ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು: 11: 21-26; 13: 1-3
ಪ್ರಭುವಿನ ಶಕ್ತಿ ಅವರೊಡನೆ ಇತ್ತು. ಜನರು ಬಹುಸ೦ಖ್ಯೆಯಲ್ಲಿ ಪ್ರಭುವಿನಲ್ಲಿ ವಿಶ್ವಾಸವಿಟ್ಟು ಅವರ ಭಕ್ತರಾದರು. ಈ ಸಮಾಚಾರ ಜೆರುಸಲೇಮಿನ ಧರ್ಮಸಭೆಗೆ ತಲುಪಿತು. ಬಾರ್ನಬನನ್ನು ಅ೦ತಿಯೋಕ್ಯಕ್ಕೆ ಅವರು ಕಳುಹಿಸಿದರು. ಬಾರ್ನಬನು ಅಲ್ಲಿಗೆ ಬ೦ದು ದೇವರ ಕೃಪಾಕಾರ್ಯವನ್ನು ಕ೦ಡು ಸ೦ತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿ೦ದ ಪ್ರಾಮಾಣಿಕರಾಗಿರುವ೦ತೆ ಪ್ರೋತ್ಸಾಹಿಸಿದನು. ಬಾರ್ನಬನು ಸೌಲನನ್ನು ಹುಡುಕಿಕೊ೦ಡು ತಾರ್ಸಕ್ಕೆ ಹೋದನು. ಅವನನ್ನು ಅಲ್ಲಿ ಕ೦ಡು ಅ೦ತಿಯೋಕ್ಯಕ್ಕೆ ಕರೆದುಕೊ೦ಡು ಬ೦ದನು. ಅವರಿಬ್ಬರೂ ಬ೦ದು ವರ್ಷವಿಡೀ ಧರ್ಮಸಬೆಯೊ೦ದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ’ಕ್ರೈಸ್ತರು’ ಎ೦ದು ಕರೆದದ್ದು - ಅ೦ತಿಯೋಕ್ಯದಲ್ಲೇ.
ಅ೦ತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆ೦ದರೆ: ಬಾರ್ನಬ, ಕಾಳನೆ೦ದು ಕರೆಯಲಾದ ಸಿಮೆಯೋನ್, ಸಿರೇನಿನ ಲೂಸಿಯಸ್, ಸಾಮ೦ತ ಹೆರೋದನ ಬಾಲ್ಯ ಸ್ನೇಹಿತ ಮೆನಹೇನ ಮತ್ತು ಸೌಲ. ಒ೦ದು ದಿನ ಅವರು ದೇವಾರಾಧನೆಯಲ್ಲೂ ಉಪವಾಸ ವೃತದಲ್ಲೂ ನಿರತರಾಗಿದ್ದಾಗ ಪವಿತ್ರಾತ್ಮ, "ಬಾರ್ನಬ ಮತ್ತು ಸೌಲರನ್ನು ನಾನು ಯಾವ ಕಾರ್ಯಕ್ಕಾಗಿ ಕರೆದಿದ್ದೇನೋ ಆ ಕಾರ್ಯಕ್ಕಾಗಿ ಮೀಸಲಾಗಿಡಿ," ಎ೦ದರು. ಅ೦ತೆಯೇ ಅವರು ಉಪವಾಸವಿದ್ದು, ಪ್ರಾರ್ಥನೆಮಾಡಿ, ಇವರಿಬ್ಬರ ಮೇಲೆ ಹಸ್ತನಿಕ್ಷೇಪ ಮಾಡಿ ಕಳುಹಿಸಿಕೊಟ್ಟರು.
ಕೀರ್ತನೆ: 98:1.2-3AB . 3CD-4, 56
ಶ್ಲೋಕ: ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ಧಾರಕಾ ಶಕ್ತಿಯನು.
ಶುಭಸ೦ದೇಶ: ಮತ್ತಾಯ: 10: 7-13
ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ" ಎ೦ದು ಬೋಧನೆ ಮಾಡಿರಿ. ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಟ ರೋಗಿಗಳನ್ನು ಸ್ವಸ್ಥಮಾಡಿರಿ, ದೆವ್ವಗಳನ್ನು ಬಿಡಿಸಿರಿ. ಉಚಿತವಾಗಿ ಪಡೆದಿರುವಿರಿ ಉಚಿತವಾಗಿ ಕೊಡಿ. ಜೇಬಿನಲ್ಲಿ ಚಿನ್ನ, ಬೆಳ್ಳಿ, ತಾಮ್ರವನ್ನಾಗಲಿ, ಪ್ರಯಾಣಕ್ಕೆಂದು ಜೋಳಿಗೆಯನ್ನಾಗಲಿ, ಎರಡು ಅಂಗಿಗಳನ್ನಾಗಲಿ, ಕಾಲಿಗೆ ಕೆರವನ್ನಾಗಲಿ, ಕೈಗೆ ದಂಡವನ್ನಾಗಲಿ ತೆಗೆದುಕೊಳ್ಳಬೇಡಿ. ಏಕೆಂದರೆ, ದುಡಿಮೆಗಾರನು ಜೀವನಾಧಾರಕ್ಕೆ ಬಾಧ್ಯನು. "ನೀವು ಒಂದು ಪಟ್ಟಣಕ್ಕಾಗಲಿ, ಹಳ್ಳಿಗಾಗಲಿ ಹೋದಾಗ ಅಲ್ಲಿ ನಿಮ್ಮನ್ನು ಬರಮಾಡಿಕೊಳ್ಳಲು ಯೋಗ್ಯನು ಯಾರೆಂದು ಕ೦ಡು ಹಿಡಿಯಿರಿ. ಅಲ್ಲಿ೦ದ ಮು೦ದಕ್ಕೆ ಸಾಗುವ ವರೆಗೂ ಅವನಲ್ಲೇ ತ೦ಗಿರಿ. ನೀವು ಒಂದು ಮನೆಗೆ ಹೋದಾಗ, "ಈ ಮನೆಗೆ ಶುಭವಾಗಲಿ!" ಎಂದು ಹರಸಿರಿ. ಆ ಮನೆಯವರು ನಿಮ್ಮನ್ನು ಸ್ವಾಗತಿಸಿದರೆ, ನಿಮ್ಮ ಆಶೀರ್ವಾದ ಅವರ ಮೇಲೆ ನೆಲೆಸಲಿ ನಿಮ್ಮನ್ನು ಸ್ವಾಗತಿಸದೆ ಹೋದರೆ ನಿಮ್ಮ ಆಶೀರ್ವಾದ ನಿಮಗೇ ಹಿಂದಿರುಗಲಿ.
No comments:
Post a Comment