ಮೊದಲನೇ ವಾಚನ: 2 ಪೂರ್ವಕಾಲದ ಇತಿಹಾಸ 24:17-25
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ಯಾರೂ ಇಬ್ಬರು ಯಜಮಾನನಿಗೆ ಜೀತಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ, ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆ ಮಾಡಲು ನಿಮ್ಮಿಂದಾಗದು." "ನಾನು ಹೇಳುವುದನ್ನು ಕೇಳಿ; "ಪ್ರಾಣದಾರಣೆಗೆ ಏನು ಉಣ್ಣುವುದು, ಏನು ಕುಡಿಯುವುದು; ದೇಹರಕ್ಷಣೆಗೆ ಏನು ಹೊದೆಯುವುದು" ಎಂದು ಚಿಂತೆಮಾಡಬೇಡಿ. ಊಟಕ್ಕಿಂತ ಪ್ರಾಣ, ಉಡುಪಿಗಿಂತ ದೇಹ ಮೇಲಾದುದಲ್ಲವೇ? ಆಕಾಶದಲ್ಲಿ ಹಾರಾಡುವ ಪಕ್ಷಿಗಳನ್ನು ಗಮನಿಸಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದೂ ಇಲ್ಲ. ಆದರೂ ಸ್ವರ್ಗದಲ್ಲಿರುವ ನಿಮ್ಮ ತಂದೆ ಅವುಗಳನ್ನು ಪೋಷಿಸುತ್ತಾರೆ. ಹಕ್ಕಿಗಳಿಗಿಂತ ನೀವು ಎಷ್ಟೋ ಮೇಲಾದವರಲ್ಲವೇ? ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಕೊಂಚಕಾಲವಾದರೂ ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು? ಉಡುಗೆತೊಡುಗೆಗಳ ಚಿಂತೆ ನಿಮಗೇಕೆ? ವನಕುಸುಮಗಳು ಬೆಳೆಯುವ ರೀತಿಯನ್ನು ಗಮನಿಸಿ ನೋಡಿ: ಅವು ದುಡಿಯುವುದಿಲ್ಲ , ನೂಲುವುದಿಲ್ಲ. ಆದರೂ ಅರಸ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಈ ಕಸುಮಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ. ಅಲ್ಪ ವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆ ಪಾಲಾಗುವ ಬಯಲಿನ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ, ನಿಮಗೆ ಮತ್ತಷ್ಟೂ ಮಾಡಲಾರರೇ? ಆದುದರಿಂದ ತಿನ್ನಲು ಏನು? ಕುಡಿಯಲು ಏನು? ಉಡಲು ಏನು? ಎಂದು ಪೇಚಾಡಬೇಡಿ. ಇವೆಲ್ಲವುಗಳಿಗಾಗಿ ಪರಕೀಯರೂ ಪರದಾಡುತ್ತಾರೆ; ಇವೆಲ್ಲಾ ನಿಮಗೆ ಅವಶ್ಯ ಎಂದು ಸ್ವರ್ಗದಲ್ಲಿವ ನಿಮ್ಮ ತಂದೆಗೆ ತಿಳಿದಿದೆ. ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು. ಆದುದರಿಂದ ನಾಳೆಯ ಚಿಂತೆ ನಿಮಗೆ ಬೇಡ. ನಾಳೆಯ ಚಿಂತೆ ನಾಳೆಗೇ ಇರಲಿ. ಇಂದಿನ ಪಾಡೇ ಇಂದಿಗೆ ಸಾಕು."
