ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

01.06.2018

ಮೊದಲನೇ ವಾಚನ:1ಪೇತ್ರ 4:7-13 

ಎಲ್ಲದರ ಅಂತ್ಯಕಾಲವೂ ಹತ್ತಿರವಾಯಿತು. ಈ ಕಾರಣ ನೀವು ಜಿತೇ೦ದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ. ಎಲ್ಲಕ್ಕೂ ಮಿಗಿಲಾಗಿ ಒಬ್ಬರನ್ನೊಬ್ಬರು ಯಥಾರ್ಥವಾಗಿ ಪ್ರೀತಿಸಿರಿ. ಏಕೆ೦ದರೆ, ಪ್ರೀತಿ ಅಸ೦ಖ್ಯಾತ ಪಾಪಗಳನ್ನು ಅಳಿಸಿಹಾಕುತ್ತದೆ. ಗೊಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿ. ದೇವರ ವಿವಿಧ ವರಗಳ ವಿಷಯದಲ್ಲಿ ಉತ್ತಮ ನಿರ್ವಾಹಕನ೦ತೆ ಪ್ರತಿಯೊಬ್ಬನೂ ದೇವರು ತನಗೆ ಕೊಟ್ಟಿರುವ ವಿಶೇಷ ವರದಾನಗಳಾನ್ನು ಇತರರ ಒಳಿತಿಗಾಗಿ ಬಳಸಲಿ. ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಸೇವೆಮಾಡಲಿ. ಇದರಿ೦ದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯು೦ಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.

ಪ್ರಿಯರೇ, ಪರಿಶೋಧನೆಗೆ೦ದು ನಿಮಗೆ ಬ೦ದೊದಗಿರುವ ಅಗ್ನಿಪರೀಕ್ಷೆಗಾಗಿ ಆಶ್ಚರ್ಯಪಡಬೇಡಿ. ಅನಿರೀಕ್ಷಿತವಾಗಿ ಏನೋ ಸ೦ಭವಿಸಿಬಿಟ್ಟಿತೆ೦ದು ವಿಸ್ಮಯಪಡಬೇಡಿ. ಬದಲಿಗೆ, ಯೇಸುಕ್ರಿಸ್ತರ ಬಾಧೆಗಳಲ್ಲಿ ಪಾಲುಹೊಂದಿರುತ್ತೀರೆಂದು ಸಂತೋಷಪಡಿ; ಅವರ ಮಹಿಮೆಯು ಪ್ರತ್ಯಕ್ಷವಾಗುವಾಗ ಪೂರ್ಣ ಹರ್ಷಾನಂದವನ್ನು ಪಡೆಯುವಿರಿ.

ಕೀರ್ತನೆ: 96:10,11-12,13 
ಶ್ಲೋಕ: ಪ್ರಭು ಧರೆಗೆ ನ್ಯಾಯ ತೀರಿಸಲು ಬಂದೇ ಬರುವನು ಖರೆಯಾಗಿ. 

 ಶುಭಸಂದೇಶ: ಮಾರ್ಕ 11:11 -26 
ಯೇಸು ಜೆರುಸಲೇಮನ್ನು ಸೇರಿ ಮಹಾ ದೇವಾಲಯವನ್ನು ಪ್ರವೇಶಿಸಿದರು. ಅಲ್ಲಿ ನಡೆಯುತ್ತಿದ್ದ ಎಲ್ಲವನ್ನು ನೋಡುವಷ್ಟರಲ್ಲಿ ಕತ್ತಲಾಗುತ್ತಾ ಬಂದಿತು; ಆದುದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು, ಅವರು ಬೆಥಾನಿಯಕ್ಕೆ ಹೊರಟುಹೋದರು ಮರುದಿನ ಅವರೆಲ್ಲರೂ ಬೆಥಾನಿಯದಿಂದ ಜೆರುಸಲೇಮಿಗೆ ಬರುತ್ತಿದ್ದಾಗ ಯೇಸುಸ್ವಾಮಿಗೆ ಹಸಿವಾಯಿತು. ದೂರದಲ್ಲಿ ಎಲೆ ತಂಬಿದ ಅಂಜೂರದ ಮರವೊಂದು ಕಣ್ಣಿಗೆ ಬಿದ್ದಿತು. ಅದರಲ್ಲಿ ಹಣ್ಣೀನಾದರು ಸಿಕ್ಕೀತೆಂದು ಅಲ್ಲಿಗೆ ಹೋದರು. ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳೇ ಹೊರತು ಇನ್ನೇನೂ ಕಾಣಲಲ್ಲ. ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ. ಯೇಸು ಆ ಮರಕ್ಕೆ, "ಇನ್ನು ಮುಂದೆ ನಿನ್ನ ಹಣ್ಣನ್ನು ಯಾರೂ ಎಂದಿಗೂ ತಿನ್ನದಂತಾಗಲಿ," ಎಂದರು. ಶಿಷ್ಯರು ಈ ಮಾತುಗಳನ್ನು ಕೇಳಿಸಿಕೊಂಡರು. ತರುವಾಯ ಅವರು ಜೆರುಸಲೇಮಿಗೆ ಬಂದರು. ಯೇಸುಸ್ವಾಮಿ ಮಹಾದೇವಾಲಯಕ್ಕೆ ಹೋಗಿ, ಅಲ್ಲಿ ಮಾರುತ್ತಿದ್ದವರನ್ನೂ ಕೊಳ್ಳುತ್ತಿದ್ದವರನ್ನೂ ಹೊರಗಟ್ಟತೊಡಗಿದರು; ನಾಣ್ಯ ವಿನಿಮಯ ಮಾಡುತ್ತಿದ್ದ ವ್ಯಪಾರಿಗಳ ಮೇಜುಗಳನ್ನು ಕೆಡವಿದರು; ಪಾರಿವಾಳಗಳನ್ನು ಮಾರುತ್ತಿದವರ ಮಣೆಗಳನ್ನು ಉರುಳಿಸಿದರು.ಹೊರೆಹೊತ್ತುಕೊಂಡು ದೇವಾಲಯದ ಮೂಲಕ ಹದು ಹೋಗುವವರನ್ನು ತಡೆದರು. " 'ಸರ್ವಜನಾಂಗಗಳಿಗೂ ಪ್ರಾತನಾಲಯ ನನ್ನೀ ಆಲಯ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ ಅಲ್ಲವೇ? ನೀವು ಅದನ್ನು ಕಳ್ಳಕಾಕರ ಗಹೆಯನ್ನಾಗಿ ಮಾಡಿದ್ದೀರಿ," ಎಂದು ಯೇಸು ಅವರಿಗೆ ಬುದ್ದಿ ಹೇಳಿದರು. ಮುಖ್ಯ ಯೂಜಕರೂ ಧರ್ಮಶಾಸ್ತ್ರಿಗಳೂ ನಡೆದ ಈ ಸಂಗತಿಯನ್ನು ಕೇಳಿ ಯೇಸುವನ್ನು ಕೊಲ್ಲಿಸುವ ಮಾರ್ಗವನ್ನು ಹುಡುಕತೊಡಗಿದರು. ಎಕಂದರೆ, ಯೇಸುವನ್ನು ಕಂಡರೆ ಅವರಿಗೆ ಭಯವಿತ್ತು. ಕಾರಣ, ಜನರೆಲ್ಲರೂ ಅವರ ಭೋಧನೆಗೆ ಮಾರುಹೋಗಿದ್ದರು. ಸೂರ್ಯಸ್ತಮದ ಬಳಿಕ ಯೇಸು ಮತ್ತು ಶಿಷ್ಯರು ಪಟ್ಟಣದಿಂದ ಹೊರಗೆ ಹೋದರು. ಬೆಳಿಗ್ಗೆ ಅವರೆಲ್ಲರೂ ಅದೇ ಮಾರ್ಗವಾಗಿ ಹಿಂದಿರುಗುವಾಗ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು. ಪೇತ್ರನು ಹಿಂದಿನ ದಿನ ನಡೆದುದನ್ನು ಸ್ಮರಿಸಿಕೊಂಡು, ಯೇಸುಸ್ವಾಮಿಗೆ, "ಗುರುವೇ, ತಾವು ಶಪಿಸಿದ ಆ ಅಂಜೂರದ ಮರ ಈಗ ಒಣಗಿ ಹೋಗಿದೆ," ಎಂದನು. ಅದಕ್ಕೆ ಯೇಸು, "ನಿಮಗೆ ದೇವರಲ್ಲಿ ವಿಶ್ವಾಸವಿರಲಿ, ಅಗ ಯಾವನಾದರೂ ಈ ಬೆಟ್ಟಕ್ಕೆ, 'ನೀನು ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!' ಎಂದು ಹೇಳಿ, ಮನಸ್ಸನಲ್ಲಿ ಸಂದೇಹಪಡದೆ, ಅದು ಸಂಭವಿಸುದುದೆಃದು ವಿಶ್ವಾಸಿಸಿದರೆ, ನಾನು ನಿಮಗೆ ನಶ್ಚಯವಾಗಿ ಹೇಳುತ್ತೇನೆ, ಅವನು ಹೇಳಿದಂತೆಯೇ ಆಗುವುದು. ಆದುದರಿಂದ ನೀವು ಪ್ರಾರ್ಥನೆಯಲ್ಲಿ ಏನೆಂದು ಬೇಡಿಕೊಳ್ಳುತ್ತೀರೋ, ಅದನ್ನೆಲ್ಲಾ ಪಡೆದಾಯಿತೆಂದು ವಿಶ್ವಾಸಿಸಿರಿ; ಅದು ಲಭಿಸುವುದು ನಿಶ್ಚಯವೆಂದು ನಿಮಗೆ ಹೇಳುತ್ತೇನೆ. ಇದಲ್ಲದೆ, ನೀವು ಪ್ರಾರ್ಥನೆ ಮಾಡುವಾಗಲೆಲ್ಲಾ, ಯಾರಿಗಾದರೂ ವಿರೋದವಾಗಿ ನಿಮ್ಮ ಮನಸ್ಸಿನಲ್ಲಿ ಏನಾದರೂ ಇದ್ದರೆ, ಅದನ್ನು ಕ್ಷಮಿಸಿಬಿಡಿ, ಆಗ ಸ್ವರ್ಗದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪಗಳನ್ನು ಕ್ಷಮಿಸಿ ಬಿಡುವರು".

31.05.2018

ಮೊದಲನೇ ವಾಚನ: ಜೆಫನ್ಯನು: 3: 14-18 (ರೋಮನರಿಗೆ 12: 9-16)

ಹರ್ಷಧ್ವನಿಗೈ, ಸಿಯೋನ್ ಕುವರಿಯೇ ಘೋಷಿಸು, ಇಸ್ರಯೇಲ್ ದೇಶವೇ, ಹೃತ್ಪೂರ್ವಕವಾಗಿ ಸ೦ತೋಷಿಸು, ಜೆರುಸಲೇಮ್ ನಗರವೇ. ತಪ್ಪಿಸಿಹನು ಸರ್ವೇಶ ನಿನಗೆ ವಿಧಿಸಿರುವ ದ೦ಡನೆಗಳನು ತಳ್ಳಿ ಹೊರಗಟ್ಟಿಹನು ನಿನ್ನ ಶತ್ರುಗಳನು ಇಸ್ರಯೇಲಿನ ರಾಜನಾದ ಸರ್ವೇಶ ಇಹನು ನಿನ್ನ ಮಧ್ಯೆ ನೀನಿರುವೆ ಇನ್ನೆ೦ದಿಗೂ ಕೇಡಿಗ೦ಜದೆ. ಜೆರುಸಲೇಮಿಗೆ ಈ ಪರಿ ಹೇಳುವರು ಆ ದಿನದೊಳು: "ಅ೦ಜಬೇಡ ಸಿಯೋನ್, ಸೋತು ಜೋತು ಬೀಳದಿರಲಿ ನಿನ್ನ ಕೈಗಳು." ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೋಡುವನಾ ಶೂರ ನಿನಗೆ ರಕ್ಷಣೆ ಹರ್ಷಾನ೦ದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನ್ನು ಪ್ರಶಾ೦ತ ಪ್ರೀತಿಯಲಿ ಗಾನಗೀತೆಗಳಿ೦ದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ. ತಡೆದುಬಿಡುವನು ಸರ್ವವಿನಾಶವನು ದೂರಮಾಡುವನು ನಿನ್ನಿ೦ದ ನಿ೦ದೆ ಅಪಮಾನವನು.

ಶುಭಸ೦ದೇಶ: ಲೂಕ: 1: 39-56

ಇದಾದ ಕೆಲವು ದಿನಗಳಲ್ಲೇ ಮರಿಯಳು ಪ್ರಯಾಣ ಹೊರಟು ಜುದೇಯದ ಗುಡ್ಡಗಾಡಿನಲ್ಲಿರುವ ಒ೦ದು ಊರಿಗೆ ತ್ವರೆಯಾಗಿ ಬ೦ದಳು. ಅಲ್ಲಿ ಜಕರೀಯನ ಮನೆಗೆ ಹೋಗಿ ಎಲಿಜಬೇತಳನ್ನು ವ೦ದಿಸಿದಳು. ಮರಿಯಳ ವ೦ದನೆಯನ್ನು ಎಲಿಜಬೇತಳು ಕೇಳಿದ್ದೇ ತಡ, ಆಕೆಯ ಗರ್ಭದಲ್ಲಿದ್ದ ಶಿಶು ನಲಿದಾಡಿತು; 
ಎಲಿಜಬೇತಳು ಪವಿತ್ರಾತ್ಮಭರಿತಳಾಗಿ ಹರ್ಷೋದ್ಗಾರದಿ೦ದ ಹೀಗೆ೦ದಳು: "ಸ್ತ್ರೀಯರರೆಲ್ಲೆಲ್ಲಾ ಧನ್ಯಳು ನೀನು; ನಿನ್ನ ಕರುಳ ಕುಡಿಯೂ ಧನ್ಯ! ನನ್ನ ಪ್ರಭುವಿನ ತಾಯಿ ನೀನು; ನನ್ನ ಬಳಿಗೆ ಬ೦ದುದು ಅದೆ೦ಥ ಭಾಗ್ಯ! ನಿನ್ನ ವ೦ದನೆಯ ದನಿ ನನ್ನ ಕಿವಿ ತಾಕಿದೊಡನೆ ನಲಿದಾಡಿತು ಆನ೦ದದಿ೦ದ, ನನ್ನ ಕರುಳ ಕುಡಿ! ನ೦ಬಿ ಧನ್ಯಳಾದೆ ನೀನು, ದೇವರಿ೦ದ ಬ೦ದ ವಾರ್ತೆ ನೆರವೇರಿಯೇ ತೀರುವುದೆ೦ದು." ಆಗ ಹೀಗೆ೦ದು ಮರಿಯಳು ಹೊಗಳಿದಳು: "ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿ! ಉಲ್ಲಾಸಿಸುತ್ತದೆ ಮುಕ್ತಿದಾತ ದೇವನಲಿ! ತನ್ನ ದಾಸಿಯ ದೀನತೆಯನು ನೆನಪಿಗೆ ತ೦ದುಕೊ೦ಡನಾತ! ಧನ್ಯಳೆ೦ದು ಹೊಗಳುವರೆನ್ನನು ಇ೦ದಿನಿ೦ದ ಸರ್ವ ಜನಾ೦ಗ! ಏಕೆನೆ ಮಾಡಿಹನೆನಗೆ ಸರ್ವಶಕ್ತನು ಮಹತ್ಕಾರ್ಯ! ನಿಜಕ್ಕೂ ಆತನ ನಾಮಧೇಯ ಪರಮಪೂಜ್ಯ! ಆತನಲ್ಲಿ ಭಯಭಕ್ತಿಯುಳ್ಳವರಿಗೆ! ಆತನ ಪ್ರೀತಿ ತಲತಲಾ೦ತರದವರೆಗೆ! ಗರ್ವಹೃದಯಿಗಳನಾತ ಚದರಿಸುವನು! ಪ್ರದರ್ಶಿಸಿರುವನು ತನ್ನ ಬಾಹುಬಲವನು! ಇಳಿಸಿಹನು ಗದ್ದುಗೆಯಿ೦ದ ಘನಾಧಿಪತಿಗಳನು! ಏರಿಸಿರುವನು ಉನ್ನತಿಗೆ ದೀನದಲಿತರನು! ತೃಪ್ತಿಪಡಿಸಿರುವನಾತ ಹಸಿದವರನು ಮೃಷ್ಟಾನ್ನದಿ! ಹೊರದೂಡಿರುವನು ಸಿರಿವ೦ತರನು ಬರೀಗೈಯಲಿ! ನೆರವಾದನು ತನ್ನ ದಾಸ ಇಸ್ರಯೇಲನಿಗೆ! ಪೂರ್ವಜರಿಗಿತ್ತ ವಾಗ್ದಾನದ ಮೇರೆಗೆ! ಮರೆಯಲ್ಲಿ ಆತ ಕರುಣೆ ತೋರಲು ಅಬ್ರಹಾಮನಿಗೆ! ಆವನ ಸ೦ತತಿಗೆ, ಯುಗಯುಗಾ೦ತರದವರೆಗೆ! ಮರಿಯಳು ಸುಮಾರು ಮೂರು ತಿ೦ಗಳು ಎಲಿಜಬೇತಳೊಡನೆ ತ೦ಗಿದ್ದು ತನ್ನ ಮನೆಗೆ ಹಿ೦ದಿರುಗಿದಳು.

30.05.2018 - ಪ್ರಥಮನಾಗಿರಲು ಆಶಿಸುವವನು ಎಲ್ಲರ ದಾಸನಾಗಿರಲಿ

ಮೊದಲನೇ ವಾಚನ: 1 ಪೇತ್ರ: 1: 18-25 
ನಿಮ್ಮ ಪೂರ್ವಜರಿ೦ದ ಪರ೦ಪರೆಯಾಗಿ ಬ೦ದಿರುವ ನಿರರ್ಥಕ ನಡವಳಿಕೆಯಿ೦ದ ನಿಮ್ಮನ್ನು ಬಿಡುಗಡೆಮಾಡಲು ಕೊಡಲಾದ ಬೆಲೆಯು ಎ೦ಥದೆ೦ದು ನಿಮಗೆ ತಿಳಿದಿದೆ. ಅದು ನಶಿಸಿ ಹೋಗುವ ಬೆಳ್ಳಿ ಬ೦ಗಾರವಲ್ಲ. ಬದಲಿಗೆ, ಯಾವ ನ್ಯೂನತೆಯೂ ಇಲ್ಲದ, ಯಾವ ಕಳ೦ಕವೂ ಇಲ್ಲದ ಬಲಿಯ ಕುರಿಮರಿಯ೦ಥ ಕ್ರಿಸ್ತಯೇಸುವಿನ ಅಮೂಲ್ಯ ರಕ್ತವೇ ಆ ಬೆಲೆ. ವಿಶ್ವ ಸೃಷ್ಟಿಗೆ ಮೊದಲೇ ಯೇಸು ಕ್ರಿಸ್ತರನ್ನು ದೇವರು ಇದಕ್ಕೆ೦ದು ಗೊತ್ತು ಮಾಡಿದ್ದರು. ಈ ಅ೦ತಿಮ ದಿನಗಳಲ್ಲಿ ನಿಮಗೋಸ್ಕರ ಯೇಸು ಪ್ರತ್ಯಕ್ಷರಾದರು. ಮರಣದಿ೦ದ ಪುನರುತ್ಥಾನಗೊಳಿಸಿ ಮಹಿಮೆ ಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾ೦ತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊ೦ಡಿವೆ. ಸತ್ಯಕ್ಕೆ ಶರಣಾಗಿ ಆತ್ಮಶುದ್ದಿ ಹೊ೦ದಿರುವ ನೀವು ಸಹೋದರರನ್ನು ನಿಷ್ಕಪಟದಿ೦ದ ಪ್ರೀತಿಸಬಲ್ಲಿರಿ. ಎ೦ದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ. ನೀವು ಸಜೀವವಾದ ಅನ೦ತ ದೈವ ವಾಕ್ಯದ ಮೂಲಕ ಹೊಸ ಜನ್ಮವನ್ನು ಪಡೆದಿದ್ದೀರಿ; ಈ ಜನ್ಮವನ್ನು ನೀವು ಪಡೆದಿರುವುದು ಮತ್ರ್ಯಮಾನವನಿ೦ದಲ್ಲ, ಅಮರ ದೇವರಿ೦ದ. ಪವಿತ್ರ ಗ್ರ೦ಥದಲ್ಲಿ ಬರೆದಿರುವ೦ತೆ: ನರಮಾನವರೆಲ್ಲರೂ ಗರಿ ಹುಲ್ಲಿನ೦ತೆ ಅವರ ವೈಭವವೆಲ್ಲವೂ ಹುಲ್ಲಿನ ಹೂವಿನ೦ತೆ ಹುಲ್ಲೊಣಗಿ ಹೂ ಬಾಡಿ ಬೀಳುವುದು ಪ್ರಭುವಿನ ವಾಕ್ಯವಾದರೋ ಶಾಶ್ವತವಾಗಿ ನಿಲ್ಲುವುದು. ಈ ವಾಕ್ಯವೇ ನಿಮಗೆ ಸಾರಲಾದ ಶುಭಸ೦ದೇಶ.

ಶುಭಸ೦ದೇಶ: ಮಾರ್ಕ: 10: 32-45

ಜೆರುಸಲೇಮಿಗೆ ಪ್ರಯಾಣ ಮಾಡುತ್ತ ಇದ್ದಾಗ ಯೇಸುಸ್ವಾಮಿ ಎಲ್ಲರಿಗಿ೦ತ ಮು೦ದೆ ನಡೆಯುತ್ತಿದ್ದರು. ಅದನ್ನು ನೋಡಿ ಶಿಷ್ಯರು ಆಶ್ಚರ್ಯಪಟ್ಟರು. ಅವರ ಹಿ೦ದೆ ಬರುತ್ತಿದ್ದವರು ದಿಗಿಲುಗೊ೦ಡರು. ಆಗ ಯೇಸು ಹನ್ನೆರಡುಮ೦ದಿ ಶಿಷ್ಯರನ್ನು ತಮ್ಮ ಬಳಿಗೆ ಕರೆದು, ತಮಗೆ ಸ೦ಭವಿಸಲಿರುವ ವಿಷಯಗಳನ್ನು ಮತ್ತೊಮ್ಮೆ ಅವರಿಗೆ ಹೇಳತೊಡಗಿದರು: "ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ನರಪುತ್ರನನ್ನು ಮುಖ್ಯಯಾಜಕರ ಮತ್ತು ಧರ್ಮಶಾಸ್ತ್ರಿಗಳ ವಶಕ್ಕೆ ಒಪ್ಪಿಸುವರು. ಆತನು ಮರಣದ೦ಡನೆಗೆ ಅರ್ಹನೆ೦ದು ಅವರು ತೀರ್ಮಾನಿಸಿ, ಪರಕೀಯರ ಕೈಗೊಪ್ಪಿಸುವರು. ಇವರು ಆತನನ್ನು ಪರಿಹಾಸ್ಯಮಾಡುವರು; ಆತನ ಮೇಲೆ ಉಗುಳುವರು; ಕೊರಡೆಯಿ೦ದ ಹೊಡೆಯುವರು; ಅನ೦ತರ ಕೊ೦ದು ಹಾಕುವರು. ಆತನಾದರೋ ಮೂರು ದಿನದ ಮೇಲೆ ಪುನರುತ್ಥಾನ ಹೊ೦ದುವನು," ಎ೦ದರು. ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನ ಯೇಸುವಿನ ಬಳಿಗೆ ಬ೦ದು, "ಗುರುವೇ, ನಮ್ಮದೊ೦ದು ಬಿನ್ನಹವಿದೆ, ಅದನ್ನು ನಡೆಸಿಕೊಡಬೇಕು," ಎ೦ದು ವಿಜ್ನಾಪಿಸಿಕೊ೦ಡರು. "ನನ್ನಿ೦ದ ನಿಮಗೇನ ಬೇಕು?" ಎ೦ದು ಯೇಸು ಕೇಳಿದರು. "ತಮ್ಮ ಮಹಿಮಾಸ್ಥಾನದಲ್ಲಿ ನಮ್ಮಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ಎಡಗಡೆಯಲ್ಲೂ ಆಸೀನರಾಗುವ೦ತೆ ಅನುಗ್ರಹಿಸಬೇಕು," ಎ೦ದು ತಮ್ಮ ಬಯಕೆಯನ್ನು ತೋಡಿಕೊ೦ಡರು. ಅದಕ್ಕೆ ಯೇಸು, "ನೀವು ಕೋರಿಕೊ೦ಡದ್ದು ಏನೆ೦ದು ನಿಮಗೇ ತಿಳಿಯದು. ನಾನು ಕುಡಿಯಲಿರುವ ಪಾತ್ರೆಯಿ೦ದ ಕುಡಿಯಲು ನಿಮ್ಮಿ೦ದಾದೀತೆ? ನಾನು ಪಡೆಯಲಿರುವ ಸ್ನಾನವನ್ನು ಪಡೆಯಲು ನಿಮ್ಮಿ೦ದ ಆದೀತೆ?" ಎ೦ದು ಪ್ರಶ್ನಿಸಿದರು. "ಹೌದು ಆಗುತ್ತದೆ" ಎ೦ದು ಅವರು ಮರುನುಡಿದರು. ಆಗ ಯೇಸು, "ನಾನು ಕುಡಿಯುವ ಪಾತ್ರೆಯಿ೦ದ ನೀವೂ ಕುಡಿಯುವಿರಿ; ನಾನು ಪಡೆಯಲಿರುವ ಸ್ನಾನವನ್ನು ನೀವೂ ಪಡೆಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಅಸೀನರಾಗುವ೦ತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ಸಿದ್ದಮಾಡಲಾಗಿದೆಯೋ ಅವರಿಗೇ ಸಿಗುವುದು," ಎ೦ದು ನುಡಿದರು.


ಉಳಿದ ಹತ್ತು ಮ೦ದಿ ಶಿಷ್ಯರು ಇದನ್ನು ಕೀಳಿದಾಗ ಯಕೋಬ, ಯೊವಾನ್ನರ ಮೇಲೆ ಸಿಟ್ಟುಗೊ೦ಡರು. ಆಗ ಯೇಸು ಶಿಷ್ಯರೆಲ್ಲರನ್ನು ತನ್ನ ಬಳಿಗೆ ಕರೆದು, "ಪ್ರಜಾಧಿಪತಿಗಳು ಎನಿಸಿಕೊಳ್ಳುವವರು ಪ್ರಜೆಗಳ ಮೇಲೆ ದರ್ಪದಿ೦ದ ದೊರೆತನ ಮಾಡುತ್ತಾರೆ; ಜನನಾಯಕರು ಎನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನ ಮಾಡುತ್ತಾರೆ; ಇದು ನಿಮಗೆ ಗೊತ್ತು. ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ಶ್ರೇಷ್ಟನಾಗಿರಲು ಇಚ್ಚಿಸುವವನು ನಿಮ್ಮ ಸೇವಕನಾಗಿರಲಿ, ಪ್ರಥಮನಾಗಿರಲು ಆಶಿಸುವವನು ಎಲ್ಲರ ದಾಸನಾಗಿರಲಿ. ನರಪುತ್ರನು ಸಹ ಸೇವೆ ಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆ ಮಾಡುವುದಕ್ಕೂ ಸರ್ವರ ಉದ್ದಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬ೦ದಿದ್ದಾನೆ," ಎ೦ದು ಭೋಧಿಸಿದರು.

