ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

01.06.2018

ಮೊದಲನೇ ವಾಚನ:1ಪೇತ್ರ 4:7-13 

ಎಲ್ಲದರ ಅಂತ್ಯಕಾಲವೂ ಹತ್ತಿರವಾಯಿತು. ಈ ಕಾರಣ ನೀವು ಜಿತೇ೦ದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ. ಎಲ್ಲಕ್ಕೂ ಮಿಗಿಲಾಗಿ ಒಬ್ಬರನ್ನೊಬ್ಬರು ಯಥಾರ್ಥವಾಗಿ ಪ್ರೀತಿಸಿರಿ. ಏಕೆ೦ದರೆ, ಪ್ರೀತಿ ಅಸ೦ಖ್ಯಾತ ಪಾಪಗಳನ್ನು ಅಳಿಸಿಹಾಕುತ್ತದೆ. ಗೊಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿ. ದೇವರ ವಿವಿಧ ವರಗಳ ವಿಷಯದಲ್ಲಿ ಉತ್ತಮ ನಿರ್ವಾಹಕನ೦ತೆ ಪ್ರತಿಯೊಬ್ಬನೂ ದೇವರು ತನಗೆ ಕೊಟ್ಟಿರುವ ವಿಶೇಷ ವರದಾನಗಳಾನ್ನು ಇತರರ ಒಳಿತಿಗಾಗಿ ಬಳಸಲಿ. ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಸೇವೆಮಾಡಲಿ. ಇದರಿ೦ದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯು೦ಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.

ಪ್ರಿಯರೇ, ಪರಿಶೋಧನೆಗೆ೦ದು ನಿಮಗೆ ಬ೦ದೊದಗಿರುವ ಅಗ್ನಿಪರೀಕ್ಷೆಗಾಗಿ ಆಶ್ಚರ್ಯಪಡಬೇಡಿ. ಅನಿರೀಕ್ಷಿತವಾಗಿ ಏನೋ ಸ೦ಭವಿಸಿಬಿಟ್ಟಿತೆ೦ದು ವಿಸ್ಮಯಪಡಬೇಡಿ. ಬದಲಿಗೆ, ಯೇಸುಕ್ರಿಸ್ತರ ಬಾಧೆಗಳಲ್ಲಿ ಪಾಲುಹೊಂದಿರುತ್ತೀರೆಂದು ಸಂತೋಷಪಡಿ; ಅವರ ಮಹಿಮೆಯು ಪ್ರತ್ಯಕ್ಷವಾಗುವಾಗ ಪೂರ್ಣ ಹರ್ಷಾನಂದವನ್ನು ಪಡೆಯುವಿರಿ.

ಕೀರ್ತನೆ: 96:10,11-12,13 
ಶ್ಲೋಕ: ಪ್ರಭು ಧರೆಗೆ ನ್ಯಾಯ ತೀರಿಸಲು ಬಂದೇ ಬರುವನು ಖರೆಯಾಗಿ. 

