ಮೊದಲನೇ ವಾಚನ: 2 ಅರಸುಗಳು 11:1-4, 8-18, 20
ಏಳನೆಯ ವರ್ಷದಲ್ಲಿ ಯೆಹೋಯಾದವನು 'ಕಾರಿ' ಎಂಬ ಸಿಪಾಯಿಗಳ ಮತ್ತು ಕಾವಲು ದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಸರ್ವೇಶ್ವರನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಪ್ರಮಾಣಪೂರ್ವಕವಾದ ಒಪ್ಪಂದವನ್ನು ಮಾಡಿಕೊಂಡನಂತರ ರಾಜಕುಮಾರನನ್ನು ತೋರಿಸಿದನು. ಯಾಜಕನಾದ ಯೆಹೋಯಾದವನು ಆಜ್ಞಾಪಿಸಿದಂತೆ ಶತಾಧಿಪತಿಗಳು ಸಬ್ಬತ್ ದಿನದಲ್ಲಿ ಮನಗೆ ಹೋಗತಕ್ಕ ಮತ್ತು ಕಾಯುವುದಕ್ಕಾಗಿ ಬರತಕ್ಕ ಸಿಪಾಯಿಗಳನ್ನು ಕರೆದುಕೊಂಡು ಅವನ ಬಳಿಗೆ ಬಂದರು. ಅವರು ಆ ಶತಾಧಿಪತಿಗಳಿಗೆ ಸರ್ವೇಶ್ವರನ ಆಲಯದಲ್ಲಿ ಇಡಲಾಗಿದ್ದ ದಾವೀದನ ಭರ್ಜಿಯನ್ನೂ ಗುರಾಣಿಗಳನ್ನೂ ಕೊಟ್ಟನು. ಕಾವಲುದಂಡಿನವರು ಆಯುಧ ಹಿಡಿದುಕೊಂಡು ಅರಸನನ್ನು ಕಾಯುವುದಕ್ಕಾಗಿ ದೇವಾಲದ ದಕ್ಷಿಣ ದಿಕ್ಕಿನ ಮೂಲೆಯಿಂದ ಬಲಿಪೀಠದವರೆಗೂ, ಅಲ್ಲಿಂದ ಉತ್ತರ ದಿಕ್ಕಿನ ಮೂಲೆಯವರೆಗೂ, ಸಾಲಾಗಿ ನಿಂತರು. ಯೆಹೋಯಾದವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೇ ಜನರು ಚಪ್ಪಾಳೆ ಹೊಡೆದು 'ಅರಸನು ಚಿರಂಜೀವಿಯಾಗಲಿ!' ಎಂದು ಜಯಕಾರ ಮಾಡಿದರು. ಅತಲ್ಯಳು ಕಾವಲು ದಂಡಿನವರ ಮತ್ತು ಇತರ ಜನರ ಗದ್ದಲವನ್ನು ಕೇಳಿ, ಅವರು ಕೂಡಿದ್ದ ಸರ್ವೇಶ್ವರನ ಆಲಯಕ್ಕೆ ಬಂದಳು. ಅಲ್ಲಿ ಅರಸನು ಪದ್ದತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು; ಅಧಿಪತಿಗಳೂ ತುತ್ತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು. ಜನ ಸಾಮಾನ್ಯರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡಕೂಡಲೇ ಆಕೆ ಕೋಪದಿಂದ ಬಟ್ಟೆಗಳನ್ನು ಹರಿದುಕೊಂಡು, "ದ್ರೋಹ! ದ್ರೋಹ!" ಎಂದು ಕೂಗಿದಳು. ಆಗ ಯಾಜಕನಾದ ಯೆಹೋಯಾದವನು ಸೇನಾನಿಗಳಾದ ಶತಾಧಿಪತಿಗಳಿಗೆ, "ಈಕೆಯನ್ನು ಸರ್ವೇಶ್ವರನ ಆಲಯದಲ್ಲಿ ಕೊಲ್ಲಬೇಡಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಮಾಡಿ, ಹೊರಗೆ ಕರೆದುಕೊಂಡು ಹೋಗಲಿ; ಮತ್ತು ಈಕೆಯನ್ನು ಹಿಂಬಾಲಿಸುವಂತವರನ್ನು ಕತ್ತಿಯಿಂದ ಕೊಲ್ಲಿರಿ," ಎಂದು ಆಜ್ಞಾಪಿಸಿದನು.
ಕೀರ್ತನೆ:132:11-12, 13-14, 17-18
ಶ್ಲೋಕ : ಆರಿಸಿಕೊಂಡಿಹನು ಪ್ರಭು ಸಿಯೋನ್ ನಗರವನ್ನು.
ಶುಭಸಂದೇಶ: ಮತ್ತಾಯ 6:19-23
"ಇಹಲೋಕದಲ್ಲಿ ಆಸ್ತಿಪಾಸ್ತಿಯನ್ನು ಶೇಖರಿಸಿಡಬೇಡಿ. ಇಲ್ಲಿ ತುಕ್ಕು ಹಿಡಿದೀತು; ನುಸಿ ಹೊಡೆದೀತು; ಕಳ್ಳರು ಕನ್ನ ಕೊರೆದು ಕದಿಯಾರು. ನಿನ್ನ ನಿಧಿ ಎಲ್ಲಿದೆಯೋ ಅಲ್ಲೇ ಇರುವುದು ನಿನ್ನ ಹೃದಯ. ಕಣ್ಣೇ ದೇಹಕ್ಕೆ ದೀಪ. ನಿನ್ನ ಕಣ್ಣು ಸರಿಯಿದ್ದರೆ ದೇಹವೆಲ್ಲಾ ಕಾಂತಿಮಯವಾಗುವುದು. ಅದು ಕೆಟ್ಟದ್ದರೆ ನಿನ್ನ ದೇಹವೆಲ್ಲ ಕತ್ತಲಮಯವಾಗುವುದು!" ಎಂದು ಯೇಸುಸ್ವಾಮಿ ಹೇಳಿದರು.
No comments:
Post a Comment