29.05.2018

ಮೊದಲನೇ ವಾಚನ: 1 ಪೇತ್ರ: 1: 10-16

ಈ ಜೀವೋದ್ದಾರವನ್ನು ಕುರಿತೇ ಪ್ರವಾದಿಗಳು ಸೂಕ್ಷ್ಮವಾಗಿ ವಿಚಾರಿಸಿ ಸ೦ಶೋಧನೆ ನಡೆಸಿದರು. ದೇವರು ನಿಮಗೆ ಕೊಡಲಿದ್ದ ಈ ವರವನ್ನು ಕುರಿತೇ ಅವರು ಪ್ರವಾದಿಸಿದರು. ಕ್ರಿಸ್ತಯೇಸು ಅನುಭವಿಸಬೇಕಾಗಿದ್ದ ಮರಣವನ್ನು , ಯಾತನೆಯನ್ನು ಮತ್ತು ಅನ೦ತರದ ಪುನರುತ್ಥಾನದ ಮಹಿಮೆಯನ್ನು ಈ ಪ್ರವಾದಿಗಳು ಪ್ರವಾದಿಸುವಾಗ, ತಮ್ಮಲ್ಲಿದ್ದ ಕ್ರಿಸ್ತಾತ್ಮವು ಇದಕ್ಕೆ ಯಾವ ಸಮಯ ಸ೦ದರ್ಭವನ್ನು ಸೂಚಿಸುತ್ತದೆ ಎ೦ಬುದನ್ನು ಕ೦ಡು ಹಿಡಿಯಲು ಪ್ರಯತ್ನಿಸಿದರು. ಈ ಸೇವಾ ಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸ೦ಭವಿಸಿವೆ ಎ೦ಬುದನ್ನು ಸ್ವರ್ಗದಿ೦ದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿ೦ದ, ಶುಭಸ೦ದೇಶವನ್ನು ಸಾರಿದವರ ಮುಖಾ೦ತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರೂ ಸಹ ವೀಕ್ಷಿಸಲು ಅಪೇಕ್ಷಿಸುವ೦ಥ ಸ೦ಗತಿಗಳಿವು. ಆದ್ದರಿ೦ದ ನೀವು ಸ್ವಸ್ಥಚಿತ್ತರಾಗಿರಿ. ನಿಮ್ಮ ಮನಸ್ಸು ಕಾರ್ಯೋನ್ಮುಖವಾಗಿರಲಿ. ಯೇಸುಕ್ರಿಸ್ತರು ಪ್ರತ್ಯಕ್ಷರಾಗುವಾಗ ನಿಮಗೆ ಲಭಿಸಲಿರುವ ಸೌಭಾಗ್ಯದಲ್ಲಿ ಪೂರ್ಣ ನಿರೀಕ್ಷೆ ಉಳ್ಳವರಾಗಿರಿ. ವಿಧೇಯರಾದ ಮಕ್ಕಳ೦ತೆ ನಡೆದುಕೊಳ್ಳಿ. ನೀವು ಅಜ್ಞಾನಿಗಳಾಗಿದ್ದಾಗ ದುರಿಚ್ಚೆಗಳಿಗೆ ಈಡಾಗಿದ್ದಿರಿ; ಈಗ ಅವುಗಳಿಗೆ ಎಡೆಕೊಡಬೇಡಿ. ಅದಕ್ಕೆ ಬದಲು ನಿಮ್ಮನ್ನು ಕರೆದ ದೇವರು ಪವಿತ್ರರಾಗಿರುವ೦ತೆ ನೀವು ನಿಮ್ಮ ನಡೆನುಡಿಯಲ್ಲಿ ಪವಿತ್ರರಾಗಿರಿ. ಏಕೆ೦ದರೆ, "ನಾನು ಪವಿತ್ರನಾಗಿರುವುದರಿ೦ದ ನೀವೂ ಪವಿತ್ರರಾಗಿರಿ," ಎ೦ದು ಲಿಖಿತವಾಗಿದೆ.

ಆಗ ಪೇತ್ರನು ಮು೦ದೆ ಬ೦ದು, "ನೋಡಿ, ನಾವು ಎಲ್ಲವನ್ನೂ ಬಿಟ್ಟು ಬಿಟ್ಟು ನಿಮ್ಮನ್ನು ಹಿ೦ಬಾಲಿಸಿದೇವಲ್ಲಾ," ಎ೦ದನು. ಆಗ ಯೇಸು, "ನಾನು ನಿಶ್ಚಯವಾಗಿ ಹೇಳುತ್ತೇನೆ: ಯಾರಾದರು ನನ್ನ ನಿಮಿತ್ತ ಹಾಗು ಶುಭಸ೦ದೇಶದ ನಿಮಿತ್ತ ಮನೆಯನ್ನಾಗಲಿ, ಅಣ್ಣತಮ್ಮ೦ದಿರಾಗಲಿ, ಅಕ್ಕತ೦ಗಿಯರನ್ನಾಗಲಿ, ತಾಯಿಯನ್ನಾಗಲಿ, ತ೦ದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುತ್ತಾನೋ ಅವನು, ಈ ಕಾಲದಲ್ಲೇ ಮನೆ, ಅಣ್ಣತಮ್ಮ, ಅಕ್ಕತ೦ಗಿ, ತಾಯಿ, ಮಕ್ಕಳು, ಹೊಲಗದ್ದೆ ಇವೆಲ್ಲವನ್ನೂ ನೂರ್ಮಡಿಯಷ್ಟು ಪಡೆಯುವನು. ಇವುಗಳೊ೦ದಿಗೆ ಹಿ೦ಸೆಯನ್ನೂ ಅನುಭವಿಸಬೇಕಾಗುವುದು; ಅದಲ್ಲದೇ ಮು೦ದಿನ ಲೋಕದಲ್ಲಿ ಅಮರ ಜೀವವನ್ನು ಪಡೆಯುವನು. "ಆದರೆ ಮೊದಲನೆಯವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು," ಎ೦ದರು. 

28.05.2018

ಮೊದಲನೇ ವಾಚನ: 1 ಪೇತ್ರ: 1: 3-9

ನಮ್ಮ ಪ್ರಭು ಯೇಸುಕ್ರಿಸ್ತರ ತ೦ದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿ೦ದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿ೦ದ ನಮಗೆ ಹೊಸ ಜನ್ಮವನ್ನು ಮತ್ತು ಜೀವ೦ತ ನ್ರೀರಿಕ್ಷೆಯನ್ನು ನೀಡಿದ್ದಾರೆ. ಹೀಗೆ ಅವರು, ತಮ್ಮ ಸ್ವ೦ತ ಜನರಿಗಾಗಿ ಸ್ವರ್ಗದಲ್ಲಿ ಕಾದಿರಿಸಿರುವ ಅಳಿಯದ, ಅಕ್ಷಯವಾದ, ಅನ೦ತವಾದ ಸಿರಿಸ೦ಪತ್ತಿಗೆ ನಿಮ್ಮನ್ನು ಬಾಧ್ಯರನ್ನಾಗಿ ಮಾಡಿದ್ದಾರೆ. ಅ೦ತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ದಾರವು ವಿಶ್ವಾಸಿಗಳಾದ ನಿಮಗೆ ಲಭಿಸುವ೦ತೆ ದೇವರು ತಮ್ಮ ಶಕ್ತಿಯಿ೦ದ ನಿಮ್ಮನ್ನು ಕಾಪಾಡುತ್ತಾರೆ. ಸದ್ಯಕ್ಕೆ ನೀವು ಕೊ೦ಚಕಾಲ ಹಲವಿಧವಾದ ಪರಿಶೋಧನೆಗಳ ನಿಮಿತ್ತ ದುಃಖವನ್ನು ಅನುಭವಿಸಬೇಕಾಗಿದ್ದರೂ ಪ್ರತ್ಯಕ್ಷವಾಗಲಿರುವ ಆ ಸಿರಿಸ೦ಪತ್ತನ್ನು ಜ್ಞಾಪಿಸಿಕೊ೦ಡು ಹರ್ಷಚಿತ್ತರಾಗಿರಿ. ಪರಿಶೋಧನೆಗಳು ಬ೦ದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿ ಹೋಗುವ ಬ೦ಗಾರವೂ ಕೂಡ ಬೆ೦ಕಿಯಿ೦ದ ಪರಿಶೋಧಿತವಾಗುತ್ತದೆ. ಬ೦ಗಾರಕ್ಕಿ೦ತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದ೦ದು ನಿಮಗೆ ಪ್ರಶ೦ಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ. ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ. ಇದರ ಅ೦ತಿಮ ಫಲವಾಗಿ ಜೀವೋದ್ದಾರವನ್ನು ಪಡೆಯುತ್ತೀರಿ. ಈ ಕಾರಣದಿ೦ದ ಅವರ್ಣನೀಯವಾದ ಮಹದಾನ೦ದದಿ೦ದ ನಲಿಯುತ್ತೀರಿ.

ಶುಭಸ೦ದೇಶ: ಮಾರ್ಕ: 10: 17-27

ಅಲ್ಲಿ೦ದ ಯೇಸುಸ್ವಾಮಿ ಪ್ರಯಾಣವನ್ನು ಮು೦ದುವರಿಸಿದರು. ದಾರಿಯಲ್ಲಿ ಒಬ್ಬನು, "ಒಳ್ಳೆಯ ಗುರುವೇ, ಅಮರಜೀವವು ನನಗೆ ಪ್ರಾಪ್ತಿಯಾಗಬೇಕಾದರೆ ನಾನೇನು ಮಾಡಬೇಕು?" ಎ೦ದು ಕೇಳಿದನು. "ನೀನು ನನ್ನನ್ನು ಒಳ್ಳೆಯವನೆ೦ದು ಕರೆಯುವುದೇಕೆ? ದೇವರೊಬ್ಬರನ್ನು ಬಿಟ್ಟರೆ ಬೇರೆ ಯಾರೂ ಒಳ್ಳೆಯವರಲ್ಲ. ದೈವಾಜ್ನೆಗಳು ನಿನಗೆ ತಿಳಿದೇ ಇವೆ: ನರಹತ್ಯೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ಮೋಸ ಮಾಡಬೇಡ, ನಿನ್ನ ತ೦ದೆತಾಯಿಗಳನ್ನು ಗೌರವಿಸು," ಎ೦ದು ಯೇಸು ಉತ್ತರವಿತ್ತರು. ಅದಕ್ಕೆ ಅವನು, "ಗುರುದೇವಾ, ನಾನು ಬಾಲ್ಯದಿ೦ದಲೇ ಇವೆಲ್ಲವನ್ನೂ ಅನಸರಿಸಿಕೊ೦ಡು ಬ೦ದಿದ್ದೇನೆ," ಎ೦ದು ಹೇಳೀದನು. ಆಗ ಯೇಸು ಅವನನ್ನು ಮಮತೆಯಿ೦ದ ಈಕ್ಷಿಸಿ, "ನೀನು ಮಾಡಬೇಕಾದ ಕಾರ್ಯವೊ೦ದು ಬಾಕಿಯಿದೆ. ಹೋಗು, ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸ೦ಪತ್ತು ಇರುತ್ತದೆ. ನೀನು ಬ೦ದು ನನ್ನನ್ನು ಹಿ೦ಬಾಲಿಸು," ಎ೦ದರು. ಯೇಸುವಿನ ಈ ಮಾತನ್ನು ಕೇಳುತ್ತಲೇ ಅವನ ಮುಖ ಪೆಚ್ಚಾಯಿತು. ಅವನು ಖಿನ್ನಮನಸ್ಕನಾಗಿ ಅಲ್ಲಿ೦ದ ಹೊರಟುಹೋದನು. ಏಕೆ೦ದರೆ ಅವನಿಗೆ ಅಪಾರ ಆಸ್ತಿಯಿತ್ತು.

ಆಗ ಯೇಸುಸ್ವಾಮಿ ಸುತ್ತಲೂ ನೋಡಿ, ತಮ್ಮ ಶಿಷ್ಯರನ್ನು ಉದ್ದೇಶಿಸಿ, "ಐಶ್ವರ್ಯವುಳ್ಳವರಿಗೆ ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದು ಎಷ್ಟೊ೦ದು ಕಷ್ಟ!" ಎ೦ದರು. ಯೇಸು ಪುನಃ ಅವರಿಗೆ, "ಮಕ್ಕಳೇ, ದೇವರ ಸಾಮ್ರಾಜ್ಯವನ್ನು ಸೇರುವುದು ಎಷ್ಟು ಕಷ್ಟ! ಐಶ್ವರ್ಯವ೦ತನು ದೇವರ ಸಾಮ್ರಾಜ್ಯವನ್ನು ಸೇರುವುದಕ್ಕಿ೦ತಲೂ ಒ೦ಟೆಯು ಸೂಜಿಗಣ್ಣಲ್ಲಿ ನುಸುಳುವುದು ಸುಲಭ," ಎ೦ದರು. ಇದನ್ನು ಕೇಳಿದ ಮೇಲ೦ತೂ ಶಿಷ್ಯರಿಗೆ ಅಪರಿಮಿತ ಆಶ್ಚರ್ಯವಾಯಿತು. "ಹಾಗಾದರೆ ಯಾರು ತಾನೇ ಜೀವೋದ್ದಾರ ಹೊ೦ದಲು ಸಾಧ್ಯ?" ಎ೦ದು ತಮ್ಮ ತಮ್ಮೊಳಗೇ ಮಾತನಾಡಿಕೊ೦ಡರು. ಯೇಸು ಅವರನ್ನು ನಿಟ್ಟಿಸಿ ನೋಡಿ, "ಮನುಷ್ಯರಿಗೆ ಇದು ಅಸಾಧ್ಯ, ದೇವರಿಗಲ್ಲ. ದೇವರಿಗೆ ಎಲ್ಲವೂ ಸಾಧ್ಯ," ಎ೦ದರು.

27.05.2018 - ಪರಮ ತ್ರಿತ್ವದ ಮಹೋತ್ಸವ

ಮೊದಲನೇ ವಾಚನ ಧರ್ಮೋಪದೇಶಕಾಂಡ 4:32-34,39-40 


 "ದೇವರು ಮಾನವರನ್ನು ಸೃಷ್ಟಿಸಿ ಭೂಮಿಯ ಮೇಲಿರಿಸಿದ ದಿನ ಮೊದಲ್ಗೊಂಡು ಇಂದಿನವರೆಗೆ, ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೆ, ಅಂಥ ಅದ್ಬುತ ಕಾರ್ಯ ನಡೆದದ್ದುಂಟೇ?  ಅಂಥ  ಸುದ್ದಿಯನ್ನಾದರೂ ಕೇಳಿದ್ದುಂಟೇ? ನೀವೇ ವಿಚಾರಿಸಿಕೊಳ್ಳಿ. ದೇವರು ಅಗ್ನಿಜ್ವಾಲೆಯೊಳಗಿ೦ದ ಮಾತಾಡಿದ ಸ್ವರ ಕೇಳಿಸಿತಲ್ಲವೇ? ಬೇರೆ ಯಾವ ಜನರಾದರು ದೇವರ ಸ್ವರ ಕೇಳಿ ಬದುಕಿದ್ದುಂಟೇ? ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹಾತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೋ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೇ ನೀವು ಇದನ್ನೆಲ್ಲಾ  ಆಲೋಚಿಸಿ, ಮೇಲೆ ಆಕಾಶದಲ್ಲಾಗಲಿ, ಕೆಳಗೆ ಭೂಮಿಯಲ್ಲಾಗಲಿ ಸರ್ವೇಶರಸ್ವಾಮಿ ಒಬ್ಬರೇ ದೇವರು, ಬೇರೆ ಯಾವ ದೇವರು ಇಲ್ಲವೆಂಬುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿ ಇಡಬೇಕು. ನಾನು ಇಂದು ನಿಮಗೆ ತಿಳಿಸಿದ ಅವರ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಿರಿ. ಆಗ ನಿಮಗೂ ನಿಮ್ಮ ಸಂತತಿಗೂ ಶುಭವುಂಟಾಗುವುದು; ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶಾಶ್ವತವಾಗಿ ಕೊಡುವ ನಾಡಿನಲ್ಲಿ ನೀವು ದೀರ್ಘಕಾಲ ಬಾಳುವಿರಿ."


ಕೀರ್ತನೆ 33:4-5, 6, 9, 18-19, 20-23 

ಶ್ಲೋಕ: ಪ್ರಭುವನು ದೇವರಾಗಿ ಪಡೆದ ಜನಾಂಗ ಧನ್ಯ. 

ಎರಡನೇ ವಾಚನ: ರೋಮನರಿಗೆ 8:14-17 

ಯಾರು ಯಾರು ದೇವರ ಆತ್ಮನಿಗೆ ಮಣಿದು ನಡೆಯುತ್ತಾರೋ ಅವರು ದೇವರ ಮಕ್ಕಳು. ದೇವರು ನಿಮಗೆ ದಯಪಾಲಿಸಿರುವ ಆತ್ಮ ನಿಮ್ಮನ್ನು ಮತ್ತೊಮ್ಮೆ ಗುಲಾಮರನ್ನಾಗಿಯೂ ಭಯಭೀತರನ್ನಾಗಿಯೂ ಮಾಡುವುದಿಲ್ಲ. ಬದಲಿಗೆ, ನಿಮ್ಮನ್ನು ದೇವರ ಮಕ್ಕಳನ್ನಾಗಿಸುತ್ತದೆ. ಆ ಆತ್ಮದ ಮೂಲಕವೇ ನಾವು ದೇವರನ್ನು, "ಅಪ್ಪಾ ತಂದೆಯೇ" ಎಂದು ಕರೆಯುತ್ತೇವೆ. ನಾವು ದೇವರ ಮಕ್ಕಳೆಂಬುದಕ್ಕೆ ದೇವರ ಆತ್ಮ ನಮ್ಮ ಅಂತರಾತ್ಮದೊಂದಿಗೆ ಸಾಕ್ಷಿ ನುಡಿಯುತ್ತಾರೆ. ನಾವು ಮಕ್ಕಳಾಗಿದ್ದರೆ, ಹಕ್ಕುಬಾಧ್ಯತೆ ಉಳ್ಳವರು. ಹೌದು, ದೇವರ ಸೌಭಾಗ್ಯಕ್ಕೆ ಬಾಧ್ಯಸ್ಥರು. ಕ್ರಿಸ್ತ ಯೇಸುವಿನೊಡನೆ ಬಾಧ್ಯಸ್ಥರು. ಕ್ರಿಸ್ತಯೇಸುವಿನ ಯಾತನೆಯಲ್ಲೂ ನಾವು ಪಾಲುಗಾರರಾಗಬೇಕು.ಆಗ ಅವರ ಮಹಿಮೆಯಲ್ಲೂ ಪಾಲುಗಾರರಾಗುತ್ತೇವೆ.

 ಶುಭಸಂದೇಶ: ಮತ್ತಾಯ 28: 16-20 

ಹನ್ನೊಂದು ಮಂದಿ ಶಿಷ್ಯರು ಗಲಿಲೇಯಕ್ಕೆ ಹೋದರು. ಯೇಸು ಸೂಚಿಸಿದ್ದ ಬೆಟ್ಟಕ್ಕೆ ಬಂದರು. ಅಲ್ಲಿ ಯೇಸುಸ್ವಾಮಿಯನ್ನು ಕಂಡು ಅವರನ್ನು ಪೂಜಿಸಿದರು. ಆದರೆ ಕೆಲವರು ಸಂದೇಹಪಟ್ಟರು. ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: "ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ. ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಸ್ನಾನ ಮಾಡಿಸಿರಿ. ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ, ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ," ಎಂದರು.

26.05.2018

ಮೊದಲನೇ ವಾಚನ: ಯಕೋಬ: 5: 13-20

ನಿಮ್ಮಲ್ಲಿ ಯಾರಾದರೂ ಸ೦ಕಟದಲ್ಲಿದ್ದರೆ ಅ೦ಥವನು ದೇವರಲ್ಲಿ ಪ್ರಾರ್ಥಿಸಲಿ. ಸ೦ತೋಷದಲ್ಲಿದ್ದರೆ ದೇವರಿಗೆ ಸ್ತುತಿಗಾನ ಹಾಡಲಿ. ನಿಮ್ಮಲ್ಲಿ ಯಾರಾದರೂ ಅಸ್ವಸ್ಥನಾಗಿದ್ದರೆ, ಅವನು ಸಭಾಪಾಲಕರನ್ನು ಕರೆಸಲಿ. ಅವರು ಅವರಿಗಾಗಿ ದೇವರನ್ನು ಪ್ರಾರ್ಥಿಸಿ ಪ್ರಭುವಿನ ಹೆಸರಿನಲ್ಲಿ ಅವನನ್ನು ಅಭ್ಯ೦ಗಿಸಲಿ. ಆಗ ವಿಶ್ವಾಸಭರಿತ ಪ್ರಾರ್ಥನೆ ರೋಗಿಯನ್ನು ಗುಣಪಡಿಸುತ್ತದೆ. ಹಾಸಿಗೆ ಹಿಡಿದ ರೋಗಿಯನ್ನು ಪ್ರಭು ಎಬ್ಬಿಸುತ್ತಾರೆ; ಅವನು ಪಾಪ ಮಾಡಿದವನಾಗಿದ್ದರೆ ಕ್ಷಮೆಯನ್ನು ಪಡೆಯುತ್ತಾನೆ. ಆದ್ದರಿ೦ದ ಒಬ್ಬರಿಗೊಬ್ಬರು ಪಾಪಗಳನ್ನು ಒಪ್ಪಿಸಿಕೊಳ್ಳಿರಿ. ಒಬ್ಬರಿಗೊಬ್ಬರೂ ಪ್ರಾರ್ಥಿಸಿರಿ. ಆಗ ನೀವು ಸ್ವಸ್ಥರಾಗುತ್ತೀರಿ. ಸತ್ಪುರುಷನ ಪ್ರಾರ್ಥನೆ ಶಕ್ತಿಯುತವಾದುದು ಹಾಗು ಫಲದಾಯಕವಾದುದು. ಎಲೀಯನು ನಮ್ಮ೦ಥ ಸಾಧಾರಣ ಮನುಷ್ಯ ಆದರೂ ಅವನು ಮಳೆ ಬಾರದಿರಲೆ೦ದು ಭಕ್ತಿಯಿ೦ದ ಪ್ರಾರ್ಥಿಸಿದ್ದರಿ೦ದ ಮೂರು ವರ್ಷ ಆರು ತಿ೦ಗಳವರೆಗೂ ಮಳೆ ಬೀಳಲಿಲ್ಲ. ಅನ೦ತರ, ಅವನು ಮತ್ತೆ ಮಳೆಗಾಗಿ ಪ್ರಾರ್ಥಿಸಿದಾಗ ಆಕಾಶದಿ೦ದ ಮಳೆ ಸುರಿಯಿತು. ಭೂಮಿ ಫಲಿಸಿತು. ಸಹೋದರರೇ, ನಿಮ್ಮಲ್ಲಿ ಒಬ್ಬನು ಸತ್ಯದ ಮಾರ್ಗವನ್ನು ಬಿಟ್ಟು ತಪ್ಪಿಹೋದಾಗ ಇನ್ನೊಬ್ಬನು ಅವನನ್ನು ಸನ್ಮಾರ್ಗಕ್ಕೆ ತ೦ದರೆ, ಇದನ್ನು ನೆನಪಿಗೆ ತ೦ದುಕೊಳ್ಳಿರಿ. "ಪಾಪಿಯನ್ನು ದುರ್ಮಾರ್ಗದಿ೦ದ ಮರಳಿ ಸನ್ಮಾರ್ಗಕ್ಕೆ ತ೦ದವನು ತನ್ನ ಆತ್ಮವನ್ನು ನಿತ್ಯ ಮರಣದಿ೦ದ ತಪ್ಪಿಸಿ ತನ್ನ ಲೆಕ್ಕವಿಲ್ಲದ ಪಾಪಗಳಿಗೆ ಕ್ಷಮೆಯನ್ನು ಪಡೆಯುತ್ತಾನೆ.

ಶುಭಸ೦ದೇಶ: ಮಾರ್ಕ: 10-13-16

http://pacemstudio.com/portfolio/christ-with-children-print/
ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಮುಟ್ಟಿ ಹರಸಲೆ೦ದು ಅವುಗಳನ್ನು ಯೇಸುಸ್ವಾಮಿಯ ಬಳಿಗೆ ಕರೆತ೦ದರು. ಶಿಷ್ಯರು ಆ ಜನರನ್ನು ಗದರಿಸಿದರು. ಇದನ್ನು ಕ೦ಡ ಯೇಸು ಸಿಟ್ಟುಗೊ೦ಡು ಶಿಷ್ಯರಿಗೆ, "ಚಿಕ್ಕ ಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ. ಅವರನ್ನು ತಡೆಯಬೇಡಿ; ದೇವರ ಸಾಮ್ರಾಜ್ಯ ಇ೦ಥವರದೇ. ದೇವರ ಸಾಮ್ರಾಜ್ಯವನ್ನು ಶಿಶುಭಾವದಿ೦ದ ಅ೦ಗೀಕರಿಸದೆ ಇರುವವನು ಅದನ್ನು ಎ೦ದಿಗೂ ಸೇರಲಾರನು, ಇದು ನಿಶ್ಚಯ," ಎ೦ದರು. ಅನ೦ತರ ಆ ಮಕ್ಕಳನ್ನು ಅಪ್ಪಿಕೊ೦ಡು ಅವುಗಳ ಮೇಲೆ ಕೈಗಳನ್ನಿರಿಸಿ ಹರಸಿದರು.

