ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:1-6
ಜುದೇಯದಿಂದ ಕೆಲವು ಜನರು ಅಂತಿಯೋಕ್ಯಕ್ಕೆ ಬಂದು ಅಲ್ಲಿನ ಭಕ್ತವಿಶ್ವಾಸಗಳಿಗೆ, "ಮೋಶೆಯ ನೀಯಮದಂತೆ ನೀವು ಸುನ್ನತಿ ಮಾಡಿಸಿಕೊಂಡ ಹೊರತು ಜೀವೋದ್ದಾರ ಪಡಿಯಲಾರಿರಿ," ಎಂದು ಬೋಧಿಸತೊಡಗಿದರು. ಈ ವಿಷಯವಾಗಿ ಅವರಿಗೂ ಪೌಲ ಮತ್ತು ಬಾರ್ನಬರಿಗೂ ಭಿನ್ನಾಭಿಪ್ರಾಯ ಉಂಟಾಗಿ ತೀವ್ರ ವಿವಾದವೆದ್ದಿತು. ಆದುದರಿಂದ ಈ ಸಮಸ್ಯಯ ಬಗ್ಗೆ ಪೌಲ ಮತ್ತು ಬಾರ್ನಬರು ಅಂತಿಯೋಕ್ಯದ ಇನ್ನೂ ಕೆಲವರ ಸಮೇತ ಜೆರುಸಲೇಮಿಗೆ ಹೋಗಿ ಪ್ರೇಷಿತರನ್ನೂ ಪ್ರಮುಖರನ್ನೂ ಕಾಣಬೇಕೆಂದು ತೀರ್ಮಾನಿಸಲಾಯಿತು. ಅಂತೆಯೇ ಕ್ರೈಸ್ತಸಭೆ ಅವರನ್ನು ಬೀಳ್ಕೊಟ್ಟಿತು. ಅವರು ಫೆನಿಷ್ಯ ಹಾಗೂ ಸಮಾರಿಯದ ಮಾರ್ಗವಾಗಿ ಪ್ರಯಾಣಮಾಡುತ್ತಾ ಅಲ್ಲಿಯ ಭಕ್ತವಿಶ್ವಾಗಳಿಗೆ ಅನ್ಯಧರ್ಮೀಯರು ಹೇಗೆ ಕ್ರೈಸ್ತರಾದರಂಬುದನ್ನು ವಿವರಿಸಿದರು. ಇದನ್ನು ಕೇಳಿದ ಭಕ್ತಾದಿಗಳು ಸಂತೋಷಭರಿತರಾದರು. ಪೌಲ, ಬಾರ್ನಬ ಮತ್ತು ಸಂಗಡಿಗರು ಜೆರುಸಲೇಮಿಗೆ ಆಗಮಿಸಿದಾಗ, ಅಲ್ಲಿಯ ಕ್ರೈಸ್ತಸಭೆ ಪ್ರೇಷಿತರ ಹಾಗು ಪ್ರಮುಖರ ಸಮೇತ ಅವರನ್ನು ಸ್ವಾಗತಿಸಿತು. ಆಗ ಅವರು, ದೇವರು ತಮ್ಮೊಡನೆ ಇದ್ದು, ಸಾಧಿಸಿದ ಎಲ್ಲಾ ಕಾರ್ಯಗಳನ್ನು ವರದಿ ಮಾಡಿದರು. ಫರಿಸಾಯ ಪಂಥಕ್ಕೆ ಸೇರಿದ ಕಲವು ಭಕ್ತರು ಮಾತ್ರ ಎದ್ದುನಿಂತು, ಅನ್ಯಧರ್ಮೀಯರು ಸುನ್ನತಿ ಮಾಡಿಸಿಕೊಳ್ಳಲೇಬೇಕು, ಅವರು ಮೋಶೆಯ ನಿಯಮಗಳನ್ನು ಅನುಸರಿಸುವಂತೆ ಆಜ್ಞೆ ಮಾಡಲೇಬೇಕು," ಎಂದರು. ಈ ಸಮಸ್ಯೆಯನ್ನು ಪರಿಶೀಲಿಸಲು ಪ್ರೇಷಿತರು ಮತ್ತು ಸಭಾಪ್ರಮುಖರು ಸಭೆ ಸೇರಿದರು.
ಕೀರ್ತನೆ: 122:1-2,3-4ab,4cd-5
ಶ್ಲೋಕ: ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ ಆಯಿತೆನಗೆ ಆಂನಂದ ಜನರೆನ್ನಕರೆದಾಗ.
ಶುಭಸಂದೇಶ: ಯೊವಾನ್ನ 15:1-8
"ನಾನೇ ನಿಜವಾದ ದ್ರಾಕ್ಷಾಬಳ್ಳಿ. ನನ್ನ ಪಿತನೇ ತೋಟಗಾರ. ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅದನ್ನು ಸವರಿ ಶುದ್ದಗೊಳಿಸುವರು. ನೀವಾದರೋ, ನಾನು ನಿಮ್ಮೊಡನೆ ಆಡಿದ ಮಾತಿನಿಂದಾಗಿ ಸವರಿದ ಕವಲುಗಳಂತೆ ಶುದ್ದರಾಗಿದ್ದೀರಿ. ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನು ನಿಮ್ಮಲ್ಲಿ ನೆಲೆಗೊಂಡಿರುವೆನು.ಕವಲು ಮೂಲಬಳ್ಳಿಯಲ್ಲಿಒಂದಾಗಿ ನೆಲಸದಿದ್ದರೆ ತನ್ನಷ್ಟಕ್ಕೆ ತಾನೇ ಫಲಕೊಡಲಾಗದು. ಹಾಗಯೇ ನೀವೂ ಕೂಡ ನನ್ನಲ್ಲಿ ಒಂದಾಗಿ ನೆಲಸದಿದ್ದರೆ ಫಲಕೊಡಲಾರಿರಿ. ಹೌದು, ನಾನೇ ದ್ರಾಕ್ಷಾಬಳ್ಳಿ; ನೀವೇ ಅದರ ಕವಲುಬಳ್ಳಿಗಳು. ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅಂಥವನು ಸಮೃದ್ದಿಯೂಗಿ ಫಲಕೊಡುವನು. ಏಕೆಂದರೆ, ನನ್ನಿದ ಬೇರ್ಪಟ್ಟು ನಿಮ್ಮಿಂದ ಏನೂ ಮಾಡಲಾಗದು. ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಆವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟು ಹಾಕಲಾಗುವುದು. ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು. ನೀವು ಸಮೃದ್ದಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮ ಪ್ರಕಟವಾಗುವುದು." ಎಂದು ಯೇಸುಸ್ವಾಮಿ ನುಡಿದರು.
No comments:
Post a Comment