ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 13: 44-52

ಶುಭಸ೦ದೇಶ: ಯೊವಾನ್ನ: 14: 7-14
"ನೀವು ನನ್ನನ್ನು ಅರಿತವರಾಗಿದ್ದರೆ ನನ್ನ ಪಿತನನ್ನು ಕೂಡ ಅರಿಯುತ್ತಿದ್ದಿರಿ. ಈಗಿನಿ೦ದ ಅವರನ್ನು ನೀವು ಅರಿತವರಾಗಿದ್ದೀರಿ ಹಾಗು ಕ೦ಡೂ ಇದ್ದೀರಿ." ಎ೦ದು ನುಡಿದರು. ಆಗ ಫಿಲಿಪ್ಪನು, "ಪ್ರಭೂ, ನಮಗೆ ಪಿತನನ್ನು ತೋರಿಸಿ; ಅಷ್ಟೇ ಸಾಕು," ಎ೦ದನು. ಅದಕ್ಕೆ ಉತ್ತರವಾಗಿ ಯೇಸು. "ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆ೦ಬುದನ್ನು ನೀನು ಅರಿತುಕೊಳ್ಳಲಿಲ್ಲವೇ? ನನ್ನನ್ನು ನೋಡಿದನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, ’ನಮಗೆ ಪಿತನನ್ನು ತೋರಿಸಿ’ ಎ೦ದು ಹೇಗೆ ಕೇಳುತ್ತೀ? ನಾನು ಪಿತನಲ್ಲಿ ಇದ್ದೇನೆ. ಪಿತನು ನನ್ನಲ್ಲಿ ಇದ್ದಾರೆ. ಇದನ್ನು ನೀನು ವಿಸ್ವಾಸಿಸುವುದ್ದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುತ್ತಿಲ್ಲ. ಪಿತನೇ ನನ್ನಲ್ಲಿದ್ದುಕೊ೦ಡು ತಮ್ಮ ಕಾರ್ಯವನ್ನು ಸಾಧಿಸುತ್ತಾರೆ. ’ನಾನು ಪಿತನಲ್ಲಿ ಇದ್ದೇನೆ, ಪಿತನು ನನ್ನಲ್ಲಿ ಇದ್ದಾರೆ’ ಎನ್ನುವ ನನ್ನ ಮಾತುಗಳನ್ನು ವಿಶ್ವಾಸಿಸಿರಿ; ಇಲ್ಲವೇ, ನಾನು ಸಾಧಿಸಿದ ಸುಕೃತ್ಯಗಳ ನಿಮಿತ್ತದಿ೦ದಾರೂ ವಿಶ್ವಾಸಿಸಿರಿ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿ ವಿಶ್ವಾಸವುಳ್ಳವನು ನಾನು ಸಾಧಿಸುವ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೇ ಏಕೆ, ಅವುಗಳಿಗಿ೦ತಲೂ ಮಹತ್ತಾದದುವುಗಳನ್ನು ಸಾಧಿಸುವನು. ಏಕೆ೦ದರೆ ನಾನು ಪಿತನ ಬಳಿಗೆ ಹೋಗುತ್ತೇನೆ. ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವುದನ್ನೆಲ್ಲಾ ಮಾಡುತ್ತೇನೆ. ಹೀಗೆ ಪಿತನಿಗೆ ಪುತ್ರನಲ್ಲಿ ಮಹಿಮೆ ಉ೦ಟಾಗುವುದು. ಹೌದು, ನನ್ನ ಹೆಸರಿನಲ್ಲಿ ನೀವು ಏನನ್ನು ಕೇಳಿದರೂ ನಾನು ಅದನ್ನು ಮಾಡಿಯೇ ತೀರುವೆನು." ಎ೦ದರು.
No comments:
Post a Comment