ಯೆಹೋಯಾದನು ಮೃತನಾದ ಮೇಲೆ, ಜುದೇಯದ ಪದಾಧಿಕಾರಿಗಳು ಅರಸ ಯೆಹೋವಾಷನ ಬಳಿಗೆ ಬಂದು, ಅವನಿಗೆ ಅಡ್ಡ ಬಿದ್ದು ಅವನನ್ನು ಒಲಿಸಿಕೊಂಡರು. ಅಂದಿನಿಂದ ಅವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನ ಆಲಯವನ್ನು ನಿರಾಕರಿಸಿ, ಆಶೇರ ಸ್ತಂಭಗಳನ್ನೂ ವಿಗ್ರಹಗಳನ್ನೂ ಪೂಜಿಸತೊಡಗಿದರು. ಅವರ ಈ ಆಪರಾಧದಿಂದ ಜುದೇಯದ ಮೇಲೂ ಜೆರುಸಲೇಮಿನ ಮೇಲೂ ದೈವ ಕೋಪ ಎರಗಿತು. ಸರ್ವೇಶ್ವರ ಅವರನ್ನು ತಮ್ಮ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಇವರ ಮುಖಾಂತರ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ, ಆಗ ಯಾಜಕ ಯೆಹೋಯಾದನ ಮಗ ಜೆಕರ್ಯನು ದೇವಾತ್ಮನಿಂದ ಆವೇಶ ಉಳ್ಳವನಾದನು. ಅವನು ಜನರ ಎದುರಿಗೆ ಉನ್ನತ ಸ್ಥಾನದಲ್ಲಿ ನಿಂತು, "ದೇವರ ಮಾತುಗಳನ್ನು ಕೇಳಿರಿ; ನೀವೇಕೆ ಸರ್ವೇಶ್ವರನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ನಾಶಮಾಡಿಕೊಳ್ಳುತ್ತೀರಿ? ನೀವು ಸರ್ವೇಶರಸ್ವಾಮಿಯನ್ನು ಬಿಟ್ಟಿದ್ದರಿಂದ ಅವರೂ ನಿಮ್ಮನ್ನು ಬಿಟ್ಟು ಬಿಟ್ಟಿದ್ದಾರೆ." ಎಂದನು. ಆಗ ಅವರು ಆತನಿಗೆ ವಿರೋಧವಾಗಿ ಹೊಳಸಂಚು ಮಾಡಿ, ಸರ್ವೇಶ್ವರನ ಆಲಯದ ಪ್ರಾಕಾರದಲ್ಲಿ ಅವನನ್ನ ಕಲ್ಲೆಸೆದು ಕೊಂದರು. ಇದು ಅರಸ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು. ಜೆಕರಿಯನ ತಂದೆ ಯೆಹೋಯಾದನಿಂದ ತನಗಾದ ಉಪಕಾರವನ್ನು ನೆನಪುಮಾಡಿಕೊಳ್ಳದೆ ಈ ಯೆಹೋವಾಷನು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, "ಸರ್ವೇಶ್ವರಸ್ವಾಮಿಯೇ ಇದನ್ನು ನೋಡಿ ತಕ್ಕ ಶಾಸ್ತಿಮಾಡಲಿ" ಎಂದನು. ವರ್ಷಾಂತ್ಯದಲ್ಲಿ ಸಿರಿಯಾದ ಸೈನ್ಯ ಯೆಹೋವಾಷನ ಮೇಲೆ ದಾಳಿ ಮಾಡಲು ಹೊರಟಿತು. ಆ ಸೈನ್ಯದವರು ಜುದೇಯ ನಾಡಿನೊಳಗೆ ನುಗ್ಗಿ ಜೆರುಸಲೇಮಿಗೆ ಬಂದು, ಇಸ್ರಯೇಲರ ಎಲ್ಲ ಜನಾಧಿಪತಿಗಳನ್ನು ನಿರ್ನಾಮ ಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.
ಸಿರಿಯಾದ ಸೈನ್ಯದಿಂದ ಬಂದ ಗುಂಪು ಚಿಕ್ಕದಾದ್ದರೂ ಯೆಹೂದ್ಯರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಟ್ಟು ಬಿಟ್ಟಿದ್ದರಿಂದ ಶಿಕ್ಷೆಗೆ ಗುರಿಯಾದರು. ತಮ್ಮದು ಮಹಾಸೈನ್ಯವಾಗಿದ್ದರೂ ಸಿರಿಯಾದವರ ಕೈಯಲ್ಲಿ ಸೋಲನ್ನು ಅನುಭವಿಸಿದರು; ಯೆಹೋವಾಷನಿಗೆ ದಂಡನೆಯಾಯಿತು. ಕಠಿಣವಾಗಿ ಗಾಯಗೊಂಡದ್ದ ಅವನನ್ನು ಸಿರಿಯಾದವರು ಬಿಟ್ಟುಹೋದರು. ಅವನ ಸೇವಕರೇ, ಯಾಜಕ ಯೆಹೋಯಾದವನ ಮಗನ ವಧೆಯ ನಿಮಿತ್ತ, ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದ ನಗರದೊಳಗೆ ಸಮಾಧಿ ಮಾಡಿದರು; ಆದರೆ ರಾಜ ಸ್ಮಶಾನದಲ್ಲಿ ಮಾಡಲಿಲ್ಲ.
ಕೀರ್ತನೆ 89:4-5, 29-30, 31-32, 33-34
ಶ್ಲೋಕ : ಇರುವುದು ಎನ್ನಚಲ ಪ್ರೀತಿ ಅವನ ಮೇಲೆ ಶಾಶ್ವತವಾಗಿ.
ಶುಭಸಂದೇಶ: ಮತ್ತಾಯ 6:24-34

No comments:
Post a Comment