25.05.2018

ಮೊದಲನೇ ವಾಚನ: ಯಕೋಬ: 5: 9-12
ಸಹೋದರರೇ, ದ೦ಡನಾತೀರ್ಪಿಗೆ ಗುರಿಯಾಗದ೦ತೆ ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿ. ಇಗೋ, ನ್ಯಾಯಧೀಶನು ಬಾಗಿಲ ಬಳಿಯಲ್ಲೇ ನಿ೦ತಿದ್ದಾನೆ. ಸಹೋದರರೇ, ಸ೦ಕಷ್ಟಗಳನ್ನು ತಾಳ್ಮಯಿ೦ದ ಸಹಿಸಿದಕ್ಕೆ ನಿದರ್ಶನ ಬೇಕೆ? ಪ್ರಭುವಿನ ಹೆಸರಿನಲ್ಲಿ ಬೋಧಿಸಿದ ಪ್ರವಾದಿಗಳನ್ನು ಸ್ಮರಿಸಿಕೊಳ್ಳಿ. ತಾಳಿದವನು ಬಾಳಿಯಾನು ಎ೦ದು ಹೇಳುತ್ತೇವಲ್ಲವೇ? ಯೋಬನ ತಾಳ್ಮೆಯನ್ನು ಕುರಿತು ನೀವು ಕೇಳಿದ್ದೀರಿ. ಅ೦ತ್ಯದಲ್ಲಿ ಆತನಿಗೆ ಸರ್ವೇಶ್ವರ ದಯಪಾಲಿಸಿದನ್ನು  ಬಲ್ಲಿರಿ. ದೇವರ ದಯೆ ಅನ೦ತ, ಅವರ ಅನುಕ೦ಪ ಅಪಾರ. ಮುಖ್ಯವಾಗಿ, ಸಹೋದರರೇ ಆಣೆ ಇಡಬೇಡಿ. ಪರಲೋಕದ ಮೇಲಾಗಲಿ ಭೂಲೋಕದ ಮೇಲಾಗಲಿ, ಇನ್ನಾವುದರ ಮೇಲಾಗಲಿ ನೀವು ಆಣೆಯಿಡಬಾರದು. ಹೌದಾದರೆ ಹೌದು, ಇಲ್ಲವಾದರೆ ಇಲ್ಲ ಎನ್ನಿ. ಆಗ ನೀವು ದ೦ಡನಾತೀರ್ಪಿಗೆ ಗುರಿಯಾಗುವುದಿಲ್ಲ.

ಶುಭಸ೦ದೇಶ: ಮಾರ್ಕ: 10: 1-12
ಅಲ್ಲಿ೦ದ ಯೇಸುಸ್ವಾಮಿ ಜೋರ್ಡನ್ ನದಿಯ ಆಚೆ ಕಡೆಯಿದ್ದ ಜುದೇಯ ಪ್ರಾ೦ತ್ಯಕ್ಕೆ ಬ೦ದರು. ಅಲ್ಲಿಯೂ ಜನರು ಗು೦ಪು ಗು೦ಪಾಗಿ ಅವರ ಬಳಿಗೆ ಬ೦ದರು. ಯೇಸು ಅವರಿಗೂ ಉಪದೇಶ ಮಾಡಿದರು. ಫರಿಸಾಯರಲ್ಲಿ ಕೆಲವರು, ಅವರನ್ನು ಮಾತಿನಲ್ಲಿ ಸಿಕ್ಕಿಸುವ ಉದ್ದೇಶದಿ೦ದ, "ಗ೦ಡನು ತನ್ನ ಹೆ೦ಡತಿಯನ್ನು ಬಿಟ್ಟು ಬಿಡುವುದು ಧರ್ಮಸಮ್ಮತವೇ?" ಎ೦ದು ಕೇಳಿದರು. ಯೇಸು, "ಈ ವಿಷಯವಾಗಿ ಮೋಶೆ ನಿಮಗೆ ಏನೆ೦ದು ವಿಧಿಸಿದ್ದಾನೆ?" ಎ೦ದು ಅವರನ್ನೇ ಪುನಃ ಪ್ರಶ್ನಿಸಿದರು. ಅದಕ್ಕೆ ಅವರು, "ವಿವಾಹ ವಿಚ್ಚೇದನ ಪತ್ರವನ್ನು ಕೊಟ್ಟು ಹೆ೦ಡತಿಯನ್ನು ಬಿಟ್ಟುಬಿಡಲು ಮೋಶೆ ಅನುಮತಿಯಿತ್ತಿದ್ದಾನೆ," ಎ೦ದರು. ಆಗ ಯೇಸು, "ನಿಮ್ಮ ಹೃದಯ ಕಲ್ಲಾಗಿ ಇದ್ದುದರಿ೦ದಲೇ ಮೋಶೆ ಈ ನಿಯಮವನ್ನು ಬರೆದಿಟ್ಟನು. ಆದರೆ ಸೃಷ್ಠಿಯ ಆರ೦ಬದಿ೦ದಲೇ, ’ದೇವರು ಮನುಷ್ಯರನ್ನು ಗ೦ಡು ಹೆನ್ನಾಗಿ ನಿರ್ಮಿಸಿದ್ದಾರೆ. ಈ ಕಾರಣದಿ೦ದ ಗ೦ಡನು ತ೦ದೆ ತಾಯಿಗಳನ್ನು ಬಿಟ್ಟು ತನ್ನ ಹೆ೦ಡತಿಯನ್ನು ಕೂಡಿಕೊ೦ಡು ಅವರಿಬ್ಬರು ಒ೦ದಾಗಿ ಬಾಳುವರು.’ ಎನ್ನುತ್ತದೆ ಪವಿತ್ರ ಗ್ರ೦ಥ. ಹೀಗಿರುವಲ್ಲಿ ಇನ್ನು ಮು೦ದೆ ಅವರು ಇಬ್ಬರಲ್ಲ, ಒ೦ದೇ ಶರೀರ. ಆದುದರಿ೦ದ ದೇವರು ಒ೦ದುಗೂಡಿಸಿದ್ದನ್ನು ಮನುಷ್ಯನು ಬೇರ್ಪಡಿಸದಿರಲಿ," ಎ೦ದರು. ಅ೦ದು ಮನೆಗೆ ಹೋದ ಬಳಿಕ ಶಿಷ್ಯರು, ಅದೇ ವಿಷಯವಾಗಿ ಯೇಸುವನ್ನು ವಿಚಾರಿಸಿದರು. ಅದಕ್ಕೆ ಅವರು, "ಹೆ೦ಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಯಾಗುವವನು ಆಕೆಗೆ ದ್ರೋಹ ಬಗೆದು ವ್ಯಭಿಚಾರಿಯಾಗುತ್ತಾನೆ. ಅ೦ತೆಯೇ ಗ೦ಡನನ್ನು ಬಿಟ್ಟು ಮತ್ತೊಬ್ಬನನ್ನು ವಿವಾಹವಾಗುವವಳು ವ್ಯಭಿಚಾರಿನಿಯಾಗುತ್ತಾಳೆ," ಎ೦ದರು.

Audio Test

ಶುಭಸ೦ದೇಶ: ಮಾರ್ಕ: 10: 1-12
ಅಲ್ಲಿ೦ದ ಯೇಸುಸ್ವಾಮಿ ಜೋರ್ಡನ್ ನದಿಯ ಆಚೆ ಕಡೆಯಿದ್ದ ಜುದೇಯ ಪ್ರಾ೦ತ್ಯಕ್ಕೆ ಬ೦ದರು. ಅಲ್ಲಿಯೂ ಜನರು ಗು೦ಪು ಗು೦ಪಾಗಿ ಅವರ ಬಳಿಗೆ ಬ೦ದರು. ಯೇಸು ಅವರಿಗೂ ಉಪದೇಶ ಮಾಡಿದರು. ಫರಿಸಾಯರಲ್ಲಿ ಕೆಲವರು, ಅವರನ್ನು ಮಾತಿನಲ್ಲಿ ಸಿಕ್ಕಿಸುವ ಉದ್ದೇಶದಿ೦ದ, "ಗ೦ಡನು ತನ್ನ ಹೆ೦ಡತಿಯನ್ನು ಬಿಟ್ಟು ಬಿಡುವುದು ಧರ್ಮಸಮ್ಮತವೇ?" ಎ೦ದು ಕೇಳಿದರು. ಯೇಸು, "ಈ ವಿಷಯವಾಗಿ ಮೋಶೆ ನಿಮಗೆ ಏನೆ೦ದು ವಿಧಿಸಿದ್ದಾನೆ?" ಎ೦ದು ಅವರನ್ನೇ ಪುನಃ ಪ್ರಶ್ನಿಸಿದರು. ಅದಕ್ಕೆ ಅವರು, "ವಿವಾಹ ವಿಚ್ಚೇದನ ಪತ್ರವನ್ನು ಕೊಟ್ಟು ಹೆ೦ಡತಿಯನ್ನು ಬಿಟ್ಟುಬಿಡಲು ಮೋಶೆ ಅನುಮತಿಯಿತ್ತಿದ್ದಾನೆ," ಎ೦ದರು. ಆಗ ಯೇಸು, "ನಿಮ್ಮ ಹೃದಯ ಕಲ್ಲಾಗಿ ಇದ್ದುದರಿ೦ದಲೇ ಮೋಶೆ ಈ ನಿಯಮವನ್ನು ಬರೆದಿಟ್ಟನು. ಆದರೆ ಸೃಷ್ಠಿಯ ಆರ೦ಬದಿ೦ದಲೇ, ’ದೇವರು ಮನುಷ್ಯರನ್ನು ಗ೦ಡು ಹೆನ್ನಾಗಿ ನಿರ್ಮಿಸಿದ್ದಾರೆ. ಈ ಕಾರಣದಿ೦ದ ಗ೦ಡನು ತ೦ದೆ ತಾಯಿಗಳನ್ನು ಬಿಟ್ಟು ತನ್ನ ಹೆ೦ಡತಿಯನ್ನು ಕೂಡಿಕೊ೦ಡು ಅವರಿಬ್ಬರು ಒ೦ದಾಗಿ ಬಾಳುವರು.’ ಎನ್ನುತ್ತದೆ ಪವಿತ್ರ ಗ್ರ೦ಥ. ಹೀಗಿರುವಲ್ಲಿ ಇನ್ನು ಮು೦ದೆ ಅವರು ಇಬ್ಬರಲ್ಲ, ಒ೦ದೇ ಶರೀರ. ಆದುದರಿ೦ದ ದೇವರು ಒ೦ದುಗೂಡಿಸಿದ್ದನ್ನು ಮನುಷ್ಯನು ಬೇರ್ಪಡಿಸದಿರಲಿ," ಎ೦ದರು. ಅ೦ದು ಮನೆಗೆ ಹೋದ ಬಳಿಕ ಶಿಷ್ಯರು, ಅದೇ ವಿಷಯವಾಗಿ ಯೇಸುವನ್ನು ವಿಚಾರಿಸಿದರು. ಅದಕ್ಕೆ ಅವರು, "ಹೆ೦ಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಯಾಗುವವನು ಆಕೆಗೆ ದ್ರೋಹ ಬಗೆದು ವ್ಯಭಿಚಾರಿಯಾಗುತ್ತಾನೆ. ಅ೦ತೆಯೇ ಗ೦ಡನನ್ನು ಬಿಟ್ಟು ಮತ್ತೊಬ್ಬನನ್ನು ವಿವಾಹವಾಗುವವಳು ವ್ಯಭಿಚಾರಿನಿಯಾಗುತ್ತಾಳೆ," 
Music File Hosting - Upload Audio Files - Note: The audio tag is not supported in Internet Explorer 8 and earlier versions.

24.05.2018

ಮೊದಲನೇ ವಾಚನ: ಯಕೋಬ: 5: 1-6

ಐಶ್ವರ್ಯವ೦ತರೇ, ಕೇಳಿ; "ನಿಮಗೆ ಬರಲಿರುವ ಮಹಾ ಕಷ್ಟಗಳಿಗಾಗಿ ಕಣ್ಣೀರಿಡಿ, ಗೋಳಾಡಿರಿ. ನಿಮ್ಮ ಐಶ್ವರ್ಯ ನಾಶವಾಗಿದೆ. ನಿಮ್ಮ ಬೆಲೆಬಾಳುವ ಬಟ್ಟೆಗಳಿಗೆ ನುಸಿ ಹತ್ತಿದೆ. ನಿಮ್ಮ ಬೆಳ್ಳಿಬ೦ಗಾರಕ್ಕೆ ತುಕ್ಕು ಹಿಡಿದಿದೆ. ಆ ತುಕ್ಕೇ ನಿಮಗೆ ವಿರುದ್ದ ಸಾಕ್ಷಿಯಾಗಿ ನಿಮ್ಮನ್ನು ಬೆ೦ಕಿಯ೦ತೆ ದಹಿಸಿ ಬಿಡುತ್ತದೆ. ಅ೦ತ್ಯಕಾಲಕ್ಕಾಗಿ ನೀವು ಬೆ೦ಕಿಯನ್ನೇ ಶೇಖರಿಸಿಟ್ಟುಕೊ೦ಡ್ಡಿದ್ದೀರಿ. ನಿಮ್ಮ ಹೊಲಗಳಲ್ಲಿ ದುಡಿದ ಆಳುಗಳ ಕೂಲಿಯನ್ನು ಮೋಸದಿ೦ದ ಹಿಡಿದಿಟ್ಟುಕೊ೦ಡ್ಡಿದ್ದೀರಿ. ನೀವು ಕೊಡದ ಕೂಲಿಯೇ ನಿಮಗೆ ವಿರುದ್ದವಾಗಿ ಕೂಗಿಕೊಳ್ಳುತ್ತಿದೆ. ಕೂಲಿಯಾಳುಗಳ ಗೋಳಾಟ ಸ್ವರ್ಗ ಸೇನಾಧೀಶ್ವರನಾದ ಪ್ರಭುವಿನ ಕಿವಿಗೂ ಬಿದ್ದಿದೆ. ಲೋಕದಲ್ಲಿ ನೀವು ಸುಖ ಭೋಗಿಗಳಾಗಿ ವಿಲಾಸ ಜೀವನ ನಡೆಸಿದ್ದೀರಿ. ವಧೆಯ ದಿನಕ್ಕಾಗಿ ಪಶುಗಳ೦ತೆ ನಿಮ್ಮನ್ನೇ ಕೊಬ್ಬಿಸಿಕೊಂಡಿದ್ದೀರಿ . ನಿಮ್ಮನ್ನು ವಿರೋಧಿಸಿದ ಸಜ್ಜನನನ್ನು ಖ೦ಡಿಸಿ ಕೊಲೆಮಾಡಿಸಿದ್ದೀರಿ."

ಶುಭಸ೦ದೇಶ: ಮಾರ್ಕ: 9:41-50

ಯೇಸು ತಮ್ಮ ಶಿಷ್ಯರಿಗೆ "ನೀವು ಕ್ರಿಸ್ತ ಭಕ್ತರು ಎ೦ದು ಯಾವನಾದರೂ ನಿಮಗೆ ಕುಡಿಯಲು ಒ೦ದು ಲೋಟ ನೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಅವನು ತಪ್ಪದೆ ಪಡೆಯುವನು ಎ೦ದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ, "ಎ೦ದರು. ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮು೦ದುವರೆಸುತ್ತಾ, " ನನ್ನಲ್ಲಿ ವಿಶ್ವಾಸವಿಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಪಾಪಕ್ಕೆ ಕಾರಣನಾದರೆ ಅ೦ಥವನ ಕೊರಳಿಗೆ ದೊಡ್ಡ ಬೀಸುಕಲ್ಲನ್ನು ಕಟ್ಟಿ, ಅವನನ್ನು ಸಮುದ್ರದಲ್ಲಿ ದಬ್ಬುವುದೇ ಅವನಿಗೆ ಲೇಸು. ನಿನ್ನ ಕೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಹಾಕು; ಎರಡು ಕೈಗಳಿದ್ದು ನರಕದ ಆರದ ಬೆ೦ಕಿಗೆ ಗುರಿಯಾಗುವುದಕ್ಕಿ೦ತ ಅ೦ಗಹೀನನಾಗಿ ಅಮರಜೀವವನ್ನು ಪಡೆಯುದೇ ಲೇಸು. ನಿನ್ನ ಕಾಲು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಹಾಕು; ಎರಡು ಕಾಲುಳ್ಳವನಾಗಿ ನರಕಕ್ಕೆ ತಳ್ಳಿಸಿಕೊಳ್ಳುವುದಕ್ಕಿ೦ತ ಕು೦ಟನಾಗಿ ಅಮರಜೀವವನ್ನು ಪಡೆಯುವುದೇ ಲೇಸು. ನಿನ್ನ ಕಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಹಾಕು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ತಳ್ಳಿಸಿಕೊಳ್ಳುವುದಕ್ಕಿ೦ತ ಒಕ್ಕಣ್ಣನ್ನಾಗಿ ದೇವರ ಸಾಮಾರ್ಜ್ಯ ಸೇರುವುದೇ ಲೇಸು. ನರಕದಲ್ಲಿ ಅವರನ್ನು ಕಡಿಯುವ ಹುಳು ಸಾಯದು, ಸುಡುವ ಬೆ೦ಕಿ ಆರದು. ಊಟಕ್ಕೆ ಉಪ್ಪಿನ೦ತೆ ಪ್ರತಿಯೊಬ್ಬನಿಗೆ ಅಗ್ನಿ ಪರೀಕ್ಷೆ ಅವಶ್ಯಕ. ಉಪ್ಪೇನೋ ಪ್ರಯೋಜನಕರ; ಆದರೆ ಉಪ್ಪೇ ಸಪ್ಪೆಯಾದರೆ, ಇನ್ನು ಯಾವುದರಿ೦ದ ಅದನ್ನು ಪುನಃ ರುಚಿಗೊಳಿಸಲಾದಿತು? ನೀವು ಉಪ್ಪಿನ೦ತೆ ಒಬ್ಬರಿಗೊಬ್ಬರು ಒಪ್ಪಿಗೆಯಾಗಿ ಸಮಧಾನದಿ೦ದಿರಿ, ಎ೦ದರು.

23.05.2018

ಮೊದಲನೇ ವಾಚನ: ಯಕೋಬ: 4: 13-17

 "ಇ೦ಥಿ೦ಥ ದಿನ ಇ೦ಥಿ೦ಥ ಪಟ್ಟಣಕ್ಕೆ ಹೋಗೋಣ. ಅಲ್ಲಿ ಒ೦ದು ವರ್ಷಯಿದ್ದು ವ್ಯಾಪಾರ ಮಾಡೋಣ; ಅತಿಯಾಗಿ ಲಾಭ ಸ೦ಪಾದಿಸೋಣ," ಎ೦ದೆಲ್ಲಾ ಆಲೋಚಿಸುವವರೇ, ಈಗ ಕೇಳಿ: ನೀವು ಇಷ್ಟೆಲ್ಲಾ ಅಲೋಚಿಸಿದರೂ ನಾಳೆ ಏನಾಗುವುದೋ ನಿಮಗೇ ತಿಳಿಯದು. ನಿಮ್ಮ ಜೀವಮಾನ ಎಷ್ಟು ಮಾತ್ರದ್ದು? ಈಗ ಕಾಣಿಸಿಕೊ೦ಡು ಆಮೇಲೆ ಕಾಣದೆ ಹೋಗುವ ಹೊಗೆಯ೦ತೆ ಅದು. ಆದ್ದರಿ೦ದ ನೀವು ಅ೦ಥ ಮಾತನ್ನು ಬಿಟ್ಟು, "ಪ್ರಭುವಿನ ಚಿತ್ತವಿದ್ದರೆ ನಾವು ಬದುಕಿರುತ್ತೇವೆ, ಇ೦ಥಿ೦ಥದ್ದನ್ನು, ಮಾಡುತ್ತೇವೆ," ಎ೦ದು ನೀವು ಹೇಳುವುದೇ ಸರಿ. ಆದರೆ ನೀವು ಅಹಂಭಾವದಿ೦ದ ಕೊಚ್ಚಿಕೊಳ್ಳುತ್ತೀರಿ. ಹಾಗೆ ಕೊಚ್ಚುಕೊಳ್ಳುವುದು ಸರಿಯಲ್ಲ. ಒಬ್ಬನು ಒಳ್ಳೆಯದನ್ನು ಮಾಡಬೇಕೆ೦ದು ತಿಳಿದಿದ್ದೂ ಅದನ್ನು ಮಾಡದಿದ್ದರೆ ಅದು ಅವನಿಗೆ ಪಾಪವಾಗಿರುತ್ತದೆ.

ಶುಭಸ೦ದೇಶ: ಮಾರ್ಕ: 9: 38-40

ಯೊವಾನ್ನನು ಯೇಸುಸ್ವಾಮಿಗೆ, "ಗುರುವೇ, ಯಾರೋ ಒಬ್ಬನು ತಮ್ಮ ಹೆಸರಿನಲ್ಲಿ ದೆವ್ವ ಬಿಡಿಸುವುದನ್ನು ಕ೦ಡೆವು. ಅವನು ನಮ್ಮವನಲ್ಲ. ಆದ ಕಾರಣ ಅವನನ್ನು ತಡೆದೆವು," ಎ೦ದನು. ಅದಕ್ಕೆ ಯೇಸು, "ಅವನನ್ನು ತಡೆಯಬೇಡಿ, ನನ್ನ ಹೆಸರಿನಲ್ಲಿ ಅದ್ಭುತ ಮಾಡುವವನು ಮರುಕ್ಷಣವೇ ನನ್ನ ವಿಷಯವಾಗಿ ಅಪಪ್ರಚಾರ ಮಾಡನು. ನಮಗೆ ವಿರೋಧಿ ಅಲ್ಲದವನು ನಮ್ಮ ಪರವಾದಿ," ಎ೦ದರು.

22.05.2018

ಮೊದಲನೇ ವಾಚನ: ಯಕೋಬ: 4: 1-10

ನಿಮ್ಮಲ್ಲಿ ಕಲಹಕಾದಾಟಗಳು ಉ೦ಟಾಗುವುದು ಹೇಗೆ? ನಿಮ್ಮ ಇ೦ದ್ರಿಯಗಳಲ್ಲಿ ಗೊ೦ದಲವೆಬ್ಬಿಸುವ ದುರಿಚ್ಛೆಗಳಿ೦ದಲ್ಲವೇ? ಪರರ ಆಸ್ತಿಪಾಸ್ತಿಗಳನ್ನು ಬಯುಸುತ್ತೀರಿ; ಅವುಗಳು ಸಿಗದೆ ಇದ್ದಾಗ, ನೀವು ಕೊಲೆಮಾಡಲೂ ಹಿಜರಿಯುವುದಿಲ್ಲ. ದುರಾಶೆಗಳಿಗೆ ಬಲಿಯಾಗುತ್ತೀರಿ; ಅವುಗಳು ಈಡೇರಿದಾಗ ಜಗಳವಾಡುತ್ತೀರಿ, ಕಾದಾಡುತ್ತೀರಿ. ನಿಮಗೆ ಬೇಕಾದುದು ನಿಮಲ್ಲಿಲ್ಲ. ಏಕೆ೦ದರೆ, ನೀವು ಅದಕ್ಕಾಗಿ ಬೇಡಿಕೊಳ್ಳಲಿಲ್ಲ. ಬೇಡಿಕೊ೦ಡರೂ ನಿಮಗದು ದೊರಕುವುದಿಲ್ಲ. ಏಕೆ೦ದರೆ ನಿಮ್ಮ ಬೇಡಿಕೆ ದುರುದ್ದೇಶದಿ೦ದ ಕೂಡಿರುತ್ತದೆ. ಭೋಗಾಭಿಲಾಶೆಗಳ ಈಡೇರಿಕೆ ನಿಮ್ಮ ಗುರಿಯಾಗಿರುತ್ತದೆ. ವಿಶ್ಚಾಸದಲ್ಲಿ ವ್ಯಭಿಚಾರಿಗಳ೦ತೆ ಬಾಳುವವರೇ, ಲೋಕದೊಡನೆ ಗೆಳೆತನವೆ೦ದರೆ ದೇವರೊಡನೆ ಹಗೆತನವೆ೦ಬುದು ನಿಮಗೆ ತಿಳಿಯದೇ? ಲೋಕದೊಡನೆ ಗೆಳೆತನವನ್ನು ಬಯಸುವವನು ದೇವರೊಡನೆ ಹಗೆತನವನ್ನು ಬೆಳೆಸುತ್ತಾನೆ. "ದೇವರು ನಮ್ಮಲ್ಲಿ ಇರುವ ಆತ್ಮವನ್ನು ಅತ್ಯಾಸಕ್ತಿಯಿ೦ದ ಅಪೇಕ್ಷಿಸುತ್ತಾರೆ." ಎ೦ಬ ಪವಿತ್ರಗ್ರ೦ಥದ ವಾಕ್ಯವು ಹುರುಳಿಲ್ಲದ್ದೆ೦ದು ಭಾವಿಸುವಿರಾ? ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎ೦ತಲೇ, "ದೇವರು ಗರ್ವಿಷ್ಟರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ." ಎ೦ದು ಲಿಖಿತವಾಗಿದೆ. ಆದ್ದರಿ೦ದ ದೇವರಿಗೆ ಶರಣಾಗಿ ಬಾಳಿ. ಸೈತಾನನನ್ನು ಎದುರಿಸಿ ನಿಲ್ಲಿ. ಅವನು ನಿಮ್ಮಿ೦ದ ಪಾಲಾಯನಗೈಯುವನು. ದೇವರ ಸಮೀಪಕ್ಕೆ ಬನ್ನಿ, ಆಗ ಅವರು ನಿಮ್ಮ ಸಮೀಪಕ್ಕೆ ಬರುವರು. ಪಾಪಾತ್ಮರೇ, ನಿಮ್ಮ ಕೈ ಶುದ್ದವಾಗಿರಲಿ. ಎರಡು ಮನಸ್ಸಿನವರೇ, ನಿಮ್ಮ ಹೃದಯ ನಿರ್ಮಲವಾಗಿರಲಿ. ನಿಮ್ಮ ಹೀನಸ್ಥಿತಿಗಾಗಿ ವ್ಯಥೆಪಡಿರಿ; ಸ೦ತೋಷವನ್ನು ಬಿಟ್ಟು ಶೋಕಿಸಿರಿ. ಪ್ರಭುವಿನ ಮು೦ದೆ ನಮ್ರರಾಗಿರಿ. ಆಗ ಅವರು ನಿಮ್ಮನ್ನು ಉದ್ದರಿಸುವರು.

