ಮೊದಲನೇ ವಾಚನ: 2 ಅರಸುಗಳು 19:9-11, 14-21, 31-35, 36
ಅಷ್ಟರಲ್ಲಿ ಸುಡಾನಿನ ರಾಜ ತಿರ್ಹಾಕನು ತನಗೆ ವಿರುದ್ದವಾಗಿ ಹೊರಟ್ಟಿದ್ದಾನೆ ಎಂಬ ಸುದ್ಧಿ ಅಸ್ಸೀರಿಯಾದ ಅರಸನಿಗೆ ಮುಟ್ಟಿತು. ಆಗ ಅವನು ಜುದೇಯದ ಅರಸನಾದ ಹಿಜ್ಕೀಯನಿಗೆ "ಜೆರುಸಲೇಮ್ ನನ್ನ ವಶವಾಗುವುದಿಲ್ಲವೆಂದು ನೀನು ನಂಬುವ ದೇವರು ನಿನಗೆ ಹೇಳಿ ನಿನ್ನನ್ನು ಮೋಸಗೊಳಿಸಬಹುದು. ಅಸ್ಸೀರಿಯಾದ ಅರಸನು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಪಡಿಸಿದ್ದಾನೆಂಬ ಸಮಾಚಾರ ನಿನಗೆ ಮುಟ್ಟಿರಬೇಕು, ಹೀಗಿರುವಲ್ಲಿ ನೀನು ಮಾತ್ರ ತಪ್ಪಿಸಿಕೊಳ್ಳುವೆಯೋ? ಹಿಜ್ಕೀಯನು, ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ, ದೇವಾಲಯಕ್ಕೆ ಹೋಗಿ ಅದನ್ನು ಸರ್ವೇಶ್ವರಸ್ವಾಮಿಯ ಮುಂದೆ ತೆರೆದಿಟ್ಟು, ಹೀಗೆಂದು ಪ್ರಾರ್ಥನೆ ಮಾಡಿದನು: "ಇಸ್ರಯೇಲಿನ ದೇವರೇ, ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಡರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟು ಮಾಡಿದವರು ನೀವೇ. ಸರ್ವೇಶ್ವರಾ, ಕಿವಿಗೊಟ್ಟು ಕೇಳಿ ; ಸರ್ವೇಶ್ವರಾ, ಕಣ್ಣಿಟ್ಟು ನೋಡಿ: ಸನ್ ಹೇರೀಬನು ಜೀವಸ್ವರೂಪ ದೇವರಾದ ನಿಮ್ಮನ್ನು ನಿಂದಿಸುವುದಕ್ಕಾಗಿ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೊಳ್ಳಿ, ಸರ್ವೇಶ್ವರ ಅಸ್ಸೀರಿಯಾದ ರಾಜರು ಸಕಲ ರಾಷ್ಪ್ರಗಳನ್ನೂ ಹಾಗೂ ಅವರ ನಾಡುಗಳನ್ನೂ ಹಾಳುಮಾಡಿದ್ದಾರೆ. ಅವರ ದೇವರುಗಳನ್ನೂ ಬೆಂಕಿಗೆ ಹಾಕಿದ್ದು ನಿಜ. ಅವು ದೇವರುಗಳಲ್ಲ, ಕೇವಲ ಮನಷ್ಯರು ಕೆಟ್ಟಿದ ಕಲ್ಲು ಮರಗಳ ಬೊಂಬೆಗಳಷ್ಟೆ, ಆದುದರಿಂದಲೇ ಅವು ಅವರಿಂದ ಹಾಳಾದವು. ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ದೇವರು ಎಂಬುದನ್ನು ಭೂಮಿಯ ರಾಷ್ಪ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಈ ಅಸ್ಸೀರಿಯನ ಕೈಯಿಂದ ಬಿಡಿಸಿರಿ." ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ; "ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಈ ಮಾತುಗಳನ್ನು ಕೇಳು: ನೀನು ಅಸ್ಸೀರಿಯದ ರಾಜನಾದ ಸನ್ ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳು ಸರ್ವೇಶ್ವರಸ್ವಾಮಿಗೆ ಮುಟ್ಟಿವೆ. ಅವರು ಅವನನ್ನು ಕುರಿತು ಹೀಗೆಂದಿದ್ದಾರೆ; "ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು; ನಿನ್ನ ಹಿಂದೆ ತಲಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು. ಅಳಿದುಳಿದವರು ಜೆರುಸಲೇಮಿನಲ್ಲೇ ಹರಡಿಕೊಳ್ಳುವರು; ಸಿಯೋನ್ ಪರ್ವತದಲ್ಲಿ ಅಭಿವೃದ್ಧಿಯಾಗುವರು. ಸರ್ವೇಶ್ವರಸ್ವಾಮಿಯ ಅಗ್ರಹವೇ ಇದನ್ನು ಸಾಧಿಸುವುದು. "ಅಸ್ಸೀರಿಯದ ಅರಸನನ್ನು ಕುರಿತು ಸರ್ವೇಶ್ವರ ಹೇಳಿರುವ ಮಾತಿದು: "ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದರತ್ತ ಬಾಣವನ್ನೆಸೆಯುವುದಿಲ್ಲ ಕವಚಧಾರಿಗಳನ್ನು ಕಳುಹಿಸುವುದಿಲ್ಲಾ. ಅದರ ಆಕ್ರಮಣಕ್ಕಾಗಿ ಮಣ್ಣು ದಿಬ್ಬಗಳನ್ನು ಎಬ್ಬಿಸುವುದಿಲ್ಲ. ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಕಾಲಿಡನು. ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು,' ಎಂದಿದ್ದಾರೆ". ಅದೇ ರಾತ್ರಿಯಲ್ಲಿ ಸರ್ವೇಶ್ವರಸ್ವಾಮಿಯ ದೂತನು ಹೊರಟು ಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡು ಮಾಡಿದನು; ಅಸ್ಸೀರಿಯರು ಬೆಳಗ್ಗೆ ಎದ್ದು ನೋಡುವಾಗ ಪಳೆಯ ತುಂಬಾ ಹೆಣಗಳು ಇದ್ದವು ಆದ್ದರಿಂದ ಅಸ್ಸೀರಿಯರ ಅರಸನಾದ ಸನ್ ಹೇರೀಬನು ಹಿಂದಿರುಗಿದನು. ನಿನವೆ ಪಟ್ಟಣಕ್ಕೆ ಹೋಗಿ ಅಲ್ಲೆ ವಾಸಿಸಿದನು.
ಕೀರ್ತನೆ: 48:2-3ab, 3cd-4, 10-11
ಶ್ಲೋಕ: ನಿನ್ನಚಲ ಪ್ರೀತಿಯನು ದೇವಾ, ಸ್ಮರಿಸುವೆವು.

ಶುಭಸಂದೇಶ: ಮತ್ತಾಯ 7:6, 12-14
"ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು". "ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೆ ನೀವು ಅವರಿಗೆ ಮಾಡಿ. ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ ಇದೇ". "ಕಿರಿದಾದ ಬಾಗಿಲಿನಿಂದಲೇ ಒಳಕ್ಕೆ ಹೋಗಿರಿ. ಏಕಂದರೆ ವಿನಾಶಕ್ಕೆ ಒಯ್ಯುವ ಬಾಗಿಲು ಹಿರಿದು; ಅದರ ಮಾರ್ಗ ಸರಾಗ; ಅದನ್ನು ಹಿಡಿಯುವವರು ಅನೇಕರು. ಅಮರ ಜೀವಕ್ಕೆ ಕೊಂಡೊಯ್ಯುವ ಮಾರ್ಗ ದುರ್ಭರ; ಅದರ ಬಾಗಿಲು ಕಿರಿದು; ಅದನ್ನು ಗುರುತಿಸುವವರು ಕೆಲವರು."
No comments:
Post a Comment