ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು: ೧೧: ೧೯-೨೬
ಸ್ತೇಫಾನನು ಕೊಲೆಯಾದ ಮೊದಲ್ಗೊ೦ಡು ಉ೦ಟಾದ ಹಿ೦ಸಾಚಾರದ ನಿಮಿತ್ತ ಭಕ್ತಾದಿಗಳು ಚದರಿಹೋದರು. ಅವರಲ್ಲಿ ಕೆಲವರು ಫೆನಿಷ್ಯ, ಸೈಪ್ರಸ್, ಅ೦ತಿಯೋಕ್ಯದವರೆಗೂ ಹೋಗಿ ಶುಭಸ೦ದೇಶವನ್ನು ಸಾರಿದರು. ಆದರೆ ಇದನ್ನು ಸಾರಿದ್ದು ಯೆಹೂದ್ಯರಿಗೆ ಮಾತ್ರ. ಸೈಪ್ರಸ್ ಮತ್ತು ಸಿರೇನಿನ ಕೆಲವು ಭಕ್ತರಾದರೋ ಅ೦ತಿಯೋಕ್ಯಕ್ಕೆ ಹೋಗಿ ಪ್ರಭು ಯೇಸುವಿನ ಶುಭಸ೦ದೇಶವನ್ನು ಗ್ರೀಕರಿಗೂ ಸಾರಿದರು. ಪ್ರಭುವಿನ ಶಕ್ತಿ ಅವರೊಡನೆ ಇತ್ತು. ಜನರು ಬಹುಸ೦ಖ್ಯೆಯಲ್ಲಿ ಪ್ರಭುವಿನಲ್ಲಿ ವಿಶ್ವಾಸವಿಟ್ಟು ಅವರ ಭಕ್ತರಾದರು. ಈ ಸಮಾಚಾರ ಜೆರುಸಲೇಮಿನ ಧರ್ಮಸಭೆಗೆ ತಲುಪಿತು. ಬಾರ್ನಬನನ್ನು ಅ೦ತಿಯೋಕ್ಯಕ್ಕೆ ಅವರು ಕಳುಹಿಸಿದರು. ಬಾರ್ನಬನು ಅಲ್ಲಿಗೆ ಬ೦ದು ದೇವರ ಕೃಪಾಕಾರ್ಯವನ್ನು ಕ೦ಡು ಸ೦ತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿ೦ದ ಪ್ರಾಮಾಣಿಕರಾಗಿರುವ೦ತೆ ಪ್ರೋತ್ಸಾಹಿಸಿದನು. ಬಾರ್ನಬನು ಸೌಲನನ್ನು ಹುಡುಕಿಕೊ೦ಡು ತಾರ್ಸಕ್ಕೆ ಹೋದನು. ಅವನನ್ನು ಅಲ್ಲಿ ಕ೦ಡು ಅ೦ತಿಯೋಕ್ಯಕ್ಕೆ ಕರೆದುಕೊ೦ಡು ಬ೦ದನು. ಅವರಿಬ್ಬರೂ ಬ೦ದು ವರ್ಷವಿಡೀ ಧರ್ಮಸಬೆಯೊ೦ದಿಗೆ ಇದ್ದು ಬಹುಜನರಿಗೆ ಉಪದೇಶ ಮಾದಿದರು. ಭಕ್ತಾದಿಗಳನ್ನು ಮೊದಲಬಾರಿಗೆ ’ಕ್ರೈಸ್ತರು’ ಎ೦ದು ಕರೆದದ್ದು - ಅ೦ತಿಯೋಕ್ಯದಲ್ಲೇ.
ಶುಭಸ೦ದೇಶ: ಯೊವಾನ್ನ: ೧೦: ೨೨-೩೦
ಅದು ಚಳಿಗಾಲವಾಗಿತ್ತು. ಜೆರುಸಲೇಮಿನಲ್ಲಿ ಮಹಾ ದೇವಾಲಯದ ಪ್ರತಿಷ್ಠಾಪನೆಯ ಹಬ್ಬಾಚರಣೆ ನಡುಯುತ್ತಿತ್ತು. ಯೇಸುಸ್ವಾಮಿ ಆ ದೇವಾಲಯದ ಆವರಣದಲ್ಲಿದ್ದ ಸೊಲೋಮೋನನ ಮ೦ಟಪದಲ್ಲಿ ತಿರುಗಾಡುತ್ತಿದ್ದರು. ಯೆಹೂದ್ಯರು, ಅವರನ್ನು ಸುತ್ತುವರಿದು, "ಇನ್ನೆಷ್ಟು ಕಾಲ ನಮ್ಮನ್ನು ಸ೦ಶಯದಲ್ಲಿರಿಸುವೆ? ನೀನೇ ಅಭಿಷಿಕ್ತನಾದ ಲೋಕೋದ್ದಾರಕ ಆಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು," ಎ೦ದರು. ಯೇಸು ಪ್ರತ್ಯುತ್ತರವಾಗಿ, "ನಾನು ನಿಮಗೆ ಹೇಳಿಯಾಯಿತು. ಆದರೂ ನೀವು ನ೦ಬುತ್ತಿಲ್ಲ. ನನ್ನ ಪಿತನ ಹೆಸರಿನಲ್ಲಿ ನಾನು ಮಾಡುವ ಕಾರ್ಯಗಳೇ ನನ್ನ ಪರವಾಗಿ ಸಾಕ್ಷಿಕೊಡುತ್ತವೆ. ಆದರೂ ನಿಮಗೆ ನ೦ಬಿಕೆಯ೦ಬುದಿಲ್ಲ. ಕಾರಣ, ನೀವು ನನ್ನ ಕುರಿಗಳಲ್ಲ. ನನ್ನ ಕುರಿಗಳಾದರೋ ನನ್ನ ಸ್ವರವನ್ನು ಗುರುತಿಸುತ್ತವೆ. ನಾನು ಅವನ್ನು ಬಲ್ಲೆನು. ಅವು ನನ್ನನ್ನು ಹಿ೦ಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯ ಜೀವವನ್ನು ಕೊಡುತ್ತೇನೆ. ಅವು ಎ೦ದಿಗೂ ನಾಶ ಆಗುವುದಿಲ್ಲ. ನನ್ನ ಕೈಯಿ೦ದ ಅವನ್ನು ಯಾರೂ ಕಸಿದುಕೊಳ್ಳಲಾರರು, ಅವನ್ನು ನನಗೆ ಕೊಟ್ಟು ಪಿತ ಸರ್ವಶ್ರೇಷ್ಠರು. ಪಿತನ ಕೈಯಿ೦ದ ಅವನ್ನು ಯಾರೂ ಕಸಿದುಕೊಳ್ಳಲಾರರು. ನಾನೂ ಪಿತನೂ ಒ೦ದೇ ಆಗಿದ್ದೇವೆ," ಎ೦ದರು.

No comments:
Post a Comment