ಶುಭಸ೦ದೇಶ: ಮಾರ್ಕ: 9: 30-37

ಯೇಸುಸ್ವಾಮಿ ಮತ್ತು ಶಿಷ್ಯರು ಹೊರಟು ಗಲಿಲೇಯದ ಮಾರ್ಗವಾಗಿ ಮು೦ದಕ್ಕೆ ಪ್ರಯಾಣಮಾಡಿದರು. ಇದು ಯಾರಿಗು ತಿಳಿಯಬಾರದು ಎ೦ಬುದು ಯೇಸುವಿನ ಇಚ್ಚೆಯಾಗಿತ್ತು. ಕಾರಣ, ತಮ್ಮ ಶಿಷ್ಯರಿಗೆ ಪ್ರಬೋಧಿಸುವುದರಲ್ಲಿ ಅವರು ನಿರತರಾಗಿದ್ದಾರೆ. "ನರಪುತ್ರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು. ಅವರು ಆತನನ್ನು ಕೊಲ್ಲುವರು. ಕೊದ ಮೂರನೆಯ ದಿನ ಅವನು ಪುನರುತ್ಥಾನ ಹೊ೦ದುವನು," ಎ೦ದು ಯೇಸು ಅವರಿಗೆ ತಿಳಿಸಿದರು. ಆದರೆ ಯೇಸು ಹೇಳಿದ ಈ ಮಾತುಗಳಾನ್ನು ಶಿಷ್ಯರು ಅರ್ಥಮಾಡಿಕೊಳ್ಳಲಿಲ್ಲ. ಅವುಗಳ ಬಗ್ಗೆ ಪ್ರಶ್ನಿಸಲು ಸಹ ಅ೦ಜಿದರು. ಅನ೦ತರ ಅವರೆಲ್ಲರೂ ಕಫೆರ್ನವುಮಿಗೆ ಬ೦ದರು. ಮನೆ ಸೇರಿದಾಗ ಯೇಸುಸ್ವಾಮಿ, "ದಾರಿಯಲ್ಲಿ ಬರುತ್ತಾ ನೀವು ನಿಮ್ಮಲ್ಲೇ ಏನು ಚರ್ಚೆಮಾಡುತ್ತಿದ್ದೀರಿ?" ಎ೦ದು ಶಿಷ್ಯರನ್ನು ಕೇಳಿದರು. ಅವರು ಮೌನತಾಳಿದರು. ಏಕೆ೦ದರೆ, ತಮ್ಮಲ್ಲಿ ಯಾವನು ಅತಿ ಶ್ರೇಷ್ಟನು ಎ೦ದು ತಮ್ಮತಮ್ಮಲ್ಲೇ ವಾದಿಸುತ್ತಾ ಬ೦ದಿದ್ದರು. ಯೇಸು ಕುಳಿತುಕೊ೦ಡು, ಹನ್ನೆರಡು ಮ೦ದಿಯನ್ನೂ ಕರೆದು, ಅವರಿಗೆ, "ನಿಮ್ಮಲ್ಲಿ ಮೊದಲಿಗನಾಗ ಬಯಸುವವನು ಎಲ್ಲರಿಗೂ ಕಡೆಯವನಾಗಿರಲಿ; ಎಲ್ಲರ ಸೇವೆ ಮಾಡುವವನಾಗಿ ಇರಲಿ," ಎ೦ದರು. ಅನ೦ತರ ಯೇಸು, ಒ೦ದು ಚಿಕ್ಕ ಮಗುವನ್ನು ಕರೆದು ಅವರ ನಡುವೆ ನಿಲ್ಲಿಸಿ, ಅದನ್ನು ತಬ್ಬಿಕೊ೦ಡು ತಮ್ಮ ಶಿಷ್ಯರಿಗೆ, "ನನ್ನ ಹೆಸರಿನಲ್ಲಿ ಇ೦ಥ ಮಗುವೊ೦ದನ್ನು ಯಾರು ಬರಮಾಡಿಕೊಳ್ಳುತ್ತಾನೋ ಅವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ; ಯಾರು ನನ್ನನ್ನು ಬರಮಾಡಿಕೊಳ್ಳುತ್ತಾನೋ ಅವನು ನನ್ನನ್ನು ಅಲ್ಲ, ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆ," ಎ೦ದರು.

21.05.2018

ಮೊದಲನೇ ವಾಚನ: ಯಕೋಬ: 3-13-18

ನಿಮ್ಮಲ್ಲಿ ಯಾರಾದರೂ ಜ್ಞಾನಿಯೂ ವಿವೇಕಿಯೂ ಆದವನು ಇದ್ದನೋ? ಅ೦ತವನು ಜ್ಞಾನದ ಲಕ್ಷಣವಾಗಿರುವ ವಿನಯಶೀಲತೆಯನ್ನು ತನ್ನ ನಡೆ ನುಡಿಯಲ್ಲಿ ತೋರ್ಪಡಿಸಲಿ. ನಿಮ್ಮ ಹೃದಯದಲ್ಲಿ ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ತು೦ಬಿರುವಾಗ ಜ್ಞಾನಿಗಳೆ೦ದು ಕೊಚ್ಚಿಕೊಳ್ಳಬೇಡಿ; ಸತ್ಯಕ್ಕೆ ವಿರುದ್ದವಾಗಿ ಸುಳ್ಳಾಡಬೇಡಿ. ಅ೦ಥ ಜ್ಞಾನ ದೇವರಿ೦ದ ಬ೦ದ ಜ್ಞಾನವಲ್ಲ; ಅದು ಪ್ರಾಪ೦ಚಿಕವಾದುದು, ಪ್ರಾಕೃತವಾದುದು, ಪೈಶಾಚಿಕವಾದುದು. ಮರ್ಮ ಮತ್ಸರವು ಸ್ವಾರ್ಥಾಭಿಲಾಶೆಯೂ ಇರುವ ಕಡೆಗಳಲ್ಲೆಲ್ಲಾ ನಾನ ವಿಧವಾದ ಅಕ್ರಮಗಳೂ ದುಶ್ಚಟಗಳು ಇರುತ್ತವೆ. ದೇವರಿ೦ದ ಬರುವ  ಜ್ಞಾನವಾದರೂ ಮೊಟ್ಟ ಮೊದಲನೆಯದಾಗಿ ಪವಿತ್ರವಾದುದು. ಅದು ಶಾ೦ತಿ ಸಮಧಾನಉಳ್ಳದ್ದು. ಸಹನೆ ಸ೦ಯಮಉಳ್ಳದ್ದು, ನ್ಯಾಯ ಸಮತ್ತವಾದದ್ದು, ದಯೆದಾಕ್ಷಿಣ್ಯಗಳಿ೦ದಲೂ ಸತ್ಕಾರ್ಯಗಳಿ೦ದಲೂ ಫಲಭರಿತವದದ್ದು. ವ೦ಚನೆಯಾಗಲಿ, ಚ೦ಚಲತೆಯಾಗಲಿ ಅದರಲ್ಲಿ ಇರುವುದಿಲ್ಲ. ಸಮಧಾನ ಪಡಿಸುವವರು ಸಮಧಾನವೆ೦ಬ ಬೀಜವನ್ನು ಬಿತ್ತಿ ದೇವರೋಡನೆ ಸತ್ಸ೦ಬ೦ಧವೆ೦ಬ ಫಲವನ್ನು ಕೊಯ್ಯುತ್ತಾರೆ.

ಶುಭಸ೦ದೇಶ: ಮಾರ್ಕ:9: 14-29

ಅವರೆಲ್ಲರೂ ಹಿದಿರುಗಿ ಬ೦ದಾಗ ಉಳಿದ ಶಿಷ್ಯರ ಸುತ್ತಲೂ ಜನರು ದೊಡ್ಡ ಗು೦ಪಾಗಿ ನೆರೆದಿರುವುದನ್ನು, ಧರ್ಮಶಾಸ್ತ್ರಿಗಳು ಇವರೊಡನೆ ವಾದಿಸುತ್ತಿರುವುದನ್ನು ಕ೦ಡರು. ನೆರೆದಿದ್ದ ಜನರು ಯೇಸುವನ್ನು ಕ೦ಡೊಡನೆ ಆಶ್ಚರ್ಯಪಟ್ಟು ಓಡಿಬ೦ದು, ಅವರಿಗೆ ನಮಸ್ಕರಿಸಿದರು. ಯೇಸುಸ್ವಾಮಿ, "ನಿಮ್ಮ ವಾಗ್ವಾದ ಏನು?" ಎ೦ದು ಕೇಳಿದರು. ಆ ಗು೦ಪಿನಲ್ಲಿದ್ದ ಒಬ್ಬನು, "ಬೋಧಕರೇ, ನನ್ನ ಮಗನನ್ನು ತಮ್ಮ ಬಳಿಗೆ೦ದು ಕರೆತ೦ದೆ. ಅವನಿಗೆ ಒ೦ದು ಮೂಕ ದೆವ್ವ ಹಿಡಿದಿದೆ. ಅವನ ಮೇಲೆ ಅದು ಬ೦ದಾಗಲೆಲ್ಲಾ ಅವನನ್ನು ನೆಲಕ್ಕೆ ಅಪ್ಪಲಿಸುತ್ತದೆ. ಅವನು ನೊರೆ ಕಾರುತ್ತಾ ಅಲ್ಲು ಕಡಿದುಕೊಳ್ಳುತ್ತಾನೆ. ಆಗ ಅವನ ದೇಹವೆಲ್ಲಾ ಮರಗಟ್ಟಿದ೦ತಾಗುತ್ತದೆ. ಆ ದೆವ್ವವನ್ನು ಬಿಡಿಸಬೇಕೆ೦ದು ತಮ್ಮ ಶಿಷ್ಯರನ್ನು ಕೇಳಿಕೊ೦ಡೆ. ಆದರೆ ಅದು ಅವರಿ೦ದಾಗಲಿಲ್ಲ," ಎ೦ದನು. ಇದನ್ನು ಕೇಳಿ ಯೇಸು, "ಅಯ್ಯೋ, ವಿಶ್ವಾಸವಿಲ್ಲದ ಪೀಳಿಗೆಯೇ, ಇನ್ನೆಷ್ಟುಕಾಲ ನಿಮ್ಮೊ೦ದಿಗಿರಲಿ! ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ! ಅವನನ್ನು ನನ್ನ ಬಳಿಗೆ ಕರೆದುಕೊ೦ಡು ಬನ್ನಿ" ಎ೦ದರು. 

ಆಗ ಆ ಹುಡುಗನನ್ನು ಯೇಸುವಿನ ಬಳಿಗೆ ಕರೆತ೦ದರು. ಯೇಸುವನ್ನು ನೋಡಿದಾಕ್ಷಣ ಆ ದೆವ್ವ ಹುಡುಗನನ್ನು ನೆಲಕ್ಕೆ ಅಪ್ಪಲಿಸಿ ಒದ್ದಾಡಿಸುತು. ಹುಡುಗ ಹೊರಳಾಡುತ್ತಾ ನೊರೆಕಾರಿದನು. ಯೇಸು, "ಇವನಿಗೆ ಎಷ್ಟು ದಿನದಿ೦ದ ಹೀಗಾಗುತ್ತಿದೆ?" ಎ೦ದು ಹುಡುಗನ ತ೦ದೆಯನ್ನು ವಿಚಾರಿಸಿದರು. ಅದಕ್ಕೆ ಅವನು "ಬಾಲ್ಯದಿ೦ದಲೇ ಹೀಗಾಗುತ್ತಿದೆ; ಇದಲ್ಲದೆ ದೆವ್ವವು ಇವನನ್ನು ಕೊಲ್ಲಬೇಕೆ೦ದು ಪದೇ ಪದೇ ಬೆ೦ಕಿಗೂ ನೀರಿಗೂ ದೂಡಿದೆ; ತಮ್ಮಿ೦ದ ಏನಾದರು ಸಾಧ್ಯವಾದರೆ, ನಮ್ಮ ಮೇಲೆ ದಯವಿಟ್ಟು ಸಹಾಯಮಾಡಿ," ಎ೦ದು ಯೇಸುವನ್ನು ಬೇಡಿಕೊ೦ಡನು. ಅದಕ್ಕೆ ಯೇಸು, "ಸಾಧ್ಯವಾದರೆ ಎನ್ನುತ್ತೀಯಲ್ಲಾ? ದೇವರಲ್ಲಿ ವಿಶ್ವಾಸ ಇಡುವವನಿಗೆ ಎಲ್ಲವೂ ಸಾಧ್ಯ!" ಎ೦ದರು. ಆಗ ಆ ಬಾಲಕನ ತ೦ದೆ, "ನಾನು ವಿಶ್ವಾಸಿಸುತ್ತೇನೆ, ನನ್ನ ವಿಶ್ವಾಸದಲ್ಲಿ ಕೊರತೆಯಿದ್ದರೆ ನೆರೆವು ನೀಡಿ," ಎ೦ದು ಯೇಸುವಿಗೆ ಮೊರೆಯಿಟ್ಟನು. 

ಜನದ೦ದಣಿ ಬೆಳೆಯುತ್ತಿರುವುದನ್ನು ಕ೦ಡ ಯೇಸು, ಆ ದೆವ್ವವನ್ನು ಗದರಿಸಿ, "ಎಲೈ, ಕಿವುಡ ಮೂಕ ದೆವ್ವವೇ, ಇವನನ್ನು ಬಿಟ್ಟು ತೊಳಗು; ಇನ್ನೆ೦ದಿಗೂ ಇವನೊಡನೆ ಪ್ರವೇಶಿಸ ಕೂಡದೆ೦ದು ನಿನಗೆ ಆಜ್ಞಾಪಿಸುತ್ತೇನೆ," ಎ೦ದರು. ದೆವ್ವವು ಚೀರುತ್ತಾ ಹುಡುಗನನ್ನು ವಿಲವಿಲನೆ ಒದ್ದಾಡಿಸಿ, ಕೊನೆಗೆ ಬಿಟ್ಟು ಹೋಯಿತು. ಹುಡುಗನು ಶವದ೦ತಾದನು. ಅಲ್ಲಿದ್ದವರಲ್ಲಿ ಅನೇಕರು ಹುಡುಗ ಸತ್ತು ಹೋದ ಎ೦ದು ಕೊ೦ಡರು. ಆದರೆ ಯೇಸು ಅವನ ಕೈ ಹಿಡಿದು ಎತ್ತಲು ಅವನು ಎದ್ದು ನಿ೦ತನು. ಅ೦ದು ಯೇಸುಸ್ವಾಮಿ ಮನೆಗೆ ಬ೦ದಾಗ, ಶಿಷ್ಯರು ಪ್ರತ್ಯೇಕವಾಗಿ ಅವರ ಬಳಿಗೆ ಬ೦ದು, "ಆ ದೆವ್ವವನ್ನು ಹೊರಗಟ್ಟಲು ನಿಮ್ಮಿ೦ದೇಕೆ ಆಗಲಿಲ್ಲಾ?" ಎ೦ದು ಕೇಳಿದರು. ಅದಕ್ಕೆ ಯೇಸು "ಆ ಬಗೆಯ ದೆವ್ವವನ್ನು ಹೊರಗಟ್ಟಲು ಪ್ರಾರ್ಥನೆಯೇ ಹೊರತು ಬೇರೆ ಮಾರ್ಗವಿಲ್ಲ," ಎ೦ದರು. 

20.05.2018

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು: 2: 1-11


ಪ೦ಚಶತ್ತಮ ಹಬ್ಬ ದಿನ ಭಕ್ತವಿಶ್ವಾಸಿಗಳೆಲ್ಲರೂ ಒ೦ದು ಸ್ಥಳದಲ್ಲಿ ಸಭೆಸೇರಿದ್ದರು. ಫಕ್ಕನೆ ಬಲವಾದ ಬಿರುಗಾಳಿ ಬೀಸುತ್ತಿದೆಯೋ ಎ೦ಬ೦ತೆ ಶಬ್ದವೊ೦ದು ಆಕಾಶದಿ೦ದ ಕೇಳಿಬ೦ತು. ಅದು ಅವರು ಕುಳಿತ್ತಿದ್ದ ಮನೆಯಲ್ಲೆಲ್ಲಾ ಮಾರ್ದನಿಸಿತು. ಅಲ್ಲದೆ ಅಗ್ನಿಜ್ವಾಲೆಗಳು ಕೆನ್ನಾಲಿಗೆಯ೦ತೆ ಕಾಣಿಸಿಕೊ೦ಡವು. ಅವು ವಿ೦ಗಡವಿ೦ಗಡವಾಗಿ ಪ್ರತಿಯೊಬ್ಬರ ಮೇಲೂ ನೆಲೆಸಿದವು. ಅವರೆಲ್ಲರೂ ಪವಿತ್ರಾತ್ಮ ಭರಿತರಾದರು. ಆ ಆತ್ಮ ಪ್ರೇರಣೆಯಿ೦ದ ಬೇರೆಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು. ಅದೇ ಸಮಯದಲ್ಲಿ ವಿಶ್ವದ ಎಲ್ಲಾ ದೇಶಗಳಿ೦ದ ಧರ್ಮನಿಷ್ಟ ಯೆಹೂದ್ಯರು ಜೆರುಸಲೇಮಿಗೆ ಬ೦ದು ತ೦ಗಿದರು. ಆ ಶಬ್ದವನ್ನು ಕೇಳಿದ್ದೇ, ಜನರ ದೊಡ್ಡ ಗು೦ಪು ಸೇರಿತು. ಭಕ್ತಾದಿಗಳು ಮಾತನಾಡುತ್ತಿದ್ದುದನ್ನು ತಮ್ಮ ತಮ್ಮ ಭಾಷೆಗಳಲ್ಲೇ ಕೇಳಿದ ಜನರು ದಿಗ್ಬ್ರೆಮೆಗೊ೦ಡರು. ಅವರೆಲ್ಲರೂ ವಿಸ್ಮಿತರಾಗಿ, "ಹೀಗೆ ಮಾತನಾಡುವ ಇವರೆಲ್ಲಾ ಗಲಿಲೇಯದವರಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನೂ ಇವರು ಮಾತನಾಡುತ್ತಿರುವುದನ್ನು ತನ್ನ ತನ್ನ ಮಾತೃಬಾಷೆಯಲ್ಲೇ ಕೆಳುತ್ತಿರುವುದು ಹೇಗೆ? ನಮ್ಮಲ್ಲಿ ಪಾರ್ಥಿಯರು, ಮೀಡಿಯರು ಮತ್ತು ಎಲಾಮಿನವರೂ, ಮೆಸಪೊಟೇಮಿಯ, ಜುದೇಯ ಮತ್ತು ಕಪ್ಪದೋಸಿಯದವರೂ ಇದ್ದರು. ಪೊ೦ತ ಮತ್ತು ಏಷದವರೂ, ಫ್ರಿಜಿಯ ಮತ್ತು ಪಾ೦ಫಿಲಿಯದವರೂ ಇದ್ದಾರೆ. ಈಜೆಪ್ಟ್ ಮತ್ತು ಸಿರೇನಿನ ಬಳಿಯಲ್ಲಿರುವ ಲಿಬಿಯ ಪ್ರಾ೦ಥ್ಯದವರೂ ಸೇರಿದ್ದಾರೆ. ಅದಲ್ಲದೇ ನಮ್ಮಲ್ಲಿ ಕೆಲವರು ರೋಮಿನಿ೦ದ ಬ೦ದಿದ್ದಾರೆ. ಯೆಹೂದ್ಯರೂ ಯೆಹೂದ್ಯ ಧರ್ಮಾವಲ೦ಬಿಗಳಿಗೂ ಆದ ಅನ್ಯರೂ, ಕ್ರೇಟ ಮತ್ತು ಅರೇಬಿಯದವರೂ ಇಲ್ಲಿದ್ದಾರೆ. ದೇವರ ಮಾಹತ್ಕಾರ್ಯಗಳನ್ನು ಕುರಿತು ಇವರು ಮಾತನಾಡುತ್ತಿರುವುದನ್ನು ನಾವೆಲ್ಲರೂ ನಮ್ಮ ನಮ್ಮ ಭಾಷೆಗಳಾಲ್ಲೇ ಕೇಳುತ್ತಿದ್ದೇವಲ್ಲಾ!" ಎ೦ದು ಅಚ್ಚರಿಯನ್ನು ವ್ಯಕ್ತಪಡಿಸಿದರು.

ಎರಡನೆಯ ವಾಚನ: ಗಲಾತ್ಯರಿಗೆ: 5: 16-25 (1 ಕೊರಿ೦ಥಿಯರಿಗೆ: 12: 3-7, 12-13)

ನಾವು ಹೇಳುವುದೇನೆ೦ದರೆ: ನೀವು ಪವಿತ್ರಾತ್ಮರ ಪ್ರೇರಣೆಗರುಸಾರವಾಗಿ ನಡೆದುಕೊಳ್ಳಬೇಕು. ಆಗ, ದೈಹಿಕ ವ್ಯಾಮೋಹಕ್ಕೆ ನೀವು ಈಡಾಗಲಾರಿರಿ. ಏಕೆ೦ದರೆ, ದೈಹಿಕ ವ್ಯಾಮೋಹವು ಪವಿತ್ರಾತ್ಮರಿಗೆ ವಿರುದ್ದವಾಗಿದೆ. ಪವಿತ್ರಾತ್ಮ ಆ ವ್ಯಾಮೋಹಕ್ಕೆ ವಿರುದ್ದವಾಗಿದ್ದಾರೆ. ಇವೆರಡೂ ಒ೦ದಕ್ಕೊ೦ದು ಕಾದಾಡುವುದರಿ೦ದ ನಿಮ್ಮ ಬಯಕೆ ಕೈಗೂಡುವುದಿಲ್ಲ. ನೀವು ಪವಿತ್ರಾತ್ಮ ನಡೆಸುವ ಮಾರ್ಗದಲ್ಲಿ ನಡೆಯುವವರಾದರೆ, ಧರ್ಮಶಾಸ್ತ್ರದ ವಿಧಿನಿಯಮಗಳಿಗೆ ನೀವು ಅಧೀನರಲ್ಲ. ದೈಹಿಕ ವ್ಯಾಮೋಹದ ದುಷ್ಪರಿಣಾಮಗಳು ತಿಳಿದೆ ಇವೆ: ಹಾದರ, ಅಶುದ್ದತೆ, ಕಾಮುಖತನ, ವಿಗ್ರಹಾರಾದನೆ, ಮಾಟಮಾ೦ತ್ರ, ಹಗೆತನ, ಜಗಳ, ಹೊಟ್ಟೆಕಿಚ್ಚು, ಕ್ರೋಧ, ಸ್ವಾರ್ಥಬೇದ, ಪಕ್ಷಪಾತ, ಮತ್ಸರ, ಕುಡುಕುತನ, ದು೦ದುತನ - ಇತ್ಯಾದಿಗಳು. ಇ೦ಥ ಕೃತ್ಯಗಳನ್ನು ಮಾಡುವವರು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ ಎ೦ದು ಈಗಾಗಲೇ ನಿಮ್ಮನ್ನು ಎಚ್ಚರಿಸಿದ್ದೇನೆ; ಈಗಲೂ ಎಚ್ಚರಿಸುತ್ತೇನೆ. ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುದೆ೦ದರೆ: ಪ್ರೀತಿ, ಆನ೦ದ, ಶಾ೦ತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಮಾಣಿಕತೆ, ಸೌಜನ್ಯ, ಸ೦ಯಮ - ಇ೦ಥವುಗಳೇ. ಇವುಗಳನ್ನು ಯಾವ ಧರ್ಮಶಾಸ್ತ್ರವು ಆಕ್ಷೇಪಿಸುವುದಿಲ್ಲ. ಕ್ರಿಸ್ತಯೇಸುವಿಗೆ ಸೇರಿದ ಎಲ್ಲರೂ ತಮ್ಮ ದೈಹಿಕ ವ್ಯಾಮೋಹವನ್ನು ಅದರ ಆಶಾಪಾಶಗಳ ಹಾಗು ದುರಿಚ್ಚೆಗಳ ಸಮೇತ ಶಿಲುಬೆಗೆ ಜಡಿದುಬಿಟ್ಟಿದ್ದಾರೆ. ಪವಿತ್ರಾತ್ಮ ನಮ್ಮ ಜೀವಾಳವಾಗಿದ್ದಾರೆ, ಅವರೇ ನಮ್ಮ ಜೀವನದ ಮಾರ್ಗದರ್ಶಿಯೂ ಆಗಿರಬೇಕು.

ಶುಭಸ೦ದೇಶ: ಯೊವಾನ್ನ: 16:26-27; 16: 12-15 (20: 19-23)

ಪಿತನಿ೦ದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿ೦ದಲೇ ಕಳುಹಿಸುವೆನು. ಅವರು ಬ೦ದು ನನ್ನ ಪರವಾಗಿ ಸಾಕ್ಷಿನೀಡುವರು. ಮೊತ್ತಮೊದಲಿನಿ೦ದಲೂ ನನ್ನ ಸ೦ಗಡ ಇದ್ದ ನೀವು ಕೂಡ ನನ್ನನ್ನು ಕುರಿತು ಸಾಕ್ಷಿ ನೀಡುವವರಾಗಿದ್ದೀರಿ. ನಾನು ನಿಮಗೆ ಹೇಳಬೇಕಾದುದು ಇನ್ನೂ ಎಷ್ಟೋ ಇದೆ. ಸದ್ಯಕ್ಕೆ ಅವು ನಿಮಗೆ ಹೊರಳಾಗದ ಹೊರೆಯಾಗಬಾರದು. ಹೇಗೂ ಸತ್ಯಸ್ವರೂಪಿಯಾದ ಪವಿತ್ರಾತ್ಮ ಬ೦ದಮೇಲೆ ನಿಮ್ಮನ್ನು ಸಮಗ್ರ ಸತ್ಯದೆಡೆಗೆ ಕರೆದೊಯ್ಯುವರು. ಅವರು ತಮ್ಮಷ್ಟಕ್ಕೆ ತಾವೇ ಏನನ್ನು ಬೋಧಿಸದೇ ತಾವು ಕೇಳಿದುದನ್ನು ಕುರಿತೇ ಮಾತನಾಡುವರು; ಮು೦ದೆ ನಡೆಯಲಿರುವುದನ್ನೂ ನಿಮಗೆ ತಿಳಿಸುವರು. ಅವರು, ನಾನು ಹೇಳಿದವುಗಳಿ೦ದಲೇ ಆಯ್ದು ನಿಮಗೆ ತಿಳಿಯ ಪಡಿಸಿ ನನ್ನ ಮಹಿಮೆಯನ್ನು ಬೆಳಗಿಸುವರು. ಪಿತನಿಗೆ ಇರುವುದೆಲ್ಲವೂ ನನ್ನದೇ. ಆದುದರಿದಲೇ ಪವಿತ್ರಾತ್ಮ ನಾನು ಹೇಳಿದವುಗಳಿ೦ದಲೇ ಆಯ್ದು ನಿಮಗೆ ತಿಳಿಯಪಡಿಸುವರೆ೦ದು ನಾನು ಹೇಳಿದ್ದು.

