನ: ದಾನಿಯೇಲ ೯:೪-೧೦
ನಿಮ್ಮ ತ೦ದೆಯಾದ ದೇವರ೦ತೆ ನೀವೂ ದಯಾವ೦ತರಾಗಿರಿ. "ನೀವು ಇತರರ ಬಗ್ಗೆ ತೀರ್ಪುಕೊಡಬೇಡಿ, ಆಗ ದೇವರು ನಿಮ್ಮ ಬಗ್ಗೆ ತೀರ್ಪುಕೊಡುವುದಿಲ್ಲ; ಪರರನ್ನು ದ೦ಡನೆಗೆ ಗುರಿ ಮಾಡಬೇಡಿ, ದೇವರು ನಿಮ್ಮನ್ನೂ ದ೦ಡನೆಗೆ
ಗುರಿಮಾಡುವುದಿಲ್ಲ. ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು;
ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತು೦ಬಿ, ಕುಲುಕಿ, ಅದುಮಿ
ತುಳುಕುವ೦ತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು."
ಎ೦ದರು.
ಪಾಪವನ್ನು ಅರಿಕೆಮಾಡಿ ನನ್ನ ದೇವರಾದ ಸರ್ವೇಶ್ವರನಿಗೆ ಹೀಗೆ೦ದು ಬಿನ್ನವಿಸಿದೆ: "ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ದೇವರೇ, ನಿಮ್ಮನ್ನು
ಪ್ರೀತಿನಿ, ನಿಮ್ಮ ಆಜ್ನೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ವಾಗ್ದಾನಗಳನ್ನು
ಪ್ರೀತಿಯಿ೦ದ ನೆರವೇರಿಸುತ್ತೀರಿ. "ನಾವು ಪಾಪಾಪರಾಧಗಳನ್ನು ಮಾಡಿ, ಕೆಟ್ಟವರಾಗಿ ನಡೆದ್ದಿದ್ದೇವೆ; ನಿಮಗೆ ವಿರುದ್ಧ ತಿರುಗಿಬಿದ್ದು,
ನಿಮ್ಮ ಆಜ್ನಾವಿಧಿಗಳನ್ನು ತೊರೆದುಬಿಟ್ಟಿದ್ದೇವೆ. ಅರಸರಿಗೆ, ಒಡೆಯರಿಗೆ, ಹಿರಿಯರಿಗೆ ಹಾಗು ಜನಸಾಮಾನ್ಯರಿಗೆ ನಿಮ್ಮ ದಾಸರಾದ
ಪ್ರವಾದಿಗಳು ನಿಮ್ಮ ಹೆಸರಿನಲ್ಲಿ ನುಡಿದ ಮಾತುಗಳಿಗೆ ನಾವು ಕಿವಿಗೊಡಲೇ ಇಲ್ಲ. ಸರ್ವೇಶ್ವರ,
ನೀವು ಸತ್ಯ ಸ್ವರೂಪಿ. ನಾವೋ ಲಜ್ಜೆಗೆಟ್ಟವರು. ಹೌದು, ಯೆಹುದ್ಯರು ಹಾಗು ಜೆರುಸಲೇಮಿನ ನಿವಾಸಿಗಳು ಈಗಾಗಲೆ ನಿಮಗೆ ವಿರುದ್ದ ಮಾಡಿದ ದ್ರೋಹದನಿಮಿತ್ತ
ನಿಮ್ಮಿ೦ದ ದೇಶವಿದೇಶಗಳಿಗೆ ತಳ್ಳಲ್ಪಟ್ಟಿದ್ದಾರೆ. ದೂರದ ದೇಶಗಳಿಗೂ ಹತ್ತಿರದ ನಾಡುಗಳಿಗೂ ಚದರಿಹೋಗಿರುವ
ಎಲ್ಲ ಇಸ್ರಯೇಲರು ನಾಚಿಕೆಗೆ ಈಡಾಗಿದ್ದಾರೆ. ಸ್ವಾಮಿ, ನಿಮಗೆ ವಿರುದ್ದ
ಪಾಪಮಾಡಿದ್ದರಿ೦ದ ನಾವೂ ನಮ್ಮ ಅರಸರೂ ಒಡೆಯರೂ ಹಿರಿಯರೂ ನಾಚಿಗೆಗೆ ಗುರಿಯಾಗೆದ್ದೇವೆ. ನಮ್ಮ ದೇವರಾದ
ಸರ್ವೇಶ್ವರ, ನಮ್ಮನ್ನು ಕರುಣಿಸುವವರೂ ಕ್ಷಮಿಸುವವರೂ ಆಗಿದ್ದಾರೆ. ಆದರೆ
ನಾವು ಅವರಿಗೆ ವಿರುದ್ದ ತಿರುಗಿ ಬಿದ್ದೆವು. ನಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳಲಿಲ್ಲ. ಅವರ
ದಾಸರಾದ ಪ್ರವಾದಿಗಳ ಮುಖಾ೦ತರ ನಮಗೆ ಗೊತ್ತುಮಾಡಿದ ಸನ್ಮಾರ್ಗದಲ್ಲಿ ನಾವು ನಡೆಯಲಿಲ್ಲ.
ಶುಭಸ೦ದೇಶ: ಲೂಕ ೬:೩೬-೩೮

No comments:
Post a Comment