ಮೊದಲನೇ ವಾಚನ: ೧ ಅರಸುಗಳು: ೨೧: ೧-೧೬
ಅನಂತರ ಸಂಭವಿಸಿದ ಘಟನೆಗಳು ಇವು: ಜೆಸ್ರೀಲಿನಲ್ಲಿ, ಸಮಾರಿಯದ ಅರಸ ಅಹಾಬನ ಅರಮನೆಯ ಹತ್ತಿರ ಜೆಸ್ರೀಲಿನವನಾದ ನಾಬೋತನೆಂಬ ವ್ಯಕ್ತಿಗೆ ಒಂದು ದ್ರಾಕ್ಷಿ ತೋಟವಿತ್ತು. ಅಹಾಬನು ಆ ನಾಬೋತನಿಗೆ, "ನಿನ್ನ ದ್ರಾಕ್ಷಿತೋಟವನ್ನು ನನಗೆ ಕೊಡು; ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುತ್ತೇನೆ; ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ; ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ," ಎಂದು ಹೇಳಿದನು. ಅದಕ್ಕೆ ನಾಬೋತನು, "ಪಿತ್ರಾರ್ಜಿತ ಸೊತ್ತನ್ನು ನಿಮಗೆ ಮಾರದಂತೆ ಸರ್ವೇಶ್ವರ ನನ್ನನ್ನು ತಡೆಯಲಿ!" ಎಂದು ಉತ್ತರ ಕೊಟ್ಟನು. ಪಿತ್ರಾರ್ಜಿತ ಸೊತ್ತನ್ನು ನಿನಗೆ ಕೊಡುವುದಿಲ್ಲವೆಂದು ನಾಬೋತನು ಹೇಳಿದ್ದರಿಂದ ಆಹಾಬನು ಸಿಟ್ಟುಗೊಂಡನು. ಗ೦ಟುಮೋರೆ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ ಮಂಚದ ಮೇಲೆ ಮಲಗಿ, ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು. ಆಗ ಅವನ ಹೆಂಡತಿ ಈಜೆಬೆಲಳು ಅವನ ಬಳಿಗೆ ಬಂದು, "ನೀವೇಕೆ ಊಟಮಾಡುವುದಿಲ್ಲ? ನಿಮಗೆ ಯಾವ ಚಿಂತೆ?," ಎಂದು ಕೇಳಿದಳು. ಅವನು, "ನಾನು ಜೆಸ್ರೀಲಿನವನಾದ ನಾಬೋತನಿಗೆ, ’ನಿನ್ನ ದ್ರಾಕ್ಷಿ ತೋಟವನ್ನು ನನಗೆ ಮಾರಿಬಿಡು; ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷಿ ತೋಟವನ್ನು ಕೊಡುತ್ತೇನೆ ಎಂದು ಹೇಳಿದೆ; ಆದರೆ ಅವನು ಕೊಡುವುದಿಲ್ಲ ಎಂದು ಬಿಟ್ಟ," ಎಂದು ಉತ್ತರ ಕೊಟ್ಟನು. ಆಗ ಅವನ ಹೆಂಡತಿ ಈಜೆಬೆಲಳು, "ಇಸ್ರಯೇಲರ ಅರಸರಾದ ನೀವು ಹೀಗೆ ವರ್ತಿಸುವುದೇ! ಎದ್ದು ಊಟಮಾಡಿ, ಸ೦ತೋಷದಿಂದಿರಿ; ನಾನು ನಿಮಗೆ ಜೆಸ್ರೀಲಿನವನಾದ ನಾಬೋತನ ದ್ರಾಕ್ಷಿ ತೋಟವನ್ನು ಕೊಡುತ್ತೇನೆ," ಎಂದು ನುಡಿದಳು.