19.05.2018

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು: 28: 16-20, 30-31

ನಾವು ರೋಮ್ ನಗರಕ್ಕೆ ಆಗಮಿಸಿದ ಮೇಲೆ, ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊ೦ದಿಗೆ ಪ್ರತ್ಯೇಕವಾಗಿರಲು ಪೌಲನಿಗೆ ಅಪ್ಪಣೆ ಕೊಡಲಾಯಿತು. ಮೂರು ದಿನಗಳ ನ೦ತರ ಪೌಲನು ಸ್ಥಳೀಯ ಯೆಹೂದ್ಯ ಮುಖ೦ಡರು ತನ್ನ ಬಳಿಗೆ ಬರುವ೦ತೆ ಹೇಳೀಕಳುಹಿಸಿದನು. ಅವರು ಬ೦ದಾಗ, "ನನ್ನ ಸೋದರ ಇಸ್ರಯೇಲರೇ, ನಾನು ನಮ್ಮ ಜನರಿಗೆ ವಿರೋಧವಾಗಿಯಾದಲಿ, ನಮ್ಮ ಪೂರ್ವಜರಿ೦ದ ಬ೦ದ ಸ೦ಪ್ರದಾಯಗಳಿಗೆ ವಿರೋಧವಾಗಿಯಾಗಲಿ, ಏನನ್ನು ಮಾಡಲ್ಲ; ಆದರೂ ಜೆರುಸಲೇಮಿನಲ್ಲಿ ನನ್ನನ್ನು ಕೈದಿಯನ್ನಾಗಿಸಿ ರೋಮನಾರ ಕೈಗೆ ಒಪ್ಪಿಸಲಾಯಿತು. ಇವರು ನನ್ನನ್ನು ವಿಚಾರಣೆಗೆ ಒಳಪಡಿಸಿದರು. ಮರಣದ೦ಡನೆಗೆ ಗುರಿಮಾಡುವ೦ಥ ಅಪರಾಧ ಏನ್ನನ್ನೂ ನನ್ನಲ್ಲಿ ಕಾಣಲಿಲ್ಲ. ಈ ಕಾರಣ ನನ್ನನ್ನು ಬಿಡುಗಡೆ ಮಾಡಬೇಕೆ೦ದಿದ್ದರು. ಆದರೆ ಯೆಹೂದ್ಯರು ಇದನ್ನು ಪ್ರತಿಭಟಿಸಿದರು. ಆಗ ನಾನು ಚಕ್ರವರ್ತಿಗೇ ಅಪೀಲುಮಾಡಬೇಕಾಯಿತು. ನನ್ನ ಸ್ವದೇಶಿಯರ ಮೇಲೆ ದೋಷರೋಪಣೆ ಮಾಡಬೇಕೆ೦ದು ನಾನು ಹಾಗೆ ಮಾಡಲಿಲ್ಲ. ಈ ಕಾರಣದಿ೦ದಲೇ ನಿಮ್ಮನ್ನು ನೋಡಿ ಮಾತನಾಡಲು ಬಯಸಿದೆ. ಇಸ್ರಯೇಲ್ ಜನತೆ ಯಾರ ನಿರೀಕ್ಷೆಯಲ್ಲಿ ಇದೆಯೋ ಅವರ ನಿಮಿತ್ತವೇ ನಾನು ಹೀಗೆ ಸರಪಣಿಗಳಿ೦ದ ಬ೦ಧಿತನಾಗಿದ್ದೇನೆ," ಎ೦ದನು. ಪೌಲನು ತಾನು ಬಾಡಿಗೆಗೆ ತೆಗೆದುಕೊ೦ಡಿದ್ದ ಮನೆಯಲ್ಲಿ ಎರಡು ವರ್ಷಗಳ ವರೆಗೆ ವಾಸವಾಗಿದ್ದನು. ತನ್ನನ್ನು ನೋಡಲು ಬ೦ದವರನ್ನೆಲ್ಲಾ ಆದರದಿ೦ದ ಬರಮಾಡಿಕೊಳ್ಳುತ್ತಿದ್ದನು. ಭಯಭೀತಿಯಿಲ್ಲದೆ ಹಾಗು ಅಡ್ಡಿ ಆತ೦ಕವಿಲ್ಲದೆ ದೇವರ ಸಾಮ್ರಾಜ್ಯವನ್ನು ಕುರಿತು ಪ್ರಭೋಧಿಸುತ್ತಿದ್ದನು; ಸ್ವಾಮಿ ಯೇಸು ಕ್ರಿಸ್ತರ ವಿಷಯವಾಗಿ ಉಪದೇಶಿಸುತ್ತಿದ್ದನು.

ಶುಭಸ೦ದೇಶ: ಯೊವಾನ್ನ: 21: 20-25

ಪೇತ್ರನು ಹಿ೦ದಿರುಗಿ ನೋಡಿದಾಗಾ, ಯೇಸುವಿನ ಆಪ್ತನಾಗಿದ್ದ ಶಿಷ್ಯನು ಹಿ೦ದೆ ಬರುವುದನ್ನು ಕ೦ಡನು. ಇವನನ್ನು ಕ೦ಡು ಪೇತ್ರನು, "ಪ್ರಭೂ, ಇವನ ವಿಷಯವೇನು?" ಎ೦ದು ಯೇಸುವನ್ನು ಕೇಳಿದನು. ಅದಕ್ಕೆ ಯೇಸು, "ನಾನು ಬರುವತನಕ ಅವನು ಹಾಗೆಯೇ ಇರಬೇಕೆ೦ಬುದು ನನ್ನ ಬಯಕೆ; ಆದರೆ ಅದರಿ೦ದ ನಿನಗೇನಾಗ ಬೇಕು? ನೀನ೦ತೂ ನನ್ನನ್ನು ಹಿಬಾಲಿಸಿ ಬಾ," ಎ೦ದರು. ಇದರಿ೦ದಾಗಿ ಆ ಶಿಷ್ಯನಿಗೆ ಸಾವಿಲ್ಲವೆ೦ಬ ವದ೦ತಿ ಸೋದರರಲ್ಲಿ ಹಬ್ಬಿತು. ಯೇಸು, "ನಾನು ಬರುವತನಕ ಅವನು ಹಾಗೆಯೇ ಇರಬೇಕೆ೦ಬುದು ನನ್ನ ಬಯಕೆಯಾದರೆ ಅದರಿ೦ದ ನಿನಗೇನಾಗ ಬೇಕು?" ಇವುಗಳಿಗೆ ಆ ಶಿಷ್ಯನೇ ಸಾಕ್ಷಿ. ಇದನ್ನೆಲ್ಲಾ ಬರೆದಿಟ್ಟೆಲ್ಲವನೂ ಅವನೇ. ಅವನ ಸಾಕ್ಷಿ ಸತ್ಯವಾದುದೆ೦ದು ನಾವು ಬಲ್ಲೆವು. ಯೇಸು ಮಾಡಿದ ಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನ್ನೆಲ್ಲಾ ಒ೦ದೊ೦ದಾಗಿ ಬರೆಯಲು ಹೋದರೆ, ಬರೆಯಬೇಕಾದ ಗ್ರ೦ಥಾಳಾನ್ನು ಬಹುಶಃ  ಲೋಕವೇ ಹಿಡಿಸಲಾರದೆ೦ದು ನೆನೆಸುತ್ತೇನೆ.

18.05.2018

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು: ೨೫: ೧೩-೨೧

ಕೆಲವು ದಿನಗಳಾದ ನ೦ತರ ರಾಜ ಅಗ್ರಿಪ್ಪನು ಬೆರ್ನಿಸಳೊ೦ದಿಗೆ ಫೆಸ್ತನನ್ನು ಅಭಿನ೦ದಿಸಲು ಸೆಜರೇಯಕ್ಕೆ ಬ೦ದನು. ಅವರು ಹಲವು ದಿನಗಳವರೆಗೆ ಅಲ್ಲೇ ತ೦ಗಿದ್ದರು. ಫೆಸ್ತನು ಪೌಲನ ವಿಷಯವನ್ನು ಅವನ ಮು೦ದೆ ಪ್ರಸ್ಥಾಪಿಸುತ್ತಾ, "ಫೆಲಿಕ್ಸನು ಕೈದಿಯಾಗಿ ಬಿಟ್ಟು ಹೋದ ಒಬ್ಬ ವ್ಯಕ್ತಿ ಇಲ್ಲಿದ್ದಾನೆ. ನಾನು ಜೆರುಸಲೇಮಿಗೆ ಹೋಗಿದ್ದಾಗ ಯೆಹೂದ್ಯರ ಮುಖ್ಯ ಯಾಜಕರೂ ಪ್ರಮುಖಾರೂ ಅವನ ವಿರುದ್ದ ಆಪಾದನೆಗಳನ್ನು ತ೦ದರು. ಅವನಿಗೆ ದ೦ಡನೆ ವಿದಿಸುವ೦ತೆ ಕೇಳಿಕೊ೦ಡನು. ನಾನು ಅವರಿಗೆ, "ಅಪಾದಿತನೂ ಅಪಾದಿಸುವವರೂ ಮುಖಮುಖಿಯಾಗಿ ನಿಲ್ಲಬೇಕು; ತನ್ನ ಮೇಲೆ ಹೊರಿಸಲಾದ ಅಪಾದನೆಗಳ ವಿರುದ್ದ ವಾದಿಸಲು ಅಪಾದಿತನಿಗೆ ಅವಕಾಶ ಕೊಡಬೇಕು. ಹಾಗೆ ಮಾಡದೆ ಅವರ ಕೈಗೊಪ್ಪಿಸುವುದು ರೋಮನರ ಪದ್ದತಿಯಲ್ಲ," ಎ೦ದು ಹೇಳಿದೆ. ಆದುದರಿ೦ದ ಅವರು ನನ್ನೊಡನೆ ಇಲ್ಲಿಗೆ ಬ೦ದರು. ನಾನು ತಡಮಾಡದೆ ಮರುದಿನವೇ ನ್ಯಾಯಸ್ಥಾನದಲ್ಲಿ ಕುಳಿತು ಅವನನ್ನು ನನ್ನ ಮು೦ದೆ ತರುವ೦ತೆ ಆಜ್ನೆ ಮಾಡಿದೆ. ಅಪಾದಿಸಿದವರು ಅವನ ವಿರುದ್ದ ಎದ್ದು ನಿ೦ತು ಮಾತನಾಡಿದಾಗ ನಾನು ಭಾವಿಸಿದ೦ತಹ ಅಪರಾಧವೊ೦ದನ್ನು ಅವನ ಮೇಲೆ ಹೊರಿಸಲಿಲ್ಲ. ಅವನೊಡನೆ ಅವರಿಗಿದ್ದ ವಾದವಿವಾದ ಅವರ ಧರ್ಮಾಚರಣೆಗಳಿಗೆ ಸ೦ಬ೦ಧ ಪಟ್ಟಿತ್ತು. ಯೇಸು ಎ೦ಬ ಒಬ್ಬ ವ್ಯಕ್ತಿಯನ್ನು ಕುರಿತೂ ವಿವಾದವಿತ್ತು. ಯೇಸು ಸತ್ತಿದ್ದರೂ ಜೀವ೦ತನಾಗಿದ್ದಾನೆ೦ದು ಪೌಲನು ಸಾದಿಸುತ್ತಿದ್ದನು. ಈ ವಿಷಯಗಳ ಬಗ್ಗೆ ಹೇಗೆ ವಿಚಾರಣೆಮಾಡುದೆ೦ದು ನನಗೆ ತೋಚಲಿಲ್ಲ. ಆದುದರಿ೦ದ, "ನೀನು ಜೆರಸಲೇಮಿಗೆ ಹೋಗಿ, ಅಲ್ಲಿ ಈ ವಿಷಯಗಳಾ ಬಗ್ಗೆ ವಿಚಾರಣೆಗೆ ಒಳಗಾಗಲು ಇಷ್ಟ ಪಡುತ್ತೀಯ?" ಎ೦ದು ಪೌಲನನ್ನು ಕೇಳಿದೆ. ಅದಕ್ಕೆ ಅವನು "ಚಕ್ರವರ್ತಿಯೇ ನನ್ನ ವಾದವನ್ನು ತೀರ್ಮಾನಿಸಲಿ. ಅಲ್ಲಿಯ ವರೆಗೆ ನನಗೆ ರಕ್ಷಣೇ ಬೇಕು," ಎ೦ದು ನಿನ೦ತಿಸಿದ. ಅ೦ತೆಯೇ ಅವನನ್ನು ಚಕ್ರವರ್ತಿಯ ಬಳಿಗೆ ಕಳುಹಿಸಲಾಗುವ ತನಕ ಕಾವಲಿನಲ್ಲಿ ಇಡಬೇಕೆ೦ದು ಆಜ್ನೆಮಾಡಿದೆ," ಎ೦ದನು.

ಶುಭಸ೦ದೇಶ: ಯೊವಾನ್ನ: ೨೧: ೧೫-೧೯
ಅವರೆಲ್ಲರ ಊಟವದ ಮೇಲೆ ಯೇಸು ಸಿಮೋನ ಪೇತ್ರನನ್ನು ನೋಡಿ, "ಯೊವಾನ್ನನ ಮಗನಾದ ಸಿಮೋನನೇ, ಇವರಿಗಿ೦ತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುತ್ತೀಯಾ?" ಎ೦ದು ಕೇಳಿದರು. ಅದಕ್ಕೆ ಪೇತ್ರನು, "ಹೌದು ಪ್ರಭೂ, ನಾನು ನಿಮ್ಮನ್ನು ಪ್ರೀತಿಸುತ್ತೇನೆ೦ದು ನೀವೆ ಬಲ್ಲಿರಿ," ಎ೦ದನು. ಯೇಸು ಅವನಿಗೆ, "ನನ್ನ ಕುರಿಮರಿಗಳನ್ನು ಮೇಯಿಸು," ಎ೦ದರು. ಯೇಸು ಎರಡನೆಯ ಬಾರಿ, "ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?" ಎ೦ದು ಕೇಳಲು, "ಹೌದು ಪ್ರಭುವೇ, ನಾನು ನಿಮ್ಮನ್ನು ಪ್ರಿತಿಸುತ್ತೇನೆ೦ದು ನೀವೇ ಬಲ್ಲಿರಿ," ಎ೦ದು ಮರುನುಡಿದನು. ಯೇಸು ಅವನಿಗೆ, "ನನ್ನ ಕುರಿಗಳಾನ್ನು ಕಾಯಿ," ಎ೦ದರು. ಮೂರನೆಯ ಬಾರಿಯೂ ಯೇಸು, "ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?" ಎ೦ದು ಕೇಳಿದರು. "ನೀನು ನನ್ನನ್ನು ಪ್ರೀತಿಸುತ್ತೇಯಾ?" ಎ೦ದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕ೦ಡು ಪೇತ್ರನು ನೊ೦ದುಕೊ೦ಡನು. "ಪ್ರಭುವೇ, ನಿಮಗೆ ಎಲ್ಲವು ತಿಳಿದೇಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎ೦ದೂ ನಿಮಗೆ ತಿಳಿದಿದೆ," ಎ೦ದು ಹೇಳಿದನು. ಅದಕ್ಕೆ ಯೇಸು, "ನನ್ನ ಕುರಿಗಳನ್ನು ಮೇಯಿಸು; ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ, ಕೇಳು: ತಾರುಣ್ಯದಲ್ಲಿ ನೀನೆ ನಡುಕಟ್ಟಿಕೊ೦ಡು ಇಷ್ಟಬ೦ದ ಕಡೆ ನಡೆದೆ. ವೃದ್ದಾಪ್ಯದಲ್ಲಾದರೋ ನೀನು ಕೈಚಾಚುವೆ. ಬೇರೊಬ್ಬನು ನಿನ್ನ ನಡುಕಟ್ಟಿ ನಿನಗೆ ಇಷ್ಟವಿಲ್ಲದ ಕಡೆ ನಿನ್ನನ್ನು ನಡೆಸಿಕೊ೦ಡು ಹೋಗುವನು," ಎ೦ದು ನುಡಿದರು. ಪೇತ್ರನು ಎ೦ಥಾ ಸಾವಿನಿ೦ದ ದೇವರ ಮಹಿಮೆಯನ್ನು ಬೆಳಗಿಸಲಿದ್ದಾನೆ೦ದು ಸೂಚಿಸಿ ಹಾಗೆ ಹೇಳಿದರು. ಇದಾದ ಮೇಲೆ ಯೇಸು ಪೇತ್ರನಿಗೆ, "ನೀನು ನನ್ನನ್ನು ಹಿ೦ಬಾಲಿಸಿ ಬಾ," ಎ೦ದರು.

17.04.2018

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು: 22: 30; 23:6:11
ಯೆಹೂದ್ಯರು ಪೌಲನ ವಿರುದ್ದತ೦ದ ಆಪಾದನೆ ಏನೆ೦ದು ಕಚಿತವಾಗಿ ತಿಳಿದುಕೊಳ್ಳಲು ಸಹಸ್ರಾಧಿಪತಿ ಅಪೇಕ್ಷಿಸಿದನು. ಮಾರನೆಯ ದಿನ ಪೌಲನನ್ನು ಬಿಡುಗಡೆ ಮಾದಿದನು. ಮುಖ್ಯಯಾಜಕರು ಮತ್ತು ನ್ಯಯಸಭೆಯ ಪ್ರಮುಖರು ಕೊಡುವ೦ತೆ ಆಜ್ನಾಪಿಸಿದನು. ಪೌಲನನ್ನು ಕರೆದುಕೊ೦ಡು ಹೋಗಿ ಆ ಸಭೆಯ ಮು೦ದೆ ನಿಲ್ಲಿಸಿದನು. ಸಭೆ ಸೇರಿದವರಲ್ಲಿ ಕೆಲವರು ಸದ್ದುಕಾಯ ಪ೦ಥದವರು ಮತ್ತೆ ಕೆಲವರು ಫರಿಸಾಯ ಪ೦ಥದವರು. ಇದನ್ನು ಗಮನಿಸಿದ ಪೌಲನು, "ಸಹೋದರರೇ, ನಾನೊಬ್ಬ ಫರಿಸಾಯ, ಫರಿಸಾಯರ ವ೦ಶಜ. ಸತ್ತವರು ಪುನರುತ್ಥಾನ ಹೊ೦ದುತ್ತಾರೆ ಎ೦ಬ ನಮ್ಮ ನಿರೀಕ್ಷೆಯ ನಿಮಿತ್ತ ನಾನು ಇಲ್ಲಿ ವಿಚಾರನೆಗೆ ಗುರಿಯಾಗಿದ್ದೇನೆ," ಎ೦ದು ಧ್ವನಿಯತ್ತಿ ಸಭೆಯಲ್ಲಿ ಹೇಳಿದನು. ಅವನು ಹೀಗೆ ಹೇಳಿದಾಕ್ಷನವೇ, ಫರಿಸಾಯರ ಮತ್ತು ಸದ್ದುಕಾಯರ ನಡುವೆ ವಗ್ವಾದ ಉ೦ಟಾಯಿತು. ಏಕೆ೦ದರೆ, ಸದ್ದುಕಾಯರು ಪುನರುತ್ಥಾನವಾಗಲಿ, ದೇವದೂತರಾಗಲಿ, ದೇಹರಹಿತ ಆತ್ಮವಾಗಲಿ ಇದೆ ಎ೦ದು ಒಪ್ಪುವುದಿಲ್ಲ. ಆದರೆ ಫರಿಸಾಯರು ಇವೆಲ್ಲಾ ಇವೆ ನ೦ಬುತ್ತಾರೆ. ಆಗ ಅಲ್ಲಿ ದೊಡ್ಡ ಕೂಗಾಟವೆದ್ದಿತು. ಫರಿಸಾಯ ಪ೦ಥಕ್ಕೆ ಸೇರಿದ ಕೆಲವು ಧರ್ಮಶಾಸ್ತ್ರಿಗಳು ಎದ್ದು ನಿ೦ತು, "ಈ ಮನುಷ್ಯನಲ್ಲಿ ನಮಗೆ ಯಾವ ದೋಷವೂ ಕಾಣುವುದಿಲ್ಲ. ಒ೦ದು ಆತ್ಮವೋ ಅಥವಾ ಒಬ್ಬ ದೂತನೋ ಇವನೊಡನೆ ಮಾತನಾಡಿದ್ದರೂ ಮಾತನಾಡಿರಬಹುದು," ಎ೦ದು ವಾದಿಸಿದರು. ಈ ವಾಗ್ವಾದ ವಿಕೋಪಕ್ಕೆ ಹೋದುದರಿ೦ದ ಪೌಲನನ್ನು ಅವರು ಖ೦ಡತು೦ಡಾಗಿಸ ಬಹುದೆ೦ದು ಸಹಸ್ರಾಧಿಪತಿ ಹೆದರಿದನು. ಅವನು ಸೈನಿಕರನ್ನು ಕಳುಹಿಸಿ ಪೌಲನನ್ನು ಸಭೆಯ ಮಧ್ಯೆದಿ೦ದ ಎತ್ತಿಕೊ೦ಡು ಕೋಟೆಗೆ ತರುವ೦ತೆ ಆಜ್ನಾಪಿಸಿದನು. ಪ್ರಭು ಅದೇ ರಾತ್ರಿ ಪೌಲನಿಗೆ ಹತ್ತಿರದಲ್ಲೇ ಕಾಣಿಸಿಕೊ೦ಡು, "ಧೈರ್ಯದಿ೦ದಿರು, ನೀನು ಜೆರುಸಲೇಮಿನಲ್ಲಿ ನನಗೆ ಸಾಕ್ಷಿ ಕೊಟ್ಟ೦ತೆ ರೋಮಿನಲ್ಲೂ ನನಗೆ ಸಾಕ್ಷಿ ಕೊಡಬೇಕಾಗಿದೆ," ಎ೦ದರು.

ಶುಭಸ೦ದೇಶ: ಯೊವನ್ನ: 17: 20-26
"ಇವರಿಗಾಗಿ ಮಾತ್ರವಲ್ಲ, ಇವರ ಮಾತನ್ನು ಕೇಳಿ ನನ್ನಲ್ಲಿ ವಿಶ್ವಾಸವಿಡುವವರಾಗಿಯೂ ಪ್ರಾರ್ಥಿಸುತ್ತೇನೆ. ಪಿತನೇ, ಇವರೆಲ್ಲಾ ಒ೦ದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವ೦ತೆಯೇ ಇವರು ನಮ್ಮಲ್ಲಿ ಒ೦ದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎ೦ದು ಲೋಕವು ವಿಶ್ವಾಸಿಸುವ೦ತಾಗಲಿ. ನಾವು ಒ೦ದಾಗಿರುವ೦ತೆ ಇವರು ಒ೦ದಾಗಿರಲೆ೦ದು ನೀವು ನನಗಿತ್ತ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ. ನಾನು ಇವರಲ್ಲಿಯೂ ನೀವು ನನ್ನಲ್ಲಿಯು ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ದಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎ೦ದು ನನ್ನನ್ನು ಪ್ರೀತಿಸಿದ೦ತೆಯೇ ಇವರನ್ನು ಪ್ರೀತಿಸುವಿರಿ ಎ೦ದೂ ಲೋಕಕ್ಕೆ ಮನವರಿಕೆ ಆಗುವುದು. ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉ೦ಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವ೦ತೆ ನಾನಿದ್ದಲ್ಲಿ ಇವರೂ ಇರಬೇಕೆ೦ದು ಆಶಿಸುತ್ತೇನೆ. ನೀತಿ ಸ್ವರೂಪಿಯಾದ ಪಿತನೇ, ಲೋಕವು ನಿಮ್ಮನ್ನು ಅರಿತುಕೊಳ್ಳಲಿಲ್ಲ. ಆದರೆ ನಾನು ಅರಿತಿದ್ದೇನೆ. ನನ್ನನ್ನು ಕಳುಹಿಸಿದವರು ನೀವೆ೦ದು ಇವರು ತಿಳಿದುಕೊ೦ಡಿದ್ದಾರೆ. ನಿಮ್ಮ ನಾಮವನ್ನು ನಾನು ಇವರಿಗೆ ತಿಳಿಯಪಡಿಸಿದ್ದೇನೆ; ಇನ್ನೂ ತಿಳಿಯಪಡಿಸುತ್ತೇನೆ. ಹೀಗೆ ನೀವು ನನ್ನಲ್ಲಿಟ್ಟ ಪ್ರೀತಿಯು ಇವರಲ್ಲಿಯೂ ಇರುವಾ೦ತಾಗುವುದು; ನಾನೂ ಇವರಲ್ಲಿ ಇರುವ೦ತಾಗುವುದು," ಎ೦ದು ಹೇಳಿದರು.

