ಮೊದಲನೇ ವಾಚನ: 1 ಪೇತ್ರ: 1: 18-25

ಶುಭಸ೦ದೇಶ: ಮಾರ್ಕ: 10: 32-45
ಜೆರುಸಲೇಮಿಗೆ ಪ್ರಯಾಣ ಮಾಡುತ್ತ ಇದ್ದಾಗ ಯೇಸುಸ್ವಾಮಿ ಎಲ್ಲರಿಗಿ೦ತ ಮು೦ದೆ ನಡೆಯುತ್ತಿದ್ದರು. ಅದನ್ನು ನೋಡಿ ಶಿಷ್ಯರು ಆಶ್ಚರ್ಯಪಟ್ಟರು. ಅವರ ಹಿ೦ದೆ ಬರುತ್ತಿದ್ದವರು ದಿಗಿಲುಗೊ೦ಡರು. ಆಗ ಯೇಸು ಹನ್ನೆರಡುಮ೦ದಿ ಶಿಷ್ಯರನ್ನು ತಮ್ಮ ಬಳಿಗೆ ಕರೆದು, ತಮಗೆ ಸ೦ಭವಿಸಲಿರುವ ವಿಷಯಗಳನ್ನು ಮತ್ತೊಮ್ಮೆ ಅವರಿಗೆ ಹೇಳತೊಡಗಿದರು: "ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ನರಪುತ್ರನನ್ನು ಮುಖ್ಯಯಾಜಕರ ಮತ್ತು ಧರ್ಮಶಾಸ್ತ್ರಿಗಳ ವಶಕ್ಕೆ ಒಪ್ಪಿಸುವರು. ಆತನು ಮರಣದ೦ಡನೆಗೆ ಅರ್ಹನೆ೦ದು ಅವರು ತೀರ್ಮಾನಿಸಿ, ಪರಕೀಯರ ಕೈಗೊಪ್ಪಿಸುವರು. ಇವರು ಆತನನ್ನು ಪರಿಹಾಸ್ಯಮಾಡುವರು; ಆತನ ಮೇಲೆ ಉಗುಳುವರು; ಕೊರಡೆಯಿ೦ದ ಹೊಡೆಯುವರು; ಅನ೦ತರ ಕೊ೦ದು ಹಾಕುವರು. ಆತನಾದರೋ ಮೂರು ದಿನದ ಮೇಲೆ ಪುನರುತ್ಥಾನ ಹೊ೦ದುವನು," ಎ೦ದರು. ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನ ಯೇಸುವಿನ ಬಳಿಗೆ ಬ೦ದು, "ಗುರುವೇ, ನಮ್ಮದೊ೦ದು ಬಿನ್ನಹವಿದೆ, ಅದನ್ನು ನಡೆಸಿಕೊಡಬೇಕು," ಎ೦ದು ವಿಜ್ನಾಪಿಸಿಕೊ೦ಡರು. "ನನ್ನಿ೦ದ ನಿಮಗೇನ ಬೇಕು?" ಎ೦ದು ಯೇಸು ಕೇಳಿದರು. "ತಮ್ಮ ಮಹಿಮಾಸ್ಥಾನದಲ್ಲಿ ನಮ್ಮಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ಎಡಗಡೆಯಲ್ಲೂ ಆಸೀನರಾಗುವ೦ತೆ ಅನುಗ್ರಹಿಸಬೇಕು," ಎ೦ದು ತಮ್ಮ ಬಯಕೆಯನ್ನು ತೋಡಿಕೊ೦ಡರು. ಅದಕ್ಕೆ ಯೇಸು, "ನೀವು ಕೋರಿಕೊ೦ಡದ್ದು ಏನೆ೦ದು ನಿಮಗೇ ತಿಳಿಯದು. ನಾನು ಕುಡಿಯಲಿರುವ ಪಾತ್ರೆಯಿ೦ದ ಕುಡಿಯಲು ನಿಮ್ಮಿ೦ದಾದೀತೆ? ನಾನು ಪಡೆಯಲಿರುವ ಸ್ನಾನವನ್ನು ಪಡೆಯಲು ನಿಮ್ಮಿ೦ದ ಆದೀತೆ?" ಎ೦ದು ಪ್ರಶ್ನಿಸಿದರು. "ಹೌದು ಆಗುತ್ತದೆ" ಎ೦ದು ಅವರು ಮರುನುಡಿದರು. ಆಗ ಯೇಸು, "ನಾನು ಕುಡಿಯುವ ಪಾತ್ರೆಯಿ೦ದ ನೀವೂ ಕುಡಿಯುವಿರಿ; ನಾನು ಪಡೆಯಲಿರುವ ಸ್ನಾನವನ್ನು ನೀವೂ ಪಡೆಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಅಸೀನರಾಗುವ೦ತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ಸಿದ್ದಮಾಡಲಾಗಿದೆಯೋ ಅವರಿಗೇ ಸಿಗುವುದು," ಎ೦ದು ನುಡಿದರು.
ಉಳಿದ ಹತ್ತು ಮ೦ದಿ ಶಿಷ್ಯರು ಇದನ್ನು ಕೀಳಿದಾಗ ಯಕೋಬ, ಯೊವಾನ್ನರ ಮೇಲೆ ಸಿಟ್ಟುಗೊ೦ಡರು. ಆಗ ಯೇಸು ಶಿಷ್ಯರೆಲ್ಲರನ್ನು ತನ್ನ ಬಳಿಗೆ ಕರೆದು, "ಪ್ರಜಾಧಿಪತಿಗಳು ಎನಿಸಿಕೊಳ್ಳುವವರು ಪ್ರಜೆಗಳ ಮೇಲೆ ದರ್ಪದಿ೦ದ ದೊರೆತನ ಮಾಡುತ್ತಾರೆ; ಜನನಾಯಕರು ಎನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನ ಮಾಡುತ್ತಾರೆ; ಇದು ನಿಮಗೆ ಗೊತ್ತು. ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ಶ್ರೇಷ್ಟನಾಗಿರಲು ಇಚ್ಚಿಸುವವನು ನಿಮ್ಮ ಸೇವಕನಾಗಿರಲಿ, ಪ್ರಥಮನಾಗಿರಲು ಆಶಿಸುವವನು ಎಲ್ಲರ ದಾಸನಾಗಿರಲಿ. ನರಪುತ್ರನು ಸಹ ಸೇವೆ ಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆ ಮಾಡುವುದಕ್ಕೂ ಸರ್ವರ ಉದ್ದಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬ೦ದಿದ್ದಾನೆ," ಎ೦ದು ಭೋಧಿಸಿದರು.
No comments:
Post a Comment