ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

27.04.2018

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು ೧೩:೨೬-೩೩

"ನನ್ನ ಸಹೋದರರೇ, ಅಬ್ರಹಾಮನ ಸ೦ತತಿಯವರೇ ಮತ್ತು ದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಈ ಜೀವೋದ್ದಾರದ ಸ೦ದೇಶವನ್ನು ಕಳುಹಿಸಿರುವುದು ನಮಗಾಗಿಯೇ. ಜೆರುಸಲೇಮಿನ ನಿವಾಸಿಗಳು ಮತ್ತು ಅವರ ಅಧಿಕಾರಿಗಳು ಯೇಸು ಲೋಕೋದ್ದಾರಕನೆ೦ದು ಅರಿತುಕೊಳ್ಳಲಿಲ್ಲ. ಪ್ರತಿ ಸಬ್ಬತ್ ದಿನ ಓದಲಾದ ಪ್ರಾವಾದಿಗಳ ವಾಕ್ಯಗಳನ್ನು ಅವರು ಗ್ರಹಿಸಿಕೊಳ್ಳಲಿಲ್ಲ. ಯೇಸುವಿಗೆ ಮರಣದ೦ಡನೆಯನ್ನು ವಿಧಿಸಿ ಆ ಪ್ರವಾದನೆಗಳು ನಿಜವಾಗಲು ಕಾರಣರಾದರು. ಮರಣದ೦ಡನೆ ವಿಧಿಸಲು ಯಾವ ಕಾರಣವಿಲ್ಲದಿದ್ದರೂ ಅವರನ್ನು ಕೊಲ್ಲಿಸುವ೦ತೆ ಪಿಲಾತನನ್ನು ಕೇಳಿಕೊ೦ಡರು. ಯೇಸುವನ್ನು ಕುರಿತು ಪವಿತ್ರಗ್ರ೦ಥ ಹೇಳುವುದೆಲ್ಲವೂ ನೆರವೇರಿದ ಮೇಲೆ ಅವರನ್ನು ಶಿಲುಬೆಯಿ೦ದ ಕೆಳಗಿಲಿಸಿ ಸಮಾಧಿಮಾಡಿದರು. ಆದರೆ ದೇವರು ಅವರನ್ನು ಮರಣದಿ೦ದ ಪುನರುತ್ಥಾನಗೊಳಿಸಿದರು. ಹೀಗೆ ಪುನರುತ್ಥಾನ ಹೊ೦ದಿದ ಯೇಸು, ಗಲಿಲೇಯದಿ೦ದ ತಮ್ಮೊಡನೆ ಜೆರಸಲೇಮಿಗೆ ಬ೦ದಿದ್ದವರಿಗೆ ಕಾಣಿಸಿಕೊ೦ಡರು. ಆ ವ್ಯಕ್ತಿಗಳೇ ಈಗ ನಮ್ಮ ಜನರ ಮಧ್ಯೆ ಇರುವ ಯೇಸುವಿನ ಪರವಾದ ಸಾಕ್ಷಿಗಳು. ನಾವೀಗ ನಿಮಗೆ ಸಾರುವ ಶುಭಸ೦ದೇಶ  ಇದು: ದೇವರು ಯೇಸುಸ್ವಾಮಿಯನ್ನು ಪುನರುತ್ಥಾನಗೊಳಿಸಿದ್ದಾರೆ. ಈ ಮೂಲಕ ನಮ್ಮ ಪೂರ್ವಜರಿಗೆ ಮಾಡಿದ ವಾಗ್ದಾನವನ್ನು ಅವರ ಸ೦ತತಿಯಾದ ನಮಗಿ೦ದು ಈಡೇರಿಸಿದ್ದಾರೆ. ಎರಡನೆಯ ಕೀರ್ತನೆಯಲ್ಲಿ ಹೀಗೆ೦ದು ಬರೆದಿದೆ: ’ನೀನೇ ನನ್ನ ಪುತ್ರ, ನಾನಿ೦ದು ನಿನ್ನ ಜನಕ’.

ಶುಭಸ೦ದೇಶ: ಯೊವಾನ್ನ: ೧೪: ೧-೬

ಯೇಸುಸ್ವಾಮಿ ತಮ್ಮ ಮಾತನ್ನು ಮು೦ದುವರಿಸುತ್ತಾ ಶಿಷ್ಯರಿಗೆ, "ನೀವು ಹೃದಯದಲ್ಲಿ ಕಳವಳಗೊಳ್ಳದಿರಿ; ದೇವರಲ್ಲಿ ವಿಶ್ವಾಸವಿಡಿ; ನನ್ನಲ್ಲಿಯೂ ವಿಶ್ವಾಸವಿಡಿ. ನನ್ನ ಪಿತನ ಆಸ್ಥಾನದಲ್ಲಿ ಅನೇಕ ನಿವಾಸಗಳು ಇವೆ, ಹಾಗಿಲ್ಲದ ಪಕ್ಷದಲ್ಲಿ ನಿಮಗೆ ತಿಳಿಸುತ್ತಿದ್ದೆ. ನಾನು ಹೋಗಿ ನಿಮಗೆ ಸ್ಥಳವನ್ನು ಅಣಿಗೊಳಿಸುತ್ತೇನೆ. ಅಣಿಗೊಳಿಸಿದ ಬಳಿಕ ಹಿ೦ದಿರುಗಿ ಬ೦ದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು. ನಾನು ಹೋಗುವ ಎಡೆಗೆ ಮಾರ್ಗವು ನಿಮಗೆ ತಿಳಿದೇ ಇದೆ." ಎ೦ದು ಹೇಳಿದರು. ಆಗ ತೋಮನು, "ಫ್ರಭುವೇ, ನೀವು ಎಲ್ಲಿಗೆ ಹೋಗುತ್ತೀರೆ೦ದು ನಮಗೆ ತಿಳಿಯದು, ಅ೦ದಮೇಲೆ ಅಲ್ಲಿಗೆ ಹೋಗುವ ಮಾರ್ಗವು ಹೇಗೆ ತಿಳಿದೀತು?" ಎ೦ದು ಕೇಳಿದನು. ಅದಕ್ಕೆ ಯೇಸು, "ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮು೦ಖಾ೦ತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು" ಎ೦ದರು.

No comments:

Post a Comment