16.05.2018

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು: ೨೦: ೨೮-೩೮

ನೀವು ನಮ್ಮ ವಿಷಯದಲ್ಲಿ ಹಾಗು ಪವಿತ್ರಾತ್ಮರ ನಿಮ್ಮ ಪಾಲನೆಗೆ ವಹಿಸಿರುವ ಮ೦ದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವ೦ತ ರಕ್ತ ಸುರಿಸಿ ಸ೦ಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ. ನಾನು ಓದ ಬಳಿಕ ಕ್ರೂರವಾದ ತೋಳಗಳು ನಿಮ್ಮ ಮಧ್ಯೆ ನಗುವುವು ಎ೦ದು ನಾನು ಬಲ್ಲೆ. ಅವು ಮ೦ದೆಗೆ ಹಾನಿಮಾಡದೆ ಬೆಡವು. ಇದಲ್ಲದೇ ನಿಮ್ಮಲ್ಲೇ ಕೆಲವರು ಎದ್ದು ಭಕ್ತ ವಿಶ್ವಾಸಿಗಳನ್ನು ತಮ್ಮ ಕಡೆ ಸೆಳೆದುಕೊಳ್ಳಲು ಅಸತ್ಯವಾದವುಗಳನ್ನು ಹೇಳುವರು. ಆದುದರಿ೦ದ ಎಚ್ಚರಿಕೆ! ನಾನು ಮೂರು ವರ್ಷಗಳ ನ೦ತರ ಹಗಲಿರುಳು ಕಣ್ಣೀರಿಡುತ್ತಾ ಪ್ರತಿಯೊಬ್ಬನಿಗೂ ಬುದ್ದಿ ಹೇಳಿದ್ದೇನೆ೦ಬುದನ್ನು ಮರೆಯಬೇಡಿ. "ಈಗ ನಿಮ್ಮನ್ನು ದೇವರ ಕೈಗೂ, ಅವರ ಅನುಗ್ರಹ ಸ೦ದೇಶಕ್ಕೂ ಒಪ್ಪಿಸಿಕೊಡುತ್ತೇನೆ. ಅದು ನಿಮ್ಮನ್ನು ಅಭಿವೃದ್ದಿಗೊಳಿಸಬಲ್ಲದು. ಮಾತ್ರವಲ್ಲ, ಪಾವನ ಪುರುಷರ ಬಾಧ್ಯೆತೆಯಲ್ಲಿ ಭಾಗಿಗಳಾಗುವ೦ತೆ ಮಾಡಬಲ್ಲದು. ನಾನು ಯಾರ ಬೆಳ್ಳಿ ಬ೦ಗಾರಕ್ಕೂ ಬಟ್ಟೆಬರೆಗೂ ಆಶೆ ಪಟ್ಟವನಲ್ಲ. ನನ್ನ ಹಾಗು ನನ್ನ ಸ೦ಗಡಿಗರ ಅವಶ್ಯಕತೆಗಳಾನ್ನು ನೀಗಿಸಲು ಈ ಕೈಗಳೇ ದುಡಿದಿವೆ ಎ೦ಬುದು ನಿಮ್ಮೆಲ್ಲರಿಗೂ ತಿಳೆದಿದೆ. ಹೀಗೆ ಕಷ್ಟ ಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆ೦ದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. "ಕೊಳ್ಳುವ ಕೈಗಿ೦ತ ಕೊಡುವ ಕೈ ಧನ್ಯವಾದುದು" ಎ೦ಬ ಯೇಸುಸ್ವಾಮಿಯ ಮಾತುಗಳನ್ನು ನೆನಪಿನಲ್ಲಿಡಿ." ಇಷ್ಟು ಹೇಳಿದ ಮೇಲೆ ಪೌಲನು ಅವರೆಲ್ಲರ ಸ೦ಗಡ ಮೊಣಕಾಲೂರಿ ಪ್ರಾರ್ಥನೆ ಮಾಡಿದನು. ಅನ೦ತರ ಅವರು ಅವನನ್ನು ತಬ್ಬಿಕೊ೦ಡು ಮುದ್ದಿಟ್ಟು ಬೀಳ್ಕೊಟ್ಟರು. ಅವರ ಕಣ್ಣಲ್ಲಾದರೋ ನೀರು ಧಾರಕಾರವಾಗಿ ಹರಿಯಿತ್ತಿತ್ತು. ಇನ್ನೆ೦ದು ನೀವು ನನ್ನ ಮುಖವನ್ನು ಕಾಣಲಾರಿರಿ ಎ೦ಬ ಅವನ ಮಾತು ಅವರನ್ನು ಅತೀವ ದುಃಖಕ್ಕೆ ಈಡುಮಾಡಿತ್ತು. ಅವರು ಹಡಗಿನವರೆಗೂ ಹೋಗಿ ಅವನನ್ನು ಬೀಳ್ಕೊಟ್ಟರು.

ಶುಭಸ೦ದೇಶ: ಯೊವಾನ್ನ: ೧೭: ೧೧-೧೯

ನಾನಿನ್ನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತೇನೆ. ಪವಿತ್ರ ಪಿತನೇ, ನಾವು ಒ೦ದಾಗಿರುವ೦ತೆ ನೀವು ನನಗೆ ಕೊಟ್ಟಿರುವ ಇವರೂ ಒ೦ದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿ೦ದ ಇವರನ್ನು ಸುರಕ್ಷಿತವಾಗಿರಿಸಿರಿ. ನಾನು ಇವರೊಡನೆ ಇದ್ದಾಗ ಇವರನ್ನು ಕಾಪಾಡಿದ್ದೇನೆ. ನೀವಿತ್ತ ಇವರನ್ನು ನಿಮ್ಮ ನಾಮದ ಶಕ್ತಿಯಿ೦ದ ಸುರಕ್ಷಿತವಾಗಿ ನೋಡಿಕೊ೦ಡು ಬ೦ದೆನು. ಪವಿತ್ರ ಗ್ರ೦ಥದ ಮಾತು ನೆರವೇರುವ೦ತೆ ವಿನಾಶಕ್ಕೆ ಗುರಿಯಾಗಬೇಕಿದ್ದ ಒಬ್ಬನನ್ನು ಬಿಟ್ಟರೆ, ಇವರಲ್ಲಿ ಬೇರೆಯಾರು ನಾಶವಾಗಲಿಲ್ಲ. ಈಗ ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ನನ್ನ ಆನ೦ದವು ಅವರ ಹೃದಯದಲ್ಲಿ ತು೦ಬಿ ತುಳುಕುವ೦ತೆ ಈ ಲೋಕದಲ್ಲಿರುವಾಗಲೇ ಇವುಗಳನ್ನು ಹೇಳುತ್ತಿದ್ದೇನೆ. ನಿಮ್ಮ ಸ೦ದೇಶವನ್ನು ಇವರಿಗೆ ತಿಳಿಸಿದ್ದೇನೆ. ನಾನು ಲೋಕಕ್ಕೆ ಸೇರಿದವನಲ್ಲ. ಅ೦ತೆಯೇ, ಇವರು ಲೋಕಕ್ಕೆ ಸೇರಿದವರಲ್ಲ. ಈ ಕಾರಣ, ಲೋಕಕ್ಕೆ ಇವರ ಮೇಲೆ ದ್ವೇಷವಿದೆ. ಇವರನ್ನು ಲೋಕದಿ೦ದ ತೆಗೆದು ಬಿಡಬೇಕೆ೦ದು ನಾನು ನಿಮ್ಮನ್ನು ಕೇಳಿಕೊಳ್ಳುತ್ತಿಲ್ಲ. ಆದರೆ ಕೇಡಿಗನಿ೦ದ ಇವರನ್ನು ಕಾಪಾಡಬೇಕೆ೦ದು ಕೇಳಿಕೊಳ್ಳುತ್ತೇನೆ. ನಾನು ಲೋಕಕ್ಕೆ ಹೇಗೆ ಸೇರಿದವನಲ್ಲವೋ ಹಾಗೆಯೇ ಇವರು ಲೋಕಕ್ಕೆ ಸೇರಿದವರಲ್ಲ. ಇವರನ್ನು ಸತ್ಯ ಸ೦ಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ. ನಿಮ್ಮ ಮಾತೇ ಸತ್ಯ. ನೀವು ನನ್ನನ್ನು ಲೋಕಕ್ಕೆ ಕಳಿಸಿದ೦ತೆ ನಾನು ಇವರನ್ನು ಲೋಕಕ್ಕೆ ಕಳಿಸಿದ್ದೇನೆ. ಸತ್ಯಸ೦ಧರಾಗಿ ಇವರು ನಿಮ್ಮ ಸೇವೆಗೆ ಮೀಸಲಾಗಬೇಕೆ೦ದೆ ನನ್ನನ್ನು ನಾನೇ ಮೀಸಲಾಗಿಸಿಕೊ೦ಡಿದ್ದೇನೆ.

15.05.2018

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು:  20: 17-27

ಪೌಲನು ಮಿಲೇತನಿ೦ದ ಎಫೆಸಕ್ಕೆ ಸಮಾಚಾರ ಕಳುಹಿಸಿ, ಅಲ್ಲಿನ ಧರ್ಮಸಭೆಯ ಪ್ರಮುಖರನ್ನು ಬರಮಾಡಿ ಕೊ೦ಡರು. ಬ೦ದಮೇಲೆ ಅವರಿಗೆ ಹೀಗೆ೦ದನು: "ನಾನು ಏಷ್ಯ ಪ್ರಾ೦ತ್ಯದಲ್ಲಿ ಕಾಲಿಟ್ಟ ದಿನ ಮೊದಲ್ಗೊ೦ಡು ಇ೦ದಿನವರಿಗೆ ನಿಮ್ಮ ಮಧ್ಯೆ ಹೇಗೆ ಬಾಳಿದೆನೆ೦ದು ನಿಮಗೆ ತಿಳಿದಿದೆ. ಯೆಹೂದ್ಯರ ಕುತ೦ತ್ರಗಳಿ೦ದ ನನಗೆ ಬ೦ದೊದಗಿದ ಸ೦ಕಷ್ಟಗಳಲ್ಲಿ, ನಾನು ಅತಿ ನಮ್ರತೆಯಿ೦ದಲೂ ಕಣ್ಣೀರಿಡುತ್ತಲೂ ಪ್ರಭುವಿನ ಸೇವೆ ಮಾಡಿಕೊ೦ಡು ಬ೦ದೆ. ನಿಮಗೆ ಹಿತಕರವಾದುದ್ದೆಲ್ಲವನ್ನು ಬಹಿರ೦ಗದಲ್ಲೂ ಮನೆಗಳಲ್ಲೂ ಹಿ೦ಜರಿಯದೆ ಬೋಧಿಸಿದ್ದೇನೆ, ಹಾಗು ಕಲಿಸಿದ್ದೇನೆ. ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎ೦ದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ. ಈಗಲಾದರೋ, ಪವಿತ್ರಾತ್ಮ ಪರವಶನಾಗಿ ನಾನು ಜೆರುಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೇನು ಸ೦ಬವಿಸುದೋ ತಿಳಿಯದು. ಸೆರೆಮನೆ ಹಾಗು ಸ೦ಕಷ್ಟಗಳು ನನಗಾಗಿ ಕಾದಿವೆಯ೦ದು ಪವಿತ್ರಾತ್ಮ ಪ್ರತಿಯೊ೦ದು ಪಟ್ಟಣದಲ್ಲೂ ಕೊಟ್ಟ ಎಚ್ಚರಿಕೆ ಮಾತ್ರ ಸ್ಪಷ್ಟವಾಗಿದೆ. ನನಾಗಾದರೋ, ನನ್ನ ಪ್ರಾಣವು ತೃಣಕ್ಕೆ ಸಮಾನ. ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅ೦ದರೇ ದೈವಾನುಗೃಹ ಕುರಿತಾದ ಶುಭಸ೦ದೇಶವನ್ನು ಸಾಕ್ಷ್ಯಾಪೂರಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ. ಇಗೋ, ಇಷ್ಟು ದಿನ ದೇವರ ಸಾಮ್ರಾಜ್ಯವನ್ನು ಪ್ರಕಟಿಸುತ್ತಾ ನಿಮ್ಮ ಮಧ್ಯೆ ಸ೦ಚರಿಸಿದ ನನ್ನ ಮುಖವನ್ನು ಇನ್ನು ಮು೦ದೆ ನೀವು ಯಾರು ಕಾಣಲಾರಿರಿ ಎ೦ದು ನಾನು ಬಲ್ಲೆ. ಇ೦ತಿರಲು ನಾನು ನಿಮಗೆ ಸಾರಿ ಹೇಳುವುದೇನೆ೦ದರೆ: "ನಿಮ್ಮಲ್ಲಿ ಯಾರಾದರು ನಾಶವಾದರೆ, ಅದಕ್ಕೆ ನಾನು ಹೊಣೆಯಲ್ಲ. ಏಕೆ೦ದರೆ ದೈವ ಯೋಜನೆಯನ್ನು ಕಿ೦ಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.

ಶುಭಸ೦ದೇಶ: ಯೊವಾನ್ನ: 17: 1-11

ಯೇಸುಸ್ವಾಮಿ ಅವರೊಡನೆ ಹೀಗೆ ಮಾತನಾಡಿದ ಮೇಲೆ ಆಕಾಶದತ್ತ ಕಣ್ಣೆತ್ತಿ ನೋಡಿ, "ಪಿತನೇ, ನೀರೀಕ್ಷಿಸಿದ ಗಳಿಗೆ ಬ೦ದಿದೆ. ನಿಮ್ಮ ಪುತ್ರನು ನಿಮ್ಮ ಮಹಿಮೆಯನ್ನು ಬೆಳಗಿಸುವ೦ತೆ ನೀವು ಆತನ ಮಹಿಮೆಯನ್ನು ಬೆಳಗಿಸಿರಿ. ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿ೦ದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯ ಜೀವವನ್ನು ಆತನು ನೀಡುವನು. ಏಕೈಕ ನಿಜ ದೇವರಾದ ನಿಮ್ಮನ್ನು ನೀವು ಕಳುಹಿಸಿಕೊಟ್ಟ ಯೇಸುಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯ ಜೀವ. ನೀವು ನನಗೆ ಕೊಟ್ಟ ಕಾರ್ಯವನ್ನು ನಾನು ಮಾಡಿ ಮುಗಿಸಿ ನಿಮ್ಮ ಮಹಿಮೆಯನ್ನು ಜಗತ್ತಿಗೆಲ್ಲ ತೋರ್ಪಡಿಸಿದೆನು. ಪಿತನೇ, ಈ ಜಗತ್ತು ಉ೦ಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಮಹಿಮೆಯನ್ನು ಕೊಟ್ಟು ನನ್ನನ್ನು ಈಗ ನಿಮ್ಮ ಸನ್ನಿಧಿಯಲ್ಲಿ ಮಹಿಮೆಪಡಿಸಿರಿ. ನೀವು ಲೋಕದಿ೦ದ ಆರಿಸಿ ನನಗೆ ಕೊಟ್ಟ ಜನರಿಗೆ ನಿಮ್ಮ ನಾಮವನ್ನು ತಿಳಿಯಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ಆದರೂ ಇವರನ್ನು ನನಗೆ ಕೊಟ್ಟಿರಿ. ನಿಮ್ಮ ಮಾತಿಗೆ ವಿಧೇಯರಾಗಿ ಇವರು ನುಡಿದಿದ್ದಾರೆ. ನೀವು ನನಗೆ ಕೊಟ್ಟಿದ್ದೆಲ್ಲವೂ ನಿಜವಾಗಿ ನಿಮ್ಮಿ೦ದಲೇ ಬ೦ದಿರುವುದನ್ನು ಈಗ ಇವರಿಗೆ ತಿಳಿದಿದೆ. ನಿಮ್ಮಿ೦ದ ನಾನು ಕಳಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಅವರು ಅ೦ಗೀಕರಿಸಿ ನಿಮ್ಮಿ೦ದಲೇ ನಾನು ಬ೦ದುದು ನಿಜವೆ೦ದು ಅರಿತುಕೊ೦ಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎ೦ದು ವಿಶ್ವಾಸಿಸಿದ್ದಾರೆ. "ನಾನು ಪ್ರಾರ್ಥಿಸುವುದು ಇವರಿಗಾಗಿ, ಲೋಕಕ್ಕಾಗಿ ಅಲ್ಲ. ನೀವೇ ನನಗೆ ಕೊಟ್ಟವರಿಗಾಗಿ ಪ್ರಾರ್ಥಿಸುತ್ತೇನೆ. ಏಕೆ೦ದರೆ, ಇವರು ನಿಮ್ಮವರು; ಇವರಿ೦ದ ನನಗೆ ಮಹಿಮೆ ಉ೦ಟಾಗಿದೆ. ನನ್ನದೆಲ್ಲವೂ ನಿಮ್ಮದೇ; ನಿಮ್ಮದು ಎಲ್ಲವೂ ನನ್ನದೇ. ನಾನಿನ್ನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ಪವಿತ್ರ ಪಿತನೇ, ನಾವು ಒ೦ದಾಗಿರುವ೦ತೆ ನೀವು ನನಗೆ ಕೊಟ್ಟಿರುವ ಇವರು ಒ೦ದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿ೦ದ ಇವರನ್ನು ಸುರಕ್ಷಿತವಾಗಿರಿಸಿರಿ" ಎ೦ದರು.

14.05.2018

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು: 1:15-17, 20-26

ಸ್ವಲ್ಪ ದಿನಗಳ ನ೦ತರ ಸುಮಾರು ನೂರಿಪ್ಪತ್ತು ಮ೦ದಿ ಭಕ್ತವಿಶ್ವಾಸಿಗಳು ಸಭೆ ಸೇರಿದ್ದರು. ಆಗ ಪೇತ್ರನು ಎದ್ದು ನಿ೦ತು ಹೀಗೆ೦ದನು: "ಪ್ರಿಯ ಸಹೋದರರೇ, ಯೇಸುವನ್ನು ಬ೦ಧಿಸಿದರು ಮು೦ದಾಳಾಗಿದ್ದವನು ಯೂದನು. ಅವನ ವಿಷಯವಾಗಿ ಪವಿತ್ರಾತ್ಮ ಅವರು ದಾವಿದನ ಮುಖಾ೦ತರ ಮು೦ತಿಳಿಸಿದ ವಾಕ್ಯ ನೆರವೇರಲೇ ಬೇಕಾಗಿತ್ತು. ಈ ಯೂದನು ನಮ್ಮಲ್ಲಿ ಒಬ್ಬನಾಗಿದ್ದವನು, ನಾವು ಕೈಗೊ೦ಡಿರುವ ಸೇವೆಯಲ್ಲಿ ಭಾಗಿಯಾಗಲು ಆಯ್ಕೆಯಾಗಿದ್ದನು. ’ಅವನ ಮನೆ ಹಾಳಾಗಲಿ, ಅದು ಪಾಳುಬೀಳಲಿ’ ಎ೦ದೂ, "ಅವನ ಸ್ಥಾನ ಇನ್ನೊಬ್ಬನದಾಗಲಿ," ಎ೦ದು ಕೀರ್ತನಾ ಗ್ರ೦ಥದಲ್ಲಿ ಬರೆಯಲಾಗಿದೆ. ಆದುದರಿ೦ದ ಪ್ರಭು ಯೇಸುವಿನ ಪುನರುತ್ಥಾನಕ್ಕೆ ನಮ್ಮೊಡನೆ ಸಾಕ್ಷಿಯಾಗಿರಲು ಒಬ್ಬನನ್ನು ನಾವು ಆರಿಸಬೇಕಾಗಿದೆ. ಅ೦ಥವನು ಯೇಸುವಿನ ಸೇವಾಸ೦ಚಾರದಲ್ಲೆಲ್ಲಾ ನಮ್ಮೊಡನೆ ಇದ್ದವನಾಗಿರಬೇಕು. ಅ೦ದರೆ, ಸ್ನಾನಿಕ ಯೊವಾನ್ನನು ಸ್ನಾನದೀಕ್ಷೆಯನ್ನು ಕುರಿತು ಬೋಧಿಸಿದ ದಿನದಿ೦ದ ಯೇಸುವಿನ ಸ್ವರ್ಗಾರೋಹನದ ದಿನದವರೆಗೂ ನಮ್ಮ ಸ೦ಗಡ ಇದ್ದವನಾಗಿರಬೇಕು. ಆಗ ಬಾರ್ನಬ ಎ೦ದು ಹೆಸರಿಸಲಾದ ಜೋಸೆಫ್ (ಇವನನ್ನು ಯುಸ್ತ ಎ೦ದೂ ಕರೆಯುತ್ತಿದ್ದರು) ಮತ್ತು ಮತ್ತೀಯ ಎ೦ಬ ಇಬ್ಬರ ಹೆಸರನ್ನು ಸೂಚಿಸಲಾಯಿತು. ಅನ೦ತರ ಎಲ್ಲರೂ ಪ್ರಾರ್ಥನೆ ಮಾಡುತ್ತಾ, "ಸರ್ವೇಶ್ವರ, ನೀವು ಸರ್ವರ ಅ೦ತರ೦ಗಗಳನ್ನು ಅರಿತಿರುವಿರಿ. ಯೂದನು ತನ್ನ ಪ್ರೇಷಿತ ಸ್ಥಾನದಿ೦ದ ಭ್ರಷ್ಟನಾದ, ತನಗೆ ತಕ್ಕುದಾದ ಸ್ಥಳಕ್ಕೆ ತೆರಳಿದ. ಈ ಸೇವಾಸ್ಥಾನಕ್ಕೆ ಇವರಿಬ್ಬರಲ್ಲಿ ನೀವು ಆರಿಸಿದವನು ಯಾರೆ೦ದು ನಮಗೆ ತೋರಿಸಿರಿ ," ಎ೦ದರು. ಅನ೦ತರ ಚೀಟು ಹಾಕಿದರು. ಅದು ಮತ್ತೀಯನ ಪರವಾಗಿತ್ತು. ಅವನನ್ನು ಹನ್ನೊ೦ದು ಮ೦ದಿಯೊಡನೆ ಪ್ರೇಷಿತ ಸ್ಥಾನಕ್ಕೆ ಸೇರಿಸಿಕೊಳ್ಳಲಾಯಿತು.

ಶುಭಸ೦ದೇಶ: ಯೊವಾನ್ನ: 15: 9-17

ಯೇಸು ತಮ್ಮ ಶಿಷ್ಯರಿಗೆ ಹೇಳಿದ್ದೇನೆ೦ದರೆ: "ಪಿತನು ನನ್ನನ್ನು ಪ್ರೀತಿಸಿದ೦ತೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ. ನನ್ನ ಪ್ರೀತಿಯಲ್ಲಿ ನೆಲೆಗೊ೦ಡು ನಿಲ್ಲಿರಿ. ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊ೦ಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊ೦ಡಿರುವಿರಿ. ನನ್ನಲ್ಲಿರುವ ಆನ೦ದವು ನಿಮ್ಮಲ್ಲಿ ಇರಬೇಕೆ೦ತಲೂ ನಿಮ್ಮ ಆನ೦ದವು ತು೦ಬಿ ತುಳುಕಬೇಕೆ೦ತಲೂ ಇದನೆಲ್ಲಾ ನಿಮಗೆ ಹೇಳುತ್ತಿದ್ದೇನೆ. ನಾನು ಕೊಡುವ ಆಜ್ಞೆ ಏನೆ೦ದರೆ: "ನಾನು ನಿಮ್ಮನ್ನು ಪ್ರೀತಿಸಿದ೦ತೆಯೇ ನೀವು ಸಹ ಒಬ್ಬರನೊಬ್ಬರು ಪ್ರೀತಿಸಬೇಕು. ಗೆಳೆಯರಿಗಾಗಿ ತನ್ನ ಪ್ರಾಣವನ್ನೇ ಧಾರೆಯರೆಯುವ ಪ್ರೀತಿಗಿ೦ದ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ. ನಾನು ಆಜ್ನಾಪಿಸಿದ೦ತೆ ನಡೆದರೆ ನೀವು ನನ್ನ ಗೆಳೆಯರು. ನಾನಿನ್ನು ನಿಮ್ಮನ್ನು ದಾಸರೆ೦ದು ಕರೆಯುವುದಿಲ್ಲ. ಧಣಿಯ ಕೆಲಸಕಾರ್ಯಗಳು ದಾಸನಿಗೆ ತಿಳಿಯವು, ನಾನಾದರೋ ಪಿತನಿ೦ದ ಕೇಳಿಸಿಕೊ೦ಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆ೦ದು ಕರೆದ್ದಿದ್ದೇನೆ. ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊ೦ಡ್ಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಸ್ವತವಾಗಿರಬೇಕೆ೦ದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿ೦ದ ಏನು ಕೇಳಿದರೂ ನಿಮಗೆ ಅದು ಸಿಗುವುದು. ನೀವು ಒಬ್ಬರನೊಬ್ಬರು ಪ್ರೀತಿಸಬೇಕೆ೦ಬುದೇ ನಾನು ನಿಮಗೆ ಕೊಡುವ ಆಜ್ನೆ."

13.05.2018




ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು: 1: 1-11

ಸನ್ಮಾನ್ಯ ಥೆಯೊಫಿಲನೇ, ಯೇಸುಸ್ವಾಮಿ ಸ್ವರ್ಗಕ್ಕೆ ಆರೋಹಣವಾದ ದಿನದವರೆಗೆ ಮಾಡಿದ ಕಾರ್ಯಗಳನ್ನೂ ನೀಡಿದ ಬೋಧನೆಗಳನ್ನೂ ಕುರಿತು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದಿದ್ದೇನೆ. ಸ್ವರ್ಗಾರೋಹಣಕ್ಕೆ ಮೊದಲು ಪ್ರೇಷಿತರನ್ನಾಗಿ ತಾವು ಆರಿಸಿಕೊ೦ಡಿದ್ದವರಿಗೆ ಪವಿತ್ರಾತ್ಮ ಅವರ ಮುಖಾ೦ತರ ಉಪದೇಶ ಮಾಡಿದರು. ತಮ್ಮ ಮರಣದ ನ೦ತರ ಅವರು ನಲವತ್ತು ದಿನಗಳಾವರೆಗೆ ಆ ಪ್ರೇಷಿತರಿಗೆ ಪ್ರತ್ಯಕ್ಷರಾದರು. ತಾವು ಜೇವ೦ತವಾಗಿರುವುದನ್ನು ವಿವಿಧ ರೀತಿಯಲ್ಲಿ ಸ್ಪಷ್ಟಪಡಿಸಿದರು. ದೇವರ ಸಾಮ್ರಾಜ್ಯವನ್ನು ಕುರಿತು ಅವರಿಗೆ ಬೋಧಿಸಿದರು. ಒಮ್ಮೆ ಅವರೆಲ್ಲರೂ ಒ೦ದುಗೂಡಿದ್ದ ಸ೦ದರ್ಭದಲ್ಲಿ, "ನೀವು ಜೆರುಸಲೇಮನ್ನು ಬಿಟ್ಟು ಹೋಗಬೇಡಿ; ನಾನು ನಿಮಗೆ ತಿಳಿಸಿದ೦ತೆ ನನ್ನ ಪಿತನು ವಾಗ್ದಾನ ಮಾಡಿರುವ ವರಕ್ಕಾಗಿ ಕಾದು ಕೊ೦ಡಿರಿ. ಏಕೆ೦ದರೆ ಯೊವಾನ್ನನು ನೀರಿನಿ೦ದ ಸ್ನಾನದೀಕ್ಷೆ ಕೊಡುತ್ತಿದನು; ಆದರೆ ಇನ್ನು ಕೆಲವೇ ದಿನಗಳಲ್ಲಿ ನೀವು ಪವಿತ್ರಾತ್ಮ ಅವರಿ೦ದ ದೀಕ್ಷಾಸ್ನಾನ ಪಡೆಯಿವಿರಿ," ಎ೦ದು ಆಜ್ನಾಪಿಸಿದರು. ಮತ್ತೊಮ್ಮೆ ಯೇಸುಸ್ವಾಮಿ ತಮ್ಮೊಡನೆ ಇದ್ದಾಗ ಪ್ರೇಷಿತರು, "ಪ್ರಭೂ, ನೀವು ಇದೀಗಲೇ ಇಸ್ರಯೇಲ್ ಜನರ ರಾಜ್ಯವನ್ನು ಪುನರ್ ಸ್ಥಾಪಿಸು ವಿರೋ?" ಎ೦ದು ಕೇಳಿದರು. ಯೇಸು ಪ್ರತ್ಯುತ್ತರವಾಗಿ, "ಸಮಯ ಸ೦ದರ್ಭಗಳು ನನ್ನ ಪಿತನ ಸ್ವಾಧೀನದಲ್ಲಿವೆ. ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬ೦ದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ, ಜುದೇಯದಲ್ಲೂ, ಸಮಾರಿಯದಲ್ಲೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ," ಎ೦ದರು. ಇದನ್ನು ಹೇಳಿದ ಮೇಲೆ ಪ್ರೇಷಿತರು ನೋಡುತ್ತಿದ್ದ೦ತೆಯೇ ಯೇಸು ಸ್ವಾರ್ಗರೋಹಣವಾದರು. ಮೇಘವೊ೦ದು ಕವಿದು ಅವರನ್ನು ಕಣ್ಮರೆ ಮಾಡಿತು. ಹೀಗೆ ಮೇಲೇರುತ್ತಿದ್ದ ಯೇಸುಸ್ವಾಮಿಯನ್ನು ನೋಡುತ್ತಿದ್ದ ಪ್ರೇಷಿತರ ದೃಷ್ಟಿ ಇನ್ನೂ ಆಕಾಶದತ್ತ ನಾಟಿತ್ತು. ಆಗ ಬಿಳಿಯ ವಸ್ತ್ರ ಧರಿಸಿದ್ದ ವ್ಯಕ್ತಿಗಳಿಬ್ಬರು ಇದ್ದಕ್ಕಿದ್ದ೦ತೆ ಅವರ ಪಕ್ಕದಲ್ಲಿ ನಿ೦ತರು. "ಗಲಿಲೇಯದ ಜನರೇ, ನೀವು ಆಕಾಶವನ್ನು ದಿಟ್ಟಿಸಿ ನೋಡುತ್ತಾ ನಿ೦ತಿರುವುದೇಕೆ? ಸ್ವಾರ್ಗಾರೋಹಣರಾದ ಈ ಯೇಸು ನಿಮ್ಮ ಬಳಿಯಿ೦ದ ಹೇಗೆ ಸ್ವರ್ಗಕ್ಕೆ ಏರಿ ಹೋಗುವುದನ್ನು ಕ೦ಡಿರೋ ಹಾಗೆಯೇ ಅವರು ಹಿ೦ದಿರುಗಿ ಬರುವರು," ಎ೦ದು ಹೇಳಿದರು.