 ಶುಭಸಂದೇಶ: ಮಾರ್ಕ 11:11 -26 
ಯೇಸು ಜೆರುಸಲೇಮನ್ನು ಸೇರಿ ಮಹಾ ದೇವಾಲಯವನ್ನು ಪ್ರವೇಶಿಸಿದರು. ಅಲ್ಲಿ ನಡೆಯುತ್ತಿದ್ದ ಎಲ್ಲವನ್ನು ನೋಡುವಷ್ಟರಲ್ಲಿ ಕತ್ತಲಾಗುತ್ತಾ ಬಂದಿತು; ಆದುದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು, ಅವರು ಬೆಥಾನಿಯಕ್ಕೆ ಹೊರಟುಹೋದರು ಮರುದಿನ ಅವರೆಲ್ಲರೂ ಬೆಥಾನಿಯದಿಂದ ಜೆರುಸಲೇಮಿಗೆ ಬರುತ್ತಿದ್ದಾಗ ಯೇಸುಸ್ವಾಮಿಗೆ ಹಸಿವಾಯಿತು. ದೂರದಲ್ಲಿ ಎಲೆ ತಂಬಿದ ಅಂಜೂರದ ಮರವೊಂದು ಕಣ್ಣಿಗೆ ಬಿದ್ದಿತು. ಅದರಲ್ಲಿ ಹಣ್ಣೀನಾದರು ಸಿಕ್ಕೀತೆಂದು ಅಲ್ಲಿಗೆ ಹೋದರು. ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳೇ ಹೊರತು ಇನ್ನೇನೂ ಕಾಣಲಲ್ಲ. ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ. ಯೇಸು ಆ ಮರಕ್ಕೆ, "ಇನ್ನು ಮುಂದೆ ನಿನ್ನ ಹಣ್ಣನ್ನು ಯಾರೂ ಎಂದಿಗೂ ತಿನ್ನದಂತಾಗಲಿ," ಎಂದರು. ಶಿಷ್ಯರು ಈ ಮಾತುಗಳನ್ನು ಕೇಳಿಸಿಕೊಂಡರು. ತರುವಾಯ ಅವರು ಜೆರುಸಲೇಮಿಗೆ ಬಂದರು. ಯೇಸುಸ್ವಾಮಿ ಮಹಾದೇವಾಲಯಕ್ಕೆ ಹೋಗಿ, ಅಲ್ಲಿ ಮಾರುತ್ತಿದ್ದವರನ್ನೂ ಕೊಳ್ಳುತ್ತಿದ್ದವರನ್ನೂ ಹೊರಗಟ್ಟತೊಡಗಿದರು; ನಾಣ್ಯ ವಿನಿಮಯ ಮಾಡುತ್ತಿದ್ದ ವ್ಯಪಾರಿಗಳ ಮೇಜುಗಳನ್ನು ಕೆಡವಿದರು; ಪಾರಿವಾಳಗಳನ್ನು ಮಾರುತ್ತಿದವರ ಮಣೆಗಳನ್ನು ಉರುಳಿಸಿದರು.ಹೊರೆಹೊತ್ತುಕೊಂಡು ದೇವಾಲಯದ ಮೂಲಕ ಹದು ಹೋಗುವವರನ್ನು ತಡೆದರು. " 'ಸರ್ವಜನಾಂಗಗಳಿಗೂ ಪ್ರಾತನಾಲಯ ನನ್ನೀ ಆಲಯ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ ಅಲ್ಲವೇ? ನೀವು ಅದನ್ನು ಕಳ್ಳಕಾಕರ ಗಹೆಯನ್ನಾಗಿ ಮಾಡಿದ್ದೀರಿ," ಎಂದು ಯೇಸು ಅವರಿಗೆ ಬುದ್ದಿ ಹೇಳಿದರು. ಮುಖ್ಯ ಯೂಜಕರೂ ಧರ್ಮಶಾಸ್ತ್ರಿಗಳೂ ನಡೆದ ಈ ಸಂಗತಿಯನ್ನು ಕೇಳಿ ಯೇಸುವನ್ನು ಕೊಲ್ಲಿಸುವ ಮಾರ್ಗವನ್ನು ಹುಡುಕತೊಡಗಿದರು. ಎಕಂದರೆ, ಯೇಸುವನ್ನು ಕಂಡರೆ ಅವರಿಗೆ ಭಯವಿತ್ತು. ಕಾರಣ, ಜನರೆಲ್ಲರೂ ಅವರ ಭೋಧನೆಗೆ ಮಾರುಹೋಗಿದ್ದರು. ಸೂರ್ಯಸ್ತಮದ ಬಳಿಕ ಯೇಸು ಮತ್ತು ಶಿಷ್ಯರು ಪಟ್ಟಣದಿಂದ ಹೊರಗೆ ಹೋದರು. ಬೆಳಿಗ್ಗೆ ಅವರೆಲ್ಲರೂ ಅದೇ ಮಾರ್ಗವಾಗಿ ಹಿಂದಿರುಗುವಾಗ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು. ಪೇತ್ರನು ಹಿಂದಿನ ದಿನ ನಡೆದುದನ್ನು ಸ್ಮರಿಸಿಕೊಂಡು, ಯೇಸುಸ್ವಾಮಿಗೆ, "ಗುರುವೇ, ತಾವು ಶಪಿಸಿದ ಆ ಅಂಜೂರದ ಮರ ಈಗ ಒಣಗಿ ಹೋಗಿದೆ," ಎಂದನು. ಅದಕ್ಕೆ ಯೇಸು, "ನಿಮಗೆ ದೇವರಲ್ಲಿ ವಿಶ್ವಾಸವಿರಲಿ, ಅಗ ಯಾವನಾದರೂ ಈ ಬೆಟ್ಟಕ್ಕೆ, 'ನೀನು ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!' ಎಂದು ಹೇಳಿ, ಮನಸ್ಸನಲ್ಲಿ ಸಂದೇಹಪಡದೆ, ಅದು ಸಂಭವಿಸುದುದೆಃದು ವಿಶ್ವಾಸಿಸಿದರೆ, ನಾನು ನಿಮಗೆ ನಶ್ಚಯವಾಗಿ ಹೇಳುತ್ತೇನೆ, ಅವನು ಹೇಳಿದಂತೆಯೇ ಆಗುವುದು. ಆದುದರಿಂದ ನೀವು ಪ್ರಾರ್ಥನೆಯಲ್ಲಿ ಏನೆಂದು ಬೇಡಿಕೊಳ್ಳುತ್ತೀರೋ, ಅದನ್ನೆಲ್ಲಾ ಪಡೆದಾಯಿತೆಂದು ವಿಶ್ವಾಸಿಸಿರಿ; ಅದು ಲಭಿಸುವುದು ನಿಶ್ಚಯವೆಂದು ನಿಮಗೆ ಹೇಳುತ್ತೇನೆ. ಇದಲ್ಲದೆ, ನೀವು ಪ್ರಾರ್ಥನೆ ಮಾಡುವಾಗಲೆಲ್ಲಾ, ಯಾರಿಗಾದರೂ ವಿರೋದವಾಗಿ ನಿಮ್ಮ ಮನಸ್ಸಿನಲ್ಲಿ ಏನಾದರೂ ಇದ್ದರೆ, ಅದನ್ನು ಕ್ಷಮಿಸಿಬಿಡಿ, ಆಗ ಸ್ವರ್ಗದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪಗಳನ್ನು ಕ್ಷಮಿಸಿ ಬಿಡುವರು".

No comments:

Post a Comment