ಅಂತೆಯೇ ಅಹಾಬನ ಹೆಸರಿನಲ್ಲಿ ಒಂದು ಪತ್ರವನ್ನು ಬರೆದು, ಅದಕ್ಕೆ ಅವನ ಮುದ್ರೆಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನ ಪುರುಷರಿಗೂ ಹಿರಿಯರಿಗೂ ಕಳುಹಿಸಿದಳು. ಅದರಲ್ಲಿ, "ಎಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿರಿ; ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿರಿ; ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬುದಾಗಿ ಇಬ್ಬರು ದುಷ್ಟ ಮುನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿರಿ; ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ," ಎಂದು ಬರೆದಿದ್ದಳು. ಅವನ ಊರಿನ ಹಿರಿಯರೂ ಪ್ರಧಾನ ಪುರುಷರು ಈಜೆಬೆಲಳು ಕಳುಹಿಸಿದ್ದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು; ಉಪವಾಸವನ್ನು ಪ್ರಕಟಿಸಿದರು; ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು; ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ದ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು. ನಾಬೋತನು ಕಲ್ಲೆಸೆತದಿಂದ ಸತ್ತ ಸಮಾಚಾರವನ್ನು ಆ ಹಿರಿಯರು ಈಜೆಬೆಲಳಿಗೆ ಮುಟ್ಟಿಸಿದರು. ಆಕೆ ಇದನ್ನು ಕೇಳಿ ಆಹಾಬನಿಗೆ "ನೀವು ಹೋಗಿ ನಾಬೋತನು ಮಾರುವುದಿಲ್ಲವೆಂದು ಹೇಳಿದ ದ್ರಾಕ್ಷಿ ತೋಟವನ್ನು ಸ್ವಾಧೀನ ಮಾಡಿಕೊಳ್ಳಿ. ಅವನು ಜೀವದಿಂದಿಲ್ಲ, ಸತ್ತನು" ಎಂದು ಹೇಳಿದಳು. ಜೆಸ್ರೀಲಿನವನಾದ ನಾಬೋತನ ಮರಣ ವಾರ್ತೆಯನ್ನು ಅಹಾಬನು ಕೇಳಿ ದ್ರಾಕ್ಷಿ ತೋಟವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋದನು.
ಕೀರ್ತನೆ: ೫: ೨-೩ಎಬಿ, ೪ಬಿ, ೬ಎ, ೬ಬಿ-೭
ಶ್ಲೋಕ: ಕಿವಿಗೊಡು ಪ್ರಭು ಎನ್ನ ನುಡಿಗೆ.
ಶುಭಸ೦ದೇಶ: ಮತ್ತಾಯ: ೫: ೩೮-೪೨
" ’ಕಣ್ಣಿಗೆ ಪ್ರತಿಯಾಗಿ ಕಣ್ಣು, ಹಲ್ಲಿಗೆ ಬದಲಾಗಿ ಹಲ್ಲು’ ಎಂಬುದನ್ನು ನೀವು ಕೇಳಿದ್ದೀರಿ. ಆದರೆ ನನ್ನ ಬೋಧೆ ಇದು: ನಿನಗೆ ಅಪಕಾರ ಮಾಡಿದವನಿಗೆ ಪ್ರತೀಕಾರ ಮಾಡಬೇಡ. ನಿನ್ನ ಬಲ ಗೆನ್ನೆಗೆ ಒಬ್ಬನು ಹೊಡೆದರೆ ಇನ್ನೊಂದು ಕೆನ್ನೆಯನ್ನೂ ಒಡ್ಡು. ನಿನ್ನೊಡನೆ ವ್ಯಾಜ್ಯಮಾಡಿ ನಿನ್ನ ಒಳ ಅಂಗಿಯನ್ನು ಕಿತ್ತುಕೊಳ್ಳುವವನಿಗೆ ಹೊರ ಅ೦ಗಿಯನ್ನೂ ಕೊಟ್ಟುಬಿಡು. ಯಾರಾದರು ಒಂದು ಕಿಲೊಮಿಟರ್ ದೂರ ಬಾ ಎಂದು ನಿನ್ನನ್ನು ಒತ್ತಾಯ ಪಡಿಸಿದರೆ ಅವನೊಡನೆ ಎರಡು ಕಿಲೊಮಿಟರ್ ಹೋಗು; ಬೇಡಿಕೊಳ್ಳುವವನಿಗೆ ಕೊಡು. ಸಾಲ ಕೇಳ ಬ೦ದವನಿಂದ ಮುಖ ತಿರುಗಿಸಿಕೊಳ್ಳಾಬೇಡ" ಎಂದರು ಯೇಸುಸ್ವಾಮಿ.

No comments:
Post a Comment