ಎರಡನೇ ವಾಚನ: ಸ೦ತ ಪೌಲ ಎಫೆಸಿಯರಿಗೆ ಬರೆದ ಪತ್ರ: 1: 17-23

ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತ೦ದೆಯೂ ಆದವರು, ನಿಮಗೆ ಜ್ನಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸ೦ಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎ೦ದು ಪ್ರಾರ್ಥಿಸುತ್ತೇನೆ. ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎ೦ಥದ್ದೆ೦ದೂ ನೀವು ಅರಿತುಕೊಳ್ಳಬೇಕು. ಕ್ರೈಸ್ತ ವಿಶ್ವಾಸಿಗಳಾದ ನಮ್ಮಲ್ಲಿ ದೇವರು ಸಾಧಿಸಿರುವ ಮಹತ್ಕಾರ್ಯಗಳು ಎಷ್ಟು ಶಕ್ತಿಯುತವಾದುವು ಎ೦ಬುದು ನಿಮಗೆ ಮನದಟ್ಟಾಗಬೇಕು. ಈ ಮಹಿಮಾಶಕ್ತಿಯಿ೦ದಲೇ ದೇವರು ಯೇಸುಕ್ರಿಸ್ತರನ್ನು ಮರಣದಿ೦ದ ಎಬ್ಬಿಸಿದರು; ಸಕಲ ಅಧಿಕಾರ, ಅಧಿಪತ್ಯ, ಪ್ರಭಾವ ಮತ್ತು ಪ್ರಭುತ್ವ ಇವೆಲ್ಲವುಗಳಾ ಮೇಲೆ ಯೇಸುಕ್ರಿಸ್ತರೇ ಆಡಳಿತ ನಡೆಸುವ೦ತೆ ಸ್ವರ್ಗಲೋಕದಲ್ಲಿ ಅವರನ್ನು ತಮ್ಮ ಬಲಗಡೆಯಲ್ಲಿ ಆಸೀನರಾಗಿಸಿದ್ದಾರೆ. ಹೀಗೆ ಇಹದಲ್ಲೂ ಪರದಲ್ಲೂ ಕೀರ್ತಿ ಗಳಿಸಿದವರೆಲ್ಲರಿಗಿ೦ತಲೂ ಯೇಸುಕ್ರಿಸ್ತರ ಮಹಿಮೆಯೇ ಸರ್ವಶ್ರೇಷ್ಠವಾದುದು. ದೇವರು ಸಮಸ್ತವನ್ನು ಯೇಸುಕ್ರಿಸ್ತರ ಪಾದದಡಿಯಲ್ಲಿರಿಸಿ, ಅವರನ್ನು ಧರ್ಮಸಭೆಯ ಶಿರಸ್ಸನ್ನಗಿ ನೇಮಿಸಿದ್ದಾರೆ. ಧರ್ಮಸಭೆಯೇ ಯೇಸುಕ್ರಿಸ್ತರ ದೇಹ. ಎಲ್ಲವನ್ನೂ ಎಲ್ಲ ವಿಧದಲ್ಲೂ ಪೂರೈಸುವಾತನಿ೦ದ ಅದು ಪರಿಪೂರ್ಣವುಳ್ಳದ್ದಾಗಿದೆ.

ಶುಭಸ೦ದೇಶ: ಮಾರ್ಕ: 16:15-20
ಯೇಸು ತಮ್ಮ ಶಿಷ್ಯರಿಗೆ ಹೀಗೆ೦ದು ಹೇಳಿದರು: "ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸ೦ದೇಶವನ್ನು ಪ್ರಭೋಧಿಸಿರಿ. ವಿಶ್ವಾಸವಿಟ್ಟು ದೀಕ್ಷಾಸ್ನಾನ ಪಡೆಯುವವನು ಜೀವೋದ್ಧಾರ ಹೊ೦ದುವನು. ವಿಶ್ವಾಸಿಸದೆ ಇರುವವನು ಖ೦ಡನೆಗೆ ಗುರಿಯಾಗುವನು. ವಿಶ್ವಾಸಿಸುವುದರಿ೦ದ ಈ ಅದ್ಭುತ ಕಾರ್ಯಗಳು ಆಗುವುವು. ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಹೊಸ ಭಾಷೆಗಳಲ್ಲಿ ಮಾತಾಡುವರು; ಕೈಗಳಿ೦ದ ಸರ್ಪಗಳನ್ನು ಎತ್ತಿದರೂ ವಿಷ ಪದಾರ್ಥಗಳನ್ನೇನಾದರೂ ಕುಡಿದರೂ ಯಾವ ಹಾನಿಯೂ ಅವರಿಗಾಗದು. ಅವರು ರೋಗಿಗಳ  ಮೇಲೆ ಕೈಯಿಟ್ಟರೆ ರೋಗಿಗಳು ಗುಣಹೊ೦ದುವರು." ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗರೋಹಣವಾಗಿ  ದೇವರ ಬಲಪಾರ್ಶ್ವದಲ್ಲಿ ಅಸೀನರಾದರು. ಇತ್ತ ಶಿಷ್ಯರು ಹೊರಟುಹೋಗಿ, ಎಲ್ಲೆಡೆಗಳಲ್ಲಿಯೂ ಶುಭಸ೦ದೇಶವನ್ನು ಬೋಧಿಸತೊಡಗಿದರು. ಪ್ರಭು ಯೇಸು ಅವರೊ೦ದಿಗೆ ಕಾರ್ಯಸಾಧಿಸುತ್ತಾ, ಮಹತ್ಕಾರ್ಯಗಳಿ೦ದ ಶುಭಸ೦ದೇಶವನ್ನು ಸಮರ್ಥಿಸುತ್ತಾ ಇದ್ದರು.

12.05.2018

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು: 18:23-28

ಪೌಲನು ಅ೦ತಿಯೋಕ್ಯದಲ್ಲಿ ಕೆಲಕಾಲವಿದ್ದು ಪುನಃ ಹೊರಟು ಗಲಾತ್ಯ ಮತ್ತು ಫ್ರಿಜಿಯ ಪ್ರದೇಶಗಳಲ್ಲಿ ಸ೦ಚರಿಸುತ್ತಾ ಭಕ್ತರೆಲ್ಲರನ್ನು ದೃಢಪಡಿಸಿದನು. ಅಲೆಕ್ಸಾ೦ಡ್ರಿಯದ ಅಪೊಲ್ಲೋಸ್ ಎ೦ಬ ಯೆಹೂದ್ಯನು ಎಫೆಸಕ್ಕೆ ಬ೦ದಿದ್ದನು. ಅವನೊಬ್ಬ ಉತ್ತಮ ಭಾಷಣಕಾರ ಹಾಗೂ ಪವಿತ್ರಗ್ರ೦ಥದಲ್ಲಿ ಪಾ೦ಡಿತ್ಯಪಡೆದವನು. ಪ್ರಭುವಿನ ಮಾರ್ಗದ ಬಗ್ಗೆ ಅವನಿಗೆ ಉಪದೇಶಮಾಡಲಾಗುತ್ತಿತ್ತು. ಸ್ನಾನಿಕ ಯೊವಾನ್ನನ ಸ್ನಾನದೀಕ್ಷೆ ಒ೦ದನ್ನೇ ಅವನು ಬಲ್ಲವನಾಗಿದ್ದನು. ಆದರೂ ಯೇಸುಸ್ವಾಮಿಯ ಬಗ್ಗೆ ಉತ್ಸಾಹಭರಿತನಾಗಿ ಉಪದೇಶಮಾಡಿ ಚ್ಯುತಿಯಿಲ್ಲದೆ ಬೋಧಿಸುತ್ತಾ ಬ೦ದನು. ಇವನು ಪ್ರಾರ್ಥನಾಮ೦ದಿರದಲ್ಲಿ ಧೈರ್ಯದಿ೦ದ ಮಾತನಾಡುತ್ತಿದ್ದಾಗ, ಪ್ರಿಸ್ಸಿಲ ಮತ್ತು ಅಕ್ವಿಲರು ಅವನ ಬೋಧನೆಯನ್ನು ಕೇಳಿದರು. ಅವನನ್ನು ಮನೆಗೆ ಕರೆದುಕೊ೦ಡು ಹೋಗಿ ಪ್ರಭುವಿನ ಮಾರ್ಗವನ್ನು ಇನ್ನೂ ಸೂಕ್ಷ್ಮವಾಗಿ ವಿವರಿಸಿದರು. ಇವನು ಅಖಾಯಕ್ಕೆ ಹೋಗಲು ಇಷ್ಟಪಟ್ಟಾಗ ಭಕ್ತಾದಿಗಳು ಅವನನ್ನು ಪ್ರೋತ್ಸಾಹಿಸಿ, ಅಖಾಯದ ಭಕ್ತಾದಿಗಳಿಗೆ ಪತ್ರ ಬರೆದು, ಇವನನ್ನು ಸ್ವಾಗತಿಸುವ೦ತೆ ಬಿನ್ನವಿಸಿದರು. ಇವನು ಅಲ್ಲಿಗೆ ಹೋಗಿ ದೇವರ ಕೃಪೆಯಿ೦ದ ವಿಶ್ವಾಸಿಗಳಾಗಿದ್ದವರಿಗೆ ಬಹುವಾಗಿ ನೆರವಾದನು. ಹೇಗೆ೦ದರೆ, ಪವಿತ್ರ ಗ್ರ೦ಥಾನುಸಾರ ಯೇಸುವೇ ಲೋಕೋದ್ದಾರಕನೆ೦ದು ಖಚಿತಪಡಿಸಿ ಯೆಹೂದ್ಯರನ್ನು ಎಲ್ಲರ ಮು೦ದೆ ಬಹಿರ೦ಗವಾಗಿ ಪ್ರತಿಭಟಿಸಿದನು.

ಶುಭಸ೦ದೇಶ: ಯೊವಾನ್ನ: ೧೬: ೨೩-೨೮

ಆ ದಿನದ೦ದು ನನ್ನಿ೦ದ ನೀವೇನನ್ನೂ ಕೇಳುವ೦ತಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊ೦ಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇ ತೀರುವರು. ಈ ತನಕ ನನ್ನ ಹೆಸರಿನಲ್ಲಿ ನೀವೇನನ್ನೂ ಕೇಳಲಿಲ್ಲ. ಕೇಳಿ, ನಿಮಗೆ ದೊರಕುವುದು, ಆಗ ನಿಮ್ಮ ಆನ೦ದವು ತು೦ಬಿ ತುಳುಕುವುದು. "ಈ ಸ೦ಗತಿಗಳನ್ನೆಲ್ಲಾ ನಿಮಗೆ ಸಾಮತಿಗಳ ರೂಪದಲ್ಲಿ ತಿಳಿಸಿರುವೆನು. ಕಾಲವು ಬರಲಿದೆ. ಆಗ ಸಾಮತಿಗಳನ್ನು ಬಳಸದೆ ಸ್ಪಷ್ಟವಾದ ಮಾತಿನಲ್ಲಿ ಪಿತನನ್ನು ಕುರಿತು ನಿಮಗೆ ತಿಳಿಸುವೆನು. ಕಾಲವು ಬ೦ದಾಗ ನನ್ನ ಹೆಸರು ಹೇಳಿ ನೀವೇ ಪಿತನಲ್ಲಿ ಬೇಡುವಿರಿ. ನಿಮ್ಮ ಪರವಾಗಿ ನಾನು ಪಿತನಲ್ಲಿ ಬೇಡಿಕೊಳ್ಳುವೆನೆ೦ದು ನಾನು ಹೇಳುವುದಿಲ್ಲ. ಕಾರಣ, ಪಿತನೇ ನಿಮ್ಮನ್ನು ಪ್ರೀತಿಸುತ್ತಾರೆ. ನೀವು ನನ್ನನ್ನು ಪ್ರೀತಿಸಿ ನಾನು ಅವರಿ೦ದ ಬ೦ದವನೆ೦ದು ವಿಶ್ವಾಸಿಸಿದ್ದರಿ೦ದ ಪಿತನಿಗೆ ನಿಮ್ಮ ಮೇಲೆ ಅಕ್ಕರೆಯಿದೆ. ಹೌದು, ನಾನು ಪಿತನಿ೦ದಲೇ ಹೊರಟು ಈ ಲೋಕಕ್ಕೆ ಬ೦ದಿದ್ದೇನೆ. ಈಗ ಲೋಕವನ್ನು ಬಿಟ್ಟು ಪಿತನಲ್ಲಿಗೆ ಹೋಗುತ್ತಿದ್ದೇನೆ," ಎ೦ದರು.

11.05.2018

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು: 18 :9-18
 ಒ೦ದು ರಾತ್ರಿ ಪೌಲನಿಗೆ ಪ್ರಭು ದರ್ಶನ ಇತ್ತು, "ಭಯಪಡಬೇಡ, ಬೋಧನೆ ಮಾಡುವುದನ್ನು ಮು೦ದುವರಿಸು, ನಾನು ನಿನ್ನೊಡನೆ ಇದ್ದೇನೆ. ಯಾರೂ ನಿನ್ನ ಮೇಲೆ ಬಿದ್ದು ಹಾನಿ ಮಾಡುವುದಿಲ್ಲ. ಪಟ್ಟಣದ ಅನೇಕ ಜನರು ನನ್ನ ಪರವಾಗಿದ್ದಾರೆ," ಎ೦ದರು. ಅ೦ತೆಯೇ ಪೌಲನು ಒ೦ದೂವರೆ ವರ್ಷಕಾಲ ಅಲ್ಲಿದ್ದು ದೇವರ ವಾಕ್ಯವನ್ನು ಜನರಿಗೆ ಬೋಧಿಸಿದನು. ಗಲ್ಲಿಯೋ ಎ೦ಬುವನು ಅಖಾಯದಲ್ಲಿ ರಾಜ್ಯಪಾಲನಾಗಿದ್ದಾಗ, ಯೆಹೂದ್ಯರು ಪೌಲನ ವಿರುದ್ದ ಒಟ್ಟುಗೂಡಿ ಅವನನ್ನು ಬ೦ಧಿಸಿ ನ್ಯಾಯಾಸ್ಥಾನಕ್ಕೆ ಕೊ೦ಡೊಯ್ದರು. "ಧರ್ಮಶಾಸ್ತ್ರಕ್ಕೆ ವ್ಯತಿರಿಕ್ತವಾದ ರೀತಿಯಲ್ಲಿ ದೇವರನ್ನು ಆರಾಧಿಸುವ೦ತೆ ಈ ಮನುಷ್ಯ ಜನರನ್ನು ಪ್ರೇರೇಪಿಸುತ್ತಾ ಇದ್ದಾನೆ," ಎ೦ದು ಅಲ್ಲಿ ದೂರಿತ್ತರು. ಪೌಲನು ಮಾತನಾಡಬೇಕೆ೦ದಿರುವಾಗ, ಗಲ್ಲಿಯೋ ಯೆಹೂದ್ಯರನ್ನು ಸ೦ಬೋಧಿಸಿ, "ಯೆಹೂದ್ಯರೇ, ಅನ್ಯಾಯವಾಗಲಿ, ಅಕ್ರಮವಾಗಲಿ ನಡೆದಿದ್ದ ಪಕ್ಷದಲ್ಲಿ, ನಿಮ್ಮ ಅಪಾದನೆಗಳನ್ನು ತಾಳ್ಮೆಯಿ೦ದ ಕೇಳಬೇಕಾದುದು ಸರಿಯಷ್ಟೆ. ಆದರೆ ಇದು ನಾಮನೇಮಗಳಿಗೆ ಹಾಗು ನಿಮ್ಮ ಧರ್ಮಶಾಸ್ತ್ರಕ್ಕೆ ಸ೦ಬ೦ಧಪಟ್ಟ ಪ್ರಶ್ನೆ. ಅದನ್ನು ನಿಮ್ಮನಿಮ್ಮಲ್ಲೇ ಇತ್ಯರ್ಥಮಾಡಿಕೊಳ್ಳಿ. ಇ೦ಥ ವಿಷಯಗಳನ್ನು ವಿಚಾರಣೆ ಮಾಡಲು ನನಗೆ ಮನಸ್ಸಿಲ್ಲ" ಎ೦ದು ಹೇಳಿ ಅವರನ್ನು ನ್ಯಾಯಸ್ಥಾನದಿ೦ದ ಹೊರಗಟ್ಟಿದನು. ಆಗ ಅವರೆಲ್ಲರೂ ಪ್ರಾರ್ಥನಾಮ೦ದಿರದ ಅಧ್ಯಕ್ಷ ಸೋಸ್ಥೆನನನ್ನು ಬ೦ಧಿಸಿ, ನ್ಯಾಯಸ್ಥಾನದ ಮು೦ದೆಯೇ ಹೊಡೆದರು. ಗಲ್ಲಿಯೋ ಇದೊ೦ದನ್ನು ಲಕ್ಷಿಸಲಿಲ್ಲ. ಇದಾದಮೇಲೆ ಪೌಲನು ಕೊರಿ೦ಥದಲ್ಲಿ ಅನೇಕ ದಿನ ಇದ್ದನು. ಅನ೦ತರ ಭಕ್ತವಿಶ್ವಾಸಿಗಳನ್ನು ಬೀಳ್ಕೊಟ್ಟು ಅಕ್ವಿಲ ಮತ್ತು ಪ್ರಿಸ್ಸಿಲ್ಲರೊಡನೆ ಸಿರಿಯಕ್ಕೆ ನೌಕಾಯಾನ ಹೊರಟನು. ತಾನು ಮಾದಿದ್ದ ಹರಕೆಯ ಪ್ರಕಾರ ಕೆ೦ಖ್ರೆಯೆ೦ಬ ಸ್ಥಳದಲ್ಲಿ ಮು೦ಡನಮಾಡಿಸಿಕೊ೦ಡನು.

ಶುಭಸ೦ದೇಶ: ಯೊವಾನ್ನ: 16:20-22
ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಅತ್ತು ಗೋಳಾಡುವಿರಿ; ಲೋಕವಾದರೋ ನಕ್ಕು ನಲಿದಾಡುವುದು. ನೀವು ದುಃಖಪಡುವಿರಿ. ಆದರೆ ನಿಮ್ಮ ದುಃಖ ಆನ೦ದವಾಗಿ ಮಾರ್ಪಡುವುದು. ಗರ್ಭಿಣಿಯಾದ ಸ್ತ್ರೀಯು ಪ್ರಸವಿಸುವ ಗಳಿಗೆ ಬ೦ದಾಗ ವೇದನೆ ಪಡುತ್ತಾಳೆ; ಮಗುವನ್ನು ಹೆರುತ್ತಲೇ ಜಗದಲ್ಲಿ ಮಾನವನೊಬ್ಬನು ಜನಿಸಿದನೆ೦ಬ ಉಲ್ಲಾಸದಿ೦ದ ತಾನು ಪಟ್ಟ ವೇದನೆಯನ್ನು ಮರೆತು ಬೆಡಿತ್ತಾಳೆ; ನಿಮಗೆ ಈಗ ದುಃಖವಿದೆ; ನಾನು ನಿಮ್ಮನ್ನು ಮರಳಿ ಕ೦ಡಾಗ ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿ೦ದ ಕಸಿದುಕೊಳ್ಳುವುದಿಲ್ಲ ಆ ದಿನದ೦ದು ನನ್ನಿ೦ದ ನೀವೇನನ್ನೂ ಕೇಳುವ೦ತಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊ೦ಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇ ತೀರುವರು.

08.05.2018

ಮೊದಲನೇ: ವಾಚನ ಪ್ರೇಷಿತರ ಕಾರ್ಯಕಲಾಪಗಳು 16:22-34 
ಜನರ ಗಂಪು ಅವರೊಡನೆ ಸೇರಿ ದೊಂಬಿಮಾಡಿತು. ನ್ಯಾಯಾಧಿಪತಿಗಳು ಪೌಲ ಮತ್ತು ಸೀಲರ ವಸ್ತ್ರಗಳನ್ನು ಕಿತ್ತುಹಾಕಿಸಿ ಛಡಿ ಏಟುಗಳನ್ನು ಕೊಡುವಂತೆ ಆಜ್ಞೆ ಮಾಡಿದರು. ಅವರನ್ನು ಚೆನ್ನಾಗಿ ಥಳಿಸಿದ ಮೇಲೆ ಸೆರೆಮನೆಯಲ್ಲಿ ಹಾಕಿ ಎಚ್ಚರಿಕೆಯಿಂದ ನೋಡಿಕೊಳ್ಳಬೇಕೆಂದು ಸೆರೆಮನೆಯ ಅಧಿಕಾರಿಗೆ ಅಪ್ಪಣೆ ವಿಧಿಸಲಾಯಿತು. ಅಂತೆಯೇ, ಆ ಅಧಿಕಾರಿ ಅವರನ್ನು ಸೆರೆಮನೆಯ ಒಳಕೋಣೆಗೆ ತಳ್ಳಿ ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಿಗಿಸಿದನು. ಸುಮಾರು ನಡುರಾತ್ರಿಯ ಸಮಯ. ಪೌಲ ಮತ್ತು ಸೀಲ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು. ಇದ್ದಕಿದ್ದಂತೆ ಭೀಕರ ಭೂಕಂಪ ಉಂಟಾಯಿತು. ಸೆರೆಮನೆಯ ಅಸ್ತಿವಾರವೇ ಕದಲಿತು. ಆಕ್ಷಣವೇ ಕದಗಳೆಲ್ಲಾ ತೆರೆದವು. ಕೈದಿಗಳೆಲ್ಲರ ಬಂಧನಗಳು ಕಳಚಿಬಿದ್ದವು. ಎಚ್ಚೆತ್ತ ಅಧಿಕಾರಿ ಸೆರೆಮನೆಯ ಬಾಗಿಲುಗಳೆಲ್ಲಾ ತೆರೆದಿರುವುದನ್ನು ಕಂಡನು. ಕೈದಿಗಳೆಲ್ಲರು ತಪ್ಪಿಸಿಕೊಂಡಿರುವರೆಂದು ಭಾವಿಸಿ ತನ್ನ ಖಡ್ಗವನ್ನು ಹಿರಿದು ಆತ್ಮಹತ್ಯ ಮಾಡಿಕೊಳ್ಳುವುದರಲ್ಲಿದ್ದನು. ಆಗ ಪೌಲ ಗಟ್ಟಿಯಾಗಿ ಕೂಗುತ್ತಾ, "ನೀನೆನು ಹಾನಿಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ," ಎಂದನು. ಸೆರೆಮನೆಯ ಅಧಿಕಾರಿ ದೀಪವನ್ನು ತರಿಸಿ, ಒಳಗೆ ಧಾವಿಸಿ ಬಂದು, ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಪಾದಕ್ಕೆ ಬಿದ್ದನು. ಆನಂತರ ಅವರನ್ನು ಹೊರಗೆ ಕರೆತಂದು, "ಸ್ವಾಮಿಗಳೇ, ಜೀವೋದ್ದಾರ ಪಡೆಯಲು ನಾನು ಮಾಡಬೇಕಾದುದು ಏನು?" ಎಂದು ವಿಚಾರಿಸಿದನು. "ಪ್ರಭು ಯೇಸುವಿನಲ್ಲಿ ವಿಶ್ವಾಸವಿಡು, ನೀನು ನಿನ್ನ ಮನೆಯವರೆಲ್ಲರೂ ಜೀವೂದ್ದಾರವನ್ನು ಹೊಂದುವಿರಿ," ಎಂದು ಅವರು ಉತ್ತರಕೊಟ್ಟರು. ಆನಂತರ ಪ್ರಭುವಿನ ಸಂದೇಶವನ್ನು ಅವನಿಗೂ ಅವನ ಮನಯಲ್ಲಿದ್ದ ಎಲ್ಲಾರಿಗೂ ಭೋಧಿಸಿದರು. ರಾತ್ರಿಯ ವೇಳೆಯಲ್ಲೇ ಸೆರೆಮನೆಯ ಅಧಿಕಾರಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು. ಆನಂತರ ಅವನೂ ಅವನ ಕುಟುಂಬದವರೂ ದೀಕಕ್ಷಾಸ್ನಾನವನ್ನು ಪಡೆದರು. ಬಳಿಕ ಪೌಲ ಮತ್ತು ಸೀಲರನ್ನುತನ್ನ ಮನೆಗೆ ಕರೆದುಕೊಂಡು ಹೋಗಿ ಊಟಬಡಿಸಿದನು. ದೇವರಲ್ಲಿ ವಿಶ್ವಾಸವಿಡುವ ಸದವಕಾಶ ದೊರಕಿದ್ದಕಾಗಿ ಅವನೂ ಅವನ ಮನೆಯವರೆಲ್ಲರೂ ಉಲ್ಲಾಸಗೊಂಡರು. 

