ಮೊದಲನೇ ವಾಚನ: 1 ಅರಸುಗಳು: 17: 7-16
ಕೆಲವು ದಿವಸಗಳಾದ ನಂತರ ನಾಡಿನಲ್ಲಿ ಮಳೆಯಿಲ್ಲದ್ದರಿ೦ದ ಹಳ್ಳವು ಬತ್ತಿ ಹೋಯಿತು. ಆಗ ಸರ್ವೇಶ್ವರ ಅವನಿಗೆ: "ನೀನು ಇಲ್ಲಿಂದ ಸಿದೋನ್ಯರ ಸರೆಪ್ತಾ ಎಂಬ ಊರಿಗೆ ಹೊರಟು ಹೋಗಿ ಅಲ್ಲಿ ವಾಸಿಸು. ನಿನ್ನನ್ನು ಪೋಷಿಸಬೇಕೆ೦ದು ಅಲ್ಲಿನ ಒಬ್ಬ ವಿಧವೆಗೆ ಆಜ್ನಾಪಿಸಿದ್ದೇನೆ," ಎಂದರು. ಅವನು ಅಲ್ಲಿಂದ ಹೊರಟು ಸರೆಪ್ತಾದ ಊರು ಬಾಗಿಲಿನ ಸಮೀಪಕ್ಕೆ ಬಂದನು, ಸೌದೆ ಕೂಡಿಸುತ್ತಿದ್ದ ಒಬ್ಬ ವಿಧವೆಯನ್ನು ಕ೦ಡು ಆಕೆಯನ್ನು ಕರೆದು, "ದಯವಿಟ್ಟು ಕುಡಿಯುವುದಕ್ಕೆ ಒಂದು ತ೦ಭಿಗೆಯಲ್ಲಿ ನೀರು ತೆಗೆದುಕೊಂಡು ಬಾ," ಎಂದು ಹೇಳಿದನು. ಆಕೆ ಹೋಗುತ್ತಿರುವಾಗ ಮತ್ತೆ ಆಕೆಯನ್ನು ಕರೆದು, "ನೀನು ಬರುವಾಗ ನನಗೆ ಒಂದು ತುಂಡು ರೊಟ್ಟಿಯನ್ನು ಸಹ ತೆಗೆದುಕೊಂಡು ಬಾ," ಎಂದನು. ಆಕೆ, "ನಿನ್ನ ದೇವರಾದ ಸರ್ವೇಶ್ವರನಾಣೆ, ನನ್ನ ಹತ್ತಿರ ರೊಟ್ಟಿಯಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತು ಬೇರೇನೂ ಇಲ್ಲ. ಈಗ ಸೌದೆ ಆಯ್ದುಕೊಂಡು ಹೋಗಿ ನನಗೂ ನನ್ನ ಮಗನಿಗೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೆ ಹೊರತು ಬೇರೆ ಗತಿಯಿಲ್ಲ," ಎಂದು ಉತ್ತರ ಕೊಟ್ಟಳು. ಆಗ ಎಲೀಯನು, "ಹೆದರಬೇಡ, ನೀನು ಹೇಳಿದ೦ತೆ ಮಾಡು; ಆದರೆ ಮೊದಲು ಅದರಿಂದ ನನಗೆ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ; ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೊ. ಇಸ್ರಯೇಲ್ ದೇವರಾದ ಸರ್ವೇಶ್ವರ ನಿನಗೆ, "ನಾನು ನಾಡಿಗೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಕೆಯಲ್ಲಿರುವ ಹಿಟ್ಟು ತೀರುವುದಿಲ್ಲ, ಕುಡಿಕೆಯಲ್ಲಿರುವ ಎಣ್ಣೆ ಮುಗಿದು ಹೋಗುಚುದಿಲ್ಲ," ಎಂದು ಹೇಳುತ್ತಾರೆ ಎಂದನು. ಆಕೆ ಹೋಗಿ ಅವನು ಹೀಳಿದ೦ತೆಯೇ ಮಾಡಿದಳು . ಆಕೆಯೂ ಆಕೆಯ ಮನೆಯವರೂ ಎಲೀಯನೂ ಅದನ್ನು ಅನೇಕ ದಿವಸಗಳವರೆಗೆ ಊಟಮಾಡಿದರು. ಸರ್ವೇಶ್ವರ ಎಲೀಯನ ಮುಖಾ೦ತರ ಹೇಳಿದ೦ತೆ ಮಡಕೆಯಲ್ಲಿದ್ದ ಹಿಟ್ಟು ತೀರಲಿಲ್ಲ; ಕುಡಿಕೆಯಲ್ಲಿದ್ದ ಎಣ್ಣೆ ಮುಗಿದು ಹೋಗಲಿಲ್ಲ.
ಕೀರ್ತನೆ: 4:2-3, 4-5, 7B-8
ಶ್ಲೋಕ: ಬೆಳಗಿಸಲಿ ನಮ್ಮನು, ಓ ಪ್ರಭೂ, ನಿನ್ನ ಮೊಗದ ಘನತೆ.
ಶುಭ೦ದೇಶ: ಮತ್ತಾಯ: 5:13-16
No comments:
Post a Comment