ಮೊದಲನೇ
ವಾಚನ: 2 ಅರಸುಗಳು 24:8-17
ಬಾಬಿಲೋನಿನ
ಅರಸ ನೆಬೂಕದ್ನೆಚ್ಚರನ ಸೈನ್ಯದವರು ಜೆರುಸಲೇಮಿಗೆ ದಂಡೆತ್ತಿ ಬಂದು ಅದಕ್ಕೆ ಮುತ್ತಿಗೆ
ಹಾಕಿದರು. ಅಷ್ಟರಲ್ಲಿ ನೆಬೂಕದ್ನೆಚ್ಚರನೂ ಬಂದನು. ಆಗ ಜುದೇಯದ ಅರಸ
ಯೆಹೋಯಾಖೀನನು, ತನ್ನ ತಾಯಿ, ಪರಿವಾರದವರು,
ಸೇನಾಪತಿಗಳು, ಕಂಚುಕಿಗಳು ಇವರೊಡನೆ ಅವನ ಬಳಿಗೆ ಹೋದನು.
ಅವನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ
ವರ್ಷದಲ್ಲಿ ಸೆರೆಹಿಡಿದನು. ಇದಲ್ಲದೆ, ಸರ್ವೇಶ್ವರ ಮುಂತಿಳಿಸಿದ ಪ್ರಕಾರ, ಅವನು ಸರ್ವೇಶ್ವರನ ಆಲಯದ
ಮತ್ತು ಅರಮನೆಯ ಭಂಡಾರಗಳಲ್ಲಿದ್ದ ದ್ರವ್ಯವನ್ನೆಲ್ಲಾ ದೋಚಿಕೊಂಡು ಹೋದನು. ಇಸ್ರಯೇಲರ ಅರಸನಾದ ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಆಭರಣಗಳನ್ನು ಮುರಿದುಬಿಟ್ಟನು. ಜೆರುಸಲೇಮಿನಲ್ಲಿದ್ದ ಎಲ್ಲಾ ಪದಾಧಿಕಾರಿಗಳನ್ನೂ ಯೋಧರನ್ನೂ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಒಟ್ಟಾರೆ ಹತ್ತುಸಾವಿರ ಜನರನ್ನು ಸೆರೆಗೊಯ್ದನು. ನಾಡಿನ ಜನರಲ್ಲಿ ಕೇವಲ ಬಡವರನ್ನು ಹೊರತಾಗಿ
ಬೇರೆ ಯಾರನ್ನೂ ಬಿಡಲಿಲ್ಲ. ಅವನು ಯೆಹೋಯಾಖೀನನ್ನೂ ಅವನ
ತಾಯಿ, ಹೆಂಡತಿಯರು, ಕಂಚುಕಿಗಳನ್ನೂ ನಾಡಿನ ಪ್ರಧಾನ ಪುರುಷರು ಇವರನ್ನೂ, ಏಳು ಸಾವಿರ ಮಂದಿ
ಯೋಧರನ್ನೂ ಸಾವಿರ ಮಂದಿ ಕಮ್ಮಾರರು ಮೊದಲಾದ
ಕೈಗಾರಿಕೆಯವರನ್ನೂ ಜೆರುಸಲೇಮಿನಿಂದ ಬಾಬಿಲೋನಿಗೆ ಒಯ್ದನು. ಅವರೆಲ್ಲರು ಪುಷ್ಟರೂ ರಣವೀರರೂ ಆಗಿದ್ದರು. ಬಾಬಿಲೋನಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ
ಎಂಬುವನನ್ನು ಅರಸನ್ನಾಗಿ ನೇಮಿಸಿ ಅವನಿಗೆ 'ಚಿದ್ಕೀಯ' ಎಂಬ ಹೆಸರಿಟ್ಟನು.
ಕೀರ್ತನೆ:
79:1-2, 3-5, 8-9
ಶ್ಲೋಕ: ದೇವಾ, ನೆರವಾಗು ನಿನ್ನ ನಾಮಮಹಿಮೆಯ ನಿಮಿತ್ತ
ಶುಭಸಂದೇಶ: ಮತ್ತಾಯ 7: 21-29

Thanks to Chiguru and Sushraya friends.
ReplyDelete