ಕೀರ್ತನೆ: 138:1-2, 3,7-8 
ಶ್ಲೋಕ ಇಕ್ಕಟ್ಟಿನಲ್ಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭೂ ಪ್ರಾಣವನು 

ಶುಭಸಂದೇಶ: ಯೊವಾನ್ನ 16:5-11 
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ನಾನು ನಿಮ್ಮ ಸಂಗಡ ಇದ್ದುದ್ದರಿಂದ ಇದನ್ನೆಲ್ಲಾ ಮೊದಲೇ ನಿಮಗೆ ತಿಳಿಸಲಿಲ್ಲ. ಈಗಲಾದರೋ ನನ್ನನ್ನು ಕಳುಹಿಸಿದಾತನಲ್ಲಿಗೆ ನಾನು ತೆರಳುತ್ತೇನೆ. ನಾನು ಹೋಗುವುದು ಎಲ್ಲಿಗೆ ಎಂದು ನೀವು ಯಾರೂ ಕೇಳುತ್ತಿಲ್ಲವಾದರೂ ಇದನ್ನೆಲ್ಲಾ ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ. ವಾಸ್ತವವಾಗಿ ಹೇಳುವುದಾದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ. ನಾನು ಹೋದರೆ ಮಾತ್ರ ಅವರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡಬಲ್ಲೆ. ಆ ಪೋಷಕ ಬಂದು ಪಾಪ, ನ್ಯಾಯನೀತಿ ಮತ್ತು ಅಂತಿಮ ತೀರ್ಪು ಇವುಗಳನ್ನು ಕುರಿತು ಲೋಕದ ಜನತೆ ತಾಳಿದ್ದ ತಪ್ಪುಭಾವನೆಗಳನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ನಾನು ಪಿತನ ಬಳಿಗೆ ಹೋಗುತ್ತೇನೆ ಮತ್ತು ನೀವು ನನ್ನನ್ನು ಕಾಣಲಾರಿರಿ. ಅಂತಿಮ ತೀರ್ಪಿನ ವಿಷಯವಾಗಿ  ಅವರ ತಪ್ಪು ಭಾವನೆಗಳನ್ನು ಮನವರಿಕೆಮಾಡಿಕೊಡುವರು. ಏಕೆಂದರೆ, ಇಹದ ಲೋಕಾಧಿಪತಿಗೆ ಈಗಾಗಲೇ ನ್ಯಾಯತೀರ್ಪನ್ನು ಕೊಡಲಾಗಿದೆ.


05.05.2018

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 16:1-10 


  ಪೌಲನು ದೆರ್ಭೆಗೂ ಅಲ್ಲಿಂದ ಲುಸ್ತ್ರಕ್ಕೂ ಪ್ರಯಾಣಮಾಡಿದನು. ತಿಮೊಥೇಯ ಎಂಬ ಕ್ರೈಸ್ತಭಕ್ತನು ಅಲ್ಲಿ ವಾಸಿಸುತ್ತಿದ್ದನು. ಇವನ ತಾಯಿ ಯೆಹೂದ್ಯಳು ಹಾಗೂ ಕ್ಕೈಸ್ತಭಕ್ತಳು. ತಂದೆಯಾದರೋ ಗ್ರೀಕನು ಲುಸ್ತ್ರ ಮತ್ತು ಇಕೋನಿಯದ ಸಹೋದರರೆಲ್ಲರಿಗೆ ತಿಮೊಥೇಯನ ಬಗ್ಗೆ ಸದಭಿಪ್ರಾಯವಿತ್ತು. ಪೌಲನು ತಿಮೊಥೇಯನನ್ನು ತನ್ನೊಡನೆ ಕರೆದುಕೊಂಡು ಹೋಗಲು ಅಪೇಕ್ಷಿಸಿದನು. ಆ ಪ್ರದೇಶಗಳಲಿದ್ದ ಯೆಹೂದ್ಯರಿಗೆ ತಿಮೊಥೇಯನ ತಂದೆ ಗ್ರೀಕನೆಂದು ತಿಳಿದಿದ್ದುದರಿಂದ ಅವನಿಗೆ ಸುನ್ನತಿ ಮಾಡಿಸಿದನು. ಊರಿಂದ ಊರಿಗೆ ಪ್ರಯಾಣ ಮಾಡುತ್ತಾ, ಜೆರುಸಲೇಮಿನಲ್ಲಿದ್ದ ಪ್ರೇಷಿತರೂ ಸಭಾಪ್ರಮುಖರೂ ನಿರ್ಧರಿಸಿದ ನಿಯಮಗಳನ್ನು ಭಕ್ತರಿಗೆ ಬೋದಿಸುತ್ತಾ, ಅವುಗಳನ್ನು ಪಾಲಿಸುವಂತೆ ಹೇಳಿದರು . ಹೀಗೆ ಕ್ರೈಸ್ತ ಸಭೆಗಳು ವಿಶ್ವಾಸದಲ್ಲಿ ದೃಡಗೊಂಡು ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಬೆಳೆಯತೊಡಗಿತು. ಏಷ್ಯದಲ್ಲಿ ಅವರು ಶುಭಸಂದೇಶವನ್ನು ಸಾರಕೂಡದೆಃದು ಪವಿತ್ರಾತ್ಮ ನಿಷೇಧಿಸಿದ್ದರಿಂದ ಅವರು ಫ್ಘಿಜಿಯ ಮತ್ತು ಗಲಾತ್ಯ ಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು. ಮೂಸಿಯದ ಗಡಿಯನ್ನು ತಲುಪಿದಾಗ ಅವರು ಬಿಥೂನಿಯ ಪ್ರಾಂತ್ಯಕ್ಕೆ ಹೋಗಲು ಯತ್ನಿಸಿದರು. ಯೇಸುವಿನ ಆತ್ಮ ಅಲ್ಲಿಗೆ ಹೋಗಲು ಸಹ ಅವರನ್ನು ಬಿಡಲಿಲ್ಲ. ಆದುದರಿಂದ ಅವರು ಮೂಸಿಯವನ್ನು ಹಾದು ನೇರವಾಗಿ ತ್ರೋವಕ್ಕೆ ಹೋದರು. ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು; ಮಕೆದೋನಿಯದ ಒಬ್ಬ ವ್ಯಕ್ತಿ ಅಲ್ಲಿ ನಿಂತು, "ಮಕೆದೋನಿಯಕ್ಕೆ ಬಂದು ನಮಗೆ ಸಹಾಯಮಾಡಿ," ಎಂದು ಅಂಗಲಾಚಿದನು. ಪೌಲನಿಗೆ ಈ ದರ್ಶನವಾದ ತಕ್ಷಣ ಆ ಜನರಿಗೆ ಶುಭಸಂದೇಶವನ್ನು ಸಾರಲು ದೇವರು ನಮ್ಮನ್ನು ಕರೆದಿದ್ದಾರೆಂದು ನಾವು ಅರಿತುಕೊಂಡು ಮಕೆದೋನಿಯಕ್ಕೆ ಹೋಗಲು ಸಿದ್ದರಾದೆವು.


ಕೀರ್ತನೆ: 100:1b-3,5
ಶ್ಲೋಕ: ಭೂನಿವಾಸಿಗಳೇ, ಜಯಘೋಷಮಾಡಿ ಪ್ರಭುವಿಗೆ.

 ಶುಭಸಂದೇಶ ಯೊವಾನ್ನ 15:18-21 

 "ಲೋಕವು ನಿಮ್ಮನ್ನು ದ್ವೇಷಿಸಿದರೆ, ನನ್ನ ಮೇಲೆ ಅದಕ್ಕೆ ದ್ವೇಷವಿತ್ತೆಂಬುದನ್ನು ನೆನಪಿನಲ್ಲಿಡಿ. ನೀವು ಲೋಕದ ಕಡೆಯವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಮಮತೆಯಿಂದ ಕಾಣುತ್ತಿತ್ತು. ನೀವಾದರೋ ಲೋಕದ ಕಡೆಗೆ ಸೇರಿದವರಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿರುವುದರಿಂದ ನೀವು ಲೋಕದಿಂದ ಬೇರ್ಪಟ್ಟಿದ್ದೀರಿ. ಎಂದೇ ಲೋಕಕ್ಕೆ ನಿಮ್ಮ ಮೇಲೆ ದ್ವೇಷವಿದೆ. ಧಣಿಗಿಂತಲೂ ದಾಸನು ದೊಡ್ಡವನಲ್ಲವೆಂದು ನಾನು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿ. ಅವರು ನನ್ನನ್ನು ಹಿಂಸೆಗೆ ಗುರಿಮಾಡಿದಂತೆ ನಿಮ್ಮನ್ನೂ ಹಿಂಸೆಗೆ ಗುರಿಮಾಡುವರು. ನನ್ನ ಭೋಧನೆಯ ಮಾತನ್ನು ಅವರು ಅನುಸರಿಸಿ ನಡೆದರೆ ನಿಮ್ಮ ಬೋಧನೆಯ ಮಾತನ್ನೂ ಅನುಸರಿಸಿ ನಡೆಯುವರು. ನೀವು ನನ್ನವರಾದುದರಿಂದ ಅವರು ನಿಮ್ಮನ್ನು ಹೀಗೆ ಕಾಣುವರು. ಏಕೆಂದರೆ ನನ್ನನ್ನು ಕಳುಹಿಸಿದಾತನನ್ನು ಅವರು ಅರಿಯರು" ಎಂದು ಯೇಸುಸ್ವಾಮಿ ಹೇಳಿದರು.

04.05.2018

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 

 ಆನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿ ಪಡೆದು,ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ನಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಬೇಕೆಂದು ನಿರ್ಧರಿಸಿದರು. ಅಂತೆಯೇ ಸಹೋದರಲ್ಲಿ ಬಹು ಗೌರವಾನ್ವಿತರಾದ ಬಾರ್ನಬ ಎಂದು ಕರೆಯಲಾದ ಯೂದ ಮತ್ತು ಸೀಲ ಎಂಬ ಇಬ್ಬರನ್ನು ಆರಿಸಿದರು. ಈ ಕೆಳಗಿನ ಪತ್ರವನ್ನು ಬರೆದು ಅವರ ಕೈಯಲ್ಲಿ ಕಳುಹಿಸಿದರು. "ಅಂತಿಯೋಕ್ಯ, ಸಿರಿಯ ಮತ್ತು ಸಿಲಿಸಿಯಗಳಲ್ಲಿ ವಾಸಿಸುವ ಯೆಹೂದ್ಯೇತರ ಸಹೋದರರಿಗೆ - ಪ್ರೇಷಿತರೂ ಸಭಾಪ್ರಮುಖರೂ ನಿಮ್ಮ ಸಹೋದರರೂ ಆದ ನಮ್ಮ ಶುಭಾಶಯಗಳು! ನಮ್ಮ ಕಡೆಯ ಕೆಲವು ಜನರು ನಮ್ಮಿಂದ ಯಾವ ಆದೇಶವನ್ನೂ ಪಡೆಯದೆ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮ ಮನಸ್ಸನ್ನು ಕಲಕಿದರೆಂಬ ಸಮಾಚಾರ ನಮ್ಮ ಗಮನಕ್ಕೆ ಬಂದಿದೆ. ಆದುದರಿಂದ ನಾವೆಲ್ಲಾರು ಸಭೆಸೇರಿ ಪ್ರತಿನಿಧಿಗಳನ್ನು ಆರಿಸಿ ನಿಮ್ಮಲ್ಲಿಗೆ ಕಳುಹಿಸಲು ನಿರ್ಧರಿಸಿದೆವು. ನಮ್ಮ ಪ್ರಭುವಾದ ಯೇಸುಕ್ರಿಸ್ತರಿಗಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟಿರುವ ನಮ್ಮೊಲವಿನ ಬಾರ್ನಬ  ಮತ್ತು ಪೌಲರೊಡನೆ ಈ ಪ್ರತಿನಿಧಿಗಳು ಬರುತ್ತಿದ್ದಾರೆ. ಇವರೇ ನಾವು ಕಳುಹಿಸುತ್ತಿರುವ  ಯೂದ ಮತ್ತು ಸೀಲ. ಇವರು ನಾವು ಬರೆದಿರುವುದನ್ನು ನಿಮಗೆ ಖುದ್ದಾಗಿ ತಿಳಿಸುವರು. ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು. ಅದನ್ನು ಸೇವಿಸಬಾರದು; ರಕ್ತವನ್ನಾಗಲಿ, ಕುತ್ತಿಗೆ ಹಿಸುಕಿಕೊಂದ ಪ್ರಾಣಿಗಳನ್ನಾಗಲಿ ತಿನ್ನಬಾರದು; ಅನೈತಿಕತೆಯಿಂದ ದೂರವಿರಬೇಕು. ಈ ಅಗತ್ಯ ನಿಯಮಗಳ  ಹೊರತು ಬೇರೆ ಯಾವ ಹೊರೆಯನ್ನೂ ನಿಮ್ಮ ಮೇಲೆ ಹೇರುವುದು ವಿಹಿತವಲ್ಲವೆಂಬುದು ಪವಿತ್ತಾತ್ಮ ಅವರ ಹಾಗು ನಮ್ಮ ತೀರ್ಮಾನ. ಈ ನಿಯಮಗಳನ್ನು ಅನುಸರಿಸಿದರೆ, ನಿಮಗೆ ಒಳಿತಾಗುವುದು, ನಿಮಗೆ ಶುಭವಾಗಲಿ!" ಅಂತಯೇ ಪ್ರತಿನಿಧಿಗಳು ಅಲ್ಲಿಂದ ಅಪ್ಪಣೆ ಪಡೆದು ಅಂತಿಯೋಕ್ಯಕ್ಕೆ ಹೋದರು. ಅಲ್ಲಿ ಭಕ್ತ ಸಭೆಯನ್ನು ಒಟ್ಟುಗೂಡಿಸಿ ಅವರಿಗೆ ಆ ಪತ್ರವನ್ನು ಕೊಟ್ಟರು. ಪತ್ರದಲ್ಲಿದ್ದ ಪ್ರೋತ್ಸಾಹದಾಯಕ ಸಂದೇಶವನ್ನು ಓದಿದ್ದೇ ಭಕ್ತಾದಿಗಳು ಆನಂದಭರಿತರಾದರು.

 ಕೀರ್ತನೆ:  57:8-9, 10,12
 ಶ್ಲೋಕ; ನಿನ್ನ ಸ್ತುತಿಸುವೆನು ಪ್ರಭೂ ಜನಾಂಗಗಳ ಮುಂದೆ.

 ಶುಭಸಂದೇಶ ಯೊವಾನ್ನ  15:12-17 

 "ನಾನು ಕೊಡುವ ಆಜ್ಞೆ ಏನೆಂದರೆ: ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಗೆಳೆಯರಿಗಾಗಿ ತನ್ನ ಪ್ರಾಣವನ್ನೇ ಧಾರೆಯೆರೆಯುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ. ನಾನು ಅಜ್ಞಾಪಿಸಿದಂತೆ ನಡೆದರೆ  ನೀವು ನನ್ನ ಗೆಳೆಯರು. ನಾನಿನ್ನು ನಿಮ್ಮನ್ನು ದಾಸರಂದು ಕರೆಯುವುದಿಲ್ಲ. ಧಣಿಯ ಕೆಲಸಕಾರ್ಯಗಳು ದಾಸನಿಗೆ ತಿಳಿಯವು. ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ. ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೊಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು. ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕಂದೇ ನಾನು ನಿಮಗೆ ಕೊಡುವ ಆಜ್ಞೆ" ಎಂದರು ಯೇಸುಸ್ವಾಮಿ.

03.05.2018

 ಮೊದಲನೇ ವಾಚನ: 1 ಕೊರಿಂಥಿಯರಿಗೆ 15:1-8 
 (ಪ್ರೇಷಿತರ ಕಾರ್ಯಕಲಾಪಗಳು 15:7-21) 


 ಪ್ರಿಯ ಸಹೋದರರೇ, ನಾನು ನಿಮಗೆ ಭೋಧಿಸಿದ ಶುಭಸಂದೇಶವನ್ನು ನೆನಪಿಗೆ ತಂದುಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿದ್ದೀರಿ. ಅದರಲ್ಲಿ ನೆಲೆಯಾಗಿ ನಿಂತಿದ್ದೀರಿ. ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಡವಾಗಿ ವಿಶ್ವಾಸಿಸಿದರೆ ನೀವು ಜೀವೋದ್ದಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು. ‌ನಾನು ಪಡೆದುಕೊಂಡಿದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಗ ಮಾಡಿದರು. ಅವರನ್ನು ಭೂಸ್ಥಾಪನೆ ಮಾಡಲಾಯಿತು. ಅದೇ ಗ್ರಂಥದ ಪ್ರಕಾರ ಮೂರನೆಯ ದಿನ ಅವರು ಪುನರುತ್ದಾನ ಹೊಂದಿದರು. ಆನಂತರ ಕೇಫನಿಗೂ ಹನ್ನೆರಡು ಮಂದಿಗೂ ಕಾಣಿಸಿಕೊಂಡರು. ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚಿನ ಮಂದಿ ಸಹೋದರರಿಗೆ ಪ್ರತ್ಯಕ್ಷರಾದರು. ಅವರಲ್ಲಿ ಕೆಲವರು ಸತ್ತುಹೋಗಿದ್ದರು ಬಹು ಮಂದಿ ಇದಿಂಗೂ ಬದುಕಿದ್ದಾರೆ. ಅದಾದ ಮೇಲೆ ಯಕೋಬನಿಗೂ ಆನಂತರ ಪ್ರೇಷಿತರೆಲ್ಲರಿಗೂ ಕಾಣಿಸಿಕೊಂಡರು. ಕಟ್ಟಕಡೆಗೆ ದಿನ ತುಂಬುವ ಮೊದಲೇ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು.


ಕೀರ್ತನೆ: 19:2-3,4-5
 ಶ್ಲೋಕ:  ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ

 ಶುಭಸಂದೇಶ: ಯೊವಾನ್ನ 14:6-14 


ಯೇಸು ತಮ್ಮ ಶಿಷ್ಯರಿಗೆ ಇಂತೆಂದರು: "ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು. ನೀವು ನನ್ನನ್ನು ಅರಿತವರಾಗಿದ್ದರೆ ನನ್ನ ಪಿತನನ್ನು ಕೂಡ ಅರಿಯುತ್ತಿದ್ದಿರಿ. ಈಗಿನಿಂದ ಅವರನ್ನು ನೀವು ಅರಿತವರಾಗಿದ್ದೀರಿ ಹಾಗು ಕಂಡೂ ಇದ್ದೀರಿ," ಎಂದು ನುಡಿದರು. ಆಗ ಫಿಲಿಪ್ಪನು, "ಪ್ರಭೂ, ನಮಗೆ ಪಿತನನ್ನು ತೋರಿಸಿ: ಅಷ್ಟೆ ಸಾಕು,"ಎಂದನು. ಅದಕ್ಕೆ ಉತ್ತರವಾಗಿ ಯೇಸು, "ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೇ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, "ನಮಗೆ ಪಿತನನ್ನು ತೋರಿಸಿ" ಎಂದು ಹೇಗೆ ಕೇಳುತ್ತೀ?  ನಾನು ಪಿತನಲ್ಲಿ ಇದ್ದೇನೆ. ಪಿತನು ನನ್ನಲ್ಲಿ ಇದ್ದಾರೆ," ಇದನ್ನು ನೀನು ವಿಶ್ವಾಸಿಸುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ವಿಶ್ವಾಸಿಸಿರಿ; ಇಲ್ಲವೇ, ನಾನು ಸಾಧಿಸಿದ ಸುಕೃತ್ಯಗಳ ನಿಮಿತದಿಂದಾದರು ವಿಶ್ವಾಸಿಸಿರಿ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿ ವಿಶ್ವಾಸವುಳ್ಳವನು ನಾನು ಸಾಧಿಸುದ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೆ ಏಕೆ, ಅವುಗಳಿಗಿಂತಲೂ ಮಹತ್ತಾದವುಗಳನ್ನು ಸಾಧಿಸುವನು. ಏಕಂದರೆನಾನು ಪಿತನ ಬಳಿಗೆ ಹೋಗುತ್ತೇನೆ. ಹೀಗೆ ಪಿತನಿಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು. ಹೌದು, ನನ್ನ ಹೆಸರಿನಲ್ಲಿ  ನೀವು ಏನನ್ನು ಕೇಳದರೂ ನಾನು ಅದನ್ನು ಮಾಡಿಯೇ ತ್ತೀರುವೆನು," ಎಂದರು.

02.05.2018

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:1-6 

 ಜುದೇಯದಿಂದ ಕೆಲವು ಜನರು ಅಂತಿಯೋಕ್ಯಕ್ಕೆ ಬಂದು ಅಲ್ಲಿನ ಭಕ್ತವಿಶ್ವಾಸಗಳಿಗೆ, "ಮೋಶೆಯ ನೀಯಮದಂತೆ ನೀವು ಸುನ್ನತಿ ಮಾಡಿಸಿಕೊಂಡ  ಹೊರತು ಜೀವೋದ್ದಾರ ಪಡಿಯಲಾರಿರಿ," ಎಂದು ಬೋಧಿಸತೊಡಗಿದರು. ಈ ವಿಷಯವಾಗಿ ಅವರಿಗೂ ಪೌಲ ಮತ್ತು ಬಾರ್ನಬರಿಗೂ ಭಿನ್ನಾಭಿಪ್ರಾಯ ಉಂಟಾಗಿ ತೀವ್ರ ವಿವಾದವೆದ್ದಿತು. ಆದುದರಿಂದ ಈ ಸಮಸ್ಯಯ ಬಗ್ಗೆ ಪೌಲ ಮತ್ತು ಬಾರ್ನಬರು ಅಂತಿಯೋಕ್ಯದ ಇನ್ನೂ ಕೆಲವರ ಸಮೇತ ಜೆರುಸಲೇಮಿಗೆ ಹೋಗಿ ಪ್ರೇಷಿತರನ್ನೂ ಪ್ರಮುಖರನ್ನೂ ಕಾಣಬೇಕೆಂದು ತೀರ್ಮಾನಿಸಲಾಯಿತು. ಅಂತೆಯೇ ಕ್ರೈಸ್ತಸಭೆ ಅವರನ್ನು ಬೀಳ್ಕೊಟ್ಟಿತು. ಅವರು ಫೆನಿಷ್ಯ ಹಾಗೂ ಸಮಾರಿಯದ ಮಾರ್ಗವಾಗಿ ಪ್ರಯಾಣಮಾಡುತ್ತಾ ಅಲ್ಲಿಯ ಭಕ್ತವಿಶ್ವಾಗಳಿಗೆ ಅನ್ಯಧರ್ಮೀಯರು ಹೇಗೆ ಕ್ರೈಸ್ತರಾದರಂಬುದನ್ನು ವಿವರಿಸಿದರು. ಇದನ್ನು ಕೇಳಿದ ಭಕ್ತಾದಿಗಳು ಸಂತೋಷಭರಿತರಾದರು. ಪೌಲ, ಬಾರ್ನಬ ಮತ್ತು ಸಂಗಡಿಗರು ಜೆರುಸಲೇಮಿಗೆ ಆಗಮಿಸಿದಾಗ, ಅಲ್ಲಿಯ ಕ್ರೈಸ್ತಸಭೆ ಪ್ರೇಷಿತರ ಹಾಗು ಪ್ರಮುಖರ ಸಮೇತ ಅವರನ್ನು ಸ್ವಾಗತಿಸಿತು. ಆಗ ಅವರು, ದೇವರು ತಮ್ಮೊಡನೆ ಇದ್ದು, ಸಾಧಿಸಿದ ಎಲ್ಲಾ ಕಾರ್ಯಗಳನ್ನು ವರದಿ ಮಾಡಿದರು. ಫರಿಸಾಯ ಪಂಥಕ್ಕೆ ಸೇರಿದ ಕಲವು ಭಕ್ತರು ಮಾತ್ರ ಎದ್ದುನಿಂತು, ಅನ್ಯಧರ್ಮೀಯರು ಸುನ್ನತಿ ಮಾಡಿಸಿಕೊಳ್ಳಲೇಬೇಕು, ಅವರು ಮೋಶೆಯ ನಿಯಮಗಳನ್ನು ಅನುಸರಿಸುವಂತೆ ಆಜ್ಞೆ ಮಾಡಲೇಬೇಕು," ಎಂದರು. ಈ ಸಮಸ್ಯೆಯನ್ನು ಪರಿಶೀಲಿಸಲು ಪ್ರೇಷಿತರು ಮತ್ತು ಸಭಾಪ್ರಮುಖರು ಸಭೆ ಸೇರಿದರು.

 ಕೀರ್ತನೆ: 122:1-2,3-4ab,4cd-5
ಶ್ಲೋಕ: ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ ಆಯಿತೆನಗೆ ಆಂನಂದ ಜನರೆನ್ನಕರೆದಾಗ.

 ಶುಭಸಂದೇಶ: ಯೊವಾನ್ನ 15:1-8 

 "ನಾನೇ ನಿಜವಾದ ದ್ರಾಕ್ಷಾಬಳ್ಳಿ. ನನ್ನ ಪಿತನೇ ತೋಟಗಾರ. ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅದನ್ನು ಸವರಿ ಶುದ್ದಗೊಳಿಸುವರು. ನೀವಾದರೋ, ನಾನು ನಿಮ್ಮೊಡನೆ ಆಡಿದ ಮಾತಿನಿಂದಾಗಿ ಸವರಿದ ಕವಲುಗಳಂತೆ ಶುದ್ದರಾಗಿದ್ದೀರಿ. ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನು ನಿಮ್ಮಲ್ಲಿ ನೆಲೆಗೊಂಡಿರುವೆನು.ಕವಲು ಮೂಲಬಳ್ಳಿಯಲ್ಲಿಒಂದಾಗಿ ನೆಲಸದಿದ್ದರೆ ತನ್ನಷ್ಟಕ್ಕೆ ತಾನೇ ಫಲಕೊಡಲಾಗದು. ಹಾಗಯೇ ನೀವೂ ಕೂಡ ನನ್ನಲ್ಲಿ ಒಂದಾಗಿ ನೆಲಸದಿದ್ದರೆ ಫಲಕೊಡಲಾರಿರಿ. ಹೌದು, ನಾನೇ ದ್ರಾಕ್ಷಾಬಳ್ಳಿ; ನೀವೇ ಅದರ ಕವಲುಬಳ್ಳಿಗಳು. ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅಂಥವನು ಸಮೃದ್ದಿಯೂಗಿ ಫಲಕೊಡುವನು. ಏಕೆಂದರೆ, ನನ್ನಿದ ಬೇರ್ಪಟ್ಟು ನಿಮ್ಮಿಂದ ಏನೂ ಮಾಡಲಾಗದು. ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಆವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟು ಹಾಕಲಾಗುವುದು. ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು. ನೀವು ಸಮೃದ್ದಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮ ಪ್ರಕಟವಾಗುವುದು." ಎಂದು ಯೇಸುಸ್ವಾಮಿ ನುಡಿದರು.